ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಭಾರತೀಯ ಆಟೋ ಉದ್ಯಮದಲ್ಲಿ ಹೊಸ ವಾಹನಗಳ ಮಾರಾಟ ಪ್ರಮಾಣವು ದಿನದಿಂದ ದಿನಕ್ಕೆ ಕುಸಿಯುತ್ತಲೇ ಇದ್ದು, ಅತಿ ಹೆಚ್ಚು ಕಾರು ಮಾರಾಟ ಮಾಡುವ ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನಗಳ ಮಾರಾಟ ಮಾಡಲು ಕೂಡಾ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಆಟೋ ಉದ್ಯಮದಲ್ಲಿನ ಕೆಲವು ಬದಲಾವಣೆಯಿಂದಾಗಿ ಹೊಸ ವಾಹನಗಳ ಮಾರಾಟ ಪ್ರಮಾಣವು ಮಂದಗತಿಯಲ್ಲಿ ಸಾಗಿದ್ದು, ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಹಿನ್ನಡೆ ಅನುಭವಿಸಿವೆ. ಕೇಂದ್ರ ಸರ್ಕಾರವು ಹೆಚ್ಚುತ್ತಿರುವ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್ ವಾಹನಗಳ ಸಂಖ್ಯೆಗೆ ಕಡಿವಾಣ ಹಾಕಲು ಹಲವು ಕಠಿಣ ಕ್ರಮಗಳನ್ನು ಜಾರಿಗೆ ತಂದಿದ್ದು, ಎಲೆಕ್ಟ್ರಿಕ್ ವಾಹನ ಮೇಲಿನ ಜಿಎಸ್‌ಟಿ ತಗ್ಗಿಸಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮೇಲಿನ ಜಿಎಸ್‌ಟಿ ಹೆಚ್ಚಿರುವುದು ಹೊಸ ವಾಹನಗಳ ಮಾರಾಟದ ಮೇಲೆ ಪ್ರತಿಕೂಲಕರ ಪರಿಣಾಮ ಬೀರಿದೆ.

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಇದರಿಂದ ಕಳೆದ 19 ವರ್ಷಗಳ ಅವಧಿಯಲ್ಲೇ ಮೊದಲ ಬಾರಿಗೆ ಆಟೋ ಉತ್ಪಾದನಾ ವಲಯವು ಭಾರೀ ಪ್ರಮಾಣದ ಹಿನ್ನಡೆ ಅನುಭವಿಸಿದ್ದು, ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಹೊಸ ಕಾರುಗಳ ಉತ್ಪಾದನೆಯನ್ನೇ ತಾತ್ಕಲಿಕವಾಗಿ ಬಂದ್ ಮಾಡಿದ್ದಲ್ಲದೆ ಉದ್ಯೋಗಿಗಳ ಪ್ರಮಾಣಕ್ಕೂ ಕತ್ತರಿ ಹಾಕಿವೆ.

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಅದರಲ್ಲೂ ಕಾರು ಮಾರಾಟದಲ್ಲಿ ನಂ.1 ಸ್ಥಾನದಲ್ಲಿರುವ ಮಾರುತಿ ಸುಜುಕಿ ಸಂಸ್ಥೆಗೂ ಕೂಡಾ ಈ ಬಾರಿ ಸಾಕಷ್ಟು ಹಿನ್ನಡೆಯಾಗಿದ್ದು, ಕಳೆದ 2 ವರ್ಷಗಳಲ್ಲೇ ಮೊದಲ ಬಾರಿಗೆ ಅತಿ ಕಡಿಮೆ ಪ್ರಮಾಣದ ಕಾರು ಮಾರಾಟ ಪ್ರಮಾಣವನ್ನು ದಾಖಲಿಸಿದೆ.

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

2017ರ ಜೂನ್‌ನಲ್ಲಿ ಶೇ.46.9 ರಷ್ಟು ಹಿನ್ನಡೆ ಅನುಭವಿಸಿ ಮತ್ತೆ ಚೇತರಿಸಿಕೊಂಡಿದ್ದ ಮಾರುತಿ ಸುಜುಕಿ ಸಂಸ್ಥೆಯು ಇದೀಗ ಮತ್ತೊಮ್ಮೆ ತೀವ್ರ ಕುಸಿತಕ್ಕೆ ಕಾರಣವಾಗಿದ್ದು, 2019ರ ಅಗಸ್ಟ್ ಅವಧಿಯಲ್ಲಿ ಶೇ.47.4 ಕಾರು ಮಾರಾಟ ಪ್ರಮಾಣವು ಕುಸಿತ ಕಂಡಿದೆ.

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಆಟೋ ಉತ್ಪಾದನಾ ನಿಯಮಾವಳಿಗಳಲ್ಲಿ ನಿರಂತರ ಬದಲಾವಣೆ ಮತ್ತು ಇಂಧನ ಆಧರಿತ ವಾಹನಗಳ ನೋಂದಣಿಯ ಮೇಲೆ ಗರಿಷ್ಠ ಪ್ರಮಾಣದ ಜಿಎಸ್‌ಟಿ ಶುಲ್ಕ ವಿಧಿಸುತ್ತಿರುವುದು ದೇಶಿಯ ಆಟೋ ಮಾರುಕಟ್ಟೆಯಲ್ಲಿ ಪ್ರತಿಕೂಲಕರ ವಾತಾವರಣ ಸೃಷ್ಠಿಯಾಗಿದೆ. ಕೇಂದ್ರ ಸರ್ಕಾರವು ಕಳೆದ ತಿಂಗಳ ಹಿಂದಷ್ಟೇ ಡೀಸೆಲ್ ಮತ್ತು ಪೆಟ್ರೋಲ್ ಎಂಜಿನ್ ವಾಹನಗಳ ಮೇಲೆ ಶೇ.18ರಷ್ಟಿದ್ದ ಜಿಎಸ್‌ಟಿ ಪ್ರಮಾಣವನ್ನು ಶೇ.28ಕ್ಕೆ ಏರಿಕೆ ಮಾಡಲಾಗಿದ್ದು, ಹೊಸ ವಾಹನಗಳ ಬೆಲೆಯು ಸತತ ಏರಿಕೆಯಿಂದಾಗಿ ಮಾರಾಟ ಪ್ರಮಾಣವು ಕೂಡಾ ಅಷ್ಟೇ ವೇಗದಲ್ಲಿ ಕುಸಿತ ಕಾಣುತ್ತಿದೆ.

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಜೊತೆಗೆ ಸಾಂಪ್ರಾದಾಯಿಕ ವಾಹನಗಳ ಮೇಲಿನ ಜಿಎಸ್‌ಟಿ ಹೆಚ್ಚಳದಿಂದ ಹೊಸ ವಾಹನ ಮಾರಾಟದ ಮೇಲೆ ಅಷ್ಟೇ ಅಲ್ಲದೇ ಆಟೋ ಉದ್ಯಮವನ್ನೇ ನೆಚ್ಚಿಕೊಂಡಿರುವ ಲಕ್ಷಾಂತರ ಸಣ್ಣ ಉದ್ಯಮಗಳ ಮೇಲೂ ಪ್ರತಿಕೂಲಕರ ಪರಿಣಾಮ ಬೀರಿದೆ.

MOST READ: ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಇನ್ನು ಕುಸಿದಿರುವ ಆಟೋ ಉದ್ಯಮ ಸುಧಾರಣೆಗೆ ಜಿಎಸ್‌ಟಿ ಇಳಿಕೆ ಕುರಿತಂತೆ ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದು, ತಾತ್ಕಾಲಿಕವಾಗಿ ಹಿನ್ನಡೆ ಅನುಭಸಿರುವ ಕಾರಣಕ್ಕೆ ಜಿಎಸ್‌ಟಿ ಇಳಿಕೆಯಂತಹ ಕ್ರಮಕೈಗೊಳ್ಳುವುದು ಆರ್ಥಿಕತೆ ಮೇಲೆ ಮತ್ತಷ್ಟು ಪರಿಣಾಮ ಬೀರಬಹುದು ಎನ್ನಲಾಗಿದೆ.

MOST READ: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುಗೆ ದುಬಾರಿ ಕಾರು ಗಿಫ್ಟ್ ಕೊಟ್ಟ ನಟ ನಾಗಾರ್ಜುನ

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಕೇವಲ ಜಿಎಸ್‌ಟಿ ಹೆಚ್ಚಳದಿಂದಾಗಿ ಆಟೋ ಉದ್ಯಮವು ಹಿನ್ನಡೆ ಅನುಭವಿಸುತ್ತಿದೆ ಎನ್ನುವ ಅಭಿಪ್ರಾಯವನ್ನು ತಳ್ಳಿಹಾಕಿರುವ ಜಿಎಸ್‌ಟಿ ಕೌನ್ಸಿಲ್, ವಾಹನ ಮಾರಾಟ ಇಳಿಕೆಗೆ ವಿವಿಧ ಕಾರಣಗಳನ್ನು ಪಟ್ಟಿ ಮಾಡಿದೆ.

MOST READ: ಅಚ್ಚರಿಯಾದ್ರು ಸತ್ಯ: ಎತ್ತಿನ ಗಾಡಿಗೂ ದುಬಾರಿ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು..!

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಹೀಗಾಗಿ ಇಂಧನ ಆಧರಿತ ವಾಹನಗಳ ಮೇಲಿನ ಜಿಎಸ್‌ಟಿ ಇಳಿಕೆಯ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದ್ದು, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಂದ ಹೊಸ ವಾಹನ ಖರೀದಿಗೆ ಸಾಲಸೌಲಭ್ಯ ಸಿಗದಿರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ದೇಶಾದ್ಯಂತ ಶೇ.80 ರಷ್ಟು ಹೊಸ ವಾಹನಗಳ ಖರೀದಿ ಪ್ರಕ್ರಿಯೆಯು ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಅಲಂಬಿಸಿದ್ದು, ಇದೀಗ ಸಂಕಷ್ಟದಲ್ಲಿರುವುದು ಆಟೋ ಉದ್ಯಮದ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ.

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಇದರಿಂದ ಜಿಎಸ್‌ಟಿ ಹೆಚ್ಚಳವೇ ವಾಹನ ಮಾರಾಟ ಕುಸಿತಕ್ಕೆ ಪ್ರಮುಖ ಕಾರಣ ಎನ್ನುವುದನ್ನು ತಳ್ಳಿಹಾಕುತ್ತಿರುವ ಜಿಎಸ್‌ಟಿ ಮಂಡಳಿಯು ಆಟೋ ಉದ್ಯಮವು ಈ ಹಿಂದೆಯೂ 2009 ಮತ್ತು 2014ರಲ್ಲೂ ಇಂತದ್ದೆ ಪರಿಸ್ಥಿತಿ ಎದುರಿಸಿತ್ತು, ಈ ಹಿನ್ನಲೆಯಲ್ಲಿ ಮುಂದಿನ ಕೇವಲ ದಿನಗಳಲ್ಲಿ ಪರಿಸ್ಥಿತಿ ಸುಧಾರಣೆಯಾಗುವ ವಿಶ್ವಾಸ ವ್ಯಕ್ತಪಡಿಸಿದೆ.

ಕಾರು ಮಾರಾಟದಲ್ಲಿ ಸತತ ಹಿನ್ನಡೆ- ಅಗಸ್ಟ್‌ ಅವಧಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಮಾರುತಿ ಸುಜುಕಿ

ಇದರೊಂದಿಗೆ ವಾಹನ ಮಾರಾಟ ಕುಸಿತಕ್ಕೆ 2020ರ ಏಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್-6 ವಾಹನಗಳ ಕಡ್ಡಾಯ ಮಾರಾಟವು ಸಹ ಪ್ರಸ್ತುತ ಬಿಎಸ್-4 ವಾಹನಗಳಿಗೆ ಹಿನ್ನಡೆಯಾಗುತ್ತಿದ್ದು, ಜಿಎಸ್‌ಟಿ ಇಳಿಕೆಯೊಂದೆ ಇದಕ್ಕೆ ಪರಿಹಾರವಲ್ಲ ಎನ್ನಲಾಗುತ್ತಿದೆ.

Most Read Articles

Kannada
English summary
Maruti Suzuki market share dropped to 47.4 per cent in August.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X