ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ಮಾರುತಿ ಸುಜುಕಿ ಎರ್ಟಿಗಾ

ಭಾರತದ ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ತನ್ನ ಎರ್ಟಿಗಾ ಎಂಪಿವಿಯನ್ನು ಮತ್ತೊಮ್ಮೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಮಾಡಿದೆ. ಎರ್ಟಿಗಾ ಎಂಪಿವಿಯು ಬಿಎಸ್-6 ಎಂಜಿನ್ ನವೀಕರಿಸುತ್ತಿರುವ ಸಲುವಾಗಿ ಸ್ಪಾಟ್ ಟೆಸ್ಟ್ ನಡೆಸಿರುವುದನ್ನು ಗಾಡಿವಾಡಿ ಬಹಿರಂಗಪಡಿಸಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಮಾರುತಿ ಸುಜುಕಿ ಇಂಡಿಯಾ ಕಳೆದ ನಾಲ್ಕು ವರ್ಷಗಳ ಹಿಂದೆ ಎರ್ಟಿಗಾ ಮಾದರಿಯನ್ನು ಬಿಡುಗಡೆಗೊಳಿಸಿತ್ತು. ಎರ್ಟಿಗಾ ಎಂಪಿವಿಯು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶ್ವಸಿಯಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಮಾದರಿಯು ಹರ್ಟೆಕ್ಟ್ ಪ್ಲಾಟ್‌ಫಾರ್ಮ್ ವಿನ್ಯಾಸವನ್ನು ಆಧರಿಸಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಮಾರುತಿ ಸುಜುಕಿ ಕಂಪನಿಯು ಈ ಎಂಪಿವಿಯನ್ನು ಕಳೆದ ವರ್ಷದ ಕೊನೆಯಲ್ಲಿ ನವೀಕರಿಸಿತ್ತು. 7 ಸೀಟಿನ ಈ ಎಂಪಿವಿಯ ವಿನ್ಯಾಸದಲ್ಲಿ ನವೀಕರಣಗಳನ್ನು ಮಾಡಲಾಗಿತ್ತು.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಕಳೆದ ಕೆಲವು ತಿಂಗಳುಗಳಿಂದ ಆಟೋಮೊಬೈಲ್ ಕ್ಷೇತ್ರವು ಮಂದಗತಿಯಿಂದ ಸಾಗುತ್ತಿದ್ದ ವೇಳೆಯಲ್ಲಿ ವಾಹನಗಳ ಮಾರಾಟದಲ್ಲಿ ಕುಸಿತವಾಗಿತ್ತು. ಈ ಸಂದರ್ಭದಲ್ಲಿ ಇತರ ವಾಹನಗಳ ಮಾರಾಟ ಅಮೆ ಗತಿಯಲ್ಲಿ ಸಾಗುತ್ತಿದ್ದರೆ ಎರ್ಟಿಗಾ ಮಾತ್ರ ಉತ್ತಮವಾಗಿ ಮಾರಾಟವಾಗುತ್ತಿತು.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಈ ಎಂಪಿವಿಯನ್ನು ಮುಂದಿನ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಜಾರಿಯಾಗಲಿರುವ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. 1.5 ಲೀಟರ್ ನಾಲ್ಕು ಸಿಲಿಂಡರ್ ಮೈಲ್ಡ್ ಪೆಟ್ರೋಲ್ ಎಂಜಿನ್ ಅನ್ನು ನವೀಕರಿಸಲಾಗಿದೆ. ಈ ಎಂಜಿನ್ 6,000 ಆರ್‍‍ಪಿಎಂನಲ್ಲಿ 104.7 ಬಿಹೆಚ್‍ಪಿ ಪವರ್ ಮತ್ತು 4,400 ಆರ್‍‍‍ಪಿಎಂನಲ್ಲಿ 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಮಾರುಕಟ್ಟೆಯಲ್ಲಿರುವ ಎರ್ಟಿಗಾ ಎಂ‍ಪಿವಿ ಕಾರು, ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍ ಅನ್ನು ಹೊಂದಿದೆ. ಹಾಗೆಯೇ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ವ್ಹೀಲ್‍‍ಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೇಲ್ ಲೈಟ್ ಅನ್ನು ಹೊಂದಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಮಾರುಕಟ್ಟೆಯಲ್ಲಿರುವ ಎರ್ಟಿಗಾದಲ್ಲಿ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ನೀಡಲಾಗಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಎರ್ಟಿಗಾ ಎಂಪಿವಿಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ನೀಡಲಾಗಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಹೊಸ ಎರ್ಟಿಗಾ ಕಾರುಗಳನ್ನು ಒಟ್ಟು ಐದು ಬಣ್ಣಗಳಲ್ಲಿ ಮಾರಾಟ ಮಾಡಲಾಗುವುದು. ಇದರಲ್ಲಿ ಪರ್ಲ್ ಮೆಟಾಲಿಕ್ ಅಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಬಣ್ಣಗಳನ್ನು ಆಯ್ಕೆ ಮಾಡಬಹುದು.

MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ಮತ್ತೊಮ್ಮೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಾರುತಿ ಸುಜುಕಿ ಎರ್ಟಿಗಾ

ಹೊಸ ಎರ್ಟಿಗಾ ಬಿಎಸ್-6 ಎಂಜಿನ್ ಅನ್ನು ಸ್ಪಾಟ್ ಟೆಸ್ಟ್ ಮಾಡಲಾಗಿದೆ. ಹೊಸ ಬಿಎಸ್-6 ಎರ್ಟಿಗಾ ಎಂಪಿವಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ನಿರೀಕ್ಷೆಗಳಿವೆ. ಪ್ರಸ್ತುತ ಎರ್ಟಿಗಾ ಎಂಪಿವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.55 ಲಕ್ಷದಿಂದ ರೂ.11.21 ಲಕ್ಷಗಳಾಗಿದೆ.

Article Published On: Saturday, November 23, 2019, 18:14 [IST]
English summary
Spy Pics: Maruti Suzuki Ertiga BS-VI Spotted Sans Camouflage - Read in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+