Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರುತಿ ಸುಜುಕಿ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್
ಕಳೆದ ನಾಲ್ಕು ತಿಂಗಳಿನಿಂದ ಹೊಸ ಕಾರು ಮಾರಾಟದಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತೀವ್ರ ನಷ್ಟ ಅನುಭವಿಸಿದ್ದು, ಮಾರುತಿ ಸುಜುಕಿ ಸಂಸ್ಥೆಯು ಸಹ ಕಳೆದ 5 ವರ್ಷಗಳಲ್ಲೇ ಮೊದಲ ಬಾರಿಗೆ ಹಿನ್ನಡೆ ಅನುಭವಿಸಿದೆ. ಹೀಗಾಗಿ ಕಾರು ಮಾರಾಟ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ಆಯ್ದ ಕಾರು ಮಾದರಿಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದೆ.

ಲೋಕಸಭಾ ಚುನಾವಣೆ ಮತ್ತು ಇಂಧನ ಬೆಲೆಗಳಲ್ಲಿ ಆದ ಭಾರೀ ಬದಲಾವಣೆಗಳಿಂದಾಗಿ ಕಳೆದ ನಾಲ್ಕೈದು ತಿಂಗಳು ಅವಧಿಯಲ್ಲಿ ಹೊಸ ಕಾರು ಮಾರಾಟ ಪ್ರಮಾಣದಲ್ಲಿ ಭಾರೀ ಕುಸಿತ ಕಂಡಿದ್ದು, ಇದೀಗ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಆಟೋ ಉದ್ಯಮವನ್ನು ಮತ್ತೆ ಸುಧಾರಿಸಿಕೊಳ್ಳುವತ್ತ ಹೆಜ್ಜೆಯಿಡುತ್ತಿದೆ. ಇದರಿಂದ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಹೊಸ ಕಾರು ಖರೀದಿದಾರರನ್ನು ಸೆಳೆಯಲು ಭಾರೀ ಪ್ರಮಾಣದ ಡಿಸ್ಕೌಂಟ್‌ಗಳನ್ನು ನೀಡುತ್ತಿವೆ.

ಮಾರುತಿ ಸುಜುಕಿ ಸಹ ತನ್ನ ಜನಪ್ರಿಯ ಪ್ರೀಮಿಯಂ ಕಾರು ಆವೃತ್ತಿಗಳಾದ ಸಿಯಾಜ್ ಸೆಡಾನ್, ಎಸ್-ಕ್ರಾಸ್ ಎಸ್‌ಯುವಿ, ಬಲೆನೊ ಹ್ಯಾಚ್‌ಬ್ಯಾಕ್ ಮತ್ತು ಇಗ್ನಿಸ್ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್‌ಗಳನ್ನು ಘೋಷಣೆ ಮಾಡಿದ್ದು, ಹೊಸ ಕಾರು ಖರೀದಿದಾರರಿಗೆ ಇದು ಸುವರ್ಣಾವಕಾಶ ಎನ್ನಬಹುದು.

ಮಾಹಿತಿಗಳ ಪ್ರಕಾರ ಮಾರುತಿ ಸುಜುಕಿ ಸಂಸ್ಥೆಯು ಎಸ್-ಕ್ರಾಸ್ ಎಸ್‌ಯುವಿ ಮಾದರಿ ಮೇಲೆ ಅತಿ ಹೆಚ್ಚು ಡಿಸ್ಕೌಂಟ್ ಘೋಷಣೆ ಮಾಡಿದ್ದು, ಸಿಯಾಜ್, ಬಲೆನೊ ಮತ್ತು ಇಗ್ನಿಸ್ ಕಾರುಗಳ ಮೇಲೂ ಆಕರ್ಷಕ ರಿಯಾಯ್ತಿಗಳನ್ನು ನೀಡಲಾಗಿದೆ.

ಎಸ್-ಕ್ರಾಸ್( ರೂ.70 ಸಾವಿರ)
ಮಾರುತಿ ಸುಜುಕಿ 1.3-ಲೀಟರ್ ಡೀಸೆಲ್ ಎಂಜಿನ್ ಪ್ರೇರಿತ ಪ್ರೀಮಿಯಂ ಕಾರುಗಳಲ್ಲಿ ಅಗ್ರಸ್ಥಾನದಲ್ಲಿರುವ ಎಸ್-ಕ್ರಾಸ್ ಕಾರಿನ ಮೇಲೆ ರೂ.70 ಸಾವಿರ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಡುತ್ತಿರುವ 1.5-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಬಿಡುಗಡೆಯ ಹಿನ್ನೆಲೆಯಲ್ಲಿ ಭರ್ಜರಿ ಆಫರ್ ನೀಡಲಾಗಿದೆ.

ಸಿಯಾಜ್ (ರೂ.65 ಸಾವಿರ)
ಸಿ ಸೆಗ್ಮೆಂಟ್ ಸೆಡಾನ್ ಕಾರುಗಳಲ್ಲಿ ಅಗ್ರಸ್ಥಾನದಲ್ಲಿ ಸಿಯಾಜ್ ಕಾರುಗಳಿಗೆ ಸದ್ಯ ಮಾರುಕಟ್ಟೆಯಲ್ಲಿ ಪೂರಕ ವಾತಾವರಣ ಇಲ್ಲದಿರುವುದು ಮಾರಾಟಕ್ಕೆ ಹಿನ್ನಡೆಯಾಗಿದ್ದು, ಮರಾಟವನ್ನು ಪ್ರಮಾಣವನ್ನು ಸರಿ ದಾರಿಗೆ ತರಲು ರೂ.65 ಸಾವಿರ ಮೌಲ್ಯದ ಆಫರ್‌ಗಳನ್ನು ಘೋಷಣೆ ಮಾಡಲಾಗಿದೆ.

ಇಗ್ನಿಸ್(ರೂ. 55 ಸಾವಿರ)
ಹ್ಯಾಚ್‌ಬ್ಯಾಕ್ ಮಾದರಿಯಾದ ಇಗ್ನಿಸ್ ಕಾರು ಪ್ರೀಮಿಯಂ ಸೌಲಭ್ಯಗಳೊಂದಿಗೆ ಉತ್ತಮ ಬೇಡಿಕೆ ಹೊಂದಿದ್ದರೂ ಸಹ ಕಳೆದ ಕೆಲ ತಿಂಗಳಿನಿಂದ ಮಾರಾಟದಲ್ಲಿ ಹಿನ್ನಡೆ ಅನುಭವಿಸಿದೆ. ಹೀಗಾಗಿ ಮಾರಾಟವಾಗದೇ ಇರುವ ಸ್ಟಾಕ್ ಕ್ಲಿಯೆರೆನ್ಸ್ ಮಾಡುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಇಗ್ನಿಸ್ ಮೇಲೆ ರೂ.55 ಸಾವಿರ ಘೋಷಣೆ ಮಾಡಿದೆ.

ಬಲೆನೊ(ರೂ. 40 ಸಾವಿರ)
ಹ್ಯಾಚ್‌ಬ್ಯಾಕ್ ಕಾರುಗಳಲ್ಲಿ ಅಗ್ರಸ್ಥಾನದಲ್ಲಿ ಬಲೆನೊ ಕಾರಿನ ಖರೀದಿ ಮೇಲೆ ರೂ.40 ಸಾವಿರದಷ್ಟು ಡಿಸ್ಕೌಂಟ್ ನೀಡುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಹೆಚ್ಚಿನ ಮಟ್ಟದಲ್ಲಿ ಕಾರು ಮಾರಾಟಕ್ಕೆ ಯೋಜನೆ ರೂಪಿಸಿದ್ದು, ಮುಂಬರುವ ತಿಂಗಳ ಕಾರು ಮಾರಾಟ ವರದರಿಯಲ್ಲಿ ಡಿಸ್ಕೌಂಟ್ ಫಲಿತಾಂಶ ಲಭ್ಯವಾಗಲಿದೆ.
MOST READ: ಆಕರ್ಷಕ ಬೆಲೆಗಳಲ್ಲಿ ಬಹುನೀರಿಕ್ಷಿತ ಟೊಯೊಟಾ ಗ್ಲಾಂಝಾ ಬಿಡುಗಡೆ

ಇನ್ನು ಮಾರುತಿ ಸುಜುಕಿ ಸಂಸ್ಥೆಯು ಸದ್ಯ ಟೊಯೊಟಾ ಜೊತೆಗೂಡಿ ರೀ ಬ್ಯಾಡ್ಜ್ ಕಾರುಗಳನ್ನು ಮಾರಾಟ ಮಾಡಲು ಚಾಲನೆ ನೀಡಿದ್ದು, ಈ ಕಾರಣಕ್ಕೂ ಕೂಡಾ ಮಾರುತಿ ಸುಜುಕಿ ಸಂಸ್ಥೆಯು ಗ್ರಾಹಕರನ್ನು ತನ್ನತ್ತ ಸೆಳೆಯುವ ಉದ್ದೇಶ ಹೊಂದಿದೆ.