Just In
- 9 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 9 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 10 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 10 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಯಾಜ್ ನಂತರ ಹೊಸ ಎಂಜಿನ್ನೊಂದಿಗೆ ಬಿಡುಗಡೆಯಾಗಲಿದೆ ಎರಡನೇ ತಲೆಮಾರಿನ ಎರ್ಟಿಗಾ..!
ಮುಂಬರುವ 2020 ಏಪ್ರಿಲ್ 1ರಿಂದ ದೇಶಾದ್ಯಂತ ಬಿಎಸ್-6 ಪ್ರೇರಣೆಯ ಹೊಸ ವಾಹನಗಳು ರಸ್ತೆಗಿಳಿಯಲು ಸಜ್ಜಾಗುತ್ತಿದ್ದು, ಮಾರುತಿ ಸುಜುಕಿ ಸಂಸ್ಥೆಯು ಸಹ ತನ್ನ ಜನಪ್ರಿಯ ಕಾರುಗಳ ಎಂಜಿನ್ ತಂತ್ರಜ್ಞಾನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಬೃಹತ್ ಯೋಜನೆ ರೂಪಿಸಿದೆ.
ಈ ಹಿಂದೆ 2017ರ ಏಪ್ರಿಲ್ 1ರಂದು ಭಾರತದಲ್ಲಿ ಪರಿಚಯಿಸಲಾಗಿದ್ದ ಬಿಎಸ್ 4(ಭಾರತ್ ಸ್ಟೇಜ್) ನಿಯಮವು ಮುಂದಿನ 2020ರ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದ್ದು, ಏಪ್ರಿಲ್ 1ರಿಂದಲೇ ಬಿಎಸ್ 6 ನಿಯಮದಂತೆ ಹೊಸ ವಾಹನಗಳ ಮಾರಾಟ ಪ್ರಕ್ರಿಯೆ ಆರಂಭವಾಗಲಿದೆ. ಹೀಗಾಗಿ ಆಟೋ ಉತ್ಪಾದನಾ ಸಂಸ್ಥೆಗಳು ಹೊಸ ನಿಯಮ ಅನ್ವಯ ಹೊಸ ವಾಹನಗಳನ್ನು ಮಾರಾಟ ಮಾಡಬೇಕಿದ್ದು, ನಿಯಮ ಪಾಲಿಸಲು ಸಾಧ್ಯವಾಗದ ವಾಹನಗಳು ಮಾರುಕಟ್ಟೆಯಿಂದ ನಿಷೇಧಗೊಳ್ಳಲಿವೆ.
ಹೀಗಾಗಿ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಸೂಚನೆಯೆಂತೆ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ನಿಷೇಧ ಹೇರುವುದು ಖಚಿತವಾಗಿದ್ದು, ಬಿಎಸ್-6 ವಾಹನಗಳು ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ವಾಹನ ಮಾದರಿಗಳಿಗೆ ಮಾತ್ರವೇ ಅವಕಾಶ ನೀಡಲಿದೆ.
ಇದರಿಂದ ಡೆಡ್ಲೈನ್ಗೂ ಮುನ್ನವೇ ಬಿಎಸ್ 6 ವೈಶಿಷ್ಟ್ಯತೆಯುಳ್ಳ ಎಂಜಿನ್ ಪ್ರೇರಿತ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿರುವ ಮಾರುತಿ ಸುಜುಕಿ ಸಂಸ್ಥೆಯು, ಈ ಮೂಲಕ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಬಹುದೊಡ್ಡ ಬದಲಾವಣೆ ಮಾಡುತ್ತಿದೆ.
ಕೆಲವು ಮೂಲಗಳ ಪ್ರಕಾರ, ಮಾರುತಿ ಸುಜುಕಿ ಸಂಸ್ಥೆಯು 2ನೇ ತಲೆಮಾರಿನ ಎರ್ಟಿಗಾ ಮತ್ತು 2010ರ ಎಸ್-ಕ್ರಾಸ್ ಕಾರುಗಳಲ್ಲಿ ಸದ್ಯ ಜೋಡಣೆ ಮಾಡಲಾಗುತ್ತಿರುವ 1.3-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಿ ಮೊನ್ನೆಯಷ್ಟೇ ಬಿಡುಗಡೆಯಾದ 2019ರ ಸಿಯಾಜ್ ಮಾದರಿಯಲ್ಲೇ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಮುಂಬರುವ ನ್ಯೂ ಜನರೇಷನ್ ಎರ್ಟಿಗಾ ಮತ್ತು ಎಸ್-ಕ್ರಾಸ್ ಕಾರುಗಳಲ್ಲಿ ಪರಿಚಯಿಸುವ ಇರಾದೆಯಲ್ಲಿದೆ.
ಫಿಯೆಟ್ ಸಂಸ್ಥೆಯಿಂದ ಎರವಲು ಪಡೆಯಲಾಗಿರುವ 1.5-ಲೀಟರ್ ಡಿಡಿಐಎಸ್225 ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ಗಿಂತಲೂ ಹೆಚ್ಚು ಪರ್ಫಾಮೆನ್ಸ್ ಮತ್ತು ಇಂಧನ ದಕ್ಷತೆಯನ್ನು ಪಡೆದುಕೊಂಡಿದ್ದು, ಇಂಗಾಲ ಹೊರಸೂಸುವಿಕೆ ಪ್ರಮಾಣವು ಸಹ ಪರಿಣಾಮಕಾರಿಯಾಗಿ ತಗ್ಗಿರುವುದನ್ನು ನಾವಿಲ್ಲಿ ಗಮನಿಸಬಹುದು.
ಜೊತೆಗೆ ಬಿಎಸ್-6 ನಿಯಮ ಅನುಸಾರವೇ ಸಿದ್ದಗೊಂಡಿರುವ ಹೊಸ ಎಂಜಿನ್ ಮಾದರಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, 95-ಬಿಎಚ್ಪಿ ಮತ್ತು 225-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಲೀಟರ್ ಡೀಸೆಲ್ಗೆ ಇದು 26.82 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.
MOST READ: ಹೊಸ ಕಾರು ಖರೀದಿದಾರರು ಇನ್ಮುಂದೆ ಇದಕ್ಕಾಗಿ ಹೆಚ್ಚುವರಿ ಹಣ ನೀಡಬೇಕೆಂತೆ...!
ಇದರಿಂದ ಮಾರುತಿ ಸುಜುಕಿ ಕಾರುಗಳು ಮುಂಬರುವ ದಿನಗಳಲ್ಲಿ ಬಲಿಷ್ಠ ಎಂಜಿನ್ ಜೊತೆಗೆ ಅತ್ಯುತ್ತಮ ಇಂಧನ ದಕ್ಷತೆಯು ಮತ್ತಷ್ಟು ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದ್ದು, ಇಂಗಾಲ ಹೊರಸೂಸುವಿಕೆಯ ಪ್ರಮಾಣವನ್ನು ತಗ್ಗಿಸುವಲ್ಲಿ ನೆರವಾಗಲಿರುವ ಹೊಸ ಎಂಜಿನ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಬೆಲೆಗಿಂತಲೂ ತುಸು ದುಬಾರಿಯಾಗಿರಲಿದೆ.
ಇದಕ್ಕೆ ಸಾಕ್ಷಿ ಎಂಬಂತೆ ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಸಿಯಾಜ್ 2019ರ ಮಾಡೆಲ್ ಕಾರಿನ ಬೆಲೆ ಕೂಡಾ ಈ ಹಿಂದೆ ಇದ್ದ ಆರಂಭಿಕ ಬೆಲೆ ರೂ. 8.19 ಲಕ್ಷ ಬೆಲೆಯು ಇದೀಗ ರೂ. 9.97 ಲಕ್ಷಕ್ಕೆ ಏರಿಕೆಯಾಗಿದ್ದು, ಹೊಸ ನಿಯಮ ಪಾಲನೆ ಮಾಡುತ್ತಿರುವ ಬಹುತೇಕ ಕಾರುಗಳ ಬೆಲೆಯು ಸದ್ಯದಲ್ಲೇ ರೂ.1.50 ಲಕ್ಷದಿಂದ ರೂ.3 ಲಕ್ಷಕ್ಕೆ ಏರಿಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
MOST READ: ಅಪಘಾತದಲ್ಲಿ ಹ್ಯಾರಿಯರ್ ಕಾರು ಪುಡಿಪುಡಿಯಾದ್ರು ಪ್ರಯಾಣಿಕರಿಗೆ ಏನೂ ಆಗಲಿಲ್ಲ..!
ಇನ್ನು ಎರ್ಟಿಗಾ ಹೊಸ ಎಂಜಿನ್ ಮಾದರಿಯನ್ನು ಸೆಪ್ಟೆಂಬರ್ ಹೊತ್ತಿಗೆ ಪರಿಚಯುಸಲು ನಿರ್ಧರಿಸುವ ಮಾರುತಿ ಸುಜುಕಿ ಸಂಸ್ಥೆಯು ಅದಕ್ಕೂ ಮುನ್ನ ಎಸ್-ಕ್ರಾಸ್ ಆವೃತ್ತಿಯನ್ನು ಪರಿಚಯಿಸಲಿದೆ. ಒಟ್ಟಿನಲ್ಲಿ ಹೊಸ ಎಂಜಿನ್ ಮಾದರಿಯು ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಮತ್ತಷ್ಟು ಬದಲಾವಣೆ ಕಾರಣವಾಗಲಿದೆ.