Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರುತಿ ಎಸ್-ಪ್ರೆಸ್ಸೊ ಅನಾವರಣ- ಹೊಸ ಕಾರಿನಲ್ಲಿ ಏನಿದೆ ಸ್ಪೆಷಲ್?
ಮಾರುತಿ ಸುಜುಕಿ ಹೊಚ್ಚ ಹೊಸ ಎಸ್-ಪ್ರೆಸ್ಸೊ ಕಾರು ಇದೇ ತಿಂಗಳ 30ರಂದು ಬಿಡುಗಡೆಗೊಳ್ಳುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಮಾರುತಿ ಸುಜುಕಿಯು ಎಸ್-ಪ್ರೆಸ್ಸೊ ಕಾರಿನ ಅಧಿಕೃತ ಚಿತ್ರಗಳನ್ನು ಬಹಿರಂಗಪಡಿಸಿದೆ.

ಎಸ್-ಪ್ರೆಸ್ಸೊ ಕಾರು ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಪ್ರತಿಸ್ಪರ್ಧಿ ಕಾರುಗಳಿಗೆ ಟಕ್ಕರ್ ನೀಡಲು ಎಸ್-ಪ್ರೆಸ್ಸೊ ಎನ್ನುವ ಸಣ್ಣ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಭಿನ್ನ ವೈಶಿಷ್ಟ್ಯತೆ ಹೊಂದಿರುವ ಎಸ್-ಪ್ರೆಸ್ಸೊ ಕಾರು ವ್ಯಯಕ್ತಿಕ ಕಾರು ಬಳಕೆದಾರರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಮಾರುತಿ ಸುಜುಕಿ ಕಾರು ಮಾರಾಟ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಿದೆ.

ಅಗ್ಗದ ಬೆಲೆಯ ಪ್ಯಾಸೆಂಜರ್ ಕಾರುಗಳಿಂದಲೇ ಭಾರೀ ಜನಪ್ರಿಯತೆಯನ್ನು ಗಳಿಸಿರುವ ಮಾರುತಿ ಸುಜುಕಿಯು ಪ್ರಸ್ತಕ ವರ್ಷದಲ್ಲಿ ಕೆಲವು ಹೊಸ ನಮೂನೆಯ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, 2018ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ ಮೈಕ್ರೊ ಎಸ್‌ಯುವಿ ಫ್ಯೂಚರ್ ಎಸ್ ಕಾನ್ಸೆಪ್ಟ್ ಮಾದರಿಯನ್ನೇ ಇದೀಗ ಎಸ್-ಪ್ರೆಸ್ಸೊ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದೆ.

ಹೊಸ ಕಾರು ಕ್ವಿಡ್ ಮಾದರಿಯಲ್ಲೇ ಉದ್ದಳತೆ ಹೊಂದಿದ್ದು, 3,565-ಎಂಎಂ ಉದ್ದ, 1,520-ಎಂಎಂ ಅಗಲ, 1,564-ಎಂಎಂ ಎತ್ತರ, 2,380-ಎಂಎಂ ವೀಲ್ಹ್‌ಬೆಸ್, 180-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು 165/70 ಆರ್14 ಟೈರ್ ಹೊಂದಿರಲಿದೆ.

ಹಾಗೆಯೇ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಮಾದರಿಯು ಹ್ಯಾಚ್‌ಬ್ಯಾಕ್ ವೈಶಿಷ್ಟ್ಯತೆಗಳೊಂದಿಗೆ ಕೇಂದ್ರ ಸರ್ಕಾರವು 2020ರ ಎಪ್ರಿಲ್ 1ರಿಂದ ಜಾರಿಗೆ ತರುತ್ತಿರುವ ಬಿಎಸ್-6 ಹೊಸ ನಿಯಮಾವಳಿ ಪ್ರಕಾರ ಹೊಸ ಎಂಜಿನ್ ಅನ್ನು ಹೊತ್ತು ಬರುತ್ತಿದ್ದು, ಆಲ್ಟೋ ಕೆ10 ಮಾದರಿಯಲ್ಲಿ 1-ಲೀಟರ್(1ಸಾವಿರ ಸಿಸಿ) ಪೆಟ್ರೋಲ್ ಎಂಜಿನ್ ಅನ್ನು ಪಡೆದುಕೊಳ್ಳಲಿದೆ. ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 5- ಸ್ಪೀಡ್ ಆಟೋಮ್ಯಾಟಿಕ್(ಆಟೋ ಗೇರ್ ಶಿಫ್ಟ್) ಆಯ್ಕೆಯಲ್ಲಿ ಲಭ್ಯವಿರಲಿದೆ.

ಎಸ್-ಪ್ರೆಸ್ಸೊ ಕಾರು ಮಾರುತಿ ಸುಜುಕಿಯ ಜನಪ್ರಿಯ ವ್ಯಾಗನ್ಆರ್ ಕಾರಿಗಿಂತಲೂ ಕೆಳಹಂತದ ಆವೃತ್ತಿಯಾಗಿ ಮಾರಾಟವಾಗಲಿದ್ದು, ಹಲವಾರು ಪ್ರೀಮಿಯಂ ಸೌಲಭ್ಯಗಳೊಂದಿಗೆ ಎಂಟ್ರಿ ಲೆವೆಲ್ ಕಾರುಗಳಲ್ಲಿ ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ಎಸ್-ಪ್ರೆಸ್ಸೊ ಕಾರಿನ ವಿನ್ಯಾಸಗಳನ್ನು ಗಮನಿಸಿದ್ದಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳಿಂತಲೂ ವಿಭಿನ್ನ ಎನ್ನಿಸಲಿದ್ದು, ಮೈಕ್ರೊ ಎಸ್‌ಯುವಿ ಕಾರಿನ ಗುಣಲಕ್ಷಣಗಳಾದ 4 ಮೀಟರ್‌ಗಿಂತಲೂ ಕಡಿಮೆ ಉದ್ದಳತೆ ಹೊಂದಿದೆ. ಎ-ಪಿಲ್ಲರ್ ವಿಭಾಗದಲ್ಲಿನ ಹೊಸ ವಿನ್ಯಾಸದೊಂದಿಗೆ ಚಾಲಕನಿಗೆ ಅನುಕೂಲಕರ ಚಾಲನಾ ಸೌಲಭ್ಯಗಳನ್ನು ಒದಗಿಸಲಿದ್ದು, ಹಿಂಬದಿಯ ಸವಾರರಿಗೂ ಅನುಕೂಲಕರ ಆಸನ ವ್ಯವಸ್ಥೆ ಹೊಂದಿದೆ.
MOST READ: ಸೆಲ್ಟೊಸ್ ಕಾರಿಗೆ ಭರ್ಜರಿ ಬೇಡಿಕೆ- ಮತ್ತೈದು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾದ ಕಿಯಾ

ಹ್ಯಾಚ್‌ಬ್ಯಾಕ್ ಮಾದರಿಯಾದರೂ ಕೂಡಾ ಮೈಕ್ರೊ ಎಸ್‌ಯುವಿ ಗುಣಲಕ್ಷಣಗಳನ್ನು ಹೊಂದಿರುವ ಎಸ್-ಪ್ರೆಸ್ಸೊ ಕಾರು ಸ್ಕ್ವೆರ್ ಎಡ್ಜ್ ಬ್ಯಾನೆಟ್, ಆಲ್ ಬ್ಲ್ಯಾಕ್ ಕ್ಯಾಬಿನ್, ಟಾಪ್ ಎಂಡ್‌ನಲ್ಲಿ ಆರೆಂಜ್ ಆಕ್ಸೆಂಟ್, ಸೆಂಟರ್ ಮೌಟೆಂಡ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಪೀಡೋ ಮೀಟರ್ ಮತ್ತು ಟಾಚೊಮೀಟರ್ ನೀಡಲಾಗಿದೆ.
MOST READ: ಸಾಮಾನ್ಯ ಪೆಟ್ರೋಲ್ ಕಾರಿಗಿಂತಲೂ ಶೇ.80 ರಷ್ಟು ಅಗ್ಗ ಹ್ಯುಂಡೈ ಕೊನಾ ರನ್ನಿಂಗ್ ಕಾಸ್ಟ್..!

ಪ್ರೀಮಿಯಂ ಸೌಲಭ್ಯಗಳಾದ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಕ್ಲಸ್ಟರ್, ಸ್ಮಾರ್ಟ್ ಪ್ಲೇ ಸ್ಟುಡಿಯೋ ಸಿಸ್ಟಂ, ಎಸಿ ವೆಂಟ್ಸ್, ಸ್ಟಿರಿಂಗ್ ಮೌಟೆಂಡ್ ಕಂಟ್ರೋಲ್, ಮ್ಯಾನುವಲ್ ಹೊಂದಾಣಿಕೆಯ ರಿಯರ್ ವ್ಯೂ ಮಿರರ್, 12ವೊಲ್ಟ್ ಚಾರ್ಜಿಂಗ್ ಸ್ಯಾಕೆಟ್, ಯುಎಸ್‌ಬಿ ಕನೆಕ್ಟ್ ಹೊಂದಿದ್ದು, ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಹೊಸ ಕಾರಿನಲ್ಲಿ ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರಿಯರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ನೀಡಲಾಗಿದ್ದು, ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 3.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 4.50 ಲಕ್ಷ ಬೆಲೆ ಪಡೆದುಕೊಳ್ಳಬಹುದು ಎಂದು ನೀರಿಕ್ಷಿಸಲಾಗಿದೆ.