TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್‌ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
ಪ್ರೇಮಿಗಳ ದಿನದಂದೇ ಬಿಡುಗಡೆಯಾಗುತ್ತಂತೆ ಮಹೀಂದ್ರಾ ಎಕ್ಸ್‌ಯುವಿ300 ಕಾರು
ಮಹೀಂದ್ರಾ ನಿರ್ಮಾಣದ ಹೊಚ್ಚ ಹೊಸ ಎಕ್ಸ್‌ಯುವಿ300 ಕಾರು ಮುಂದಿನ ತಿಂಗಳು ಫೆಬ್ರುವರಿ 14ರಂದು ಬಿಡುಗಡೆಯಾಗುತ್ತಿದೆ ಎಂಬ ಮಾಹಿತಿ ಖಚಿತವಾಗಿದ್ದು, ಈಗಾಗಲೆ ಹೊಸ ಕಾರು ಖರೀದಿಗಾಗಿ ಇಂದಿನಿಂದ ರೂ. 20 ಸಾವಿರ ಮುಂಗಡದೊಂದಿಗೆ ಅಧಿಕೃತ ಬುಕ್ಕಿಂಗ್ ಮಾಡಬಹುದಾಗಿದೆ ಅಂತಾ ಮಹೀಂದ್ರಾ ಸಂಸ್ಥೆಯು ಮಾಹಿತಿ ಹೊರಹಾಕಿದೆ.
ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಹೊಸ ನಮೂನೆಯ ಕಾರು ಉತ್ಪನ್ನಗಳನ್ನು ಅಭಿವೃದ್ಧಿ ಪಡೆಸುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಟಿವೊಲಿ ಕಾರಿನ ಮಾದರಿಯಲ್ಲೇ ಹೊಸ ಎಕ್ಸ್‌ಯುವಿ300 ಕಾರನ್ನು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ನಿರ್ಮಾಣ ಮಾಡಲಾಗಿದೆ.
ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳನ್ನು ಹೊಂದಿರುವ ಎಕ್ಸ್‌ಯುವಿ300 ಕಾರು 5 ಆಸನವುಳ್ಳ ಕಾರು ಮಾದರಿಯಾಗಿದ್ದು, ಎಸ್‌ಯುವಿ ಕಾರು ಪ್ರಿಯರನ್ನು ಸೆಳೆಯಬಲ್ಲ ಬಹುತೇಕ ಪ್ರೀಮಿಯಂ ಸೌಲಭ್ಯಗಳನ್ನು ಈ ಕಾರಿನಲ್ಲಿವೆ ಎಂದ್ರೆ ತಪ್ಪಾಗುವುದಿಲ್ಲ.
ಈ ಕಾರಿನಲ್ಲಿ ಗ್ರಾಹಕರು ನಿರೀಕ್ಷಿಸಬಹುದಾದ ವೈಶಿಷ್ಟ್ಯತೆಗಳನ್ನು ಅಳವಡಿಸಲಾಗಿದ್ದು, ಮೊದಲಿಗೆ ಕಾರಿನ ಒಳಭಾಗವನು ಡ್ಯುಯಲ್ ಟೋನ್ ಬಣ್ಣದಿಂದ ಸಜ್ಜುಗೊಳಿಸಲಾಗಿದೆ. ಮತ್ತು ಕಾರಿನಲ್ಲಿನ ಡ್ಯಾಶ್‍ಬೋರ್ಡ್, ಇನ್ಫೋಟೈನ್ಮೆಂಟ್ ಸಿಸ್ಟಂ, ಎಸಿ ವೆಂಟ್ಸ್ ಮತ್ತು ಸ್ಟೀರಿಂಗ್ ವ್ಹೀಲ್‍ನ ಮೇಲೆ ಸಿಲ್ವರ್ ಆಕ್ಸೆಂಟ್‍ಗಳನ್ನು ನೀಡಲಾಗಿದೆ.
ಡ್ಯುಯಲ್ ಟೋನ್ ಇಂಟೀರಿಯರ್ ಅನ್ನು ಹೊರತುಪಡಿಸಿ ಮಹೀಂದ್ರಾ ಎಕ್ಸ್‌ಯುವಿ300 ಕಾರಿನಲ್ಲಿ ದೊಡ್ಡದಾದ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ನೀಡಲಾಗಿದ್ದು, ಇದು ಆಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಆಯ್ಕೆಯನ್ನು ಪಡೆಯಬಹುದಾಗಿದೆ. ಇಷ್ಟೆ ಅಲ್ಲದೇ ಪಾರ್ಕಿಂಗ್ ಕ್ಯಾಮೆರಾ ಮತ್ತು ಸೆನ್ಸಾರ್‍ಗಳನ್ನು ಸಹ ಅಳವಡಿಸಲಾಗಿದೆ.
ಜೊತೆಗೆ ಮಹೀಂದ್ರಾ ಎಕ್ಸ್‌ಯುವಿ300 ಕಾರು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಸೆಂಟ್ರಲ್ ಮಲ್ಟಿ ಇನ್ಫಾರ್ಮೇಷನ್ ಡಿಸ್ಪ್ಲೇ ಹೊಂದಿರುವ ಇನ್ಸ್ಟ್ರೂಮೆಂಟ್ ಕ್ಲಸ್ಟರ್, ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಕ್ರೂಸ್ ಕಂಟ್ರೋಲ್ ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರಲಿದೆ.
ಇವುಗಳ ಜೊತೆಗೆ ಮಹೀಂದ್ರಾ ಎಕ್ಸ್‌ಯುವಿ300 ಕಾಂಪ್ಯಾಕ್ಟ್ ಎಸ್‍ಯುವಿ ಕಾರಿನಲ್ಲಿ ಸನ್‍ರೂಫ್ ಕೂಡಾ ಬಳಸಲಾಗಿದ್ದು, ಹಿಂಬದಿಯ ಸವಾರರ ಸೀಟ್‍ಗಳಿಗೆ ಸೆಂಟ್ರಲ್ ಆರ್ಮ್‍ರೆಸ್ಟ್ ಅನ್ನು ನೀಡಲಾಗಿದೆ. ಆದರೆ ಹಿಂಬದಿಯ ಸವಾರರಿಗೆ ಎಸಿವೆಂಟ್ಸ್ ಅನ್ನು ನೀಡಲಿದೆಯೆ ಎಂದು ಮತ್ತಷ್ಟು ಮಾಹಿತಿಗಳು ಹೊರ ಬಂದ ಮೇಲೆ ತಿಳಿಯಬೇಕಿದೆ.
ಮಹೀಂದ್ರಾ ಸಂಸ್ಥೆಯು ದಕ್ಷಿಣ ಕೊರಿಯಾದ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಯಾದ ಸ್ಯಾಂಗ್‌ಯಾಂಗ್ ಜೊತೆಗೂಡಿ ಹೊಸ ನಮೂನೆಯ ಕಾರು ಉತ್ಪನ್ನಗಳನ್ನು ಅಭಿವೃದ್ಧಿ ಪಡೆಸುತ್ತಿದ್ದು, ಸ್ಯಾಂಗ್‌ಯಾಂಗ್ ನಿರ್ಮಾಣದ ಟಿವೊಲಿ ಕಾರಿನ ಮಾದರಿಯಲ್ಲೇ ಹೊಸ ಎಕ್ಸ್‌ಯುವಿ300 ಕಾರನ್ನು ನಿರ್ಮಾಣ ಮಾಡಲಾಗಿದೆ.
ಇನ್ನು ಹೊಸ ಕಾರಿನಲ್ಲಿರುವ ಸುರಕ್ಷಾ ಸೌಲಭ್ಯಗಳನ್ನು ಸಹ ಪ್ರಮುಖ ಆಕರ್ಷಣೆಯಾಗಿದ್ದು, 17-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್, ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮೊದಲ ಬಾರಿಗೆ ನೀಡಲಾಗಿರುತ್ತಿರುವ 7 ಏರ್‌ಬ್ಯಾಗ್ ಸೌಲಭ್ಯ ಎಕ್ಸ್‌ಯುವಿ300 ಕಾರಿನಲ್ಲಿರಲಿವೆ.
ಎಂಜಿನ್ ಸಾಮರ್ಥ್ಯ
ಹೊಸ ಎಕ್ಸ್‌ಯುವಿ300 ಕಾರು ಡಿಸೇಲ್ ಮತ್ತು ಪೆಟ್ರೋಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಾಗಲಿದ್ದು, ಡಿಸೇಲ್ ಕಾರುಗಳು 1.5-ಲೀಟರ್( 1,500ಸಿಸಿ) ಎಂಜಿನ್‌ನೊಂದಿಗೆ 121-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿರಲಿವೆ.
ಹಾಗೆಯೇ ಪೆಟ್ರೋಲ್ ಮಾದರಿಯು ಸಹ 1.2-ಲೀಟರ್ ಎಂಜಿನ್‌ನೊಂದಿಗೆ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದು, ಡಿಸೇಲ್ ವರ್ಷನ್ ಕಾರುಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಪೆಟ್ರೋಲ್ ವರ್ಷನ್ ಕಾರುಗಳಲ್ಲಿ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಒದಗಿಸಲಿದೆ.
ಮಹೀಂದ್ರಾ ಸಂಸ್ಥೆಯು ನೀಡಿರುವ ಮಾಹಿತಿ ಪ್ರಕಾರ, ಸದ್ಯಕ್ಕೆ ಡೀಸೆಲ್ ವರ್ಷನ್‌ಗಳಲ್ಲಿ ಮಾತ್ರ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪ್ರೇರಿತ ಕಾರನ್ನು ಮೊದಲು ಬಿಡುಗಡೆ ಮಾಡಿ ನಂತರವಷ್ಟೇ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡುವುದಾಗಿ ಸುಳಿವು ನೀಡಿದೆ.
ಕಾರಿನ ಬೆಲೆಗಳು(ಅಂದಾಜು)
ಮಾರುಕಟ್ಟೆಯಲ್ಲಿ ಲಭ್ಯವಿರುವ ಕಂಪ್ಯಾಕ್ಟ್ ಎಸ್‌ಯುವಿಗಳಿಂತೂ ತಾಂತ್ರಿಕವಾಗಿ ಬಲಿಷ್ಠವಾಗಿರುವ ಎಕ್ಸ್‌ಯುವಿ300 ಕಾರುಗಳ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.0 ಲಕ್ಷದಿಂದ ಟಾಪ್ ಎಂಡ್ ಮಾದರಿಗೆ ರೂ. 13 ಲಕ್ಷ ಬೆಲೆ ನಿಗದಿಯಾಗುವ ಸಾಧ್ಯತೆಗಳಿವೆ.