ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲಿ ಸಾಕಷ್ಟು ಜನಪ್ರಿಯತೆ ಹೊಂದುತ್ತಿರುವ ಎಕ್ಸ್‌ಯುವಿ300 ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಕೆಲವು ಮಹತ್ವದ ಬದಲಾವಣೆ ತರುತ್ತಿರುವ ಮಹೀಂದ್ರಾ ಸಂಸ್ಥೆಯು ಇದೀಗ ಡಬ್ಲ್ಯು6 ಡೀಸೆಲ್ ವರ್ಷನ್ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಎಕ್ಸ್‌ಯುವಿ300 ಕಾರು ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಡಬ್ಲ್ಯು4, ಡಬ್ಲ್ಯು6, ಡಬ್ಲ್ಯು8 ಎನ್ನುವ ಪ್ರಮುಖ ವೆರಿಯೆಂಟ್‌ಗಳನ್ನು ಹೊಂದಿದ್ದು, ಮೊದಲ ಬಾರಿಗೆ ಬಿಡುಗಡೆಗೊಂಡಾಗ ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಹೆಚ್ಚು ಬೇಡಿಕೆ ಬಂದ ಹಿನ್ನಲೆಯಲ್ಲಿ ಕೆಲವು ಬದಲಾವಣೆ ತಂದ ಮಹೀಂದ್ರಾ ಸಂಸ್ಥೆಯು ಕೆಲವು ದಿನಗಳ ಹಿಂದೆ ಡಬ್ಲ್ಯು8 ಮಾದರಿಯಲ್ಲಿ ಮತ್ತು ಇದೀಗ ಡಬ್ಲ್ಯು6 ಡೀಸೆಲ್ ಕಾರುಗಳಲ್ಲಿ ಆಟೋಮ್ಯಾಟಿಕ್ ವರ್ಷನ್ ಹೊರತಂದಿದೆ.

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಸದ್ಯ ಬಿಡುಗಡೆಯಾಗಿರುವ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.99 ಲಕ್ಷ ಬೆಲೆ ಹೊಂದಿದ್ದು, ಇದು ಮಧ್ಯಮ ಕ್ರಮಾಂಕದ ಮಾದರಿಯಲ್ಲಿ ಆಟೋಮ್ಯಾಟಿಕ್ ವರ್ಷನ್ ಬಯಸುವ ಗ್ರಾಹಕರ ಆಯ್ಕೆಗೆ ಸಹಕಾರಿಯಾಗಿದೆ.

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಇನ್ನುಳಿದಂತೆ ಎಕ್ಸ್‌ಯುವಿ300 ಕಾರು ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 8.10 ಲಕ್ಷದಿಂದ ಟಾಪ್ ಎಂಡ್ ಮಾದರಿಯು 12.69 ಲಕ್ಷ ಬೆಲೆ ಹೊಂದಿದ್ದು, ಇದೀಗ ಹೊಸದಾಗಿ ಡಬ್ಲ್ಯು6 ಮತ್ತು ಡಬ್ಲ್ಯು8 ಡೀಸೆಲ್ ಮಾದರಿಗಳಲ್ಲಿ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಇನ್ನಿತರೆ ಯಾವುದೇ ಬದಲಾವಣೆ ಪಡೆದುಕೊಂಡಿಲ್ಲ.

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಇನ್ನು ಎಕ್ಸ್‌ಯುವಿ300 ಡಿಸೇಲ್ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 1.5-ಲೀಟರ್( 1,500ಸಿಸಿ) ಎಂಜಿನ್‌ ಮೂಲಕ 115-ಬಿಎಚ್‌ಪಿ ಮತ್ತು 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 1.2-ಲೀಟರ್ ಎಂಜಿನ್‌ ಮೂಲಕ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 110-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕ್ಷಮತೆ ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ವಿಶೇಷ ಎನ್ನಿಸುವ ಎಕ್ಸ್‌ಯುವಿ300 ಮಾದರಿಯು ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಕ್ರೋಮ್ ಬಳಕೆ, ಬೂಟ್ ಲಿಡ್, ಡ್ಯುಯಲ್ ಟೋನ್ ಇಂಟಿರಿಯರ್, ಎಸಿ ವೆಂಟ್ಸ್, ಲೆದರ್ ವ್ಯಾರ್ಪ್ ಸ್ಟಿರಿಂಗ್ ವೀಲ್ಹ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಜೊತೆಗೆ ಫ್ರಂಟ್ ಪಾರ್ಕಿಂಗ್ ಸೆನ್ಸಾರ್‍, ದೊಡ್ಡದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿರಲಿದೆ. ಜೊತೆಗೆ ಮಲ್ಟಿ ಇನ್ಫಾರ್ಮೆಷನ್ ಡಿಸ್‌ಪ್ಲೇ, ಸ್ಟಾಪ್/ಸ್ಟಾರ್ಟ್ ಬಟನ್, ರಿಯರ್ ಸೀಟ್ ಆರ್ಮ್‌ ರೆಸ್ಟ್, ಕ್ರೂಸ್ ಕಂಟ್ರೋಲ್, 17-ಇಂಚಿನ ಡೈಮೆಂಡ್ ಕಟ್ ಅಲಾಯ್ ವೀಲ್ಹ್, ಸನ್‌ರೂಫ್, ಸ್ಮಾರ್ಟ್ ವಾಚ್ ಕನೆಕ್ಟಿವಿಟಿ ಸೇರಿದಂತೆ ಹಲವು ಫೀಚರ್ಸ್‌ಗಳು ಇದರಲ್ಲಿವೆ.

MOST READ: ಎಲೆಕ್ಟ್ರಿಕ್ ವಾಹನಗಳ ಬೆಲೆ ಇಳಿಕೆಗೆ ಸಹಾಯವಾದ ಕೇಂದ್ರದ ಹೊಸ ತೆರಿಗೆ ನೀತಿ

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಸುರಕ್ಷತೆಗಾಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಇಬಿಡಿ, ಸೀಟ್ ಬೆಲ್ಟ್ ಸೆನ್ಸಾರ್, ಪವರ್ ಫೋರ್ಡ್ ರಿಯರ್ ವ್ಯೂ ಒಆರ್‌ವಿಎಂಎಸ್, ಹಿಲ್ ಹೋಲ್ಡ್ ಅಸಿಸ್ಟ್, 7 ಏರ್‌ಬ್ಯಾಗ್, ಟು ಜೋನ್ ಕ್ಲೈಮೆಟ್ ಕಂಟ್ರೋಲ್, ಹೈಟ್ ಅಡ್ಜೆಸ್ಟ್ ಸೀಟ್ ಬೆಲ್ಟ್, ಪ್ರತಿ ಸೀಟುಗಳಲ್ಲೂ ಸೀಟ್ ಬೆಲ್ಟ್ ಸೆನ್ಸಾರ್, ISOFIX ಚೈಲ್ಡ್ ಸೀಟ್ ಮೌಂಟ್ ಸೌಲಭ್ಯವು ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.

MOST READ: ಕಾರ್ ರೇಸ್ ವೇಳೆ ದುರಂತ- ಅರ್ಜುನ್ ಪ್ರಶಸ್ತಿ ವಿಜೇತ ಗೌರವ್ ಗಿಲ್ ವಿರುದ್ಧ ಕೇಸ್..!

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಇದೀಗ ಬಿಡುಗಡೆ ಮಾಡಿರುವ ಎಕ್ಸ್‌‌ಯುವಿ300 ಎಎಂಟಿ ವರ್ಷನ್ ಕಾರು ಟ್ರಾಫಿಕ್ ಭರಿತ ನಗರ ಪ್ರದೇಶಗಳಲ್ಲಿ ಡ್ರೈವಿಂಗ್ ಮಾಡಲು ಮತ್ತಷ್ಟು ಸುಲಭವಾಗಿದ್ದು, ಎಎಂಟಿ ವರ್ಷನ್ ಮಹೀಂದ್ರಾ ಎಕ್ಸ್‌‌ಯುವಿ300 ಕಾರು ನಗರ ನಿವಾಸಿಗಳು, ಮತ್ತು ಮಹಿಳೆಯರಿಗೆ ಉತ್ತಮ ಡ್ರೈವಿಂಗ್ ಅನುಭವ ನೀಡುತ್ತದೆ ಎಂದು ಸಂಸ್ಥೆಯು ಹೇಳಿಕೊಂಡಿದೆ.

MOST READ: ಹ್ಯುಂಡೈನಿಂದ ಹಬ್ಬದ ಕೊಡುಗೆ: ಹೊಸ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್..!

ಮಹೀಂದ್ರಾ ಎಕ್ಸ್‌ಯುವಿ300 ಡಬ್ಲ್ಯು6 ಡೀಸೆಲ್ ವರ್ಷನ್‌ನಲ್ಲಿ ಎಎಂಟಿ ಬಿಡುಗಡೆ

ಈ ಮೂಲಕ ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿರುವ ಎಕ್ಸ್‌ಯುವಿ300 ಡೀಸೆಲ್ ಎಎಂಟಿ ವರ್ಷನ್‌ಗಳು ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮಾದರಿಯಲ್ಲೂ ಆಟೋಮ್ಯಾಟಿಕ್ ಮಾದರಿಗಳನ್ನು ಪರಿಚಯಿಸುವ ಸಾಧ್ಯತೆಗಳಿವೆ.

Most Read Articles

Kannada
English summary
Mahindra XUV300 W6 Diesel-Automatic Variant Launched In India: Priced At Rs 9.99 Lakh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X