1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ಗೊತ್ತಾ.?

ಮಾರುತಿ ಸುಜುಕಿ ಸಂಸ್ಥೆಯು ತಮ್ಮ ಜನಪ್ರಿಯ ಎರ್ಟಿಗಾ ಎಂಪಿವಿ ಕಾರಿಗೆ ತಮ್ಮ ಉತ್ಪಾದನ ಘಟಕದಲ್ಲಿಯೆ ತಯಾರು ಮಾಡಲಾದ 1.5 ಲೀಟರ್‍‍ನ ಡೀಸೆಲ್ ಎಂಜಿನ್ ಅನ್ನು ನೀಡಿ ಬಿಡುಗಡೆ ಮಾಡಲಾಗಿದ್ದು, ಈಗಾಗಲೆ ಈ ಎಂಜಿನ್ ಅನ್ನು ಮೊದಲ ಬಾರಿಗೆ ಸಂಸ್ಥೆಯು ಸಿಯಾಜ್ ಸೆಡಾನ್ ಕಾರುಗಳನ್ನು ನೀಡಲಾಗಿದೆ. ಹೊಸ ಎಂಜಿನ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ ಕಾರು ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 9.86 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ಹೊಸ ಡೀಸೆಲ್ ಎಂಜಿನ್ ಸಾಮರ್ಥ್ಯ

ಜೊತೆಗೆ ಬಿಎಸ್-6 ನಿಯಮ ಅನುಸಾರವೇ ಸಿದ್ದಗೊಂಡಿರುವ ಹೊಸ ಎಂಜಿನ್ ಮಾದರಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದ್ದು, 95-ಬಿಎಚ್‌ಪಿ ಮತ್ತು 225-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಲೀಟರ್ ಡೀಸೆಲ್‌ಗೆ ಇದು 24 ರಿಂದ 26ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ಹೊಸ ಎಂಜಿನ್ ಅನ್ನು ಹೊತ್ತ ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಕೇವಲ ಎಂಜಿನ್ ಮಾತ್ರವೇ ಹೊರತು ಬೇರಾವ ಬದಲಾವಣೆಗಳನ್ನು ಪಡೆದಿರುವುದಿಲ್ಲ. ಹೀಗಾಲಿ ಸಧ್ಯ ಮಾರುಕಟ್ತೆಯಲ್ಲಿರುವ ಮಹೀಂದ್ರಾ ಮರಾಜೊ ಮತ್ತು ಟೊಯೊಟಾ ಇನೋವಾ ಕ್ರಿಸ್ಟಾ ಎಂಪಿವಿ ಕಾರುಗಳಿಗೆ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಪೈಪೋಟಿ ನೀಡುತ್ತಿದೆ.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂ‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ತಾಂತ್ರಿಕ ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಡ್ಯುಯಲ್ ಏರ್‌ಬ್ಯಾಗ್, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ಎಂಜಿನ್ ಸಾಮರ್ಥ್ಯ

ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ಲಭ್ಯವಿರುವ ಬಣ್ಣಗಳು

ಹೊಸ ಎರ್ಟಿಗಾ ಕಾರುಗಳು ಒಟ್ಟು ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಪರ್ಲ್ ಮೆಟಾಲಿಕ್ ಔಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಬಣ್ಣಗಳನ್ನು ಆಯ್ಕೆ ಮಾಡಬಹುದು.

1.5 ಲೀಟರ್ ಡೀಸೆಲ್ ಹೊತ್ತು ಬಿಡುಗಡೆಗೊಂಡ ಮಾರುತಿ ಸುಜುಕಿ ಎರ್ಟಿಗಾ - ಮೈಲೇಜ್ ಎಷ್ಟು ನೀಡುತ್ತೆ ಗೊತ್ತಾ.?

ಒಟ್ಟಿನಲ್ಲಿ 7-ಸೀಟರ್ ಮಾದರಿಗಳಲ್ಲಿ ವಿಶೇಷ ಎನ್ನಿಸುವ ಹೊಸ ಎರ್ಟಿಗಾ ಕಾರು 209-ಲೀಟರ್‌ನಷ್ಟು ಬೂಟ್ ಸ್ಪೆಸ್ ಸೌಲಭ್ಯ ಪಡೆದಿದ್ದು, ದೇಶದಲ್ಲಿ ಉತ್ತಮ ಇಂಧನ ದಕ್ಷತೆ ಹೊಂದಿರುವ ಎಂಪಿವಿ ಕಾರುಗಳಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಟೊಯೊಟಾ ಇನೋವಾ, ಮಹೀಂದ್ರಾ ಬಲೆರೋ ಮತ್ತು ಮಹೀಂದ್ರಾ ಮರಾಜೊ ಕಾರುಗಳಿಗೆ ಸಾಕಷ್ಟು ಪೈಪೋಟಿ ನೀಡುತ್ತಿದೆ.

Most Read Articles

Kannada
English summary
Maruti Suzuki Ertiga Lanuched Gets New 1.5 Litre Diesel Engine. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X