Just In
- 17 hrs ago
ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ
- 1 day ago
ನೆಚ್ಚಿನ ವಾಹನದ 50ನೇ ಹುಟ್ಟುಹಬ್ಬವನ್ನು ಆಚರಿಸಿದ ಅಪ್ಪ-ಮಗ
- 1 day ago
ಗ್ರಾಹಕರ ಕೈಸೇರಲು ಸಿದ್ದವಾದ ಬಿಎಸ್-6 ಎಂಜಿನ್ ಪ್ರೇರಿತ ಯಮಹಾ ಆರ್15 ವಿ3.0
- 1 day ago
ಆಟೋ ಮಾರುಕಟ್ಟೆ ಕುಸಿತದ ನಡುವೆಯೂ ಭರ್ಜರಿ ಮಾರಾಟವಾದ ಮಹೀಂದ್ರಾ ಸ್ಕಾರ್ಪಿಯೋ
Don't Miss!
- Sports
ಏಕದಿನ ಸರಣಿ; ಮೊದಲ ಪಂದ್ಯದಲ್ಲಿ ಭಾರತಕ್ಕೆ ಸೋಲುಣಿಸಿದ ವಿಂಡೀಸ್
- News
ಪೌರತ್ವ ಕಾಯ್ದೆ ಬಗ್ಗೆ ಮಾತಾಡಲ್ಲ, ಸಿದ್ದಾಂತವೇ ಬೇರೆ, ಸರ್ಕಾರವೇ ಬೇರೆ
- Finance
ಶಬರಿಮಲೆ ಅಯ್ಯಪ್ಪ ದೇವಳದಲ್ಲಿ 28 ದಿನದಲ್ಲಿ 104 ಕೋಟಿ ರು. ಸಂಗ್ರಹ
- Movies
ವಂಚನೆ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದ 'ಲವ್ ಗುರು' ನಿರ್ದೇಶಕ
- Technology
ಆನ್ಲೈನ್ ಜಾಹೀರಾತುಗಳಿಂದ ಬೇಸರವಾಗಿದ್ದೀರಾ..? ಇಲ್ಲಿದೆ ಪರಿಹಾರ..!
- Lifestyle
ವಾರ ಭವಿಷ್ಯ- ಡಿಸೆಂಬರ್ 15ರಿಂದ ಡಿಸೆಂಬರ್ 21ರ ತನಕ
- Education
KSP: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಇಟಿ- ಪಿಎಸ್ಟಿ ಪ್ರವೇಶ ಪತ್ರ ಬಿಡುಗಡೆ
- Travel
ಹಳ್ಳಿಗಾಡಿನ ಸೊಗಡನ್ನು ಅನುಭವಿಸಲು ಬೆಂಗಳೂರಿನ ಸುತ್ತಮುತ್ತ ಇರುವ ಈ ಸುಂದರ ಗ್ರಾಮಗಳಿಗೆ ಹೋಗಿ ಬನ್ನಿ
ಆಕರ್ಷಕ ಬೆಲೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ಮಾರುತಿ ಸುಜುಕಿ ಎಸ್-ಪ್ರೆಸ್ಸೊ
ಮಾರುತಿ ಸುಜುಕಿ ಬಹುನೀರಿಕ್ಷಿತ ಎಸ್-ಪ್ರೆಸ್ಸೊ ಮೈಕ್ರೊ ಎಸ್‌ಯುವಿ ಕಾರು ಭಾರತದಲ್ಲಿ ಬಿಡುಗಡೆಯಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 3.69 ಲಕ್ಷ ಆರಂಭಿಕ ಬೆಲೆಯೊಂದಿಗೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ಅಗ್ಗದ ಬೆಲೆಯ ಪ್ಯಾಸೆಂಜರ್ ಕಾರುಗಳಿಂದಲೇ ಭಾರೀ ಜನಪ್ರಿಯತೆಯನ್ನು ಗಳಿಸಿರುವ ಮಾರುತಿ ಸುಜುಕಿಯು ಪ್ರಸ್ತಕ ವರ್ಷದಲ್ಲಿ ಕೆಲವು ಹೊಸ ನಮೂನೆಯ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, 2018ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ ಮೈಕ್ರೊ ಎಸ್‌ಯುವಿ ವೈಶಿಷ್ಟ್ಯತೆಯ ಫ್ಯೂಚರ್ ಎಸ್ ಕಾನ್ಸೆಪ್ಟ್ ಮಾದರಿಯನ್ನೇ ಇದೀಗ ಎಸ್-ಪ್ರೆಸ್ಸೊ ಹೆಸರಿನೊಂದಿಗೆ ಬಿಡುಗಡೆ ಮಾಡಿದೆ.

ಎಸ್-ಪ್ರೆಸ್ಸೊ ಕಾರು ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಆಯ್ಕೆ ಮಾಡಬಹುದಾಗಿದೆ. ಇದರಲ್ಲಿ ಆರಂಭಿಕ ವೆರಿಯೆಂಟ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.3.69 ಲಕ್ಷ ಖರೀದಿಗೆ ಲಭ್ಯವಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್ ಬೆಲೆಯನ್ನು ರೂ. 4.91 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಎಸ್-ಪ್ರೆಸ್ಸೊ ವೆರಿಯೆಂಟ್ ಮತ್ತು ಬೆಲೆಗಳು(ಎಕ್ಸ್‌ಶೋರೂಂ ಪ್ರಕಾರ)
ವೆರಿಯೆಂಟ್ | ಬೆಲೆಗಳು |
ಎಸ್‌ಟಿಡಿ | ರೂ. 3,69,000 |
ಎಲ್ಎಕ್ಸ್ಐ | ರೂ. 4,05,000 |
ವಿಎಕ್ಸ್ಐ | ರೂ. 4,24,500 |
ವಿಎಕ್ಸ್ಐ ಪ್ಲಸ್ | ರೂ. 4,48,000 |
ವಿಎಕ್ಸ್ಐ ಎಜಿಎಸ್ | ರೂ. 4,67,500 |
ವಿಎಕ್ಸ್ಐ ಪ್ಲಸ್ ಎಜಿಎಸ್ | ರೂ. 4,91,000 |

ಎಸ್-ಪ್ರೆಸ್ಸೊ ಕಾರು ಆವೃತ್ತಿಯು ಸದ್ಯ ಮಾರುಕಟ್ಟೆಯಲ್ಲಿರುವ ಆಲ್ಟೊ ಕೆ10 ಮತ್ತು ವ್ಯಾಗನ್ಆರ್ ಕಾರು ಮಾದರಿಯ ಮಧ್ಯದ ಆವೃತ್ತಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರು ಕೇವಲ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಹೊಂದಿದೆ. 2020ರ ಏಪ್ರಿಲ್ 1 ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಎಸ್ ಪ್ರೆಸ್ಸೊ ಕಾರಿನ ಎಂಜಿನ್ ಅಭಿವೃದ್ದಿಗೊಳಿಸಲಾಗಿದ್ದು, ಆರಂಭಿಕ ಆವೃತ್ತಿಗಳಲ್ಲಿ ಮ್ಯಾನುವಲ್ ಮತ್ತು ಹೈ ಎಂಡ್ ಕಾರುಗಳಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಎಂಜಿನ್ ಸಾಮಾರ್ಥ್ಯ
ಎಸ್-ಪ್ರೆಸ್ಸೊ ಕಾರು 998 ಸಿಸಿ ತ್ರಿ-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 68-ಬಿಎಚ್‌ಪಿ ಮತ್ತು 90-ಎನ್ಎಂ ಟಾರ್ಕ್ ಉತ್ಪಾದನೆ ಮಾಡುವ ಮೂಲಕ ಉತ್ತಮ ಇಂಧನ ಕಾರ್ಯಕ್ಷಮತೆ ಪಡೆದುಕೊಂಡಿದೆ.

ಆರಂಭಿಕ ಕಾರು ಮಾದರಿಗಳಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಹೈ ಎಂಡ್ ಮಾದರಿಯಲ್ಲಿ 5-ಸ್ಪೀಡ್ ಆಟೋ ಗೇರ್ ಶಿಫ್ಟ್(ಎಜಿಎಸ್) ಆಯ್ಕೆ ಲಭ್ಯವಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ 21.7 ಕಿ.ಮೀ ಮೈಲೇಜ್ ಹಿಂದಿರುಗಿಸಬಲ್ಲದು.

ಹಾಗೆಯೇ ಹೊಸ ಕಾರು ಮೈಕ್ರೋ ಎಸ್‌ಯುವಿ ವಿನ್ಯಾಸದೊಂದಿಗೆ ಆಕರ್ಷಕ ಗ್ರೌಂಡ್ ಕ್ಲಿಯೆರೆನ್ಸ್, 14-ಇಂಚಿನ ಸ್ಟೀಲ್ ವೀಲ್ಹ್, ಸ್ಲಿಕ್ ಫ್ರಂಟ್ ಗ್ರಿಲ್, ಕ್ರೋಮ್ ಇನ್ಸರ್ಟ್, ಆಯತಾಕಾರದ ಹೆಡ್‌ಲ್ಯಾಂಪ್, ವಿಸ್ತರಿತ ಸೆಂಟರ್ ಏರ್ ಇನ್‌ಟೆಕ್, ಸಿ ಶೇಫ್ ಟೈಲ್‌ಗೆಟ್ ಸೌಲಭ್ಯವು ಕಾರಿನ ಅಂದಕ್ಕೆ ಮತ್ತಷ್ಟು ಮೆರಗು ನೀಡಿವೆ.

ಇದರೊಂದಿಗೆ ಎಸ್-ಪ್ರೆಸ್ಸೊ ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಿಸಲಾಗಿದ್ದು, ಬಾಡಿ ಕಲರ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೊಲ್‌ನಲ್ಲಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ಯಾಚೊ ಮೀಟರ್, ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಾರುತಿ ನಿರ್ಮಾಣದ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯಿಡ್ ಆಟೋ, ಆರೇಂಜ್ ಕಲರ್ ಆಕ್ಸೆಂಟ್ ಸೌಲಭ್ಯವಿದೆ.

ಎಸಿ ವೆಂಟ್ಸ್, ಸ್ಟಿರಿಂಗ್ ಮೌಟೆಂಡ್ ಕಂಟ್ರೋಲ್, ಮ್ಯಾನುವಲ್ ಹೊಂದಾಣಿಕೆಯ ರಿಯರ್ ವ್ಯೂ ಮಿರರ್, 12ವೊಲ್ಟ್ ಚಾರ್ಜಿಂಗ್ ಸ್ಯಾಕೆಟ್, ಯುಎಸ್‌ಬಿ ಕನೆಕ್ಟ್ ಸಹ ಹೊಂದಿದ್ದು, ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಹೊಸ ಕಾರಿನಲ್ಲಿ ಕೀ ಲೆಸ್ ಎಂಟ್ರಿ,ಬ್ಲೂಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ನೀಡಲಾಗಿದ್ದು, ಎ-ಪಿಲ್ಲರ್ ವಿಭಾಗದಲ್ಲಿನ ಹೊಸ ವಿನ್ಯಾಸದೊಂದಿಗೆ ಚಾಲಕನಿಗೆ ಅನುಕೂಲಕರ ಚಾಲನಾ ಸೌಲಭ್ಯಗಳನ್ನು ಒದಗಿಸುವುದರ ಮೂಲಕ ಹಿಂಬದಿಯ ಸವಾರರಿಗೂ ಅನುಕೂಲಕರ ಆಸನ ವ್ಯವಸ್ಥೆಯನ್ನು ಜೋಡಿಸಲಾಗಿದೆ.

ಹೊಸ ಕಾರು ಕ್ವಿಡ್ ಮಾದರಿಯಲ್ಲೇ ಉದ್ದಳತೆ ಹೊಂದಿದ್ದು, 3,565-ಎಂಎಂ ಉದ್ದ, 1,520-ಎಂಎಂ ಅಗಲ, 1,564-ಎಂಎಂ ಎತ್ತರ, 2,380-ಎಂಎಂ ವೀಲ್ಹ್‌ಬೆಸ್, 180-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು 165/70 ಆರ್14 ಟೈರ್ ಹೊಂದಿರಲಿದೆ.

ಕಾರು ಮಾರಾಟದಲ್ಲಿ ಕೆಲ ತಿಂಗಳಿನಿಂದ ಸತತ ಹಿನ್ನಡೆ ಅನುಭವಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಗೆ ಹೊಸ ಎಸ್-ಪ್ರೆಸ್ಸೊ ಕಾರು ಮಾರಾಟ ಸಂಖ್ಯೆಯನ್ನು ಹೆಚ್ಚಿಸಲು ನೆರವಾಗಲಿದ್ದು, ಬಿಡುಗಡೆಗೆ ಸಿದ್ದವಾಗಿರುವ ರೆನಾಲ್ಟ್ ಕ್ವಿಡ್ ಫೇಸ್‌ಲಿಫ್ಟ್ ಮತ್ತು ದಟ್ಸನ್ ರೆಡಿ ಗೊ ಸಿವಿಟಿ ಕಾರುಗಳಿಗೆ ಹೊಸ ಕಾರು ಭರ್ಜರಿ ಪೈಪೋಟಿ ನೀಡಲಿದೆ.