ಆಲ್ಟೋ 800 ಕಾರು ಉತ್ಪಾದನೆಗೆ ಮಾರುತಿ ಸುಜುಕಿ ಗುಡ್ ಬೈ..!
ಭಾರತೀಯ ಮಾರುಕಟ್ಟೆಯಲ್ಲಿ ತನ್ನದೇ ಆದ ಜನಪ್ರಿಯತೆಯೊಂದಿಗೆ ಮುನ್ನುಗ್ಗುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ತನ್ನ ಬಹುಬೇಡಿಕೆಯ ಓಮ್ನಿ ವಾಹನದ ಮಾರಾಟವನ್ನು ಅಧಿಕೃತ ಬಂದ್ ಮಾಡಿರುವುದಾಗಿ ಹೇಳಿಕೊಂಡಿದ್ದು, ಇದರ ಬೆನ್ನಲ್ಲೇ ಆಲ್ಟೋ 800 ಕಾರಿನ ಉತ್ಪಾದನೆಗೂ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ.

ದೇಶದಲ್ಲಿ ಪ್ರಯಾಣಿಕ ಸುರಕ್ಷತೆಗಾಗಿ ಆಟೋ ಉದ್ಯಮದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು, ಮಾರುತಿ ಸುಜುಕಿ ನಿರ್ಮಾಣದ ಪ್ರಮುಖ ವಾಹನಗಳಲ್ಲಿ ಕನಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಓಮ್ನಿ, ಜಿಪ್ಸಿ ಮತ್ತು ಆಲ್ಟೋ 800 ಸೇರಿದಂತೆ ಪ್ರಮುಖ ಕಾರು ಉತ್ಪಾದನಾ ಸಂಸ್ಥೆಗಳ ವಿವಿಧ ಕಾರು ಮಾದರಿಗಳು ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ಮಾರಾಟದಿಂದ ಸ್ಥಗಿತಗೊಳ್ಳುವುದು ಬಹುತೇಕ ಖಚಿತವಾಗಿದೆ.

ಕೇಂದ್ರ ಸರ್ಕಾರವು ಇದೇ ವರ್ಷ ಅಕ್ಟೋಬರ್ 1ರಿಂದ ಪ್ರತಿ ಕಾರು ಮಾದರಿಯಲ್ಲೂ ನಿರ್ದಿಷ್ಟ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಹೊಂದಿದ್ದರೇ ಮಾತ್ರವೇ ಕಾರು ಮಾರಾಟಕ್ಕೆ ಅವಕಾಶ ನೀಡುವ ಉದ್ದೇಶದಿಂದ ಇಂಡಿಯನ್ ಕ್ರ್ಯಾಶ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಆರಂಭಿಸಿದ್ದು, ಮಾರುತಿ ಸುಜುಕಿಗೆ ಈಗಲೇ ತಳಮಳ ಶುರುವಾಗಿದೆ.

ಇದಲ್ಲದೇ 2018ರ ಅಕ್ಟೋಬರ್‌ನಲ್ಲಿ ನಡೆದಿದ್ದ ಮಾರುತಿ ಸುಜುಕಿ ನಿರ್ಮಾಣದ 15 ಪ್ರಮುಖ ಕಾರುಗಳ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹತ್ತಕ್ಕೂ ಹೆಚ್ಚು ಕಾರು ಉತ್ಪನ್ನಗಳಲ್ಲಿ ಕನಿಷ್ಠ ಮಟ್ಟದ ಸುರಕ್ಷತೆ ಇಲ್ಲದಿರುವುದು ಖರೀದಿಗೆ ಯೋಗ್ಯವಲ್ಲದ ಎಂಬುವುದು ಭಾರೀ ಚರ್ಚಗೆ ಕಾರಣವಾಗಿತ್ತು.

ಇದರಲ್ಲಿ ಮಾರುತಿ ಸುಜುಕಿ ನಿರ್ಮಾಣದ ಸೆಲೆರಿಯೊ, ಇಗ್ನಿಸ್, ಸ್ವಿಫ್ಟ್, ಡಿಜೈರ್, ಎರ್ಟಿಗಾ, ಬಲೆನೊ, ವಿಟಾರಾ ಬ್ರೆಝಾ, ಸಿಯಾಜ್ ಮತ್ತು ಎಸ್-ಕ್ರಾಸ್ ಕಾರುಗಳು ಮಾತ್ರವೇ ಉತ್ತಮವಾದ ಸುರಕ್ಷಾ ರೇಟಿಂಗ್ ಪಡೆದುಕೊಂಡಿದ್ದು, ಇನ್ನುಳಿದ ಆಲ್ಟೊ 800, ವ್ಯಾಗನ್ ಆರ್, ಓಮ್ನಿ, ಇಕೋ ಮತ್ತು ರಫ್ತು ವಾಹನ ಮಾದರಿಯಾದ ಜಿಪ್ಸಿ ಕಾರು ಕೂಡಾ ರೇಟಿಂಗ್ ಪಾಯಿಂಟ್‌ನಲ್ಲಿ ಸೊನ್ನೆ ಪಡೆದಿರುವುದು ಭಾರೀ ಚರ್ಚೆಗೆ ಕಾರಣವಾಗಿತ್ತು.

ಹೀಗಾಗಿ ಕನಿಷ್ಠ ಮಟ್ಟದ ಸುರಕ್ಷೆತೆಯನ್ನು ನೀಡಲು ಹಿಂದೆ ಮುಂದೆ ನೋಡುವ ಮಾರುತಿ ಸುಜುಕಿಗೆ ಇದೀಗ ಸಂಕಷ್ಟ ಎದುರಾಗಿದ್ದು, 2019ರ ಅಕ್ಟೋಬರ್ 1ರಿಂದ ಜಾರಿಗೆ ಬರಲಿರುವ ಹೊಸ ನಿಯಮದಿಂದ ಸೊನ್ನೆ ರೇಟಿಂಗ್ ಪಡೆದಿರುವ ಕಾರುಗಳು ಮೂಲೆಗುಂಪಾಬೇಕಾದ ಅನಿವಾರ್ಯತೆ ಎದುರಾಗಿದೆ.

ಇದಲ್ಲದೇ 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್ 6 ನಿಯಮ ಕೂಡಾ ಮಾರುತಿ ಸುಜುಕಿ ಕಳಪೆ ಕಾರುಗಳಿಗೆ ಸಂಕಷ್ಟ ಎದುರಾಗಿದ್ದು, ಹೀಗಾಗಿ ಮಹತ್ವದ ನಿರ್ಧಾರಕ್ಕೆ ಬಂದಿರುವ ಮಾರುತಿ ಸುಜುಕಿ ಸಂಸ್ಥೆಯು ಹೊಸ ನಿಯಮಗಳಿಗೆ ಅನುಗುಣವಾಗಿ ಕಳಪೆ ಕಾರುಗಳನ್ನು ಹೊಸ ತಂತ್ರಜ್ಞಾನದೊಂದಿಗೆ ನಿರ್ಮಾಣ ಮಾಡಿ ಬಿಡುಗಡೆಗೊಳಿಸಲು ಸ್ಟಾಟ್ ಟೆಸ್ಟಿಂಗ್ ನಡೆಸುತ್ತಿದೆ.
MOST READ: ಕಾರುಗಳ ಫ್ಯಾಮಿಲಿ ಪ್ಲಾನಿಂಗ್ ಮಾಡಲು ಮುಂದಾದ ಸುಪ್ರೀಂ ಕೋರ್ಟ್

ಹೊಸ ನಿಯಮಗಳಿಗೆ ಅನುಗುಣವಾಗಿ ಆಲ್ಟೋ 800 ಕಾರು ಈಗಾಗಲೇ ನ್ಯೂ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳ್ಳುತ್ತಿದ್ದು, ಇದೇ ಕಾರಣಕ್ಕೆ ತಾತ್ಕಾಲಿಕವಾಗಿ ಆಲ್ಟೋ 800 ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಇನ್ನುಳಿದ ಎರಡು ಜನಪ್ರಿಯ ಮಾದರಿಗಳಾದ ಓಮ್ನಿ ಮತ್ತು ಜಿಪ್ಸಿಗೆ ಶಾಶ್ವತವಾಗಿಯೇ ಗುಡ್ ಬೈ ಹೇಳಿದೆ.

ಈ ಹಿಂದೆ 2018ರ ಫೆಬ್ರುವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಮೇಳದಲ್ಲಿ ಪ್ರದರ್ಶನ ಮಾಡಲಾದ ಫ್ಯೂಚರ್ ಎಸ್ ಕಾನ್ಸೆಪ್ಟ್ ಮಾದರಿಯಲ್ಲೇ ಹೊಸ ಆಲ್ಟೋ ಕಾರು ರಸ್ತೆಗಿಳಿಯಲಿದ್ದು, ಮಿನಿ ಎಸ್‌ಯುವಿ ಮಾದರಿಯಲ್ಲಿ ನಿರ್ಮಾಣಗೊಂಡಿರವುದು ಹಲವು ವಿಶೇಷಗಳಿಗೆ ಕಾರಣವಾಗಿದೆ.
MOST READ: ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಈಗಾಗಲೇ ಹೊಸ ಕಾರಿನ ಸ್ಪಾಟ್ ಟೆಸ್ಟಿಂಗ್ ನಡೆಸಿರುವ ಮಾರುತಿ ಸುಜುಕಿ ಸಂಸ್ಥೆಯು ಎಂಜಿನ್ ಕಾರ್ಯಕ್ಷಮತೆ ಕುರಿತು ಹಲವು ಸುತ್ತಿನ ಪರೀಕ್ಷೆಗಳನ್ನು ನಡೆಸಿದ್ದು, 2019ರ ಮಧ್ಯಂತರ ಅವಧಿಯಲ್ಲಿ ಹೊಸ ಆಲ್ಟೋ ಕಾರು ಮಾರಾಟಕ್ಕೆ ಲಭ್ಯವಾಗುವ ಸಾಧ್ಯತೆಗಳಿವೆ.


Click it and Unblock the Notifications