ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

ಕಳೆದ ತಿಂಗಳು ಬಿಡುಗಡೆಯಾಗಲಿರುವ ಮಾರುತಿ ಸುಜುಕಿ ಹೊಚ್ಚ ಹೊಸ ಎಸ್-ಪ್ರೆಸ್ಸೊ ಮೈಕ್ರೊ ಎಸ್‌ಯುವಿ ಕಾರು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಹೊಸ ಕಾರಿನಲ್ಲಿ ಶೀಘ್ರದಲ್ಲೇ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ನೀಡುವುದು ಬಹುತೇಕ ಖಚಿತವಾಗಿದೆ.

ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮ ಅನುಸಾರವಾಗಿ ಸಣ್ಣ ಗಾತ್ರದ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಲು ನಿರ್ಧರಿಸಿರುವ ಮಾರುತಿ ಸುಜುಕಿಯು ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆಯನ್ನು ಹೆಚ್ಚಿಸುತ್ತಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಎಸ್-ಪ್ರೆಸ್ಸೊ ಮಾದರಿಯಲ್ಲೂ ಸಿಎನ್‌ಜಿ ಕಿಟ್ ಅಳವಡಿಕೆ ಮಾಡುತ್ತಿದೆ. ಸಿಎನ್‌ಜಿ ಕಿಟ್ ಜೋಡಣೆಯ ಎಸ್-ಪ್ರೆಸ್ಸೊ ಬಿಡುಗಡೆಗೂ ಮುನ್ನ ರೋಡ್ ಟೆಸ್ಟ್ ನಡೆಸಲಾಗಿದ್ದು, ಹೊಸ ಕಾರು ಡೀಸೆಲ್ ಎಂಜಿನ್‌ಗೆ ಸರಿಸಮನಾದ ಮೈಲೇಜ್ ಮತ್ತು ಅತಿ ಕಡಿಮೆ ಮಾಲಿನ್ಯ ಹೊರಸೂಸುವಿಕೆಯ ವೈಶಿಷ್ಟ್ಯತೆ ಹೊಂದಿದೆ.

ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

ಬಿಎಸ್-6 ನಿಯಮದಂತೆ ಸಣ್ಣ ಗಾತ್ರದ ಡೀಸೆಲ್ ಎಂಜಿನ್‌ಗಳನ್ನು ಹೊಸ ಮಾಲಿನ್ಯ ನಿಯಂತ್ರಣ ಕಾಯ್ದೆ ಅನುಸಾರವಾಗಿ ಉನ್ನತೀಕರಣ ಸಾಧ್ಯವಾಗದ ಕಾರಣಕ್ಕೆ ಸಣ್ಣ ಕಾರುಗಳಲ್ಲಿ ಡೀಸೆಲ್ ಆಯ್ಕೆ ತೆಗೆದುಹಾಕುತ್ತಿರುವ ಮಾರುತಿ ಸುಜುಕಿಯು ಪರಿಸರ ಸ್ನೇಹಿ ವಾಹನಗಳತ್ತ ಮಹತ್ವದ ಹೆಜ್ಜೆಯಿರಿಸಿದೆ.

ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

ಬಿಎಸ್-6 ಜಾರಿ ನಂತರ ಸದ್ಯ ಮಾರುಕಟ್ಟೆಯಲ್ಲಿ ಎಂಟ್ರಿ ಲೆವಲ್ ಕಾರುಗಳಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈಬಿಡಲಿರುವ ಮಾರುತಿ ಸುಜುಕಿಯು ಹೈ ಎಂಡ್ ಕಾರು ಮಾದರಿಗಳಲ್ಲಿ ಮಾತ್ರವೇ 1.5-ಲೀಟರ್ ಎಂಜಿನ್ ಆಯ್ಕೆ ಮುಂದುವರಿಸಿಲಿದ್ದು, ಈ ಕಾರಣಕ್ಕೆ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೆಚ್ಚಿಸುತ್ತಿದೆ.

ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

ಮಾರುಕಟ್ಟೆಯಲ್ಲಿ ಈಗಾಗಲೇ ಮಾರುತಿ ಸುಜುಕಿಯು ಆಲ್ಟೊ, ಸೆಲೆರಿಯೋ, ವ್ಯಾಗನ್ಆರ್ ಮತ್ತು ಎರ್ಟಿಗಾ ಕಾರುಗಳಲ್ಲಿ ಸಿಎನ್‌ಜಿ ಆವೃತ್ತಿಗಳನ್ನು ಬಿಡುಗಡೆ ಮಾಡಿದ್ದು, ನಿಧಾನವಾಗಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಕಡಿತಗೊಳಿಸುತ್ತಿದೆ. ಇದೀಗ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಎಸ್-ಪ್ರೆಸ್ಸೊ ಕಾರಿನಲ್ಲೂ ಕೂಡಾ ಸಿಎನ್‌ಜಿ ಎಂಜಿನ್ ಜೋಡಣೆ ಮಾಡಿದ್ದು, ವರ್ಷಾಂತ್ಯದಲ್ಲಿ ಇಲ್ಲವೇ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳ್ಳಲಿದೆ.

ಇನ್ನು ಎಸ್-ಪ್ರೆಸ್ಸೊ ಕಾರು ಸದ್ಯ ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಆಯ್ಕೆ ಮಾಡಬಹುದಾಗಿದೆ. ಇದರಲ್ಲಿ ಆರಂಭಿಕ ವೆರಿಯೆಂಟ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.3.69 ಲಕ್ಷ ಖರೀದಿಗೆ ಲಭ್ಯವಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್ ಬೆಲೆಯನ್ನು ರೂ. 4.91 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

ಆಲ್ಟೊ ಕೆ10 ಮತ್ತು ವ್ಯಾಗನ್ಆರ್ ಕಾರು ಮಾದರಿಯ ಮಧ್ಯದ ಆವೃತ್ತಿಯಾಗಿ ಎಸ್-ಪ್ರೆಸ್ಸೊ ಮಾರಾಟಗೊಳ್ಳುತ್ತಿದ್ದು, ಹೊಸ ಕಾರು ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಹೊಂದಿದೆ. ಬಿಎಸ್-6 ನಿಯಮದಂತೆ ಎಸ್ ಪ್ರೆಸ್ಸೊ ಕಾರಿನ ಎಂಜಿನ್ ಅನ್ನು ಅಭಿವೃದ್ದಿಗೊಳಿಸಲಾಗಿದ್ದು, ಆರಂಭಿಕ ಆವೃತ್ತಿಗಳಲ್ಲಿ ಮ್ಯಾನುವಲ್ ಮತ್ತು ಹೈ ಎಂಡ್ ಕಾರುಗಳಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಮೂರನೇ ವ್ಯಕ್ತಿಯ ಕೈಗೆ ಕಾರು ಕೊಟ್ಟ ಮಾಲೀಕನಿಗೆ ಶಾಕ್ ಕೊಟ್ಟ ವಿಮಾ ಕಂಪನಿ..!

ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

ಎಂಜಿನ್ ಸಾಮಾರ್ಥ್ಯ ಮತ್ತು ಮೈಲೇಜ್

ಎಸ್-ಪ್ರೆಸ್ಸೊ ಕಾರು 998 ಸಿಸಿ ತ್ರಿ-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ ‌68-ಬಿಎಚ್‌ಪಿ ಮತ್ತು 90-ಎನ್ಎಂ ಟಾರ್ಕ್ ಉತ್ಪಾದನೆ ಮೂಲಕ ಉತ್ತಮ ಇಂಧನ ಕಾರ್ಯಕ್ಷಮತೆ ಪಡೆದಿದೆ. ಆರಂಭಿಕ ಕಾರು ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಹೈ ಎಂಡ್ ಮಾದರಿಯಲ್ಲಿ 5-ಸ್ಪೀಡ್ ಆಟೋ ಗೇರ್ ಶಿಫ್ಟ್(ಎಜಿಎಸ್) ಆಯ್ಕೆ ಲಭ್ಯವಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ 21.7 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತೆ.

MOST READ: 2020ರ ಆಟೋ ಎಕ್ಸ್‌ಪೋದಲ್ಲಿ ಸದ್ದು ಮಾಡಲಿವೆ ಈ ಹೊಸ ಎಸ್‌ಯುವಿ ಕಾರುಗಳು..!

ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

ಹೊಸ ಕಾರು ಕ್ವಿಡ್ ಮಾದರಿಯಲ್ಲೇ ಉದ್ದಳತೆ ಹೊಂದಿದ್ದು, 3,565-ಎಂಎಂ ಉದ್ದ, 1,520-ಎಂಎಂ ಅಗಲ, 1,564-ಎಂಎಂ ಎತ್ತರ, 2,380-ಎಂಎಂ ವೀಲ್ಹ್‌ಬೆಸ್, 180-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು 165/70 ಆರ್14 ಟೈರ್ ಹೊಂದಿರಲಿದೆ.

MOST READ: ನೀರು ಮತ್ತು ಆಲ್ಕೋಹಾಲ್‍‍ನಿಂದ ಚಲಿಸಲಿದೆ ಈ ಎಂಜಿನ್..!

ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಮಾರುತಿ ಎಸ್-ಪ್ರೆಸ್ಸೊ

ಹೊಸ ಕಾರಿನಲ್ಲಿ ಕೀ ಲೆಸ್ ಎಂಟ್ರಿ, ಬ್ಲೂ‌ಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಎಸಿ ವೆಂಟ್ಸ್, ಸ್ಟಿರಿಂಗ್ ಮೌಟೆಂಡ್ ಕಂಟ್ರೋಲ್, ಮ್ಯಾನುವಲ್ ಹೊಂದಾಣಿಕೆಯ ರಿಯರ್ ವ್ಯೂ ಮಿರರ್, 12ವೊಲ್ಟ್ ಚಾರ್ಜಿಂಗ್ ಸ್ಯಾಕೆಟ್, ಯುಎಸ್‌ಬಿ ಕನೆಕ್ಟ್ ಸಹ ಹೊಂದಿದೆ.

Most Read Articles

Kannada
English summary
Maruti Suzuki S-Presso CNG Variant first car Video. Read in Kannada.
Story first published: Tuesday, October 29, 2019, 16:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X