ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ದೇಶಿಯ ವಾಹನ ಉತ್ಪಾದನಾ ಸಂಸ್ಥೆಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಮಹೀಂದ್ರಾ ಈಗಾಗಲೇ ವಿವಿಧ ಮಾದರಿಯ ಎಸ್‌ಯುವಿ ಕಾರು ಉತ್ಪನ್ನಗಳನ್ನು ಪರಿಚಯಿಸಿ ಯಶಸ್ವಿಯಾಗಿದ್ದು, ಹೊಸದಾಗಿ ಬಿಡುಗಡೆಯಾಗಿರುವ ಎಕ್ಸ್‌ಯುವಿ300 ಸಬ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಮಾರಾಟದಲ್ಲೂ ಹೊಸ ಸಂಚಲನ ಸೃಷ್ಠಿಸುತ್ತಿದೆ.

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ಮಹೀಂದ್ರಾ ಸಂಸ್ಥೆಯು ಎಕ್ಸ್‌ಯುವಿ 300 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಕಳೆದ ತಿಂಗಳು 14ರಂದು ಬಿಡುಗಡೆ ಮಾಡಿದ್ದು, ವಿಶೇಷ ವಿನ್ಯಾಸ ಮತ್ತು ಆಕರ್ಷಕ ಬೆಲೆಗಳಿಂದಾಗಿ ಹೊಸ ಕಾರು ಖರೀದಿಗಾಗಿ ಗ್ರಾಹಕರು ಮುಗಿಬಿದ್ದಿದ್ದಾರೆ. ಬಿಡುಗಡೆಯಾಗಿ ಕೇವಲ ಒಂದು ತಿಂಗಳಿನಲ್ಲಿ ಬರೋಬ್ಬರಿ 13 ಸಾವಿರ ಬುಕ್ಕಿಂಗ್ ಗಿಟ್ಟಿಸಿಕೊಂಡಿರುವ ಎಕ್ಸ್‌ಯುವಿ 300 ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಮೂರನೇ ಸ್ಥಾನಕ್ಕೇರಿದೆ.

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ಸದ್ಯ ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಕಾರು ಉತ್ಪಾದನೆಯಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಜನಪ್ರಿಯ ಟಿವೊಲಿ ಕಾರಿನ ಮಾದರಿಯಲ್ಲೇ ದೇಶಿಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಎಕ್ಸ್‌ಯುವಿ300 ಕಾರುನ್ನು ಮರು ನಿರ್ಮಾಣ ಮಾಡಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ಫೀಚರ್ಸ್‌ಗೆ ಅನುಗುಣವಾಗಿ ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.90 ಲಕ್ಷಕ್ಕೆ ಮತ್ತು ಹೈಎಂಡ್ ಮಾದರಿಯು ರೂ. 10.80 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತಿ ಕಡಿಮೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸಲಾಗಿದೆ.

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್‍, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್‌ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ಹಾಗೆಯೇ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹೊಸ ಎಕ್ಸ್‌ಯುವಿ300 ಡಿಸೇಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿದ್ದು, ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿವೆ.

MOST READ: ವಿಮಾನವನ್ನೇ ನಿರ್ಮಿಸಲು ಮುಂದಾಗಿದ್ದ ರೈತನೊಬ್ಬ ಕೊನೆಗೆ ಮಾಡಿದ್ದೇನು ಗೊತ್ತಾ?

ಬಿಡುಗಡೆಯಾದ ಒಂದೇ ತಿಂಗಳಿನಲ್ಲಿ ಎಕ್ಸ್‌ಯುವಿ 300 ಕಾರಿಗೆ ಭರ್ಜರಿ ಬೇಡಿಕೆ

ಈ ಮೂಲಕ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮೂರನೇ ಸ್ಥಾನಕ್ಕೇರಿರುವ ಎಕ್ಸ್‌ಯುವಿ300 ಮಾದರಿಯು ಇಕೋ ಸ್ಪೋರ್ಟ್ ಮತ್ತು ನೆಕ್ಸಾನ್ ಆವೃತ್ತಿಗಳನ್ನು ಹಿಂದಿಕ್ಕಿದ್ದು, ಮಾರುತಿ ಸುಜುಕಿ ಬ್ರೆಝಾ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಗೂ ಮುಂಬರುವ ದಿನಗಳಲ್ಲಿ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
2019 Mahindra XUV300 Breaches The 13,000 Bookings Milestone. Read in Kannada.
Story first published: Thursday, March 14, 2019, 18:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X