ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಸದ್ಯ ಮಾರುತಿ ಸುಜುಕಿ ಸಂಸ್ಥೆಯು ಡಿಸೇಲ್ ವರ್ಷನ್ ಕಾರುಗಳ ಮಾರಾಟವನ್ನು ತಗ್ಗಿಸುವ ಸಂಬಂಧ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಬಿಎಸ್-6 ನಿಯಮ ಜಾರಿಗೆ ಬರುವುದಕ್ಕೂ ಮುನ್ನವೇ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡುವ ಉದ್ದೇಶ ಹೊಂದಿದೆ. ಹೀಗಾಗಿ ಡೀಸೆಲ್ ಎಂಜಿನ್ ಆಯ್ಕೆಗೆ ಪರ್ಯಾಯವಾಗಿ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚು ಗಮನಹರಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಜನಪ್ರಿಯ ಎರ್ಟಿಗಾ ಆವೃತ್ತಿಯಲ್ಲೂ ಸಿಎನ್‌ಜಿ ಪರಿಚಯಿಸುವ ಸುಳಿವು ನೀಡಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ದೇಶಾದ್ಯಂತ ಮುಂಬರುವ 2020ರ ಏಪ್ರಿಲ್ 1ರಿಂದಲೇ ಬಿಎಸ್-6 ನಿಯಮವು ಜಾರಿಗೆ ಬರುತ್ತಿದ್ದು, ಹೊಸ ನಿಯಮವನ್ನು ಅನುಸರಿಸಲು ಸಾಧ್ಯವಾಗದ ಪ್ರಮುಖ ಕಾರು ಕಂಪನಿಗಳು ತಮ್ಮ ಜನಪ್ರಿಯ ಕಾರುಗಳ ಉತ್ಪಾದನೆಯನ್ನೇ ಕೈಬಿಡುತ್ತಿವೆ. ಇದರಲ್ಲಿ ಮಾರುತಿ ಸುಜುಕಿ ಕೂಡಾ ಒಂದಾಗಿದ್ದು, ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಉನ್ನತಿಕರಿಸಲು ಸಾಧ್ಯವಾಗದ ಡೀಸೆಲ್ ಎಂಜಿನ್ ಮಾದರಿಗಳ ಮಾರಾಟವನ್ನು ಕೈಬಿಡುವುದಾಗಿ ಅಧಿಕೃತವಾಗಿ ಹೇಳಿಕೊಂಡಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಕಾರುಗಳು ಅಧಿಕ ಮೈಲೇಜ್‌ನಿಂದಾಗಿಯೇ ಹೆಚ್ಚು ಸದ್ದು ಮಾಡುತ್ತಿದ್ದು, ಡೀಸೆಲ್ ಎಂಜಿನ್ ಬಂದ್ ಮಾಡಿದ್ದಲ್ಲಿ ಅದಕ್ಕೆ ಪರ್ಯಾಯವಾಗಿ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಡೀಸೆಲ್ ಎಂಜಿನ್‌ನಲ್ಲಿ ದೊರೆಯುತ್ತಿದ್ದ ಮೈಲೇಜ್ ಪ್ರಮಾಣವನ್ನೇ ಪೆಟ್ರೋಲ್ ಹೈಬ್ರಿಡ್ ಮತ್ತು ಪೆಟ್ರೋಲ್ ಸಿಎನ್‌ಜಿ ವರ್ಷನ್‌ಗಳ ಮೂಲಕ ಒದಗಿಸಲು ಪ್ರಯತ್ನಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ಜಾರಿಯಾಗುವುದಕ್ಕೂ ಮುನ್ನ ಗ್ರಾಹಕರನ್ನು ಹೊಸ ಕಾರುಗಳತ್ತ ಸೆಳೆಯುವ ವಿಶ್ವಾಸದಲ್ಲಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೀಗಾಗಿ ನಿಧಾನವಾಗಿ ಡೀಸೆಲ್ ಎಂಜಿನ್‌ಗಳ ಆಯ್ಕೆಯನ್ನು ಕಡಿತಗೊಳಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ನಿಧಾನವಾಗಿ ಪ್ರತಿ ಕಾರು ಮಾದರಿಯಲ್ಲೂ ಸ್ಮಾರ್ಟ್ ಹೈಬ್ರಿಡ್, ಸಿಎನ್‌ಜಿ ಆವೃತ್ತಿಗಳನ್ನು ಪರಿಚಯಿಸುತ್ತಿದ್ದು, ಇದೀಗ ಎಂಪಿವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಎರ್ಟಿಗಾ ಆವೃತ್ತಿಯಲ್ಲೂ ಮುಂದಿನ ಕೆಲವೇ ದಿನಗಳಲ್ಲಿ ಸಿಎನ್‌ಜಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿರುವುದಾಗಿ ಮಾಧ್ಯಮ ಸಂಸ್ಥೆಯೊಂದರ ಸಂದರ್ಶನದಲ್ಲಿ ಈ ಬಗ್ಗೆ ಸ್ಪಷ್ಟಣೆ ನೀಡಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಸದ್ಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಎರ್ಟಿಗಾ ಆವೃತ್ತಿಯಲ್ಲಿ ಈಗಾಗಲೇ ಸ್ಮಾರ್ಟ್ ಹೈಬ್ರಿಡ್ ಆವೃತ್ತಿಯನ್ನು ಪರಿಚಯಿಸಲಾಗಿದ್ದು, ಸ್ಮಾರ್ಟ್ ಹೈಬ್ರಿಡ್ ಪ್ರೇರಣೆ ಹೊಂದಿರುವ ಸಿಎನ್‌ಜಿ ಆವೃತ್ತಿಯು ಪ್ರತಿ ಕೆಜಿಗೆ(ತೂಕದ ಲೆಕ್ಕದಲ್ಲಿ) 25 ಕಿ.ಮಿ ಮೈಲೇಜ್ ನೀಡಬಲ್ಲದು ಎನ್ನಲಾಗಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಇದು ಡೀಸೆಲ್ ಆವೃತ್ತಿಯ ಮೈಲೇಜ್ ಪ್ರಮಾಣಕ್ಕೆ ಸಮನಾಗಿದ್ದು, ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಸಾಕಷ್ಟು ಸಹಕಾರಿಯಾಗಲಿದೆ. ಜೊತೆಗೆ ಬಿಎಸ್-6 ವೈಶಿಷ್ಟ್ಯತೆ ಎಂಜಿನ್ ಮಾದರಿಗಳು ಕೂಡಾ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳಿಂತಲೂ ಶೇ.10ರಿಂದ 15ರಷ್ಟು ಹೆಚ್ಚಿನ ಮೈಲೇಜ್ ಜೊತೆಗೆ ಶೇ.25ರಷ್ಟು ಮಾಲಿನ್ಯ ಪ್ರಮಾಣವು ಕಡಿತವಾಗಲಿದೆ ಎನ್ನಲಾಗಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಇದೇ ಉದ್ದೇಶದಿಂದಲೇ ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಡೀಸೆಲ್ ಎಂಜಿನ್ ಮಾದರಿಯನ್ನು ಬಿಎಸ್-6 ವೈಶಿಷ್ಟ್ಯತೆಗೆ ಉನ್ನತಿಕರಿಸುವ ಯೋಜನೆಯನ್ನು ಕೈಬಿಟ್ಟಿರುವ ಮಾರುತಿ ಸುಜುಕಿ ಸಂಸ್ಥೆಯು ಸಂಪೂರ್ಣವಾಗಿ ಪೆಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚಿನ ಆಸಕ್ತಿ ತೊರುತ್ತಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಇನ್ನು ಮಾರುತಿ ಸುಜುಕಿ ಸಂಸ್ಥೆಯು ಅಗಸ್ಟ್ 21ಕ್ಕೆ 6 ಸೀಟರ್ ವರ್ಷನ್ ಮಾದರಿಯ ಎರ್ಟಿಗಾ ಕ್ರಾಸ್ ಎನ್ನುವ ಮತ್ತೊಂದು ಹೊಸ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಎರ್ಟಿಗಾ ಕ್ರಾಸ್ ಕಾರು ಸಾಮಾನ್ಯ ಮಾದರಿಯ ಎರ್ಟಿಗಾ ಕಾರಿಗಿಂತಲೂ ವಿಭಿನ್ನವಾಗಿರಲಿದೆ. ವಿನೂತನವಾದ ಫ್ಲೇರ್ಡ್ ವ್ಹೀಲ್ ಆರ್ಚೆಸ್, ಹೊಸ ಕ್ರೋಮ್ ಗ್ರಿಲ್, ಆಕರ್ಷಕವಾದ ಹೆಡ್‍ಲೈಟ್‍ಗಳು ಮತ್ತು ಎಲ್ಇಡಿ ಡಿಆರ್‍ಎಲ್ ಅನ್ನು ಅಳವಡಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹೈ ಗ್ರೌಂಡ್ ಕ್ಲಿಯರೆನ್ಸ್, ರೂಫ್ ರೈಲ್ಸ್ ಮತ್ತು ಇನ್ನಿತರೆ ಬದಲಾವಣೆಗಳನ್ನು ಪಡೆದುಕೊಂಡಿರಲಿದೆ.

ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ವರ್ಷನ್ ಎರ್ಟಿಗಾ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಸ್ವಿಫ್ಟ್ ಆರ್‍ಎಸ್ ಕಾರುಗಳಲ್ಲಿ ಬಲೆನೊ ಕಾರಿನಿಂದ ಎರವಲು ಪಡೆಯಲದ 1.0 ಲೀಟರ್ ಬೂಸ್ಟರ್‍‍ಜೆಟ್ ಟರ್ಬೋ ಎಂಜಿನ್ ಅನ್ನು ಹೊಂದಿದ್ದು, ಇದೀಗ ತಮ್ಮ ಜನಪ್ರಿಯ ಎರ್ಟಿಗಾ ಎಂಪಿವಿ ಕಾರಿನಲ್ಲಿಯು ಸಹ ಇದೇ ಎಂಜಿನ್ ಅನ್ನು ನೀಡಿ ಎರ್ಟಿಗಾ ಕ್ರಾಸ್ ಮಾದರಿಯಲ್ಲಿ ಬಿಡುಗಡೆ ಮಾಡಲಿದೆ.

Most Read Articles

Kannada
English summary
Maruti Suzuki To Launch The Ertiga CNG Soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X