Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆಯನ್ನು ಪಡೆಯಲಿದೆ ಮಹೀಂದ್ರಾ ಎಕ್ಸ್‌ಯುವಿ300
ಮಹೀಂದ್ರಾ ಸಂಸ್ಥೆಯು ಫೆಬ್ರುವರಿ 24, 2019ರಂದು ತಮ್ಮ ಆಕರ್ಷಕ ವಿನ್ಯಾಸ ಮತ್ತು ಹಲವಾರು ಫೀಚರ್‍ಗಳಿರುವ ಎಕ್ಸ್‌ಯುವಿ300 ಎಸ್‍ಯುವಿ ಕಾರನ್ನು ಬಿಡುಗಡೆ ಮಾಡಲಾಗಿದ್ದು, ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 7.90 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ.

ಬಿಡುಗಡೆಗೊಂಡಾಗ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲಿ ಕೇವಲ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ನೀಡಲಾಗಿದ್ದು, ಇದೀಗ ಗಾಡಿವಾಡಿವರದಿ ಪ್ರಕಾರ ಶೀಘ್ರವೇ ಮಹೀಂದ್ರಾ ಎಕ್ಸ್‌ಯುವಿ300 ಕಾರಿಗೆ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆಯನ್ನು ಸಹ ನೀಡಲಿದೆ ಎನ್ನಲಾಗಿದೆ. ಈ ಕುರಿತಾದ ರಹಸ್ಯ ಚಿತ್ರಗಳು ಬಹಿರಂಗಗೊಂಡಿದ್ದು, ಇನ್ನೇನು ಬಿಡುಗಡೆಗಡೆಗೊಳಿಸಲಿದೆ ಮಹೀಂದ್ರಾ ಸಂಸ್ಥೆ.

ಸಧ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮತ್ತು ಟಾಟಾ ನೆಕ್ಸಾನ್ ಕಾರುಗಳ ಡೀಸೆಲ್ ಎಂಜಿನ್ ಮಾದರಿಗಳಲ್ಲಿ ಈಗಾಗಲೆ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆ ಇರಲಿದ್ದು, ಇದೀಗ ಮಹೀಂದ್ರಾ ಸಂಸ್ಥೆಯು ತಮ್ಮ ಮರಾಜೊ ಎಂಪ್ವಿ ಕಾರಿಗೆ ನೀಡಲಾದ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಎಕ್ಸ್‌ಯುವಿ300 ಕಾರಿಗು ಸಹ ನೀಡಲಿದೆ ಎನ್ನಲಾಗುತ್ತಿದೆ.

ಮಹೀಂದ್ರಾ ಸಂಸ್ಥೆಯು ಎಕ್ಸ್‌ಯುವಿ 300 ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಕಳೆದ ತಿಂಗಳು 14ರಂದು ಬಿಡುಗಡೆ ಮಾಡಿದ್ದು, ವಿಶೇಷ ವಿನ್ಯಾಸ ಮತ್ತು ಆಕರ್ಷಕ ಬೆಲೆಗಳಿಂದಾಗಿ ಹೊಸ ಕಾರು ಖರೀದಿಗಾಗಿ ಗ್ರಾಹಕರು ಮುಗಿಬಿದ್ದಿದ್ದಾರೆ. ಬಿಡುಗಡೆಯಾಗಿ ಕೇವಲ ಒಂದು ತಿಂಗಳಿನಲ್ಲಿ ಬರೋಬ್ಬರಿ 13 ಸಾವಿರ ಬುಕ್ಕಿಂಗ್ ಗಿಟ್ಟಿಸಿಕೊಂಡಿರುವ ಎಕ್ಸ್‌ಯುವಿ 300 ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಮೂರನೇ ಸ್ಥಾನಕ್ಕೇರಿದೆ.

ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಕಾರು ಉತ್ಪಾದನೆಯಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಜನಪ್ರಿಯ ಟಿವೊಲಿ ಕಾರಿನ ಮಾದರಿಯಲ್ಲೇ ದೇಶಿಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಎಕ್ಸ್‌ಯುವಿ300 ಕಾರುನ್ನು ಮರು ನಿರ್ಮಾಣ ಮಾಡಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

ಹಾಗೆಯೇ ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್
ಹೊಸ ಎಕ್ಸ್‌ಯುವಿ300 ಡಿಸೇಲ್ ಕಾರು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿದ್ದು, ಪೆಟ್ರೋಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಎಂಜಿನ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿವೆ.

ಈ ಮೂಲಕ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮೂರನೇ ಸ್ಥಾನಕ್ಕೇರಿರುವ ಎಕ್ಸ್‌ಯುವಿ300 ಮಾದರಿಯು ಇಕೋ ಸ್ಪೋರ್ಟ್ ಮತ್ತು ನೆಕ್ಸಾನ್ ಆವೃತ್ತಿಗಳನ್ನು ಹಿಂದಿಕ್ಕಿದ್ದು, ಮಾರುತಿ ಸುಜುಕಿ ಬ್ರೆಝಾ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಗೂ ಮುಂಬರುವ ದಿನಗಳಲ್ಲಿ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.