ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಬಿಎಸ್-6 ವೈಶಿಷ್ಟ್ಯತೆಯ ವಾಹನಗಳನ್ನು ಬಿಡುಗಡೆಗಾಗಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಬೃಹತ್ ಯೋಜನೆ ರೂಪಿಸಿದ್ದು, ಮಹೀಂದ್ರಾ ಕೂಡಾ ತನ್ನ ಜನಪ್ರಿಯ ಎಕ್ಸ್‌ಯುವಿ 500 ಆವೃತ್ತಿಯನ್ನು ಬಿಎಸ್-6 ನಿಯಮಾನುಸಾರ ಉನ್ನತಿಕರಿಸಿ ಬಿಡುಗಡೆಗೆ ಸಿದ್ದತೆ ನಡೆಸುತ್ತಿದೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಸಂಸ್ಥೆಯು ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ಕಾರುಗಳ ಮೂಲಕ ಭಾರೀ ಜನಪ್ರಿಯತೆ ಗಳಿಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಹೊಸ ವಿನ್ಯಾಸದ ಮತ್ತು ಬಲಿಷ್ಠ ಎಂಜಿನ್ ಪ್ರೇರಿತ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳೊಂದಿಗೆ ಮತ್ತಷ್ಟು ಸದ್ದು ಮಾಡುವ ನೀರಿಕ್ಷೆಯಲ್ಲಿವೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಹೌದು, ಮಹೀಂದ್ರಾ ಸಂಸ್ಥೆಯು ಸದ್ಯ ಸ್ಕಾರ್ಪಿಯೋ, ಎಕ್ಸ್‌ಯುವಿ500 ಮತ್ತು ಥಾರ್ ನ್ಯೂ ಜನರೇಷನ್ ಆವೃತ್ತಿಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಉನ್ನತಿಕರಿಸುತ್ತಿದ್ದು, ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳಿಂತಲೂ ನ್ಯೂ ಜನರೇಷನ್(ಬಿಎಸ್-6) ಆವೃತ್ತಿಗಳು ಸಾಕಷ್ಟು ಸುಧಾರಿತ ಗುಣಮಟ್ಟದ ಬಿಡಿಭಾಗಗಳು, ಎಂಜಿನ್ ಸೌಲಭ್ಯ ಮತ್ತು ಪರ್ಫಾಮೆನ್ಸ್‌ನಲ್ಲಿ ಗ್ರಾಹಕರ ಆಕರ್ಷಣೆಗೆ ಕಾರಣವಾಗಲಿವೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಹೊಸ ವಾಹನಗಳ ಎಂಜಿನ್‌ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಕೇಂದ್ರ ಸರ್ಕಾರವು ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದೆ. ಸದ್ಯ ಬಿಎಸ್-4(ಭಾರತ್ ಸ್ಟೇಜ್) ವೈಶಿಷ್ಟ್ಯತೆಯುಳ್ಳ ವಾಹನಗಳು ಮಾತ್ರ ಮಾರಾಟಗೊಳ್ಳುತ್ತಿದ್ದು, ಇದು ಕೂಡಾ ಮುಂಬರುವ 2020ರ ಏಪ್ರಿಲ್ 1ರಿಂದ ನಿಷೇಧಗೊಂಡು ಬಿಎಸ್-6 ನಿಯಮವು ಜಾರಿಗೆ ಬರಲಿದೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಹೀಗಾಗಿ ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಸಂಸ್ಥೆಗಳು 2019ರ ಕೊನೆಯಲ್ಲಿ ಇಲ್ಲವೇ 20202ರ ಆರಂಭದಲ್ಲಿ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಇದರಲ್ಲಿ ನ್ಯೂ ಜನರೇಷನ್ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳು ಹೊಸ ಮಾದರಿಯ ಬಿಎಸ್-6 ಎಂಜಿನ್ ಸೌಲಭ್ಯದೊಂದಿಗೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಅವಧಿಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿವೆ ಎನ್ನಲಾಗಿದೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಹೊಸ ಕಾರುಗಳಲ್ಲಿ ಹಲವಾರು ಹೊಸ ಸುರಕ್ಷಾ ಸೌಲಭ್ಯಗಳನ್ನು ನೀಡಲಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳಿವೆ.

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಹಾಗೆಯೇ 6 ಏರ್‌ಬ್ಯಾಗ್‌ಗಳು, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್, ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

MOST READ: ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲುಗಡೆ ಮಾಡಿದವರಿಗೆ ಶಾಕ್ ಕೊಟ್ಟ ಹೊಸ ರೂಲ್ಸ್

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.

MOST READ: ಪ್ಲಾಸ್ಟಿಕ್‌ನಿಂದ ಉತ್ಪಾದನೆ ಮಾಡಲಾದ ಈ ಪೆಟ್ರೋಲ್ ದರ ಎಷ್ಟು ಗೊತ್ತಾ?

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300 ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

MOST READ: ಆಂಧ್ರ ನೂತನ ಸಿಎಂ ಜಗನ್ ಭದ್ರತೆಗಾಗಿ 4 ಕೋಟಿ ವೆಚ್ಚದ ಬುಲೆಟ್ ಪ್ರೂಫ್ ಕಾರ್

ವರ್ಷಾಂತ್ಯಕ್ಕೆ ಬಿಡುಗಡೆಯಾಗಲಿದೆ ಮಹೀಂದ್ರಾ ಎಕ್ಸ್‌ಯುವಿ 500 ಬಿಎಸ್-6 ವರ್ಷನ್

ಇದರೊಂದಿಗೆ ಹೊಸ ಕಾರುಗಳ ಬೆಲೆಯಲ್ಲೂ ತುಸು ಏರಿಕೆಯಾಗಲಿದ್ದು, ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ರೂ. 1.50 ಲಕ್ಷದಿಂದ ರೂ.2.50 ಲಕ್ಷದ ತನಕ ಹೆಚ್ಚಿನ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.

Source: Rushlane

Article Published On: Tuesday, August 13, 2019, 11:19 [IST]
English summary
Re: Mahindra XUV500 BS6 Spy Pics. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+