ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ಮಲ್ಟಿ ಪರ್ಪಸ್ ವೆಹಿಕಲ್(ಎಂಪಿವಿ) ಕಾರು ಮಾರಾಟ ವಿಭಾಗದಲ್ಲಿ ಭಾರೀ ಪೈಪೋಟಿ ನಡೆಸುತ್ತಿರುವ ಮಾರುತಿ ಸುಜುಕಿ ಎರ್ಟಿಗಾ ಮಾದರಿಯು ಇದೇ ಮೊದಲ ಬಾರಿಗೆ ಹೊಸ ದಾಖಲೆಗೆ ಕಾರಣವಾಗಿದ್ದು, 2019ರ ಮಾರ್ಚ್ ಅವಧಿಯಲ್ಲಿ ಬರೋಬ್ಬರಿ 8,955 ಕಾರುಗಳು ಮಾರಾಟವಾಗುವ ಮೂಲಕ ಎಂಪಿವಿ ವಿಭಾಗದಲ್ಲಿ ಅಗ್ರಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಎಂಪಿವಿ ಕಾರುಗಳಿಗೆ ಸಾಕಷ್ಟು ಬೇಡಿಕೆಯಿದ್ದು, ಇನೋವಾ ಕ್ರಿಸ್ಟಾ ಹಿಂದಿಕ್ಕಿರುವ ಎರ್ಟಿಗಾ ಕಾರು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿನ ಮಾರಾಟಕ್ಕಿಂತ ಶೇ.76.07 ಮುನ್ನಡೆ ಸಾಧಿಸಿದ್ದು, 2018ರ ನವೆಂಬರ್‌ನಲ್ಲಿ ಬಿಡುಗಡೆಯಾಗಿರುವ ನ್ಯೂ ಜನರೇಷನ್ ಎರ್ಟಿಗಾ ಮಾದರಿಯು ಭಾರೀ ಪ್ರಮಾಣದಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ಇನ್ನು ಹೊಸ ಎರ್ಟಿಗಾ ಕಾರು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.44 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.10.90 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಒಟ್ಟು 9 ವೆರಿಯೆಂಟ್‌ಗಳಲ್ಲಿ ಎರ್ಟಿಗಾ ಕಾರುಗಳನ್ನು ಆಯ್ಕೆ ಮಾಡಬಹುದಾಗಿದೆ.

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂ‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ತಾಂತ್ರಿಕ ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಡ್ಯುಯಲ್ ಏರ್‌ಬ್ಯಾಗ್, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ಎಂಜಿನ್ ಸಾಮರ್ಥ್ಯ

ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

MOST READ: ವಾಹನಗಳ ಕಳ್ಳತನಕ್ಕೆ ಬ್ರೇಕ್ ಹಾಕಲು ಹೊಸ ರೂಲ್ಸ್ ಜಾರಿ ಮಾಡಿದ ಕೇಂದ್ರ ಸರ್ಕಾರ..!

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ಮೈಲೇಜ್

ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ಲಭ್ಯವಿರುವ ಬಣ್ಣಗಳು

ಹೊಸ ಎರ್ಟಿಗಾ ಕಾರುಗಳು ಒಟ್ಟು ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಪರ್ಲ್ ಮೆಟಾಲಿಕ್ ಔಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಬಣ್ಣಗಳನ್ನು ಆಯ್ಕೆ ಮಾಡಬಹುದು.

MOST READ: ಕಾನೂನು ಬಾಹಿರ ಮಾಡಿಫೈ ಮಾಡಿಸಿದ ಕಾರು ಮಾಲೀಕನಿಗೆ ಬರೋಬ್ಬರಿ 5 ಲಕ್ಷ ದಂಡ..!

ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಹೊಸ ದಾಖಲೆ

ಒಟ್ಟಿನಲ್ಲಿ 7-ಸೀಟರ್ ಮಾದರಿಗಳಲ್ಲಿ ವಿಶೇಷ ಎನ್ನಿಸುವ ಹೊಸ ಎರ್ಟಿಗಾ ಕಾರು 209-ಲೀಟರ್‌ನಷ್ಟು ಬೂಟ್ ಸ್ಪೆಸ್ ಸೌಲಭ್ಯ ಪಡೆದಿದ್ದು, ದೇಶದಲ್ಲಿ ಉತ್ತಮ ಇಂಧನ ದಕ್ಷತೆ ಹೊಂದಿರುವ ಎಂಪಿವಿ ಕಾರುಗಳಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಟೊಯೊಟಾ ಇನೋವಾ, ಮಹೀಂದ್ರಾ ಬಲೆರೋ ಮತ್ತು ಮಹೀಂದ್ರಾ ಮರಾಜೊ ಕಾರುಗಳಿಗೆ ಸಾಕಷ್ಟು ಪೈಪೋಟಿ ನೀಡುತ್ತಿದೆ.

Most Read Articles

Kannada
English summary
Maruti Suzuki Ertiga Achieves Highest Ever Monthly Sales In March 2019. Read in Kannada.
Story first published: Friday, April 5, 2019, 10:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X