ಶೀಘ್ರದಲ್ಲೇ ಬಿಡುಗಡೆಯಾಗಲಿದೆ 2020ರ ಮಾರುತಿ ಎಸ್-ಕ್ರಾಸ್
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಕಂಪನಿಯು ತನ್ನ ಸರಣಿಯಲ್ಲಿರುವ ಎಲ್ಲಾ ಕಾರುಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುತ್ತಿದೆ. ಬಿಎಸ್-6 ಎಂಜಿನ್ ವಾಹನಗಳ ಮಾರಾಟವು ಕಳೆದ ಏಳು ಎಂಟು ತಿಂಗಳ ಅವಧಿಯಲ್ಲಿ ಮೂರು ಲಕ್ಷ ಗಡಿ ದಾಟಿದೆ.

ಕೇಂದ್ರ ಸರ್ಕಾರ ಮಾಲಿನ್ಯವನ್ನು ಕಡಿಮೆಗೊಳಿಸಲು ಹೊಸ ಬಿಎಸ್-6 ಮಾಲಿನ್ಯ ನಿಯಮವನ್ನು ಮುಂದಿನ ವರ್ಷದ ಏಪ್ರಿಲ್ ತಿಂಗಳಿನಿಂದ ಜಾರಿಗೊಳಿಸುತ್ತಿದೆ. ಇದೇ ಕಾರಣದಿಂದ ಮಾರುತಿ ಸುಜುಕಿ ಕಂಪನಿಯು ಡೀಸೆಲ್ ಎಂಜಿನ್ ಹೊಂದಿರುವ ಕೆಲವು ಮಾದರಿಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.

2020ರ ಮಾರುತಿ ಎಸ್-ಕ್ರಾಸ್ ಕಾರ್ ಅನ್ನು ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಆಟೋ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಮಾರುತಿ ಸುಜುಕಿ ವಿಟಾರಾ ಬ್ರಿಝಾ ಮತ್ತು ಎಸ್-ಕ್ರಾಸ್ ಮಾದರಿಗಳಲ್ಲಿ ಒಂದೇ ರೀತಿಯ ಎಂಜಿನ್‍ಗಳನ್ನು ಅಳವಡಿಸಲಾಗಿದೆ.

ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಬಿಎಸ್- ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 6,000 ಆರ್‍ಪಿಎಂನಲ್ಲಿ 104.7 ಬಿಹೆಚ್‍ಪಿ ಪವರ್ ಮತ್ತು 4,400 ಆರ್‍ಪಿಎಂನಲ್ಲಿ 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅಥವಾ 4 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಕಾರು ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿರಲಿದೆ.

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿರಲಿದೆ.

ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಫೀಚರ್‍ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಈ ಹೊಸ ಕಾರಿನಲ್ಲಿ ಅಲಾಯ್ ವ್ಹೀಲ್, ಫ್ರಂಟ್ ಗ್ರಿಲ್, ಹೆಡ್ ಲ್ಯಾಂಪ್, ಎಲ್‍ಇಡಿ ಡಿಆರ್‍ಎಲ್, ಟರ್ನ್ ಸಿಗ್ನಿಲ್ ಮತ್ತು ಟೇಲ್‍ಲೈಟ್‍ಗಳನ್ನು ಹೊಂದಿರಲಿದೆ.
MOST READ: ದುಬಾರಿ ಬೆಂಝ್ ಕಾರನ್ನು ಹೆಲಿಕಾಪ್ಟರ್ ಮೂಲಕ ಪುಡಿ ಮಾಡಿದ ಭೂಪ

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಸ್-ಕ್ರಾಸ್ ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ಎಂಬ ನಾಲ್ಕು ವಿವಿಧ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ.
MOST READ: ಕಳ್ಳತನವಾಗಿದ್ದ ಕಾರು ಫಾಸ್ಟ್‌ಟ್ಯಾಗ್‌ನಿಂದಾಗಿ ವಾಪಸ್ ಸಿಕ್ಕಿದ್ದೆ ಒಂದು ರೋಚಕ

ಬಿಎಸ್-6 ಪೆಟ್ರೋಲ್ ಎಂಜಿನ್ ಹೊಂದಿರುವ 2020ರ ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು ಮುಂದಿನ ವರ್ಷ ನಡೆಯಲಿರುವ ಆಟೋ ಎಕ್ಸ್‌ಪೋನಲ್ಲಿ ಬಿಡುಗಡೆಯಾಗಲಿದಸ್ೆ. ದೇಶಿಯ ಮಾರುಕಟ್ಟೆಯಲ್ಲಿ ಈ ಕಾರು ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications