ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಪ್ಯಾಸೆಂಜರ್ ಕಾರುಗಳಿಂದ ಜನಪ್ರಿಯತೆಯನ್ನು ಪಡೆಯುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಈ ವರ್ಷ ತಮ್ಮ ಉತ್ಪಾದನೆಯಲ್ಲಿ ಸಣ್ಣ ಕಾರನ್ನು ಬಿಡುಗಡೆ ಮಾಡುವ ಯೋಜನೆಯಲಿದ್ದು, ಮಾರುತಿ ಸುಜುಕಿ ಸಂಸ್ಥೆಯು ಬಿಡುಗಡೆ ಮಾಡಲಿರುವ ಮೈಕ್ರೋ ಎಸ್‍ಯುವಿ 2018ರ ಆಟೋ ಎಕ್ಸ್ ಪೋ ಮೇಳದಲ್ಲಿ ಪ್ರದರ್ಶಿಸಲಾದ ಫ್ಯುಚರ್ ಎಸ್, ಇದೀಗ ಸಂಸ್ಥೆಯು ಆ ಕಾರಿಗೆ ಎಸ್-ಪ್ರೆಸ್ಸೊ ಎಂದು ನಾಮಕರಣ ಮಾಡಿ ಬಿಡುಗಡೆ ಮಾಡಲಿದೆ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಬಿಡುಗಡೆಗೂ ಮುನ್ನವೇ ಹಲವಾರು ಬಾರಿ ಸ್ಪಾಟ್ ಟೆಸ್ಟಿಂಗ ಸಮಯದಲ್ಲಿ ಕಾಣಿಸಿಕೊಂಡಿದ್ದು, ಈ ಕಾರು ಮಾರುತಿ ಸುಜುಕಿ ಸಂಸ್ಥೆಯ ಮಾರಾಟದ ಶ್ರೇಣಿಯನ್ನು ಇನ್ನು ಹೆಚ್ಚಿನ ಸಂಖ್ಯೆಗೆ ಕೊಂಡೊಯ್ಯುವ ಸಾಧ್ಯತೆಗಳಿವೆ. ಎಸ್‍-ಪ್ರೆಸ್ಸೊ ಕಾರಿನ ಎದುರಾಳಿಗಾಗಿ ಮಾರಾಟವಾದ ಮಹೀಂದ್ರಾ ಸಂಸ್ಥೆಯ ಕೆಯುವಿ100 ಮೈಕ್ರೋ ಎಸ್‍ಯುವಿ ಮಾರುಕಟ್ಟೆಯಲ್ಲಿ ಹೆಚ್ಚು ಸದ್ದು ಮಾಡಲಿಲ್ಲ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಇದೀಗ ಮಾರುತಿ ಸುಜುಕಿ ಸಂಸ್ಥೆಯ ಎಸ್-ಪ್ರೆಸ್ಸೊ ಮೈಕ್ರೋ ಎಸ್‍ಯುವಿ ಕಾರು ಮುಂದಿನ ತಿಂಗಳು ಅಂದರೆ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದ್ದು, ಈ ಕಾರು ಕೇಂದ್ರ ಸರ್ಕಾರದ ಹೊಸ ನಿಯಮಾವಳಿಗಳ ಪ್ರಕಾರ ಹೊಸ ಎಂಜಿನ್ ಅನು ಸಹ ಹೊತ್ತು ಬರಲಿದೆ ಎನ್ನಲಾಗಿದೆ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಹೌದು, ಬಿಡುಗಡೆಯಾಗಲಿರುವ ಮಾರುತಿ ಸುಜುಕಿ ಎಸ್‍-ಪ್ರೆಸ್ಸೊ ಕಾರು ಬಿಎಸ್‍-6 ಆಧಾರಿತ ಪೆಟ್ರೋಲ್ ಎಂಜಿನ್ ಅನ್ನು ಪಡೆದುಕೊಳ್ಳಲಿದ್ದು, ಈ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಅಥವಾ 5 ಸ್ಪೀಡ್ ಆಟೋಮ್ಯಾಟಿಕ್ ಎಎಂಟಿ ಗೇರ್‍‍ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿರಲಿದೆ. ಗಾಡಿವಾಡಿ ವರದಿ ಪ್ರಕಾರ ಈ ಕಾರು ಆಗಸ್ಟ್ ಮುಗಿಯುವುದರ ಒಳಗೆ ಬಿಡುಗಡೆಯಾಗಲಿದೆ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಮಧ್ಯಮ ವರ್ಗದ ಗ್ರಾಹಕರನ್ನು ಗುರಿಯಾಗಿಸಿ ಕೈಗೆಟುಕುವ ಬೆಲೆಯ ಕಾರು ಮಾದರಿಗಳನ್ನು ಪರಿಚಯಿಸುವುದರಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ಸಂಸ್ಥೆಯು ದೇಶದಲ್ಲಿ ಮಾರಾಟವಾಗುತ್ತಿರುವ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಮೊದಲ ಆರು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಶೇ.40 ರಷ್ಟು ಕಾರು ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಇದೀಗ ಮತ್ತೊಂದು ಗೇಮ್‌ಚೆಂಜರ್ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಕಾರಿನ ವಿನ್ಯಾಸಗಳನ್ನು ಗಮನಿಸಿದ್ದಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳಿಂತಲೂ ವಿಭಿನ್ನ ಎನ್ನಿಸುವ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳು 4 ಮೀಟರ್‌ಗಿಂತಲೂ ಕಡಿಮೆ ಉದ್ದಳತೆ ಹೊಂದಿರಲಿದ್ದು, ಎ-ಪಿಲ್ಲರ್ ವಿಭಾಗದಲ್ಲಿನ ಹೊಸ ವಿನ್ಯಾಸದೊಂದಿಗೆ ಚಾಲಕನಿಗೆ ಅನುಕೂಲಕರ ಚಾಲನಾ ಸೌಲಭ್ಯಗಳನ್ನು ಒದಗಿಸಲಿದೆ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಹೀಗಾಗಿ ವಿಟಾರಾ ಬ್ರೆಝಾ ಕಾರುಗಳಂತೆ ವಿಶೇಷ ಸೌಲಭ್ಯ ಹೊಂದಲಿರುವ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳು ಗಾತ್ರದಲ್ಲಿ ಚಿಕ್ಕದಾದರೂ ಅತ್ಯುತ್ತಮ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಹೊಂದಿರಲಿದ್ದು, ವ್ಯಯಕ್ತಿಕ ಬಳಕೆಗಾಗಿ ಈ ಕಾರು ಅತಿಹೆಚ್ಚು ಸೃಷ್ಠಿಸುವ ನೀರಿಕ್ಷೆಯಿದೆ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಈ ಮೂಲಕ ನಗರ ಪ್ರದೇಶಗಳಲ್ಲಿನ ಟ್ರಾಫಿಕ್ ದಟ್ಟಣೆಯಲ್ಲೂ ಸಲೀಸಾಗಿ ಸಾಗಬಲ್ಲ ಗುಣಹೊಂದಿರುವ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳು ಸ್ಪೋರ್ಟಿ ಕಾರು ಪ್ರಿಯರನ್ನು ಸೆಳೆಯಬಹುದಾದ ಅಲಾಯ್ ಚಕ್ರಗಳು, ಹೈ ಮೌಟೆಂಡ್ ಲೈಟ್ಸ್ ಒದಗಿಸಿರುವುದು ಕಾರಿನ ಅಂದವನ್ನು ಹೆಚ್ಚಿಸಿದೆ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಕಾರಿನ ಬೆಲೆಗಳು(ಅಂದಾಜು)

ಗಾತ್ರದಲ್ಲಿ 4 ಮೀಟರ್‌ಗಿಂತಲೂ ಚಿಕ್ಕದಿರುವ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳ ಮೇಲೆ ಕೆಲವು ತೆರಿಗೆ ವಿನಾಯ್ತಿಗಳನ್ನು ದೊರೆಯಬಹುದಾಗಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರಂ ಪ್ರಕಾರ ರೂ. 4.50 ಲಕ್ಷದಿಂದ ರೂ. 5 ಲಕ್ಷದ ತನಕ ಬೆಲೆ ಹೊಂದಬಹುದು ಎನ್ನಲಾಗಿದೆ.

ಬಿಎಸ್-6 ಆಧಾರಿತ ಎಂಜಿನ್ ಹೊತ್ತು ಬರಲಿದೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಒಟ್ಟಿನಲ್ಲಿ ಸಣ್ಣ ಗಾತ್ರದ ಕಾರುಗಳಲ್ಲೇ ವಿಭಿನ್ನ ಎನ್ನಿಸಲಿರುವ ಮಾರುತಿ ಸುಜುಕಿ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳು ದೇಶದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಈ ಕಾರು ಬಹುದೊಡ್ಡ ಬದಲಾವಣೆಗೆ ಕಾರಣವಾಗಲಿದೆ ಎನ್ನಬಹುದು.

Article Published On: Saturday, July 6, 2019, 14:23 [IST]
English summary
Maruti Suzuki Likely To Launch S-Presso Micro-SUV Next Month
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+