ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ನಮಗೆಲ್ಲರಿಗೂ ತಿಳಿದಿರುವ ಹಾಗೆ ಮಾರುತಿ ಸುಜುಕಿ ಸಂಸ್ಥೆಯು ತಮ್ಮ ಡೀಸೆಲ್ ಎಂಜಿನ್ ಆಧಾರಿತ ವಾಹನಗಳನ್ನು ಸ್ಥಗಿಳಿಸುವ ನಮಗೆಲ್ಲರಿಗೂ ತಿಳಿದಿದೆ. ಆಟೋ ಕಾರ್ ಇಂಡಿಯಾ ವರದಿ ಪ್ರಕಾರ ಮಾರುತಿ ಸುಜುಕಿ ಇದೀಗ ಸಂಸ್ಥೆಯು ತಮ್ಮ ಜನಪ್ರಿಯ ಎರ್ಟಿಗಾ ಕಾರಿನ 1.3 ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸಹ ಸ್ಥಗಿತಗೊಳಿಸಿದೆ.

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಸಂಸ್ಥೆಯಲ್ಲಿರುವ ಬಹುತೇಕ ಕಾರುಗಳಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಅನ್ನು ಬಳಸಲಾಗಿದ್ದು, ಈ ಎಂಜಿನ್ 75 ಬಿಹೆಚ್‍ಪಿ/190ಎನ್ಎಂ ಟಾರ್ಕ್ ಮತ್ತು 90 ಬಿಹೆಚ್‍ಪಿ/200ಎನ್ಎಂ ಟಾರ್ಕ್ ಎಂಬ ಎರಡು ಬಗೆಯ ಪವರ್ ಔಟ್‍‍ಪುಟ್ ಅನ್ನು ನೀಡುತ್ತಿತ್ತು. ಈ ಫಿಯೆಟ್ ಮಲ್ಟಿ‍ಜೆಟ್ ಡೀಸೆಲ್ ಎಂಜಿನ್ ಅನ್ನು ಎರ್ಟಿಗಾ ಕಾರಿಗೆ 2012ರಲ್ಲಿ ನೀಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಈ ಎಂಜಿನ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು.

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

1.3 ಲೀಟರ್ ಡೀಸೆಲ್ ಎಂಜಿನ್ ಹೊಂದಿರುವ ಮಾರುತಿ ಸುಜುಕಿ ಎರ್ಟಿಗಾ ಕಾರು ಸ್ಥಗಿತಗೊಂಡ ನಂತರ ಇದೀಗ ಎರ್ಟಿಗಾ ಎಂಪಿವಿ ಕಾರು ಕೇವಲ 1.5 ಲೀಟರ್ ಪೆಟ್ರೋಲ್ ಎಂಜಿನ್‍ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್‍ನಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, 1.5 ಲೀಟರ್ ಪೆಟ್ರೋಲ್ ಎಂಜಿನ್ 105 ಬಿಹೆಚ್‍ಪಿ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಗುಣವನ್ನು ಹೊಂದಿದೆ.

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಅಥವಾ 4 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಈ 1.5 ಲೀಟರ್ ಪೆಟ್ರೋಲ್ ಎಂಜಿನ್ ಮಾರುತಿ ಸುಜುಕಿ ಸಂಸ್ಥೆಯ ಎಸ್‍ಹೆಚ್‍ವಿಎಸ್ ಟೆಕ್ನಾಲಜಿಯನ್ನು ಹೊಂದಿದ್ದು, ಫ್ಯುಯೆಲ್ ಏಫಿಶಿಯೆನ್ಸಿಯನ್ನು ಅಭಿವೃದ್ಧಿಗಳಿಸಲು ಹೈಬ್ರಿಡ್ ಸಿಸ್ಟಂ ಅನ್ನು ಇದಕ್ಕೆ ನೀಡಲಾಗಿದೆ.

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಇವುಗಳೆಲ್ಲವೂ ಆದ ನಂತರ ಮಾರುತಿ ಸುಜುಕಿ ಸಂಸ್ಥೆಯ ಕಾರುಗಳಲ್ಲಿ ಇದೀಗ ಕೇವಲ 1.5 ಲೀಟರ್ ಡೀಸೆಲ್ ಎಂಜಿನ್‍ಗಳು ಮಾತ್ರವೇ ಉಳಿದಿದ್ದು, ಇನ್ನೇನು ಏಪ್ರಿಲ್ 1, 2020 ರಿಂದ ಜಾರಿಯಾಗಲಿರುವ ಬಿಎಸ್-6 ನಿಯಮಾವಳಿಗಳ ನಂತರ ಈ 1.5 ಲೀಟರ್ ಡೀಸೆಲ್ ಎಂಜಿನ್ ಕೂಡಾ ಸ್ಥಗಿತಗೊಳ್ಳಲಿದೆ ಎಂದು ವರದಿಗಳು ತಿಳಿಸುತ್ತಿದೆ.

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಸಂಸ್ಥೆಯು ಈಗಾಗಲೇ ಬಿಎಸ್-6 ಎಂಜಿನ್ ಆಧಾರಿತ ಎರ್ಟಿಗಾ ಎಂಪಿವಿ ಕಾರನ್ನು ಬಿಡುಗಡೆ ಮಾಡಲಿದ್ದು, ಎಕ್ಸ್ ಶೋರುಂ ಪ್ರಕಾರ ರೂ. 7.55 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಈ ಕಾರು 6 ಸ್ಪೀಡ್ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಇದೇ ಅಲ್ಲದೆಯೆ ಸಂಸ್ಥೆಯು ಸಿಎನ್‍ಜಿ ಆಧಾರಿತ ಎರ್ಟಿಗಾ ಕಾರನ್ನು ಸಹ ಬಿಡುಗಡೆ ಮಾಡಲಾಗಿದೆ.

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಕಾರಿನ ವಿನ್ಯಾಸ

ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂ‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ತಾಂತ್ರಿಕ ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

MOST READ: ದಂಡ ವಿಧಿಸಿದ ಪೊಲೀಸರಿಗೆ ಸರಿಯಾಗಿ ಚಮಕ್ ಕೊಟ್ಟ ಎಲೆಕ್ಟ್ರಿಷಿಯನ್

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

MOST READ: ರೈಲ್ವೆ ಹಳಿಯ ಮೇಲೆ ವೈರಲ್ ವಿಡಿಯೋ ಮಾಡಲು ಹೋಗಿ ಪೊಲೀಸರ ಅತಿಥಿಯಾದ ವಿದ್ಯಾರ್ಥಿ

ಎರ್ಟಿಗಾ ಕಾರಿನಲ್ಲಿ 1.3 ಲೀಟರ್ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಮಾರುತಿ ಸುಜುಕಿ

ಮೈಲೇಜ್

ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
English summary
Maruti Suzuki Discontinued 1.3 Liter Diesel Ertiga MPV. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X