ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಮಲ್ಟಿ ಪ್ಯಾಸೆಂಜರ್ ವೆಹಿಕಲ್(ಎಂಪಿವಿ) ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿ ಎರ್ಟಿಗಾ ಕಾರು ಮಾರಾಟ ವಿಭಾಗದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಬಿಡುಗಡೆಯಾದ ಕೆಲವೇ ವರ್ಷಗಳಲ್ಲಿ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

2013ರಲ್ಲಿ ಮೊದಲ ಬಾರಿಗೆ ಮಾರುಕಟ್ಟೆ ಪ್ರವೇಶಿಸಿದ್ದ ಎರ್ಟಿಗಾ ಕಾರು ಮಾದರಿಯು ಇದುವರೆಗೂ ಗ್ರಾಹಕರ ಆಯ್ಕೆಯಲ್ಲಿ ಅಗ್ರಸ್ಥಾನದಲ್ಲಿದ್ದು, ಹಳೆಯ ತಲೆಮಾರಿನ ಕಾರು ಮಾದರಿಯು 4,18,128 ಯುನಿಟ್ ಮಾರಾಟಗೊಂಡಿದ್ದಲ್ಲಿ ಕಳೆದ ವರ್ಷ ಬಿಡುಗಡೆಯಾಗಿದ್ದ ಹೊಸ ತಲೆಮಾರಿನ ಎರ್ಟಿಗಾ ಆವೃತ್ತಿಯು ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟಗೊಂಡಿದೆ. ಈ ಮೂಲಕ ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟಗೊಂಡ ಹೆಗ್ಗಳಿಕೆಗೆ ಪಾತ್ರವಾಗಿರುವ ಎರ್ಟಿಗಾ ಕಾರು ಶೀಘ್ರದಲ್ಲೇ ಮತ್ತಷ್ಟು ಹೊಸತನದೊಂದಿಗೆ ರಸ್ತೆಗಿಳಿಯಲು ಸಿದ್ದತೆ ನಡೆಸಿದೆ.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಎರ್ಟಿಗಾ ಕಾರು ಬಿಎಸ್-6 ಎಂಜಿನ್ ಪ್ರೇರಿತ 1.5-ಲೀಟರ್ ಪೆಟ್ರೋಲ್ ಎಂಜಿನ್, ಬಿಎಸ್-4 ಪ್ರೇರಿತ ಡೀಸೆಲ್ ಎಂಜಿನ್ ಮತ್ತು ಸಿಎನ್‌ಜಿ ಎಂ ಆಯ್ಕೆಯೊಂದಿಗೆ ಮಾರಾಟವಾಗುತ್ತಿದ್ದು, ಮುಂದಿನ ಕೆಲವೇ ತಿಂಗಳಲ್ಲಿ ಡೀಸೆಲ್ ಎಂಜಿನ್ ಕೂಡಾ ಬಿಎಸ್-6 ನಿಯಮ ಅನುಸಾರ ನವೀಕರಣಗೊಳ್ಳಲಿದೆ.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಬಿಎಸ್-6 ನಿಯಮ ಪಾಲನೆ ಸಾಧ್ಯವಿಲ್ಲದ ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಕಾರುಗಳ ಆಯ್ಕೆಯನ್ನು ಕೈಬಿಡುತ್ತಿರುವ ಮಾರುತಿ ಸುಜುಕಿಯು ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರು ಆವೃತ್ತಿಗಳ ಮೇಲೆ ಹೆಚ್ಚಿನ ಗಮನಹರಿಸಿದ್ದು, ಆಯ್ದ ಕಾರು ಮಾದರಿಗಳಲ್ಲಿ ಮಾತ್ರವೇ ಹೊಸ ಮಾದರಿಯ ಡೀಸೆಲ್ ಎಂಜಿನ್ ಅಭಿವೃದ್ದಿಗೊಳಿಸಿದೆ.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಒಂದು ವೇಳೆ ಬಿಎಸ್-6 ನಿಯಮ ಅನುಸಾರವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಉನ್ನತೀಕರಣ ಮಾಡಿದರೂ ಸಹ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಇದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರವೇ ಸಿಗಲಿದೆ.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಎಂಟ್ರಿ ಲೆವಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರ 1.5-ಲೀಟರ್, 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದೆ.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಮಾಹಿತಿಗಳ ಪ್ರಕಾರ, ಬ್ರೆಝಾ, ಎರ್ಟಿಗಾ, ಸಿಯಾಜ್, ಎಸ್-ಕ್ರಾಸ್ ಕಾರುಗಳಲ್ಲಿ ಹೊಸ 1.5-ಲೀಟರ್ ಡೀಸೆಲ್ ಎಂಜಿನ್ ಜೊತೆಗೆ 1.5-ಲೀಟರ್ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 1.6-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಲಭ್ಯವಾಗಲಿದೆ.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಮಾರುತಿ ಸುಜುಕಿಯು ಇತ್ತೀಚಿಗಷ್ಟೆ ಹೊಸ ತಂತ್ರಜ್ಞಾನ ಪ್ರೇರಿತ 1.5 ಲೀಟರ್ ಕೆ15 ಪೆಟ್ರೊಲ್ ಎಂಜಿನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಹೊಸ ಪೆಟ್ರೋಲ್ ಎಂಜಿನ್ ಅನ್ನು ಮೊದಲ ಬಾರಿಗೆ ಸಿಯಾಜ್ ಸೆಡಾನ್‍ನಲ್ಲಿ ನಂತರ ಎಕ್ಸ್ಎಲ್6 ಕಾರಿನಲ್ಲಿ ಅಳವಡಿಸಲಾಗಿತ್ತು.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಇದೀಗ ಇದೇ ಎಂಜಿನ್ ಮಾದರಿಯನ್ನೇ ವಿಟಾರಾ ಬ್ರಿಝಾ, ಎಸ್ ಕ್ರಾಸ್ ಸೇರಿದಂತೆ ಇತರೆ ಕೆಲವು ಕಾರು ಮಾದರಿಗಳಲ್ಲೂ ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿದ್ದು, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮೂಲಕ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಮಾದರಿಯಷ್ಟೇ ಮೈಲೇಜ್ ಮತ್ತು ಪರ್ಫಾಮೆನ್ಸ್ ಒದಗಿಸಲಿದೆ.

ಅತಿ ಕಡಿಮೆ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಮಾರುತಿ ಎರ್ಟಿಗಾ

ಹೊಚ್ಚ ಹೊಸ 1.5 ಲೀಟರ್ ಕೆ15 ಪೆಟ್ರೋಲ್ ಎಂಜಿನ್ ಮಾದರಿಯು ಬಿಎಸ್-6 ಪ್ರೇರಣೆಯೊಂದಿಗೆ ಅಭಿವೃದ್ಧಿ ಹೊಂದಿದ್ದು, ಉತ್ತಮ ಮೈಲೇಜ್‌ನೊಂದಿಗೆ 105-ಬಿಹೆಚ್‍ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

Most Read Articles

Kannada
English summary
Maruti Suzuki Ertiga Sales Crosses 5 Lakh Units Since Launch In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X