ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮಾವಳಿಗಳಿಗೆ ಅನುಗುಣವಾಗಿ ಮಾರುತಿ ಸುಜುಕಿ ಸಂಸ್ಥೆಯು ಎಂಜಿನ್ ಆಯ್ಕೆಯಲ್ಲಿ ಭಾರೀ ಬದಲಾವಣೆಯನ್ನು ಪರಿಚಯಿಸುತ್ತಿದ್ದು, ಅಗ್ಗದ ಬೆಲೆಯ ಡೀಸೆಲ್ ಎಂಜಿನ್ ಕಾರುಗಳ ಮಾರಾಟಕ್ಕೆ ಗುಡ್ ಬೈ ಹೇಳುವುದು ಬಹುತೇಕ ಖಚಿತವಾಗಿದೆ.

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಕಾರು ಮಾದರಿಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವ ಮಾರುತಿ ಸುಜುಕಿಯು 2020ರ ಏಪ್ರಿಲ್ 1ರಿಂದಲೇ ಪೂರ್ಣ ಪ್ರಮಾಣದಲ್ಲಿ 1.3-ಲೀಟರ್ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಬಂದ್ ಮಾಡಲಿದೆ. ಹೀಗಾಗಿ ಡೀಸೆಲ್ ಎಂಜಿನ್ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಡೀಸೆಲ್ ಎಂಜಿನ್‌ನಷ್ಟೇ ಇತರೆ ಕಾರುಗಳಲ್ಲೂ ಮೈಲೇಜ್ ಮತ್ತು ಪರ್ಫಾಮೆನ್ಸ್ ನೀಡುವುದರ ಬಗ್ಗೆ ಹೆಚ್ಚಿನ ಗಮನಹರಿಸಿದೆ.

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಮಾರುತಿ ಸುಜುಕಿಯು ಇತ್ತೀಚಿಗಷ್ಟೆ ಹೊಸ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಕೆ15 ಪೆಟ್ರೊಲ್ ಎಂಜಿನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಹೊಸ ಪೆಟ್ರೋಲ್ ಎಂಜಿನ್ ಅನ್ನು ಮೊದಲ ಬಾರಿಗೆ ಸಿಯಾಜ್ ಸೆಡಾನ್‍ನಲ್ಲಿ ನಂತರ ಎಕ್ಸ್ಎಲ್6 ಕಾರಿನಲ್ಲಿ ಅಳವಡಿಸಲಾಗಿತ್ತು.

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಇದೀಗ ಇದೇ ಎಂಜಿನ್ ಅನ್ನು ಡಿಸೇಲ್ ಎಂಜಿನ್ ಮೂಲಕ ಜನಪ್ರಿಯ ಪಡೆದಿರುವ ವಿಟಾರಾ ಬ್ರಿಝಾ ಮತ್ತು ಎಸ್-ಕ್ರಾಸ್ ಕಾರುಗಳಲ್ಲೂ ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಕಡಿಮೆ ಸಾಮರ್ಥ್ಯದೊಂದಿಗೆ ಉತ್ತಮ ಮೈಲೇಜ್ ಹೊಂದಿದ್ದ 1.3-ಲೀಟರ್ ಡೀಸೆಲ್ ಆಯ್ಕೆಯನ್ನು ಸ್ಥಗಿತಗೊಳಿಸಲಿದೆ.

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಮಾರುತಿ ಸುಜುಕಿಯು ಸದ್ಯ ತನ್ನ ಬಹುತೇಕ ಪೆಟ್ರೋಲ್ ಕಾರುಗಳನ್ನು ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ಮಾರಾಟ ಮಾಡುತ್ತಿದ್ದು, ಇದೀಗ ಬಾಕಿ ಉಳಿದುಕೊಂಡಿರುವ ಡೀಸೆಲ್ ಎಂಜಿನ್ ಕಾರುಗಳಲ್ಲಿ ಮಾತ್ರವೇ ಬಿಎಸ್-6 ನಿಯಮವನ್ನು ಜಾರಿಗೆ ತರಬೇಕಿದೆ. ಮೂಲಗಳ ಪ್ರಕಾರ, ಮಾರುತಿ ಸುಜುಕಿಯು ಪೆಟ್ರೋಲ್ ಕಾರುಗಳಲ್ಲಿ 1-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಎಂಜಿನ್ ಮುಂದುವರಿಸಲಿದ್ದರೆ ಹೈ ಎಂಡ್ ಕಾರುಗಳಲ್ಲಿ ಮಾತ್ರವೇ 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಅನ್ನು ಅಭಿವೃದ್ದಿಪಡಿಸಲಿದೆಯೆಂತೆ.

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಅಂದರೆ, ಮಾರುತಿ ಸುಜುಕಿ ನಿರ್ಮಾಣದ ಎಕ್ಸ್6, ಎಸ್-ಕ್ರಾಸ್ ಮತ್ತು ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ವಿಟಾರಾ ಎಸ್‌ಯುವಿ ಕಾರುಗಳಲ್ಲಿ ಮಾತ್ರವೇ 1.6-ಲೀಟರ್ ಡೀಸೆಲ್ ಎಂಜಿನ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಕಾರುಗಳಲ್ಲೂ ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆ ಮಾತ್ರವೇ ಖರೀದಿಗೆ ಲಭ್ಯವಿರಲಿದೆ.

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಒಂದು ವೇಳೆ ಬಿಎಸ್-6 ನಿಯಮದ ಪ್ರಕಾರ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ 1.3-ಲೀಟರ್ ಡೀಸೆಲ್ ಎಂಜಿನ್ ಅನ್ನು ಬಿಎಸ್-6 ನಿಯಮಾವಳಿಗಳಿಗೆ ಉನ್ನತೀಕರಿಸಿದರೂ ಸಹ ಬೆಲೆ ಹೆಚ್ಚಳವಾಗಲಿದ್ದು, ಪ್ರಸ್ತುತ ಮಾರುಕಟ್ಟೆಯ ಬೆಲೆಗಿಂತ ಹೆಚ್ಚುವರಿಯಾಗಿ ರೂ.90 ಸಾವಿರ ರೂ.1.50 ಲಕ್ಷ ಬೆಲೆ ಹೆಚ್ಚಳವಾಗಲಿದೆ.

MOST READ: ಸ್ಟಾರ್ ನಟಿಗೆ ಸಿಕ್ತು ಬರೋಬ್ಬರಿ 11 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಾರ್ ಗಿಫ್ಟ್

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಇದರಿಂದ ಕಾರು ಮಾರಾಟದ ಮೇಲೆ ಪರಿಣಾಮ ಬೀರುವ ಎಲ್ಲಾ ಸಾಧ್ಯತೆಗಳಿದ್ದು, ಇದೇ ಕಾರಣಕ್ಕೆ ಮಾರುತಿ ಸುಜುಕಿಯು ರೂ.10 ಲಕ್ಷದೊಳಗಿನ ಕಾರುಗಳಲ್ಲಿನ ಡೀಸೆಲ್ ಎಂಜಿನ್ ಅನ್ನು ಉನ್ನತೀಕರಿಸಲು ಮುಂದಾಗದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಕಾರುಗಳತ್ತ ಹೆಚ್ಚಿನ ಗಮನಹರಿಸುತ್ತದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಬೆಲೆ ಹೆಚ್ಚಳವಾದರೂ ಸರಿ ಡೀಸೆಲ್ ಎಂಜಿನ್ ಕಾರುಗಳನ್ನು ಬಯಸುವ ಗ್ರಾಹಕರಿಗಾಗಿ ಕೆಲವೇ ಆಯ್ದ ಟಾಪ್ ಎಂಡ್ ಕಾರುಗಳಲ್ಲಿ ಮಾತ್ರವೇ ಬಿಎಸ್-6 ಪ್ರೇರಣೆಯ 1.6-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಇದು ಕೂಡಾ ದುಬಾರಿ ಬೆಲೆಯಲ್ಲೇ ಮಾರಾಟವಾಗಲಿದೆ.

MOST READ: ರೋಡ್ ಟ್ಯಾಕ್ಸ್‌ನಲ್ಲಿ ಭರ್ಜರಿ ಇಳಿಕೆ- ಹೆಚ್ಚಳಗೊಂಡ ಹೊಸ ವಾಹನಗಳ ಮಾರಾಟ..!

ಹೊಸ ಡಿಸೇಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಎಸ್-ಕ್ರಾಸ್

ಆದರೆ ಮಧ್ಯಮ ಗಾತ್ರದ ವಿಟಾರಾ ಬ್ರೆಝಾ, ಸ್ವಿಫ್ಟ್ ಕಾರಿನಲ್ಲಿ 1.2 ಮತ್ತು 1.5-ಲೀಟರ್ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಹೊರತುಪಡಿಸಿ ಡೀಸೆಲ್ ಎಂಜಿನ್ ಆಯ್ಕೆ ನೀಡುವುದು ಸಾಧ್ಯವಿಲ್ಲ ಎನ್ನಬಹುದು.

Source: Gaadiwaadi

Article Published On: Wednesday, November 6, 2019, 8:59 [IST]
English summary
Maruti S-Cross 1.6L Diesel BS6 Spied Testing For The First Time. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+