ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ಪ್ರಸ್ತುತ ಮಾರುಕಟ್ಟೆಯಲ್ಲಿ ಎಂಪಿವಿ ಕಾರುಗಳಿಗೆ ಉತ್ತಮವಾದ ಬೇಡಿಕೆಯಿದ್ದು, ಹಲವಾರು ಸಂಸ್ಥೆಯ ಎಂಪಿವಿ ಕಾರುಗಳು ಮಾರುಕಟ್ಟೆಯಲ್ಲಿವೆ. ಮಾರುತಿ ಸುಜುಕಿ ಎರ್ಟಿಗಾ, ಮಹೀಂದ್ರಾ ಮರಾಜೊ ಮತ್ತು ಟೊಯೊಟಾ ಇನೋವಾ ಕ್ರಿಸ್ಟಾ ಕಾರುಗಳನ್ನೊಳಗೊಂಡಂತೆ ಇನ್ನಿತರೆ ಎಂಟ್ರಿ ಲೆವೆಲ್ ಎಂಪಿವಿ ಕಾರುಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ.

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ಇನ್ನು ಪ್ರತೀ ತಿಂಗಳು ಎಂಪಿವಿ ಕಾರುಗಳ ಮಾರಾಟದ ಸಂಖ್ಯೆಯಲ್ಲಿ ಏರಿಳತಗಳು ಆಗುತ್ತಿದ್ದರೂ ಸಹ, ಮಾರುತಿ ಸುಜುಕಿ ಎರ್ಟಿಗಾ ಮಾತ್ರ ಬಿಡುಗಡೆಗೊಂಡಗಿನಿಂದಲೂ ಎಂಪಿವಿ ಕಾರು ಮಾರಾಟದಲ್ಲಿ ಮೊದಲನೆಯ ಸ್ಥಾನವನ್ನು ಪಡೆದುಕೊಂಡಿದೆ. ಹೀಗಾಗಿ ಎಂದಿನಂತೆಯೆ ಜುಲೈ 2019ರಲಿ ಕೂಡಾ ಮಾರುತಿ ಸುಜುಕಿ ಎರ್ಟಿಗಾ ಕಾರು ಮಾರುಕಟ್ಟೆಯಲ್ಲಿರುವ ಇನ್ನಿತರೆ ಎಂಪಿವಿ ಕಾರುಗಳನ್ನು ಹಿಂದಿಕ್ಕಿದೆ.

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ಆಟೋ ಪಂಡಿತ್ಸ್ ವರದಿ ಪ್ರಕಾರ ಜುಲೈ 2019ರಲ್ಲಿ ಮಹೀಂದ್ರಾ ಸಂಸ್ಥೆಯ ಮರಾಜೊ 956 ಯೂನಿಟ್, ಟೊಯೊಟಾ ಸಂಸ್ಥೆಯ ಇನೊವಾ ಕ್ರಿಸ್ಟಾ 4,865 ಯೂನಿಟ್ ಮಾರಾಟಗೊಂಡಿದ್ದು, 9,222 ಯೂನಿಟ್ ಮಾರಾಟಗೊಂಡು ಮೊದಲನೆಯ ಸ್ಥಾನವನ್ನು ಪಡೆದುಕೊಂಡಿದೆ. ಮಾರುತಿ ಸುಜುಕಿ ಎರ್ಟಿಗಾ ಇದೀಗ ಪೆಟೋಲ್, ಡೀಸೆಲ್ ಮತ್ತು ಸಿಎನ್‍ಜಿ ಮಾದರಿಯಲ್ಲಿ ಖರೀದಿಗೆ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಮಾದರಿಯ ಎರ್ಟಿಗಾ ಕಾರು ಲಭ್ಯವಿರಲಿದೆ ಎಂದು ಸಂಸ್ಥೆಯು ಹೇಳಿಕೊಂಡಿದೆ.

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ನವೆಂಬರ್ 2018ರಲ್ಲಿ ಬಿಡುಗಡೆಯಾದ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಕಾರು ಇಲ್ಲಿಯವರೆಗೂ ಸುಮಾರು 61,000ಕ್ಕು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ಅಂಕಿ ಅಂಶಗಳ ಪ್ರಕಾರ ಪ್ರತೀ ತಿಂಗಳು ಸುಮಾರು 8000ಕ್ಕು ಹೆಚ್ಚಿನ ಸಂಖ್ಯೆಯಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಮಾರಾಟವಾಗುತ್ತಿದೆಯಂತೆ.

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ಕಾರಿನ ಬೆಲೆ ಇನ್ನು ಸಾಧಾರಣ ಮಾರುತಿ ಸುಜುಕಿ ಸಂಸ್ಥೆಯು ಕೆಲವು ತಿಂಗಳುಗಳ ಹಿಂದಷ್ಟೆ ತಮ್ಮ ಹೊಸ ತಲೆಮಾರಿನ ಎರ್ಟಿಗಾ ಎಂಪಿವಿ ಕಾರನ್ನು ಬಿಡುಗಡೆಗೊಳಿಸಿದ್ದು, ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 7.44 ಲಕ್ಷದ ಪ್ರಾರಂಭಿಕ ಬಲೆಯನ್ನು ನೀಡಲಾಗಿದ್ದು, ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಮರಾಜೋ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತಿದೆ.

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ಕಾರಿನ ವಿನ್ಯಾಸ

ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂ‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

MOST READ: ದಂಡ ವಿಧಿಸಿದ ಪೊಲೀಸರಿಗೆ ಸರಿಯಾಗಿ ಚಮಕ್ ಕೊಟ್ಟ ಎಲೆಕ್ಟ್ರಿಷಿಯನ್

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ತಾಂತ್ರಿಕ ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

MOST READ: ಎಕ್ಸ್‌ಪ್ರೆಸ್‌ವೇಗಳಲ್ಲಿ ಎದುರಾಗುವ ಅಪಾಯಕಾರಿ ಸಂಗತಿಗಳಿವು..!

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

MOST READ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಾಹನಗಳಿಗೆ ಹೊಸ ರೂಲ್ಸ್..!

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ಎಂಜಿನ್ ಸಾಮರ್ಥ್ಯ

ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

ಜುಲೈ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು

ಮೈಲೇಜ್

ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
English summary
Maruti Suzuki Ertiga Beats Mahindra Marazzo And Innova Crysta In July 2019 Sales. Read In Kannada
Story first published: Wednesday, August 7, 2019, 9:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more