ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಸಂಸ್ಥೆಯು ಕಳೆದ ಫೆಬ್ರುವರಿಯಲ್ಲಿ ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ 300 ಬಿಡುಗಡೆಯ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರನ್ನು ಬಿಡುಗಡೆಗೊಳಿಸಿದ ಕೇವಲ 5 ತಿಂಗಳಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ಎಕ್ಸ್‌ಯುವಿ 300 ಮಾದರಿಯನ್ನು ಸಿದ್ದಗೊಳಿಸಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಹೌದು, ಮಹೀಂದ್ರಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಬಿಎಸ್-4 ಎಂಜಿನ್ ಪ್ರೇರಿತ ಎಕ್ಸ್‌ಯುವಿ300 ಮಾದರಿಯನ್ನು ಬಿಡುಗಡೆಗೊಳಿಸಿ ಮಾರಾಟ ಮಾಡುತ್ತಿದ್ದು, ಮುಂದಿನ ವರ್ಷ 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗೆ ಅನುಗುಣವಾಗಿ ಹೊಸ ಎಕ್ಸ್‌ಯುವಿ300 ಎಂಜಿನ್ ಅನ್ನು ಉನ್ನತಿಕರಿಸಿ ಟೆಸ್ಟಿಂಗ್ ಪ್ರಕ್ರಿಯೆಯನ್ನು ಕೈಗೊಂಡಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಕೇಂದ್ರ ಸರ್ಕಾರವು ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ಈ ಹಿಂದೆ ಬಿಎಸ್-3 ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ನಿಷೇಧಿಸಿದ ಮಾದರಿಯಲ್ಲೇ 2020ರ ಏಪ್ರಿಲ್ 1ರಿಂದ ಬಿಎಸ್-4 ಹೊಸ ವಾಹನಗಳ ಅಭಿವೃದ್ಧಿಯನ್ನು ಸ್ಥಗಿತಗೊಳಿಸಿ ಬಿಎಸ್-6 ನಿಯಮವನ್ನು ಜಾರಿಗೆ ತರಲು ಸಿದ್ದತೆ ನಡೆಸಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಈ ಹಿನ್ನೆಲೆ ದೇಶದ ಬಹುತೇಕ ವಾಹನ ಸಂಸ್ಥೆಗಳು ತಮ್ಮ ಜನಪ್ರಿಯ ವಾಹನಗಳ ಎಂಜಿನ್ ಮಾದರಿಗಳನ್ನು ಉನ್ನತಿಕರಿಸಿ ಟೆಸ್ಟಿಂಗ್ ಕೈಗೊಂಡಿದ್ದು, ಇನ್ನು ಕೆಲವು ವಾಹನ ಸಂಸ್ಥೆಗಳು ಈಗಾಗಲೇ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳ ಮಾರಾಟಕ್ಕೆ ಚಾಲನೆ ನೀಡಿವೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಬಿಎಸ್-4 ನಿಯಮಾವಳಿಗಿಂತ ಬಿಎಸ್-6 ಪ್ರೇರಿತ ಎಂಜಿನ್ ಮಾದರಿಯು ಅತ್ಯುತ್ತಮ ಎಂಜಿನ್ ದಕ್ಷತೆಯೊಂದಿಗೆ ಮೈಲೇಜ್ ಪ್ರಮಾಣವು ಹೆಚ್ಚಳವಾಗಲಿದ್ದು, ಹೊಗೆ ಉಗುಳುವ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಈಗಾಗಲೇ ಇದು ಬಿಡುಗಡೆಯಾಗಿರುವ ಬಿಎಸ್-6 ಹೊಸ ಕಾರುಗಳಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದ್ದು, ಬೆಲೆಯಲ್ಲೂ ಕೂಡಾ ಬಿಎಸ್-4 ಎಂಜಿನ್‌ಗಿಂತಲೂ ತುಸು ದುಬಾರಿ ಎನ್ನಿಸಲಿದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಬಿಎಸ್-6 ಎಂಜಿನ್ ಪ್ರೇರಣೆ ಕಾರುಗಳು ಪ್ರಸ್ತುತ ಮಾರುಕಟ್ಟೆಯ ಬೆಲೆಗಿಂತ ರೂ.1 ಲಕ್ಷದಿಂದ ರೂ. 1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಕೆಲವು ಹೊಸ ಸುರಕ್ಷಾ ಫೀಚರ್ಸ್‌ಗಳನ್ನು ಕಡ್ಡಾಯವಾಗಿ ಜೋಡಣೆ ಮಾಡಲಾಗುತ್ತದೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಹೀಗಾಗಿ ಬಿಎಸ್-6 ಕಾರುಗಳು ಬೆಲೆಯಲ್ಲಿ ತುಸು ದುಬಾರಿಯಾದರೂ ಸಹ ವಾಹನ ಮಾಲೀಕರಿಗೆ ಸಾಕಷ್ಟು ಅನುಕೂಲವಾಗಿರುವುದಲ್ಲದೇ ಮಾಲಿನ್ಯ ಪ್ರಮಾಣವನ್ನು ತಡೆಯುವ ನಿಟ್ಟಿನಲ್ಲೂ ಪ್ರಮುಖ ಪಾತ್ರವಹಿಸಲಿವೆ ಎಂಬುವುದು ಬಹುಮುಖ್ಯವಾದ ವಿಚಾರ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಇನ್ನು ಸದ್ಯ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ300 ಮಾದರಿಯು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ಕ್ರೆಟಾ ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಪೈಪೋಟಿ ನೀಡುತ್ತಾ ಕಂಪ್ಯಾಕ್ಟ್ ಎಸ್‌ಯುವಿ ಉತ್ತಮ ಬೇಡಿಕೆ ದಾಖಲಿಸುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.90 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು ರೂ.10.80 ಲಕ್ಷಕ್ಕೆ ಮಾರಾಟವಾಗುತ್ತಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಸದ್ಯ ಎಕ್ಸ್‌ಯುವಿ300 ಡಿಸೇಲ್ ಕಾರು ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಪ್ರೇರಿತ 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಪ್ರೇರಿತ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿವೆ.

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಹಾಗೆಯೇ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್‍, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್‌ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

MOST READ: ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ನೀಡಲಿದೆಯೆಂತೆ ಮಹೀಂದ್ರಾ ಹೊಸ ಎಲೆಕ್ಟ್ರಿಕ್ ಕಾರು..!

ಸ್ಪಾಟ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಎಂಜಿನ್ ಪ್ರೇರಿತ ಮಹೀಂದ್ರಾ ಎಕ್ಸ್‌ಯುವಿ300

ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿದ್ದು, ಮುಂಬರುವ 2020ರಲ್ಲಿ ಬಿಡುಗಡೆಯಾಗುವ ಹೊಸ ಎಕ್ಸ್‌ಯುವಿ300 ಕಾರು ಈಗಿರುವ ಸೌಲಭ್ಯಗಳಿಂತಲೂ ಉನ್ನತ ಮಟ್ಟದ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

Most Read Articles

Kannada
English summary
New Mahindra XUV300 BS-VI Model Spied Testing — Launch-Expected Soon. Read in Kannada.
Story first published: Monday, May 13, 2019, 17:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X