ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ದೇಶಾದ್ಯಂತ ಸದ್ಯ ಬಿಎಸ್-4 ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ತಾಂತ್ರಿಕ ಗುಣವೈಶಿಷ್ಟ್ಯತೆಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದ್ದು, ಇದು ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ನಿಷೇಧವಾಗುವುದು ಖಚಿತವಾಗಿದೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಈ ಹಿಂದೆ ಕೇಂದ್ರ ಸರ್ಕಾರವು 2017ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ದೇಶಾದ್ಯಂತ ಬಿಎಸ್-3 (ಭಾರತ್ ಸ್ಟೇಜ್) ಸೌಲಭ್ಯಗಳನ್ನು ಒಳಗೊಂಡ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆ ಮೇಲೆ ನಿಷೇಧ ನಿಷೇಧ ಹೇರಿದ್ದಲ್ಲದೆ ಬಿಎಸ್-4 ಮತ್ತು ಅದಕ್ಕೂ ಮೇಲ್ಪಟ್ಟ ವಾಹನ ಮಾದರಿಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಿತ್ತು.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಇದೀಗ ಮತ್ತೊಂದು ಮಹತ್ವದ ಹೆಜ್ಜೆಯಿಡುತ್ತಿರುವ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಸೂಚನೆಯೆಂತೆ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ನಿಷೇಧ ಹೇರುವುದು ಖಚಿತವಾಗಿದ್ದು, ಬಿಎಸ್-6 ವಾಹನಗಳು ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ವಾಹನ ಮಾದರಿಗಳಿಗೆ ಮಾತ್ರವೇ ಅವಕಾಶ ನೀಡಲಿದೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಹೀಗಾಗಿ ಕೇಂದ್ರ ಸರ್ಕಾರದ ಡೆಡ್‌ಲೈನ್‌ಗೂ ಮುನ್ನವೇ ಬಿಎಸ್ 6 ವೈಶಿಷ್ಟ್ಯತೆಯುಳ್ಳ ಎಂಜಿನ್ ಪ್ರೇರಿತ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿರುವ ಮಾರುತಿ ಸುಜುಕಿ ಸಂಸ್ಥೆಯು, ಈ ಮೂಲಕ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಬಹುದೊಡ್ಡ ಬದಲಾವಣೆ ಮಾಡುತ್ತಿದೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಈ ಬಗ್ಗೆ ಮಾಹಿತಿ ನೀಡಿರುವ ಮಾರುತಿ ಸುಜುಕಿ ಸಂಸ್ಥೆಯ ಅಧ್ಯಕ್ಷ ಆರ್‌ಸಿ ಭಾರ್ಗವ್ ಅವರು, ಮುಂದಿನ ನಾಲ್ಕು ತಿಂಗಳ ಕಾಲ ಬಿಎಸ್ 6 ವಾಹನಗಳ ಎಂಜಿನ್ ನಿರ್ಮಾಣದ ಕುರಿತು ಹೊಸ ಅಧ್ಯಯನಗಳನ್ನು ನಡೆಸಲು ನಿರ್ಧರಿಸಿದ್ದು, ಹೊಸ ಎಂಜಿನ್ ವೈಶಿಷ್ಟ್ಯತೆಯ ವಾಹನಗಳು 2020ರ ಆರಂಭದಿಂದಲೇ ಮಾರಾಟಕ್ಕೆ ಸಿದ್ದವಾಗಿರಲಿವೆ ಎಂದಿದ್ದಾರೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಇದಲ್ಲದೇ ಬಿಎಸ್ 4 ವಾಹನಗಳಿಂತ ಬಿಎಸ್ 6 ವಾಹನಗಳು ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯ ಪಡೆಯುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನಗಳ ಬೆಲೆಯಲ್ಲಿ ಸರಾಸರಿ ರೂ. 2.50 ಲಕ್ಷ ಏರಿಕೆಯಾಗಲಿದ್ದು,ಇದರಿಂದ ಅಗ್ಗದ ಬೆಲೆಯ ಕಾರು ಮಾರಾಟ ಮಾಡುವ ಮಾರುತಿ ಸುಜುಕಿ ಇದು ಹಿನ್ನಡೆಯಾಗುವ ಸಾಧ್ಯತೆಗಳಿವೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಇದರಿಂದ ಬೆಲೆ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿ ಎದುರಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಡೀಸೆಲ್ ಕಾರುಗಳ ಬದಲಾಗಿ ಪೆಟ್ರೋಲ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳತ್ತ ಹೆಚ್ಚಿನ ಒತ್ತು ಕೊಡಲು ಮುಂದಾಗಿದೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

2019ರ ಆರಂಭದಿಂದಲೇ ಡೀಸೆಲ್ ಕಾರುಗಳಿಂತ ಪೆಟ್ರೋಲ್ ಮತ್ತು ಸಿಎನ್‌ಜಿ ಆಧರಿತ ವಾಹನ ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಇದರ ಪರಿಣಾಮವೇ ಕಳೆದ ತಿಂಗಳು ಬಿಡುಗಡೆಯಾದ ಹೊಸ ವ್ಯಾಗನ್ ಆರ್ ಕಾರುಗಳಲ್ಲಿ ಡೀಸೆಲ್ ವರ್ಷನ್‌ಗಿಂತ ಹೆಚ್ಚು ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ಗಳನ್ನೇ ಹೆಚ್ಚಿನ ಗ್ರಾಹಕರು ಆಯ್ಕೆ ಮಾಡಿದ್ದಾರೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಇದಕ್ಕೆ ಕಾರಣ, ಡೀಸೆಲ್ ಕಾರುಗಳಿಗೆ ಸರಿಸಮಾನವಾಗಿ ಪೆಟ್ರೋಲ್ ಮತ್ತು ಸಿಎನ್‌ಜಿ ಕಾರುಗಳ ಮೈಲೇಜ್, ಎಂಜಿನ್ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಡಿಸೇಲ್ ಕಾರುಗಳ ಮೇಲಿನ ಅವಲಂಬನೆಯನ್ನು ತಗ್ಗಿಸಲಾಗುತ್ತಿದ್ದು, ಮಾರುತಿ ಸುಜುಕಿಯು ಇತರೆ ಕಾರು ಉತ್ಪಾದನಾ ಸಂಸ್ಥೆಗಳಿಗೆ ಮತ್ತೊಮ್ಮೆ ಟಾಂಗ್ ನೀಡುವ ತವಕದಲ್ಲಿದೆ.

MOST READ: ಬರೋಬ್ಬರಿ 400ಕಿ.ಮಿ ಮೈಲೇಜ್ ನೀಡುತಂತೆ ಮಹೀಂದ್ರಾ ಸಂಸ್ಥೆಯ ಈ ಎಲೆಕ್ಟ್ರಿಕ್ ಕಾರು..!

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಬಿಎಸ್ 6 ಜಾರಿಯ ಉದ್ದೇಶ?

ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್‌ನಲ್ಲಿ ಯುರೋ-6, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳಿಗೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ ಬಿಎಸ್-6 ವಾಹನಗಳು ರಸ್ತೆಗಿಳಿಯಲಿವೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಯುರೋಪ್‌ನಲ್ಲಿ ಈ ಹಿಂದೆ 2017ರಿಂದಲೇ ಯುರೋ-6 ತಾಂತ್ರಿಕ ಅಂಶಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದ್ದು, ಇದು ಬಿಎಸ್-6 ವೈಶಿಷ್ಟ್ಯತೆಗೆ ಸರಿಸಮನಾಗಿದೆ.

MOST READ: 140 ಕಿ.ಮಿ ವೇಗದಲ್ಲಿದ್ದ ಶಾಸಕ ಸಿಟಿ ರವಿ ಫಾರ್ಚೂನರ್ ಕಾರಿಗೆ ಇಬ್ಬರು ಯುವಕರು ಬಲಿ

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಹೊಸ ನಿಯಮ ಜಾರಿಯಿಂದಾಗಿ ವಾಹನ ಎಂಜಿನ್ ಮಾದರಿಗಳಲ್ಲಿ ಭಾರೀ ಬದಲಾವಣೆಯಾಗಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಎಂಜಿನ್ ಮಾದರಿಗಿಂತಲೂ ಬಿಎಸ್-6 ಹೆಚ್ಚಿನ ಗುಣಮಟ್ಟದೊಂದಿಗೆ ಹೊಗೆ ಉಗುಳುವ ಪ್ರಮಾಣದಲ್ಲಿ ಪರಿಣಾಮಕಾರಿ ತಗ್ಗಿಸಲಿದೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಇದೀಗ ಸುಪ್ರೀಂಕೋರ್ಟ ಕೂಡಾ ಈ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿರುವುದು ಕೇಂದ್ರ ಸರ್ಕಾರವು ಪಾಲನೆ ಮಾಡಲೇಬೇಕಾದ ಅನಿವಾರ್ಯತೆಯಲ್ಲಿದೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ ತೀರ್ಪಿನ ಪ್ರಕಾರ, ಮುಂಬರುವ ದಿನಗಳಲ್ಲಿ ಮಾಲಿನ್ಯ ತಡೆಯಲು ಬಿಎಸ್-6 ತಾಂತ್ರಿಕ ಅಂಶಗಳ ಅಳವಡಿಕೆ ಅವಶ್ಯವಿದ್ದು, 2020ರ ಏಪ್ರಿಲ್ 1ರಿಂದಲೇ ಹೊಸ ನಿಯಮ ಜಾರಿಗೆ ಸಿದ್ದತೆ ಮಾಡಿಕೊಳ್ಳುವಂತೆ ಕೇಂದ್ರಕ್ಕೆ ಖಡಕ್ ಸೂಚನೆ ನೀಡಿದೆ.

ಬಿಎಸ್ 6 ಎಫೆಕ್ಟ್- ಡೀಸೆಲ್ ಕಾರುಗಳಿಗೆ ಗುಡ್ ಬೈ ಹೇಳುತ್ತಾ ಮಾರುತಿ ಸುಜುಕಿ?

ಬೆಲೆ ಏರಿಕೆಯ ಬಿಸಿ..!

ಹೌದು, ಬಿಎಸ್ 4 ವಾಹನಗಳಿಂತಲೂ ಬಿಎಸ್ 6 ಎಂಜಿನ್ ಪ್ರೇರಿತ ವಾಹನಗಳ ಎಂಜಿನ್ ಮಾದರಿಯು ಹೆಚ್ಚಿನ ಗುಣಮಟ್ಟ ಪಡೆದುಕೊಂಡಿರಲಿದ್ದು, ಇದರಿಂದ ಸಹಜವಾಗಿಯೇ ಸದ್ಯ ರೂ.5 ಲಕ್ಷಕ್ಕೆ ದೊರೆಯುತ್ತಿರುವ ಕಾರುಗಳು ಮುಂಬರುವ ದಿನಗಳಲ್ಲಿ ರೂ. 7 ಲಕ್ಷದಿಂದ ರೂ. 8 ಲಕ್ಷಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
Maruti Suzuki Diesel Cars To Be Discontinued? — Priority More For CNG Models. Read in Kannada.
Story first published: Wednesday, February 20, 2019, 13:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X