ಜುಲೈ ತಿಂಗಳ ಕಾರು ಮಾರಾಟದಲ್ಲಿ ಹೋಂಡಾ ಸಿಟಿ ಕಾರನ್ನು ಹಿಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಮಾರುತಿ ಸುಜುಕಿ ಸಂಸ್ಥೆಯು ಕಳೆದ ವರ್ಷವಷ್ಟೆ ಹೊಸ ಮಾದರಿಯ ಸಿಯಾಜ್ ಕಾರುಗಳನ್ನು ಬಿಡುಗಡೆ ಮಾಡಲಾಗಿದ್ದು, ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯನ್ನು ಪಡೆಯುತ್ತಿದೆ. ಹೀಗಾಗಿ 2018-19ರ ಆರ್ಥಿಕ ವರ್ಷದ ಸಿ-ಸೆಗ್ಮೆಂಟ್ ಸೆಡಾನ್ ಕಾರುಗಳ ಮಾರಾಟದಲ್ಲಿ ಹ್ಯುಂಡೈ ವೆರ್ನಾ ಮತ್ತು ಹೋಂಡಾ ಸಿಟಿ ಕಾರುಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತ್ತು.

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಈಗಲೂ ಸಹ ಪ್ರತೀ ತಿಂಗಳ ಸಿ-ಸೆಗ್ಮೆಂಟ್ ಸೆಡಾನ್ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಸಿಯಾಜ್ ಸೆಡಾನ್ ಕಾರು ತನ್ನ ಎದುರಾಳಿಯಾದ ಹ್ಯುಂಡೈ ವೆರ್ನಾ ಮತ್ತು ಹೋಂಡಾ ಸಿಟಿ ಕಾರುಗಳನ್ನು ಬೀಟ್ ಮಾಡುತ್ತಿದೆ. ಅಂಕಿ ಅಂಶಗಳ ಪ್ರಕಾರ ಜುಲೈ 2019ರ ಮಾರಾಟದಲ್ಲಿ ಮಾರುತಿ ಸುಜುಕಿ ಸಿಯಾಜ್ 2,397 ಯೂನಿಟ್, 1,927 ಯೂನಿಟ್ ಹೋಂಡಾ ಸಿಟಿ ಮತ್ತು 1,890 ಯೂನಿಟ್ ಹ್ಯುಂಡೈ ವೆರ್ನಾ ಕಾರುಗಳು ಮಾರಾಟವಾಗಿದೆ.

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಮಾರುತಿ ಸುಜುಕಿ ಸಂಸ್ಥೆಯು ಈ ಬಾರಿ ಸಂಸ್ಥೆಯು ಸಿಯಾಜ್ ಕಾರಿನಲ್ಲಿ ಹೊಸದಾಗಿ 1.5 ಲೀಟರ್‍‍ನ ಡೀಸೆಲ್ ಎಂಜಿನ್ ಅನ್ನು ನೀಡಲಾಗಿದೆ. ಹೊಸ ಎಂಜಿನ್‍ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಸಿಯಾಜ್ ಕಾರುಗಳು ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 9.97 ಲಕ್ಷದ ಪ್ರಾರಂಭಿಕ ಬೆಲೆಯನ್ನು ನಿಗದಿ ಮಾಡಲಾಗಿದೆ.

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಹೊಸ ಸಿಯಾಜ್ ವಿನ್ಯಾಸಗಳು

ಹಳೆಯ ಸಿಯಾಜ್ ಕಾರುಗಳಿಂತಲೂ ಮಹತ್ವದ ಬದಲಾಣೆಗಳನ್ನ ಹೊಂದಿರುವ ಹೊಸ ಸಿಯಾಜ್ ಕಾರುಗಳು, ಮರು ವಿನ್ಯಾಸಗೊಳಿಸಲಾದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಡಿಆರ್‍ಎಲ್ ಹೆಡ್‍‍ಲ್ಯಾಂಪ್ಸ್, ಸೆಂಟ್ರಲ್ ಏರ್ ಡ್ಯಾಮ್‍ ನೊಂದಿಗೆ ರಿವ್ಯಾಂಪ್ಡ್ ಫ್ರಂಟ್ ಬಂಪರ್ ಮತ್ತು ಸಿ-ಆಕಾರದ ಕ್ರೋಮ್ ಅನ್ನು ಫಾಗ್ ಲ್ಯಾಂಪ್‍‍ನಲ್ಲಿ ಅಳವಡಿಸಿರುವುದು ಕಾರಿಗೆ ಸ್ಪೋರ್ಟಿ ಲುಕ್ ನೀಡಿದೆ.

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಇದಲ್ಲದೆ ಸಿಯಾಜ್ ಫೇಸ್‍‍ಲಿಫ್ಟ್ ಕಾರುಗಳಲ್ಲಿ ಮಲ್ಟಿ ಸ್ಪೋಕ್ 15 ಇಂಚಿನ ಅಲಾಯ್ ಚಕ್ರಗಳು, ಕ್ರೋಮ್ ಆಧಾರಿತ ಡೋರ್ ಹ್ಯಾಂಡಲ್ಸ್ ಮತ್ತು ಒಆರ್‍‍ವಿಎಮ್ ಅನ್ನು ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಸ್ ಅನ್ನು ಪ್ರಸ್ತುತ ಮಾರಾಟಗೊಳ್ಳುತ್ತಿರುವ ಸಿಯಾಜ್ ಕಾರಿನಿಂದ ಆಧರಿಸಿದೆ. ಹಾಗೆಯೇ ಮರು ವಿನ್ಯಾಸಗೊಳಿಸಲಾದ ಹಿಂಭಾಗದ ಬಂಪರ್ ಅನ್ನು ಕೂಡಾ ಅಳವಡಿಸಲಾಗಿದೆ.

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಕಾರಿನ ಒಳಭಾಗದ ವಿನ್ಯಾಸ

ಈ ಹಿಂದಿನ ಸಿಯಾಜ್ ಕಾರುಗಳಲ್ಲಿ ಲಭ್ಯವಿದ್ದ ಬಹುತೇಕ ತಾಂತ್ರಿಕ ಅಂಶಗಳು ಹೊಸ ಕಾರಿನಲ್ಲೂ ಮುಂದುವರಿಸಲಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಕೆಲವೊಂದು ಹೊಸ ಸೌಲಭ್ಯಗಳನ್ನು ಜೋಡಣೆ ಮಾಡಲಾಗಿದೆ. ಇವುಗಳಲ್ಲಿ ಮರದ ದಿಣ್ಣೆಗಳಿಂದ ತಯಾರಿಸಲಾದ ಡ್ಯಾಶ್‌ಬೋರ್ಡ್, ಬಾಗಿಲು ಅಂಚುಗಳು ಹೊಸ ಆಕರ್ಷಣೆಯಾಗಿವೆ.

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಜೊತೆಗೆ ಕಾರಿನ ಸ್ಟೀರಿಂಗ್ ವೀಲ್ಹ್, ಆಕರ್ಷಕವಾದ ಲೆದರ್ ಸೀಟುಗಳು, ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್, ಅಂಡ್ರಾಯಿಡ್ ಆಟೋ, ಆ್ಯಪಲ್ ಕಾರ್ ಪ್ಲೇ, ಸುಜುಕಿ ಕನೆಕ್ಟ್ ಟೆಲಿಮ್ಯಾಟಿಕ್ ಸಿಸ್ಟಂ, ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೊತೆ ಟಿಟಿಪಿ ಕಲರ್ ಎಂಐಡಿ ಮತ್ತು ಕ್ರೂಸ್ ಕಂಟ್ರೊಲರ್ ಸೌಲಭ್ಯವಿದೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಹೊಸ ಎಂಜಿನ್ ಸಾಮರ್ಥ್ಯ ಮತ್ತು ಮೈಲೇಜ್

ಹೊಸ ಮಾರುತಿ ಸುಜುಕಿ ಸಿಯಾಜ್ ಕಾರು ಸಂಸ್ಥೆಯೆ ಸ್ವತಃ ತಯಾರು ಮಾಡಲಾದ 1.5 ಲೀಟರ್ 4 ಸಿಲೆಂಡರ್ ಡಿಡಿಐಎಸ್225 ಡೀಸೆಲ್ ಎಂಜಿನ್ ಸಹಾಯದಿಂದ 94 ಬಿಹೆಚ್‍ಪಿ ಮತ್ತು 225ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂಡಿಗೆ ಜೋಡಿಸಲಾಗಿದೆ. ಅಷ್ಟೆ ಅಲ್ಲದೇ ಪ್ರತೀ ಲೀಟರ್‍‍ಗೆ 26.82 ಕಿಲೋಮೀಟರ್‍‍ನ ಮೈಲೇಜ್ ಅನ್ನು ಸಹ ನೀಡುತ್ತೆ.

MOST READ: ದಂಡ ವಿಧಿಸಿದ ಪೊಲೀಸರಿಗೆ ಸರಿಯಾಗಿ ಚಮಕ್ ಕೊಟ್ಟ ಎಲೆಕ್ಟ್ರಿಷಿಯನ್

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಹೊಸ ಸಿಯಾಜ್ ಕಾರುಗಳು ಪೆಟ್ರೋಲ್ ಮತ್ತು ಡಿಸೇಲ್ ಎಂಜಿನ್‌ಗಳಲ್ಲಿ ಆಯ್ಕೆಗೆ ಲಭ್ಯವಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಸಿಗ್ಮಾ, ಡೆಲ್ಟಾ, ಡೆಲ್ಟ್ ಎಟಿ, ಜೆಟಾ, ಜೆಟಾ ಎಟಿ, ಆಲ್ಫಾ ಮತ್ತು ಆಲ್ಫಾ ಎಟಿ ಕಾರುಗಳನ್ನ ಪರಿಚಯಿಸಿದೆ. ಹೀಗಾಗಿ ವಿವಿಧ ಕಾರು ಆವೃತ್ತಿಗಳಲ್ಲಿ ವಿವಿಧ ಹಂತದ ಬೆಲೆ ಪಟ್ಟಿ ನಿಗದಿ ಮಾಡಲಾಗಿದೆ.

MOST READ: ವ್ಯವಸಾಯಕ್ಕಾಗಿ ರೂ.50 ಲಕ್ಷ ಬೆಲೆ ಬಾಳುವ ಐಷಾರಾಮಿ ಕಾರನ್ನು ಬಳಸಿದ ರೈತ

ಮಾರಾಟದಲ್ಲಿ ಹೋಂಡಾ ಸಿಟಿ ಮತ್ತು ಹ್ಯುಂಡೈ ವೆರ್ನಾ ಕಾರನ್ನು ಹೊಂದಿಕ್ಕಿದ ಮಾರುತಿ ಸುಜುಕಿ ಸಿಯಾಜ್

ಸುರಕ್ಷಾ ಸೌಲಭ್ಯಗಳು

ಸಾಮಾನ್ಯ ಕಾರುಗಳಲ್ಲಿ ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಹೊಂದಿರುವ ಸಿಯಾಜ್ ಫೇಸ್‌ಲಿಫ್ಟ್ ಕಾರುಗಳು ಟಾಪ್ ಎಂಡ್ ಆವೃತ್ತಿಯಲ್ಲಿ 6 ಏರ್‌ಬ್ಯಾಗ್‌ಗಳನ್ನು ಪಡೆದುಕೊಂಡಿದೆ. ಜೊತೆಗೆ ಎಬಿಎಸ್, ಚಾಲಕನ್ನು ಎಚ್ಚರಿಸುವ ಸೀಟ್ ಬೆಲ್ಟ್ ವಾರ್ನಿಂಗ್, ರಿವರ್ಸ್ ಪಾರ್ಕಿಂಗ್ ಸೆನ್ಸಾರ್ ಮತ್ತು ಸ್ಪೀಡ್ ವಾರ್ನಿಂಗ್ ಮಾನಿಟರ್ ಇದರಲ್ಲಿದೆ. ಇದು ಗಂಟೆಗೆ 120 ಕಿ.ಮಿಗಿಂತ ಹೆಚ್ಚು ಚಾಲನೆ ಮಾಡುವಾಗ ಬಿಫ್ ಸೌಂಡ್ ಮೂಲಕ ಚಾಲಕನಿಗೆ ಎಚ್ಚರಿಕೆ ನೀಡುತ್ತದೆ.

More from DriveSpark

Article Published On: Saturday, August 10, 2019, 9:19 [IST]
English summary
Maruti Suzuki Ciaz Beats Hyundai Verna And Honda City In July 2019 Sales. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+