ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಕೈಗೆಟುಕುವ ಬೆಲೆ ಮತ್ತು ಕಡಿಮೆ ನಿರ್ವಹಣೆಯಿಂದಾಗಿ ಭಾರತದಲ್ಲಿ ಬಿಡುಗಡೆಯಾಗಿರುವ ಬಹುತೇಕ ಮಾರುತಿ ಸುಜುಕಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯತೆಯೊಂದಿಗೆ ಮಾರಾಟದಲ್ಲಿ ದಾಖಲೆ ಮಾಡುತ್ತಿದ್ದು, ಇದೀಗ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಬಲೆನೊ ಕಾರುಗಳ ಸಹ ಮಾರಾಟದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಕಳೆದ 2015ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದ ಬಲೆನೊ ಹ್ಯಾಚ್‌ಬ್ಯಾಕ್ ಕಾರುಗಳು ನಾಲ್ಕು ವರ್ಷಗಳ ಅವಧಿಯಲ್ಲಿ ನೀರಿಕ್ಷೆಗೂ ಮಿರಿ ಗ್ರಾಹಕರನ್ನು ಸೆಳೆದಿದ್ದು, ಸದ್ಯ ಭಾರತದಲ್ಲಿ ಮಾರಾಟವಾಗುತ್ತಿರುವ ಟಾಪ್ 10 ಬೆಸ್ಟ್ ಕಾರುಗಳಲ್ಲಿ 5ನೇ ಸ್ಥಾನದಲ್ಲಿದೆ ಅಂದ್ರೆ ನೀವು ನಂಬಲೇಬೇಕು. ಮಾರುತಿ ಸುಜುಕಿ ನಿರ್ಮಾಣದ ಮೊಲದ ಪ್ರೀಯಿಮಂ ಹ್ಯಾಚ್‌ಬ್ಯಾಕ್ ಮಾದರಿಯಾದ ಬಲೆನೊ ಕಾರುಗಳು ಇದುವರೆಗೆ ಬರೋಬ್ಬರಿ 6.5 ಲಕ್ಷ ಕಾರುಗಳು ಮಾರಾಟವಾಗಿದ್ದು, ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಮಾರಾಟವಾದ ಕಾರು ಮಾದರಿ ಇದಾಗಿದೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಕಾರು ಡೀಲರ್ಸ್ ಮೂಲಕ ಮಾರಾಟಗೊಳ್ಳುತ್ತಿರುವ ಬಲೆನೊ ಕಾರುಗಳು ಬೆಸ್ಟ್ ಸೆಲ್ಲಿಂಗ್ ಹ್ಯಾಚ್‌ಬ್ಯಾಕ್‌ಗಳಲ್ಲಿ ಅಗ್ರಸ್ಥಾನದಲ್ಲಿದ್ದು, ಭಾರತದಲ್ಲಿ ಅಷ್ಟೇ ಅಲ್ಲದೇ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಯುರೋಪ್ ಮತ್ತು ಲ್ಯಾಟಿನ್ ಅಮೆರಿಕದ ಪ್ರಮುಖ ರಾಷ್ಟ್ರಗಳಲ್ಲೂ ಬಲೆನೊ ಯಶಸ್ವಿಯಾಗಿ ಮಾರಾಟವಾಗುತ್ತಿದೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಇನ್ನೊಂದು ವಿಶೇಷ ಅಂದ್ರೆ, ಮೆಡ್ ಇನ್ ಇಂಡಿಯಾ ಬಲೆನೊ ಕಾರುಗಳು ಮೊದಲ ಬಾರಿಗೆ ಜಪಾನ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮೊದಲ ಹ್ಯಾಚ್‌ಬ್ಯಾಕ್ ಮಾದರಿಯಾಗಿದ್ದು, ಪ್ರೀಯಿಮಂ ವಿನ್ಯಾಸಗಳಿಂದಾಗಿ ಯುವ ಗ್ರಾಹಕರ ನೆಚ್ಚಿನ ಆಯ್ಕೆಯಾಗಿ ಹೊರಹೊಮ್ಮಿದೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

1 ತಿಂಗಳಲ್ಲಿ 20 ಸಾವಿರ ಕಾರುಗಳು ಮಾರಾಟ

ಹೌದು, ಕಳೆದ 2018ರ ಏಪ್ರಿಲ್ ತಿಂಗಳಿನಲ್ಲಿ ಮಾರುತಿ ಸುಜುಕಿ ಮಾರಾಟ ಮಾಡಿದ ಕಾರುಗಳ ಪೈಕಿ ಬಲೆನೊ ಕಾರುಗಳ ಸಂಖ್ಯೆಯೇ 20 ಸಾವಿರ. ಇದೇ ಕಾರಣಕ್ಕೆ ಬಿಡುಗಡೆಯಾದ ನಂತರ ಅತಿ ವೇಗವಾಗಿ ಮಾರಾಟವಾಗುತ್ತಿರುವ ಬಲೆನೊ ಕಾರುಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಎಂಜಿನ್ ಸಾಮರ್ಥ್ಯ

ಬಲೆನೊ ಕಾರು ಬಿಎಸ್-6 ನಿಯಮಕ್ಕೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 1.3-ಲೀಟರ್ ಟರ್ಬೋಚಾರ್ಜ್ಡ್ ಡಿಸೇಲ್ ಎಂಜಿನ್ ಮಾತ್ರ ಬಿಎಸ್-4 ನಿಯಮ ಅನುಸಾರವೇ ಮಾರಾಟವಾಗುತ್ತಿದೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಇದು ಮುಂಬರುವ 2020ರ ಏಪ್ರಿಲ್ 1ರಿಂದ ಸ್ಧಗಿತಗೊಳ್ಳಲಿದ್ದು, ಮಾಹಿತಿಗಳ ಪ್ರಕಾರ ಮಾರುತಿ ಸುಜುಕಿ ಸಂಸ್ಥೆಯು 1.3-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಿ ಕೇವಲ ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆ ಮಾತ್ರ ಹೊಂದಿರಲಿವೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಸಣ್ಣ ಗಾತ್ರದ ಡೀಸೆಲ್ ಎಂಜಿನ್‌ಗಳಿಗೆ ಗುಡ್ ಬೈ ಹೇಳಿದೆ ಮಾರುತಿ ಸುಜುಕಿ

ಹೌದು, ಮಾರುತಿ ಸುಜುಕಿಯು ಬಿಎಸ್-6 ನಿಯಮವನ್ನು ಪಾಲನೆ ಮಾಡಲು ಸಾಧ್ಯವಿರದ 1.3-ಲೀಟರ್ ಡೀಸೆಲ್ ಎಂಜಿನ್‌ಗಳಿಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದು, ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಪೆಟ್ರೋಲ್ ಮಾದರಿಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವ ಮಾರುತಿ ಸುಜುಕಿಯು 2020ರ ಏಪ್ರಿಲ್ 1ರಿಂದಲೇ ಪೂರ್ಣ ಪ್ರಮಾಣದಲ್ಲಿ ಡೀಸೆಲ್ ಕಾರುಗಳ ಮಾರಾಟವನ್ನು ಬಂದ್ ಮಾಡಲಿದ್ದು, ಬಿಎಸ್-6 ನಿಯಮವನ್ನು ಪಾಲಿಸಲು ಸಾಧ್ಯವಾಗದ ವಿಟಾರಾ ಬ್ರೆಝಾ ಡೀಸೆಲ್ ಎಂಜಿನ್ ಮಾದರಿಯು ಮಾರುಕಟ್ಟೆಯಿಂದ ನಿರ್ಗಮಿಸುವ ಅನಿವಾರ್ಯತೆ ಎದುರಾಗಿದೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಒಂದು ವೇಳೆ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಿಯಮ ಅನುಸಾರವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಉನ್ನತೀಕರಣ ಮಾಡಿದರೂ ಸಹ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಇದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.

ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಬಲೆನೊ

ಹೀಗಾಗಿ ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರ 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದೆ.

Most Read Articles

Kannada
English summary
Maruti Suzuki Baleno premium hatchback has crossed the 6.5 lakh sales mark within 4 years since its launch.
Story first published: Thursday, November 21, 2019, 18:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X