ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಮಾರುತಿ ಸುಜುಕಿಯು ತನ್ನ ಜನಪ್ರಿಯ ಕಾರುಗಳನ್ನು ಉನ್ನತೀಕರಿಸಿ ಮಾರಾಟ ಮಾಡುತ್ತಿದ್ದು, ಹೊಸ ನಿಯಮ ಜಾರಿಗೂ ಮುನ್ನವೇ ಬಿಎಸ್-6 ಎಂಜಿನ್ ಪ್ರೇರಿತ 2 ಲಕ್ಷಕ್ಕೂ ಹೆಚ್ಚು ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದೆ.

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಿಯಮ ಜಾರಿಗೂ ಮುನ್ನವೇ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ಕಾರು ಮಾದರಿಗಳ ಪೆಟ್ರೋಲ್ ಎಂಜಿನ್ ಆವೃತ್ತಿಗಳನ್ನು ಹೊಸ ನಿಯಮ ಅನುಸಾರ ಉನ್ನತೀಕರಿಸಿದೆ. ಆದರೆ ಡೀಸೆಲ್ ಎಂಜಿನ್‌ಗಳನ್ನು ಬಿಎಸ್-4 ನಿಯಮದಂತೆಯೇ ಮಾರಾಟ ಮಾಡುತ್ತಿದ್ದು, ಡೀಸೆಲ್ ಕಾರುಗಳನ್ನು 2020ರ ಏಪ್ರಿಲ್ ಒಳಗಾಗಿ ಹೊಸ ಎಂಜಿನ್‌ನೊಂದಿಗೆ ಉನ್ನತೀಕರಿಸಲು ಸಿದ್ದತೆ ನಡೆಸಿದೆ.

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಸದ್ಯ ಮಾರುಕಟ್ಟೆಯಲ್ಲಿ ಬಲೆನೊ, ಆಲ್ಟೋ 800, ವ್ಯಾಗನ್‌ಆರ್, ಸ್ವಿಫ್ಟ್, ಡಿಜೈರ್, ಎರ್ಟಿಗಾ, ಎಕ್ಸ್ಎಲ್ 6 ಮತ್ತು ಎಸ್-ಪ್ರೆಸ್ಸೊ ಕಾರುಗಳ ಪೆಟ್ರೋಲ್ ಎಂಜಿನ್‌ಗಳು ಬಿಎಸ್-6 ನಿಯಮದಂತೆ ಉನ್ನತೀಕರಿಸಲಾಗಿದ್ದು, ಬಿಎಸ್-4 ಕಾರುಗಳಿಂತೂ ತುಸು ಭಿನ್ನವಾಗಿರುವ ಹೊಸ ಕಾರುಗಳು ಮಾಲಿನ್ಯ ಹೊರಸೂಸುವಿಕೆ ಮತ್ತು ಮೈಲೇಜ್ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಇದೀಗ ಡೀಸೆಲ್ ಕಾರುಗಳ ಉನ್ನತೀಕರಣವು ತುಸು ಸವಾಲಾಗಿದ್ದು, ಬಿಎಸ್-6 ಡೀಸೆಲ್ ಎಂಜಿನ್‌ಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್‌ಗಿಂತಲೂ ಸಾಕಷ್ಟು ಸುಧಾರಣೆಯೊಂದಿಗೆ ಮಾಲಿನ್ಯ ಹೊರಸೂಸುವಿಕೆಯಲ್ಲಿ ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿವೆ.

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಪೆಟ್ರೋಲ್ ಎಂಜಿನ್‌ಗಿಂತಲೂ ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಿಸುವುದು ತುಸು ದುಬಾರಿಯಾಗಿದ್ದು, ಇದೇ ಕಾರಣಕ್ಕೆ ಮಾರುತಿ ಸುಜುಕಿ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಕಾರುಗಳನ್ನು ಮಾತ್ರವೇ ಬಿಎಸ್-6 ನಿಯಮಕ್ಕೆ ಉನ್ನತೀಕರಿಸಿ ಮಾರಾಟ ಮಾಡುತ್ತಿವೆ. ಮುಂಬರುವ 2020ರ ಏಪ್ರಿಲ್ ನಂತರವಷ್ಟೇ ಡೀಸೆಲ್ ಕಾರುಗಳನ್ನು ಹೊಸ ನಿಯಮದಂತೆ ಬಿಡುಗಡೆ ಮಾಡಲಿದ್ದು, ದುಬಾರಿ ಬೆಲೆ ಪಡೆದುಕೊಳ್ಳಲಿವೆ.

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಬಿಎಸ್-6 ಪೆಟ್ರೋಲ್ ಕಾರುಗಳು ಬಿಎಸ್-4 ಕಾರುಗಳಿಂತಲೂ ರೂ.15 ಸಾವಿರದಿಂದ ರೂ.20 ಸಾವಿರದಷ್ಟು ದುಬಾರಿಯಾಗಿದ್ದರೆ ಡೀಸೆಲ್ ಎಂಜಿನ್ ಮಾತ್ರ ಪ್ರಸ್ತುತ ಮಾರುಕಟ್ಟೆಯಲ್ಲಿನ ಬಿಎಸ್-4 ಕಾರುಗಳಿಂತಲೂ ರೂ.90 ಸಾವಿರದಿಂದ ರೂ.2.50 ಲಕ್ಷದಷ್ಟು ದುಬಾರಿಯಾಗಲಿವೆ.

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಇದೇ ಕಾರಣಕ್ಕೆ ಮಾರುತಿ ಸುಜುಕಿ ಸಂಸ್ಥೆಯು ಅಗ್ಗದ ಬೆಲೆಯ ಕಾರುಗಳಲ್ಲಿ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸುವ ಯೋಜನೆಯನ್ನು ಕೈಬಿಡಲು ನಿರ್ಧರಿಸಿದ್ದು, ಕೇವಲ ಪೆಟ್ರೋಲ್, ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಒತ್ತುನೀಡಲು ನಿರ್ಧರಿಸಿದೆ.

MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿಯು 1.3-ಲೀಟರ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪ್ರೇರಿತ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಮಾಹಿತಿಗಳ ಪ್ರಕಾರ 1.3-ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ 1.5-ಲೀಟರ್ ಎಂಜಿನ್ ಅನ್ನು ಮಾತ್ರವೇ ಹೊಸ ನಿಯಮದಂತೆ ಉನ್ನತೀಕರಿಸಿ ಹೈ ಎಂಡ್ ಕಾರುಗಳಲ್ಲಿ ಮಾತ್ರವೇ ಮಾರಾಟ ಮಾಡಲಿದೆಯೆಂತೆ.

MOST READ: ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಇದಕ್ಕಾಗಿಯೇ ಸದ್ಯ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್ ಕಾರುಗಳ ಸ್ಟಾಕ್ ಕ್ಲಿಯೆರೆನ್ಸ್‌ಗಾಗಿ ಭರ್ಜರಿ ಆಫರ್‌ಗಳನ್ನು ನೀಡುತ್ತಿರುವ ಮಾರುತಿ ಸುಜುಕಿಯು 2020ರ ಮಾರ್ಚ್ ಹೊತ್ತಿಗೆ ಸಂಪೂರ್ಣವಾಗಿ ಬಿಎಸ್-6 ಕಾರುಗಳನ್ನು ಮಾರಾಟ ಮಾಡುವ ಗುರಿಹೊಂದಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ನಿಯಮ ಜಾರಿಗೂ ಮುನ್ನವೇ ಬಿಎಸ್-6 ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಇದೇ ಕಾರಣಕ್ಕೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ನಿಗದಿತ ಅವಧಿಯೊಳಗೆ ಬಿಎಸ್-6 ಕಾರುಗಳ ಬಿಡುಗಡೆಗೆ ಬೃಹತ್ ಯೋಜನೆ ರೂಪಿಸಿದ್ದು, ಬಿಎಸ್-4 ವಾಹನಗಳ ಸ್ಟಾಕ್ ಪೂರ್ಣಗೊಳಿಸುವ ನಿಟ್ಟಿನಲ್ಲಿ ಭರ್ಜರಿ ಆಫರ್ ಮೂಲಕ ಗ್ರಾಹಕರನ್ನು ಸೆಳೆಯಲಾಗುತ್ತಿದೆ.

Most Read Articles

Kannada
English summary
Maruti Suzuki BS6 Car Sales Report. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X