ಜೂನ್ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಎರ್ಟಿಗಾ ಮೊದಲು
ಕುಟುಂಬದೊಂದಿಗೆ ಹೊರ ಸಂಚಾರಕ್ಕೆ ಹೋಗಲು ಎಂಪಿವಿ ಕಾರುಗಳೇ ಬೇಸ್ಟ್, ಯಾಕಂದರೆ ಈ ಕಾರುಗಳಲ್ಲಿನ ಸ್ಥಳಾವಕಾಶವು ಮನೆ ಮಂದಿಯನ್ನೆಲ್ಲಾ ಕೂರಿಸಿ ಪ್ರಯಾಣಿಸಬಹುದು. ಈ ನಿಟ್ಟಿನಲ್ಲಿ ಎಂಪಿವಿ ಕಾರುಗಳಿಗೆ ಬೇಡಿಕೆಯು ಹೆಚ್ಚುತ್ತಿದ್ದು, ಮಾರುತಿ ಸುಜುಕಿ ಸಂಸ್ಥೆಯು ತಮ್ಮ ಎರಡನೆಯ ತಲೆಮಾರಿನ ಎರ್ಟಿಗಾ ಎಂಪಿವಿ ಕಾರನ್ನು ನವೆಂಬರ್ 2018ರಂದು ಬಿಡುಗಡೆ ಮಾಡಲಾಯಿತು.

ಮೊದಲನೆಯ ತಲೆಮಾರಿನ ಕಾರಿನಂತೆಯೆ ಎರಡನೆಯ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯನ್ನು ಪಡೆಯುತ್ತಿದ್ದು, ಬಿಡುಗಡೆಗೊಂಡಾಗಿನಿಂದಲೂ ಇಲ್ಲಿಯ ವರೆಗೂ ಸುಮಾರು 55,000ಕ್ಕು ಅಧಿಕ ಕಾರುಗಳು ಮಾರಾಟಗೊಂಡಿವೆಯಂತೆ. ಹೌದು, ಆಟೋ ಪಂಡಿತ್ಸ್ ಪ್ರಕಾರ ನವೆಂಬರ್ 2018ರಲ್ಲಿ ಬಿಡುಗಡೆಗೊಂಡ ಎರಡನೆಯ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಪ್ರತೀ ತಿಂಗಳಿಗೆ ಸಮರು 7,898 ಯೂನಿಟ್ ಮಾರಾಟವಾಗುತ್ತಿದೆ.

ಇದೇ ಸಂಖ್ಯೆಯನ್ನು ಮುಂದುವರೆಸುತ್ತಿರುವ ಮಾರುತಿ ಸುಜುಕಿ ಎರ್ಟಿಗಾ ಕಾರು ಜೂನ್ ತಿಂಗಳ ಎಂಪಿವಿ ಕಾರು ಮಾರಾಟದಲ್ಲಿ 7,564 ಯೂನಿಟ್ ಮಾರಾಟವಾಗಿದ್ದು, ಸೆಗ್ಮೆಂಟ್‍ನಲ್ಲಿ ಮೊದಲನೆಯ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಎರಡನೆಯ ಸ್ಥಾನದಲ್ಲಿ 5118 ಯೂನಿಟ್ ಮಾರಾಟದಿಂದ ಮಹೀಂದ್ರಾ ಬೊಲೆರೊ, ಮೂರನೆಯ ಸ್ಥಾನದಲ್ಲಿ 4,814 ಯೂನಿಟ್ ಮಾರಾಟವಾದ ಟೊಯೊಟಾ ಇನೊವಾ ಕ್ರಿಸ್ಟಾ ಮತ್ತು ನಾಲ್ಕನೆಯ ಸ್ಥಾನದಲ್ಲಿ 1,206 ಯೂನಿಟ್ ಮಾರಾಟಗೊಂಡ ಮಹೀಂದ್ರಾ ಕಾರುಗಳಿವೆ.

ಕಾರಿನ ಬೆಲೆ
ಮಾರುತಿ ಸುಜುಕಿ ಸಂಸ್ಥೆಯು ಕೆಲವು ತಿಂಗಳುಗಳ ಹಿಂದಷ್ಟೆ ತಮ್ಮ ಹೊಸ ತಲೆಮಾರಿನ ಎರ್ಟಿಗಾ ಎಂಪಿವಿ ಕಾರನ್ನು ಬಿಡುಗಡೆಗೊಳಿಸಿದ್ದು, ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 7.44 ಲಕ್ಷದ ಪ್ರಾರಂಭಿಕ ಬಲೆಯನ್ನು ನೀಡಲಾಗಿದ್ದು, ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಮರಾಜೋ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತಿದೆ.

ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

ಕಾರಿನ ವಿನ್ಯಾಸ
ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍ಲ್ಯಾಂಪ್‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

ತಾಂತ್ರಿಕ ವೈಶಿಷ್ಟ್ಯತೆಗಳು
ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍ಗೆ ಸಹಾಯವಾಗುವ ಹಲವಾರು ಬಟನ್‍ಗಳೊಂದಿಗೆ ಲೆದರ್ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

ಸುರಕ್ಷಾ ವೈಶಿಷ್ಟ್ಯತೆಗಳು
ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

ಎಂಜಿನ್ ಸಾಮರ್ಥ್ಯ
ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍ಹೆಚ್‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

ಮೈಲೇಜ್
ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

ಲಭ್ಯವಿರುವ ಬಣ್ಣಗಳು
ಹೊಸ ಎರ್ಟಿಗಾ ಕಾರುಗಳು ಒಟ್ಟು ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಪರ್ಲ್ ಮೆಟಾಲಿಕ್ ಔಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್ಫಾರ್ಡ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮೆಟಾಲಿಕ್ ಸಿಲ್ಕಿ ಗ್ರೇ ಬಣ್ಣಗಳನ್ನು ಆಯ್ಕೆ ಮಾಡಬಹುದು.


Click it and Unblock the Notifications








