ಇನೊವಾ ಕ್ರಿಸ್ಟಾ ಮತ್ತು ಮರಾಜೊ ಕಾರನ್ನು ಹಿಂದಿಕ್ಕಿದ ಮಾರುತಿ ಸುಜುಕಿ ಎರ್ಟಿಗಾ...

2018ರ ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ ಕಾರುಗಳಿಗೆ ಇದೀಗ ಮಾರುಕಟ್ಟೆಯಲ್ಲಿ ಡಿಮ್ಯಾಂಡ್ ಅಧಿಕವಾಗುತ್ತಿದ್ದು, ತಮ್ಮ ಎದುರಾಳಿಗಳಾದ ಟೊಯೊಟಾ ಇನೊವಾ ಕ್ರಿಸ್ಟಾ ಮತ್ತು ಮಹೀಂದ್ರಾ ಮರಾಜೊ ಕಾರುಗಳನ್ನು 2019ರ ಜನವರಿ ತಿಂಗಳ ಮಾರಾಟದಲ್ಲಿ ಹಿಂದಿಕ್ಕಿದೆ.

ಇನೊವಾ ಕ್ರಿಸ್ಟಾ ಮತ್ತು ಮರಾಜೊ ಕಾರನ್ನು ಹಿಂದಿಕ್ಕಿದ ಮಾರುತಿ ಸುಜುಕಿ ಎರ್ಟಿಗಾ...

2019ರ ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರು 6,353 ಯೂನಿಟ್ ಮಾರಾಟಗೊಂಡಿದ್ದು, ಇನ್ನು ಟೊಯೊಟಾ ಇನೊವಾ ಕ್ರಿಸ್ಟಾ 6,253 ಯೂನಿಟ್ ಹಾಗು 3,504 ಯೂನಿಟ್ ಮಹೀಂದ್ರಾ ಮರಾಜೊ ಕಾರುಗಳು ಮಾರಾಟಗೊಂಡಿದೆ. ಈ ನಿಟ್ಟಿನಲ್ಲಿ ತಿಂಗಳಿಗೆ ಸುಮಾರು 6 ಸಾವಿರ ಬುಕ್ಕಿಂಗ್ ಅನ್ನು ಪಡೆಯುತ್ತಿರುವ ಮಾರುತಿ ಸುಜುಕಿ ಎರ್ಟಿಗಾ ಕಾರು ಎಂಪಿವಿ ಪ್ರಿಯರಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆಯುತ್ತಿದೆ ಎನ್ನಬಹುದು.

ಈ ನಿಟ್ಟಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಬಿಡುಗಡೆಗೊಂಡ ಹೊಸ ಎರ್ಟಿಗಾ ಕಾರು ಹೆಚ್ಚು ಬುಕ್ಕಿಂಗ್ ಅನ್ನು ಪಡೆದುಕೊಳ್ಳುತ್ತಿದೆ. ರೂ.7.44 ಲಕ್ಷದ ಪ್ರಾರಂಭಿಕ ಬೆಲೆಯನ್ನು ಹೊಂದಿರುವ ಹೊಸ ಎರ್ಟಿಗಾ ಕಾರನ್ನು ಇಲ್ಲಿಯ ವರೆಗು ಸುಮಾರು 10,000 ಮಂದಿ ಬುಕ್ಕಿಂಗ್ ಮಾಡಿಕೊಂಡಿದ್ದಾರೆ.

ಇನೊವಾ ಕ್ರಿಸ್ಟಾ ಮತ್ತು ಮರಾಜೊ ಕಾರನ್ನು ಹಿಂದಿಕ್ಕಿದ ಮಾರುತಿ ಸುಜುಕಿ ಎರ್ಟಿಗಾ...

ಇನ್ನು ಹೊಸ ಎರ್ಟಿಗಾ ಕಾರು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.44 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ.10.90 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಒಟ್ಟು 10 ವೆರಿಯೆಂಟ್‌ಗಳಲ್ಲಿ ಎರ್ಟಿಗಾ ಕಾರುಗಳನ್ನು ಆಯ್ಕೆ ಮಾಡಬಹುದಾಗಿದೆ.

ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

ತಾಂತ್ರಿಕ ವೈಶಿಷ್ಟ್ಯತೆಗಳು
ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

ಇನೊವಾ ಕ್ರಿಸ್ಟಾ ಮತ್ತು ಮರಾಜೊ ಕಾರನ್ನು ಹಿಂದಿಕ್ಕಿದ ಮಾರುತಿ ಸುಜುಕಿ ಎರ್ಟಿಗಾ...

ಸುರಕ್ಷಾ ವೈಶಿಷ್ಟ್ಯತೆಗಳು
ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

ಎಂಜಿನ್ ಸಾಮರ್ಥ್ಯ
ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

ಮೈಲೇಜ್ ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

More from DriveSpark

Article Published On: Friday, February 8, 2019, 12:34 [IST]
English summary
Maruti Suzuki Ertiga Beats Innova Crysta And Mahindra Marazzo In 2019 January Sales. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+