ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ಸಂಸ್ಥೆಯು ಕೆಲ ದಿನಗಳ ಹಿಂದಷ್ಟೆ ತಮ್ಮ ಹೊಸ ತಲೆಮಾರಿನ ಎರ್ಟಿಗಾ ಕಾರುಗಳನ್ನು ಬಿಡುಗಡೆಗೊಳಿಸಿದ್ದು, ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ.7.44 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಆದರೆ ಇದೀಗ ದೇಶದಲ್ಲಿರುವ ಮಾರುತಿ ಸುಜುಕಿ ಡೀಲರ್‍‍ಗಳು ಹಿಂದಿನ ತಲೆಮಾರಿನ ಎರ್ಟಿಗಾ ಕಾರುಗಳ ಮೇಲೆ ರಿಯಾಯಿತಿಯನ್ನು ನೀಡುತ್ತಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಹಿಂದಿನ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು 2012ರಲ್ಲಿ ಬಿಡುಗಡೆಗೊಂಡಿದ್ದು, ಇದು ಮಾರುತಿ ಸುಜುಕಿ ಸಂಸ್ಥೆಯ ಮೊದಲ ಎಂಪಿವಿ ಕಾರು ಎನ್ನಲಾಗಿತ್ತು. ಇದೀಗ ಬಿಡುಗಡೆಗೊಂಡ ಹೊಸ ತಲೆಮಾರಿನ ಎರ್ಟಿಗಾ ಕಾರುಗಳ ಡಿಮ್ಯಾಂಡ್ ಹೆಚ್ಚುತ್ತಿದ್ದು, ಹಿಂದಿನ ತಲೆಮಾರಿನ ಎರ್ಟಿಗಾ ಕಾರುಗಳನ್ನು ಮೊದಲಿಗೆ ಖಾಲಿ ಮಾಡಲು ಡೀಲರ್‍‍ಗಳು ಭಾರೀ ರಿಯಾಯಿತಿಯನ್ನು ನೀಡುತ್ತಿದ್ದಾರೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಹೌದು, ಆಟೋಕಾರ್ ಇಂಡಿಯಾ ವರದಿ ಪ್ರಕಾರ ದಾಸ್ತಾನುಗಳ ಆಧಾರದ ಮೇಲೆ ಮಾರುತಿ ಸುಜುಕಿ ಮೊದಲ ತಲೆಮಾರಿನ ಎರ್ಟಿಗಾದ ಡೀಸೆಲ್ ರೂಪಾಂತರಗಳಿಗೆ ರೂ. 1.08 ಲಕ್ಷ ವರೆಗೆ ರಿಯಾಯಿತಿಗಳನ್ನು ನೀಡುತ್ತಿದೆ. ಇನ್ನು 1.4 ಲೀಟರ್ ಪೆಟ್ರೋಲ್ ಎಂಜಿನ್ ಆಧಾರಿತ ಎರ್ಟಿಗಾ ಕಾರುಗಳ ಮೇಲೆ ರೂ. 53,000 ರಿಯಾಯಿತಿ ಮತ್ತು ಲಾಭವನ್ನು ಪಡೆಯಬಹುದಾಗಿದೆ. ಅಷ್ಟೆ ಅಲ್ಲದೇ ಕಾರಿನ ಸಿಎನ್‍ಜಿ ಮಾಡಲ್‍ಗಳ ಮೇಲೆ ರೂ. 28,000 ಸಾವಿರದ ರಿಯಾಯಿತಿಯನ್ನು ಪಡೆಯಬಹುದಾಗಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಇನ್ನು ನ್ಯೂ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂ‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ತಾಂತ್ರಿಕ ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಎಂಜಿನ್ ಸಾಮರ್ಥ್ಯ

ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಮೈಲೇಜ್

ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಲಭ್ಯವಿರುವ ಬಣ್ಣಗಳು

ಹೊಸ ಎರ್ಟಿಗಾ ಕಾರುಗಳು ಒಟ್ಟು ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಪರ್ಲ್ ಮೆಟಾಲಿಕ್ ಔಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಬಣ್ಣಗಳನ್ನು ಆಯ್ಕೆ ಮಾಡಬಹುದು.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಒಟ್ಟಿನಲ್ಲಿ 7-ಸೀಟರ್ ಮಾದರಿಗಳಲ್ಲಿ ವಿಶೇಷ ಎನ್ನಿಸುವ ಹೊಸ ಎರ್ಟಿಗಾ ಕಾರು 209-ಲೀಟರ್‌ನಷ್ಟು ಬೂಟ್ ಸ್ಪೆಸ್ ಸೌಲಭ್ಯ ಪಡೆದಿದ್ದು, ದೇಶದಲ್ಲಿ ಉತ್ತಮ ಇಂಧನ ದಕ್ಷತೆ ಹೊಂದಿರುವ ಎಂಪಿವಿ ಕಾರುಗಳಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಮರಾಜೊ ಕಾರುಗಳಿಗೆ ಇದು ಸಾಕಷ್ಟು ಪೈಪೋಟಿ ನೀಡಲಿದೆ.

ಓಲ್ಡ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ಮೇಲೆ ಭಾರೀ ಡಿಸ್ಕೌಂಟ್..!

ಇಷ್ಟೆ ಅಲ್ಲದೇ ಮಾರುತಿ ಸುಜುಕಿ ಸಂಸ್ಥೆಯು 6 ಸೀಟರ್ ಎರ್ಟಿಗಾ ಕಾರುಗಳನ್ನು ಬಿಡುಗಡೆಗೊಳಿಸುವ್ ಯೋಜನೆಯಲಿದ್ದು, ಜೊತೆಗೆ ಬಲೆನೊ ಕಾರಿನ ಫೇಸ್‍ಲಿಫ್ಟ್ ಮಾದರಿಯನ್ನು ಸಹ ಪರಿಚಯಿಸಲಾಗುತ್ತಿದೆ. ಈಗಾಗಲೆ ಬಲೆನೊ ಫೇಸ್‍‍ಲಿಫ್ಟ್ ಕಾರುಗಳ ಖರೀದಿಗಾಗಿ ಡೀಲರ್‍‍ಗಳು ಬುಕ್ಕಿಂಗ್ ಪ್ರಕ್ರಿಯೆಯನ್ನು ಕೂಡಾ ಶುರು ಮಾಡಲಾಗಿದೆ.

More from DriveSpark

Article Published On: Friday, January 25, 2019, 9:22 [IST]
English summary
Maruti Offering Massive Discounts On Previous Generation Ertiga. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+