ಶೀಘ್ರವೇ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್

ಮಾರುತಿ ಸುಜುಕಿ ಸಂಸ್ಥೆಯು ಕೇವಲ ತಮ್ಮ ಪ್ಯಾಸೆಂಜರ್ ವಾಹನಗಳಿದ ಮಾತ್ರವಲ್ಲದೆಯೆ ಮರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಗೆ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಹೊಂದಿರುವ ಕಾರುಗಳನ್ನು ಒದಗಿಸುವಲ್ಲಿ ಜನಪ್ರೀಯತೆಯನ್ನು ಪಡೆದುಕೊಂಡಿದೆ. ಹೀಗಾಗಿ ಸಂಸ್ಥೆಯು ಪ್ರತೀ ತಿಂಗಳು ಕಾರು ಮಾರಾಟದಲ್ಲಿ ಮೊದಲ ಸ್ಥಾನವನ್ನು ಪಡೆಯುತ್ತಿರುವ ಮಾರುತಿ ಸುಜುಕಿ ಅಗ್ಗದ ಬೆಲೆಯಲ್ಲಿ ಇನ್ನೂ ಹೆಚ್ಚಿನ ವಾಹನಗಳನ್ನು ಗ್ರಾಹಕರಿಗೆ ನೀಡಲು ಮುಂದಾಗುತ್ತಿದ್ದಾರೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಈ ನಿಟ್ಟಿನಲ್ಲಿ ಮಾರುತಿ ಸುಜುಕಿ ಸಂಸ್ಥೆಯು ಹಬ್ಬದ ಋತುವಿನಲ್ಲಿ ಎಸ್‍-ಪ್ರೆಸ್ಸೊ ಎಂಬ ಮಿನಿ ಕಾರು, ಎರ್ಟಿಗಾ ಕಾರಿನ ವಿನ್ಯಾಸವನ್ನು ಪಡೆದ ಎಕ್ಸ್ಎಲ್6 ಎಂಬ ಎಂಪಿವಿ ಕಾರುಗಳನ್ನು ಬಿಡುಗಡೆ ಮಾದಲಿದೆ. ಹಾಗೆಯೆ ವರದಿ ಪ್ರಕಾರ ಸಂಸ್ಥೆಯು ತಮ್ಮ ಎಂಟ್ರಿ ಲೆವೆಲ್ ಪ್ರೀಮಿಯಂ ಹ್ಯಾಚ್‍‍ಬ್ಯಾಕ್ ಆದ ಇಗ್ನಿಸ್ ಕಾರಿನ ಫೇಸ್‍ಲಿಫ್ಟ್ ಮಾದರಿಯನ್ನು ಸಹ ನವೆಂಬರ್ ಒಳಗೆ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಬಿಎಸ್-4 ಎಂಜಿನ್ ಮಾದರಿಗಳಿಂದ ಬಿಎಸ್-6 ವೈಶಿಷ್ಟ್ಯತೆಗೆ ಅನುಗುಣವಾಗಿ ಹೊಸ ಕಾರು ಆವೃತ್ತಿಗಳನ್ನು ಉನ್ನತಕರಿಸುವ ಪ್ರಕ್ರಿಯೆಗೆ ಮಾರುತಿ ಸುಜುಕಿ ಸಂಸ್ಥೆಯು ಈಗಾಗಲೇ ಚಾಲನೆ ನೀಡಿದ್ದು, ಬಲೆನೊ, ಸ್ವಿಫ್ಟ್, ಆಲ್ಟೋ ಮತ್ತು ವ್ಯಾಗನ್ಆರ್ ನಂತರ ಇದೀಗ ಮತ್ತೊಂದು ಜನಪ್ರಿಯ ಮಾದರಿಯಾದ ಇಗ್ನಿಸ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಸಹ ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸುವ ಯೋಜನೆಯಲ್ಲಿದೆಯೆಂತೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಹೌದು, 2020ರ ಏಪ್ರಿಲ್ 1ರಿಂದ ಕಡ್ಡಾಯಗೊಳ್ಳಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಬಹುತೇಕ ಸಂಸ್ಥೆಗಳು ಹೊಸ ಎಂಜಿನ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಇದರಲ್ಲಿ ಮಾರುತಿ ಸುಜುಕಿ ಸಂಸ್ಥೆಯು ಇತರೆ ಆಟೋ ಉತ್ಪಾದನಾ ಸಂಸ್ಥೆಗಳಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಡೆಡ್‌ಲೈನ್‌ಗೂ ಮುನ್ನವೇ ಬಿಎಸ್-6 ಕಾರುಗಳ ಬಿಡುಗಡೆಗೆ ಚಾಲನೆ ನೀಡಿದೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ದೇಶಾದ್ಯಂತ ಬಿಎಸ್-6 ಪ್ರೇರಿತ ವಾಹನಗಳನ್ನು ಕಡ್ಡಾಯಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯೊಂದನ್ನು ಜಾರಿಗೊಳಿಸುತ್ತಿದ್ದು, ಅವಧಿಗೂ ಮುನ್ನವೇ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ಎಂಜಿನ್‌ ಪ್ರೇರಿತ ಕಾರುಗಳನ್ನು ಬಿಡುಗಡೆ ಮಾಡುತ್ತಿರುವುದು ಹೊಸ ಸಂಚಲನಕ್ಕೆ ಕಾರಣವಾಗಿದೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಕೆಲವು ದಿನಗಳ ಹಿಂದಷ್ಟೇ ಬಿಎಸ್-6 ಪ್ರೇರಿತ ಬಲೆನೊ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದ ಮಾರುತಿ ಸುಜುಕಿ ಸಂಸ್ಥೆಯು ಕಳೆದ ವಾರಷ್ಟೇ ಸ್ವಿಫ್ಟ್ ಮತ್ತು ವ್ಯಾಗನ್‌ಆರ್ ಕಾರುಗಳ ಪೆಟ್ರೋಲ್ ಮಾದರಿಯನ್ನು ಹೊಸ ನಿಯಮಗಳಿಗೆ ಉನ್ನತಿಕರಿಸಿ ಬಿಡುಗಡೆ ಮಾಡಿತ್ತು. ಇದೀಗ ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಇಗ್ನಿಸ್ ಫೇಸ್‌ಲಿಫ್ಟ್ ಕಾರನ್ನು ಸಹ ಹೊಸ ನಿಯಮದಂತೆ ಬಿಡುಗಡೆಗೊಳಿಸುತ್ತಿದೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಹೊಸ ನಿಯಮದಿಂದಾಗಿ ಇಗ್ನಿಸ್ ಫೇಸ್‌ಲಿಫ್ಟ್, ಸ್ವಿಫ್ಟ್ ಮತ್ತು ವ್ಯಾಗನ್ಆರ್ ಪೆಟ್ರೋಲ್ ಮಾದರಿಗಳಲ್ಲಿ ಕೆಲವು ತಾಂತ್ರಿಕ ಬದಲಾವಣೆಗಳಾಗಿದ್ದು, ಸುಧಾರಿತ ಎಂಜಿನ್ ಜೊತೆಗೆ ಕೆಲವು ಸುಧಾರಿತ ಮಾದರಿಯ ಸುರಕ್ಷಾ ಸೌಲಭ್ಯಗಳನ್ನು ಕಡ್ಡಾಯವಾಗಿ ಜೋಡಣೆ ಹೊಂದಲಿವೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಹೀಗಾಗಿ ಈ ಹಿಂದಿಗಿಂತಲೂ ಉತ್ತಮ ಪರ್ಫಾಮೆನ್ಸ್ ಪಡೆದುಕೊಳ್ಳಲಿರುವ ಹೊಸ ಬಿಎಸ್-6 ಕಾರುಗಳಲ್ಲಿ ಡ್ಯುಯಲ್ ಚಾನೆಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸೀಟ್ ಬೆಲ್ಟ್ ರಿಮೆಂಡರ್, ಹೈ ಸ್ಪೀಡ್ ಅಲರ್ಟ್ ಸೇರಿದಂತೆ ಕೆಲವು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಜೊತೆಗೆ ಹೊಸ ಎಂಜಿನ್‌ ಮಾದರಿಯು ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಶೇ.25ರಷ್ಟು ಕಡಿತವಾಗಿದ್ದು, ಈ ಹಿಂದಿಗಿಂತಲೂ ಶೇ.10ರಿಂದ ಶೇ.15 ರಷ್ಟು ಹೆಚ್ಚು ಮೈಲೇಜ್ ನೀಡುವ ಮೂಲಕ ಮತ್ತಷ್ಟು ಹ್ಯಾಚ್‌ಬ್ಯಾಕ್ ಪ್ರಿಯರನ್ನು ಸೆಳೆಯುವ ತವಕದಲ್ಲಿದೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಹಾಗೆಯೇ ಬಿಎಸ್-6 ನಿಯಮದಿಂದಾಗಿ ಹೊಸ ಕಾರುಗಳ ಬೆಲೆಯೂ ಕೂಡಾ ತುಸು ದುಬಾರಿಯಾಗಿದ್ದು, ಸುಧಾರಿತ ಎಂಜಿನ್ ಮತ್ತು ಕೆಲವು ಸ್ಟ್ಯಾಂಡರ್ಡ್ ಸುರಕ್ಷಾ ಸೌಲಭ್ಯಗಳನ್ನು ಹೊರತುಪಡಿಸಿ ಯಾವುದೇ ಬದಲಾವಣೆಗಳನ್ನು ತರಲಾಗಿಲ್ಲ. ಇದರೊಂದಿಗೆ ಬಿಎಸ್-6 ವಾಹನಗಳ ಬೆಲೆಯು ಕೂಡಾ ದುಬಾರಿ ಎನ್ನಿಸಲಿದ್ದು, ಬಿಎಸ್-4 ವಾಹನಗಳ ಬೆಲೆಗಳಿಂತ ಬಿಎಸ್-6 ವಾಹನಗಳ ಬೆಲೆಯೂ ಸರಾಸರಿಯಾಗಿ ರೂ.80 ಸಾವಿರದಿಂದ ರೂ. 2.50 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.

ನವೆಂಬರ್ ಮುಗಿಯುವುದರೊಳಗೆ ಮಾರುತಿ ಸುಜುಕಿ ಇಗ್ನಿಸ್ ಫೇಸ್‍ಲಿಫ್ಟ್ ಬಿಡುಗಡೆ

ಇನ್ನು ಕೇಂದ್ರ ಸರ್ಕಾರವು ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಬಿಎಸ್-4 ಎಂಜಿನ್ ವಾಹನಗಳ ಮಾರಾಟವನ್ನು ನಿಷೇಧಿಸಿ 2020ರ ಏಪ್ರಿಲ್ 1ರಿಂದಲೇ ಬಿಎಸ್-6 ವಾಹನಗಳ ಮಾರಾಟವನ್ನು ಕಡ್ಡಾಯಗೊಳಿಸುತ್ತಿದ್ದು, ಈ ನಿಟ್ಟಿನಲ್ಲಿ ಮಾರುತಿ ಸುಜುಕಿ ಸಂಸ್ಥೆಯು ಹೊಸ ಎಂಜಿನ್‌ಗಳನ್ನು ಅವಧಿಗೂ ಮುನ್ನವೇ ಬಿಡುಗಡೆಗೊಳಿಸುತ್ತಿದೆ.

Most Read Articles

Kannada
English summary
Maruti Suzuki Ignis Facelift Launch Timeline Revealed. Read In Kannada
Story first published: Tuesday, July 30, 2019, 13:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X