ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ದೇಶಾದ್ಯಂತ 2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮವು ಕಡ್ಡಾಯವಾಗಿ ಜಾರಿಗೆ ಬರುತ್ತಿದ್ದು, ಹೊಸ ನಿಯಮ ಜಾರಿ ನಂತರ ಬಿಎಸ್-4 ಕಾರುಗಳ ಮಾರಾಟವು ಸಂಪೂರ್ಣ ನಿಷೇಧಗೊಳ್ಳಲಿದೆ. ಈ ಹಿನ್ನಲೆ ನಿಗದಿತ ಅವಧಿಯೊಳಗೆ ಬಿಎಸ್-4 ಕಾರುಗಳ ಸ್ಟಾಕ್ ಪ್ರಮಾಣವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮಾರುತಿ ಸುಜುಕಿಯು ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದೆ.

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾರುತಿ ಸುಜುಕಿ ಸಂಸ್ಥೆಯು ಈಗಾಗಲೇ ಬಿಎಸ್-6 ಮಾದರಿಯ ಪೆಟ್ರೋಲ್ ಕಾರುಗಳ ಮಾರಾಟವನ್ನು ಆರಂಭಿಸಿರುವುದಲ್ಲದೇ ಬರೋಬ್ಬರಿ ಎರಡೂವರೆ ಲಕ್ಷ ಕಾರುಗಳನ್ನು ಮಾರಾಟ ಮಾಡಿದ್ದು, ಬಿಎಸ್-6 ಡೀಸೆಲ್ ಕಾರುಗಳ ಮಾರಾಟವನ್ನು 2020ರ ಏಪ್ರಿಲ್ ನಂತರವಷ್ಟೇ ಆರಂಭಿಸಲಿದೆ. ಹೀಗಾಗಿ ಹೊಸ ನಿಯಮ ಜಾರಿಯಾಗುವ ತನಕ ಬಿಎಸ್-4 ಡೀಸೆಲ್ ಕಾರುಗಳನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಅಧಿಕ ಪ್ರಮಾಣದಲ್ಲಿರುವ ವಿಟಾರಾ ಬ್ರೆಝಾ, ಡಿಜೈರ್ ಮತ್ತು ಸ್ವಿಫ್ಟ್ ಡೀಸೆಲ್ ಕಾರುಗಳ ಸ್ಟಾಕ್ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ.

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಮಾಹಿತಿಗಳ ಪ್ರಕಾರ, ಮಾರುತಿ ಸುಜುಕಿಯು ವಿಟಾರಾ ಬ್ರೆಝಾ ಕಾರಿನ ರೂ.75 ಸಾವಿರ ತನಕ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಕೇವಲ ಡೀಸೆಲ್ ಎಂಜಿನ್ ಆಯ್ಕೆ ಮಾತ್ರವೇ ಹೊಂದಿರುವ ವಿಟಾರಾ ಬ್ರೆಝಾ ಕಾರು 1.3-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಪಡೆದಿದೆ.

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಹಾಗೆಯೇ ಡಿಜೈರ್ ಕಂಪ್ಯಾಕ್ಟ್ ಸೆಡಾನ್ ಆವೃತ್ತಿಯ ಮೇಲೆ ರೂ.65 ಸಾವಿರ ತನಕ ಡಿಸ್ಕೌಂಟ್ ನೀಡಲಾಗುತ್ತಿದ್ದು, ಡೀಸೆಲ್ ಕಾರು 1.3-ಲೀಟರ್ ಎಂಜಿನ್‌ನೊಂದಿಗೆ ಮತ್ತು ಪೆಟ್ರೋಲ್ ಆವೃತ್ತಿಯು 1.2-ಲೀಟರ್ ಎಂಜಿನ್ ಆಯ್ಕೆಯನ್ನು ಹೊಂದಿದೆ.

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಇನ್ನು ಸ್ವಿಫ್ಟ್ ಡೀಸೆಲ್ ಮಾದರಿಯ ಮೇಲೆ ಗರಿಷ್ಠ ರೂ. 60 ಸಾವಿರ ತನಕ ಡಿಸ್ಕೌಂಟ್ ನೀಡಲಾಗುತ್ತಿದ್ದು, ಇದರಲ್ಲೂ ಕೂಡಾ ಡೀಸೆಲ್ ಕಾರು 1.3-ಲೀಟರ್ ಎಂಜಿನ್‌ನೊಂದಿಗೆ ಮತ್ತು ಪೆಟ್ರೋಲ್ ಆವೃತ್ತಿಯು 1.2-ಲೀಟರ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಹೀಗಾಗಿ ಮಾರುತಿ ಸುಜುಕಿ ನಿರ್ಮಾಣದ ಡೀಸೆಲ್ ಕಾರುಗಳ ಖರೀದಿಗೆ ಇದೊಂದು ಉತ್ತಮ ಅವಕಾಶ ಎನ್ನಬಹುದಾಗಿದ್ದು, ಆಸಕ್ತ ಗ್ರಾಹಕರು ಡಿಸ್ಕೌಂಟ್ ಕುರಿತು ತಮ್ಮ ಹತ್ತಿರದ ಡೀಲರ್ಸ್ ಬಳಿ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಸಣ್ಣ ಗಾತ್ರದ ಡೀಸೆಲ್ ಎಂಜಿನ್‌ಗಳಿಗೆ ಗುಡ್ ಬೈ ಹೇಳಿದೆ ಮಾರುತಿ ಸುಜುಕಿ

ಹೌದು, ಮಾರುತಿ ಸುಜುಕಿಯು ಬಿಎಸ್-6 ನಿಯಮವನ್ನು ಪಾಲನೆ ಮಾಡಲು ಸಾಧ್ಯವಿರದ 1.3-ಲೀಟರ್ ಡೀಸೆಲ್ ಎಂಜಿನ್‌ಗಳಿಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದು, ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ.

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಈ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್ ಕಾರುಗಳ ಆಯ್ಕೆಯನ್ನು ಈಗಿನಿಂದಲೇ ಕಡಿತಗೊಳಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಮೊದಲ ಹಂತವಾಗಿ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಭಾರೀ ಬದಲಾವಣೆ ತರುತ್ತಿದೆ.

MOST READ: ಈ 6 ಕಾರಣಗಳಿಂದಾಗಿ ಫುಲ್ ಫೇಮಸ್ ಆಯ್ತು ಕಿಯಾ ಸೆಲ್ಟೋಸ್

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಪೆಟ್ರೋಲ್ ಮಾದರಿಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವ ಮಾರುತಿ ಸುಜುಕಿಯು 2020ರ ಏಪ್ರಿಲ್ 1ರಿಂದಲೇ ಪೂರ್ಣ ಪ್ರಮಾಣದಲ್ಲಿ ಡೀಸೆಲ್ ಕಾರುಗಳ ಮಾರಾಟವನ್ನು ಬಂದ್ ಮಾಡಲಿದ್ದು, ಬಿಎಸ್-6 ನಿಯಮವನ್ನು ಪಾಲಿಸಲು ಸಾಧ್ಯವಾಗದ ವಿಟಾರಾ ಬ್ರೆಝಾ ಡೀಸೆಲ್ ಎಂಜಿನ್ ಮಾದರಿಯು ಮಾರುಕಟ್ಟೆಯಿಂದ ನಿರ್ಗಮಿಸುವ ಅನಿವಾರ್ಯತೆ ಎದುರಾಗಿದೆ.

MOST READ: ಅಧಿಕ ಮೈಲೇಜ್ ಪ್ರೇರಿತ ಹೈಬ್ರಿಡ್ ಎಂಜಿನ್ ಪಡೆಯಲಿದೆ ನ್ಯೂ ಜನರೇಷನ್ ಹೋಂಡಾ ಸಿಟಿ

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಒಂದು ವೇಳೆ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಿಯಮ ಅನುಸಾರವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಉನ್ನತೀಕರಣ ಮಾಡಿದರೂ ಸಹ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಇದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.

MOST READ: ಹೊಸ ಬದಲಾವಣೆಯೊಂದಿಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಬಿಎಸ್-6 ಜಾರಿಗೆ ದಿನಗಣನೆ- ಮಾರುತಿ ಸುಜುಕಿ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್

ಹೀಗಾಗಿ ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರ 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದೆ.

Most Read Articles

Kannada
English summary
Maruti Arena dealers are offering sizeable discounts on their diesel cars. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X