ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ದೇಶಾದ್ಯಂತ ಬಿಎಸ್-6 ಪ್ರೇರಿತ ವಾಹನಗಳ ಮಾರಾಟವನ್ನು ಕಡ್ಡಾಯಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸುತ್ತಿದ್ದು, ಕೇಂದ್ರ ಸರ್ಕಾರದ ಡೆಡ್‌ಲೈನ್‌ಗೂ ಮುನ್ನವೇ ಮಾರುತಿ ಸುಜುಕಿ ಸಂಸ್ಥೆಯು ತನ್ನ ಜನಪ್ರಿಯ ಕಾರುಗಳನ್ನು ಬಿಎಸ್-6 ಎಂಜಿನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಕಳೆದ ತಿಂಗಳ ಹಿಂದಷ್ಟೇ ಬಿಎಸ್-6 ಪ್ರೇರಿತ ಬಲೆನೊ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದ ಮಾರುತಿ ಸುಜುಕಿ ಸಂಸ್ಥೆಯು ವಾರದ ಹಿಂದಷ್ಟೇ ಸ್ವಿಫ್ಟ್ ಮತ್ತು ವ್ಯಾಗನ್‌ಆರ್ ಕಾರುಗಳ ಪೆಟ್ರೋಲ್ ಮಾದರಿಯನ್ನು ಹೊಸ ನಿಯಮಗಳಿಗೆ ಉನ್ನತಿಕರಿಸಿ ಬಿಡುಗಡೆ ಮಾಡಿತ್ತು. ಇದೀಗ ಡಿಜೈರ್ ಕಂಪ್ಯಾಕ್ಟ್ ಸೆಡಾನ್ ಪೆಟ್ರೋಲ್ ಮಾದರಿ ಕೂಡಾ ಹೊಸ ನಿಯಮಗಳಿಗೆ ಅನುಗುಣವಾಗಿ ಬಿಡುಗಡೆಯಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ನಿಯಮದಿಂದಾಗಿ ಸ್ವಿಫ್ಟ್, ವ್ಯಾಗನ್ಆರ್, ಡಿಜೈರ್ ಪೆಟ್ರೋಲ್ ಮಾದರಿಗಳಲ್ಲಿ ಕೆಲವು ತಾಂತ್ರಿಕ ಬದಲಾವಣೆಗಳಾಗಿದ್ದು, ಸುಧಾರಿತ ಎಂಜಿನ್ ಜೊತೆಗೆ ಕೆಲವು ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ಜೋಡಣೆ ಮಾಡಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಹೀಗಾಗಿ ಈ ಹಿಂದಿಗಿಂತಲೂ ಉತ್ತಮ ಪರ್ಫಾಮೆನ್ಸ್ ಪಡೆದುಕೊಂಡಿರುವ ಹೊಸ ಬಿಎಸ್-6 ಕಾರುಗಳಲ್ಲಿ ಡ್ಯುಯಲ್ ಚಾನೆಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಹೈ ಸ್ಪೀಡ್ ಅಲರ್ಟ್ ಸೇರಿದಂತೆ ಕೆಲವು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಜೊತೆಗೆ ಹೊಸ ಎಂಜಿನ್‌ ಮಾದರಿಯು ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಶೇ.25ರಷ್ಟು ಕಡಿತವಾಗಿದ್ದು, ಈ ಹಿಂದಿಗಿಂತಲೂ ಶೇ.10ರಿಂದ ಶೇ.15 ರಷ್ಟು ಹೆಚ್ಚು ಮೈಲೇಜ್ ನೀಡುವ ಮೂಲಕ ಮತ್ತಷ್ಟು ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆಯುವ ತವಕದಲ್ಲಿದೆ. ಹಾಗೆಯೇ ಬಿಎಸ್-6 ನಿಯಮದಿಂದಾಗಿ ಹೊಸ ಕಾರುಗಳ ಬೆಲೆಯೂ ಕೂಡಾ ತುಸು ದುಬಾರಿಯಾಗಿದ್ದು, ಸುಧಾರಿತ ಎಂಜಿನ್ ಮತ್ತು ಕೆಲವು ಸ್ಟ್ಯಾಂಡರ್ಡ್ ಸುರಕ್ಷಾ ಸೌಲಭ್ಯಗಳನ್ನು ಹೊರತುಪಡಿಸಿ ಯಾವುದೇ ಬದಲಾವಣೆಗಳನ್ನು ತರಲಾಗಿಲ್ಲ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಕಾರಿನ ಬೆಲೆಗಳು(ಎಕ್ಸ್‌ಶೋರೂಂ ಪ್ರಕಾರ)

ಡಿಜೈರ್ ಪೆಟ್ರೋಲ್ ಮಾದರಿಗಳು ಇದೀಗ ಹೊಸ ನಿಯಮಗಳಿಗೆ ಅನುಗುಣವಾಗಿ ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಈ ಹಿಂದಿನ ಬೆಲೆಗಳಿಂತ 13 ಸಾವಿರ ಹೆಚ್ಚುವರಿ ದರದೊಂದಿಗೆ ಪೆಟ್ರೋಲ್ ಮಾದರಿಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.82 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.8.70 ಲಕ್ಷ ಬೆಲೆ ಹೊಂದಿವೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಇದರಲ್ಲಿ ಡೀಸೆಲ್ ಮಾದರಿಯು ಈ ಹಿಂದೆನಂತೆಯೇ ಬಿಎಸ್-4 ಎಂಜಿನ್‌ ಹೊಂದಿದ್ದು, ಕೆಲವು ಕಡ್ಡಾಯ ಸುರಕ್ಷಾ ಸಾಧನಗಳ ಜೋಡಣೆ ಹಿನ್ನಲೆಯಲ್ಲಿ ರೂ.3 ಸಾವಿರ ಏರಿಕೆ ಮಾಡಲಾಗಿದೆ. ಡಿಜೈರ್ ಡಿಸೇಲ್ ಮಾದರಿಗಳು ಸದ್ಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.57 ಲಕ್ಷ ಬೆಲೆ ಹೊಂದಿರಲಿವೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಇನ್ನು ರೂ.4.99 ಲಕ್ಷದಿಂದ ರೂ.7.85 ಲಕ್ಷ ಬೆಲೆ ಹೊಂದಿದ್ದ ಸ್ವಿಫ್ಟ್ ಪೆಟ್ರೋಲ್ ಆವೃತ್ತಿಯು ಬಿಎಸ್-6 ಎಂಜಿನ್ ಉನ್ನತಿಕರಣದ ನಂತರ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.14 ಲಕ್ಷದಿಂದ ರೂ. 8.89 ಲಕ್ಷ ಬೆಲೆ ಪಡೆದುಕೊಂಡಿವೆ.

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಈ ಹಿಂದೆ ರೂ. 4.34 ಲಕ್ಷದಿಂದ ರೂ. 5.33 ಲಕ್ಷ ಬೆಲೆ ಹೊಂದಿದ್ದ ವ್ಯಾಗನ್‌ಆರ್ ಪೆಟ್ರೋಲ್ ಮಾದರಿಯು ಬಿಎಸ್-6 ಎಂಜಿನ್ ನಂತರ ರೂ. 5.10 ಲಕ್ಷದಿಂದ ರೂ. 5.91 ಲಕ್ಷ ಹೊಸ ಬೆಲೆ ನಿಗದಿ ಮಾಡಲಾಗಿದೆ

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಇನ್ನು ಕೇಂದ್ರ ಸರ್ಕಾರವು ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಬಿಎಸ್-4 ಎಂಜಿನ್ ವಾಹನಗಳ ಮಾರಾಟವನ್ನು ನಿಷೇಧಿಸಿ 2020ರ ಏಪ್ರಿಲ್ 1ರಿಂದಲೇ ಬಿಎಸ್-6 ವಾಹನಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತಿದ್ದು, ಈ ನಿಟ್ಟಿನಲ್ಲಿ ಮಾರುತಿ ಸುಜುಕಿ ಸಂಸ್ಥೆಯು ಇತರೆ ಕಾರು ಉತ್ಪಾದನಾ ಸಂಸ್ಥೆಗಳಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಹೊಸ ಎಂಜಿನ್‌ಗಳನ್ನು ಈಗಲೇ ಬಿಡುಗಡೆಗೊಳಿಸುತ್ತಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಬಿಎಸ್-6 ಎಂಜಿನ್ ಪ್ರೇರಿತ ಮಾರುತಿ ಸುಜುಕಿ ಡಿಜೈರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಇದರೊಂದಿಗೆ ಬಿಎಸ್-6 ವಾಹನಗಳ ಬೆಲೆಯು ಕೂಡಾ ದುಬಾರಿ ಎನ್ನಿಸಲಿದ್ದು, ಬಿಎಸ್-4 ವಾಹನಗಳ ಬೆಲೆಗಳಿಂತ ಬಿಎಸ್-6 ವಾಹನಗಳ ಡೀಸೆಲ್ ಎಂಜಿನ್ ಬೆಲೆಯೂ ಸರಾಸರಿಯಾಗಿ ರೂ.80 ಸಾವಿರದಿಂದ ರೂ. 2.50 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

Article Published On: Thursday, June 20, 2019, 20:42 [IST]
English summary
Maruti Suzuki Dzire gets added safety equipment to comply with new norms. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+