ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಕೇಂದ್ರ ಸರ್ಕಾರವು ಕುಸಿತ ಕಂಡಿರುವ ವಾಹನ ಉದ್ಯಮ ಸುಧಾರಣೆಗಾಗಿ ಕಳೆದ 2 ದಿನಗಳ ಹಿಂದೆ ಕೆಲವು ಮಹತ್ವದ ಕ್ರಮಗಳನ್ನು ಪ್ರಕಟಿಸಿದ್ದು, ಇದರಲ್ಲಿ ಪ್ರಮುಖವಾಗಿ ಕಾರ್ಪೊರೇಟ್ ತೆರಿಗೆಯಲ್ಲಿ ಇಳಿಕೆ ಮಾಡಿರುವುದು ವಾಹನ ಉದ್ಯಮಕ್ಕೆ ವರದಾನವಾಗಲಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಅಕ್ಟೋಬರ್ 1ರಿಂದ ಅನ್ವಯವಾಗುವಂತೆ ಕಾರ್ಪೊರೇಟ್ ತೆರಿಗೆ ಪ್ರಮಾಣವನ್ನು ಶೇ.21.55ರಿಂದ ಶೇ.17.16ಕ್ಕೆ ಇಳಿಕೆ ಮಾಡಲಾಗಿದ್ದು, ಇದು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳುವ ಆಟೋ ಬಿಡಿಭಾಗಗಳ ಬೆಲೆ ಇಳಿಕೆ ಸಾಕಷ್ಟು ಸಹಕಾರಿಯಾಗಿದೆ. ಅದರಲ್ಲೂ ಎಲೆಕ್ಟ್ರಿಕ್ ವಾಹನ ಪ್ರಮುಖ ತಾಂತ್ರಿಕ ಅಂಶವಾಗಿರುವ ಲೀಥಿಯಂ ಅಯಾನ್ ಬ್ಯಾಟರಿ ಮೇಲಿನ ಅಧಿಕ ತೆರಿಗೆ ಹೊರೆಯನ್ನು ಕಡಿತಗೊಳಿಸಿದ್ದು, ಇದು ನೇರವಾಗಿ ವಾಹನದ ಮೂಲ ಬೆಲೆಯನ್ನು ತಗ್ಗಿಸಲಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಭಾರತೀಯ ಆಟೋ ಉತ್ಪಾದನಾ ಸಂಸ್ಥೆಗಳು ಹೆಚ್ಚಾಗಿ ಲೀಥಿಯಂ ಅಯಾನ್ ಬ್ಯಾಟರಿ, ಏರ್‌ಬ್ಯಾಗ್, ಸೆನ್ಸಾರ್ ಮತ್ತು ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಬಿಡಿಭಾಗಗಳನ್ನು ವಿದೇಶಿ ಮಾರುಕಟ್ಟೆಯಿಂದಲೇ ಆಮದು ಮಾಡಿಕೊಳ್ಳುತ್ತಿದ್ದು, ಕಾರ್ಪೊರೇಟ್ ತೆರಿಗೆ ಇಳಿಕೆಯಿಂದಾಗಿ ವಾಹನ ಬೆಲೆಯಲ್ಲಿ ಕಡಿತವನ್ನು ನೀರಿಕ್ಷಿಸಲಾಗಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಇದಲ್ಲದೇ ಸ್ಥಳೀಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನಾ ಘಟಕ ನಿರ್ಮಾಣ ಮಾಡುವ ಸಂಸ್ಥೆಗಳಿಗೆ ಹೆಚ್ಚಿನ ಅನುಕೂಲವಿದ್ದು, ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಮೇಲೆ ಬೃಹತ್ ಪ್ರಮಾಣದ ಬಂಡವಾಳ ಹೂಡಿಕೆ ಮಾಡುತ್ತಿರುವ ಆಟೋ ಉತ್ಪಾದನಾ ಸಂಸ್ಥೆಗಳನ್ನು ಮತ್ತಷ್ಟು ಆಕರ್ಷಿಸಲಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಕಾರ್ಪೊರೇಟ್ ತೆರಿಗೆ ಇಳಿಕೆಯನ್ನು ಸ್ವಾಗತಿಸಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಭವಿಷ್ಯ ವಾಹನ ಮಾದರಿಗಳ ಮೇಲೆ ಹೆಚ್ಚಿನ ಒತ್ತು ನೀಡುವ ಭರವಸೆ ವ್ಯಕ್ತಪಡಿಸಿದ್ದು, ಇದರಲ್ಲಿ ಮಾರುತಿ ಸುಜುಕಿಯು ಸಹ ಕೇಂದ್ರ ನಿರ್ಧಾರವನ್ನು ಸ್ವಾಗತಿಸಿರುವುದಲ್ಲದೇ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಇಳಿಕೆ ಮಾಡುವುದಾಗಿ ಘೋಷಣೆ ಮಾಡಿದೆ. ಹೊಸ ತೆರಿಗೆ ಜಾರಿ ದಿನದಂದೆ ಕಾರುಗಳ ಬೆಲೆ ಇಳಿಕೆ ಪಟ್ಟಿಯನ್ನು ಪ್ರಕಟಿಸುವುದಾಗಿ ತಿಳಿಸಿದ್ದು, ಹೈಬ್ರಿಡ್ ವಾಹನಗಳ ಮೇಲೆ ಹೆಚ್ಚಿನ ಒತ್ತುನೀಡುವುದಾಗಿ ಭರವಸೆ ನೀಡಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಹೊಸ ತೆರಿಗೆ ಪದ್ದತಿಯಿಂದ ಇಂಧನ ಆಧರಿತ ವಾಹನಗಳಿಂತ ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳು ಸ್ಥಳೀಯವಾಗಿಯೇ ಬಿಡಿಭಾಗಗಳನ್ನು ಉತ್ಪಾದನೆ ಮಾಡಲು ಕಾರ್ಪೊರೇಟ್ ತೆರಿಗೆ ಇಳಿಕೆಯು ಪ್ರಮುಖ ಆಕರ್ಷಣೆಯಾಗಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಇನ್ನು ಕೇಂದ್ರ ಸರ್ಕಾರವು ಇಂಧನ ಆಧರಿತ ವಾಹನಗಳ ಮಾರಾಟವನ್ನು ಕಡಿತಗೊಳಿಸಲು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ಸಂಬಂಧ ಕಾರ್ಪೊರೇಟ್ ತೆರಿಗೆ ಸೇರಿದಂತೆ ಈಗಾಗಲೇ ಹಲವಾರುವ ವಿನೂತನ ಯೋಜನೆಗಳನ್ನು ಜಾರಿಗೆ ಮಾಡಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಈ ಹಿಂದೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಇದ್ದ ಜಿಎಸ್‌ಟಿ ಪ್ರಮಾಣವನ್ನು ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಿರುವುದಲ್ಲದೇ ಗ್ರಾಹಕರಿಗೆ ಸಬ್ಸಡಿ ಯೋಜನೆಯನ್ನು ಸಹ ಜಾರಿಗೆ ತಂದಿದ್ದು, 1.5 ಲಕ್ಷದ ತೆರಿಗೆ ವಿನಾಯ್ತಿ ಕೂಡಾ ದೊರೆಯುತ್ತಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಇಂಧನ ಆಧರಿತ ವಾಹನಗಳನ್ನು ಕಡಿತಗೊಳಿಸಿ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಪ್ರಕಟಿಸುತ್ತಿರುವ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಮೂಲಕ ಹಲವು ಹೊಸ ಬದಲಾವಣೆಗೆ ಕಾರಣವಾಗಿದೆ.

ತೆರಿಗೆ ಹೊರೆ ಇಳಿಸಿದ ಕೇಂದ್ರ ಸರ್ಕಾರ- ಕಾರುಗಳ ಬೆಲೆ ಇಳಿಕೆ ಮಾಡುವುದಾಗಿ ಘೋಷಿಸಿದ ಮಾರುತಿ ಸುಜುಕಿ

ಫೇಮ್ 2 ಯೋಜನೆಯನ್ನು 2018ರಿಂದ 2022ರ ಅವಧಿಗೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಸುಮಾರು 10 ಸಾವಿರ ಕೋಟಿ ಹಣ ಮಿಸಲಿಟ್ಟಿದ್ದು, ಎಲೆಕ್ಕ್ರಿಕ್ ಕಾರು ಉತ್ಪಾದನಾ ಸಂಸ್ಥೆಗಳಿಗೆ ಮಾತ್ರವಲ್ಲದೇ ಇವಿ ಖರೀದಿದಾರರಿಗೂ ಸಬ್ಸಡಿ, ತೆರಿಗೆ ವಿನಾಯ್ತಿ ಸೇರಿದಂತೆ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ.

More from DriveSpark

Article Published On: Tuesday, September 24, 2019, 12:41 [IST]
English summary
Maruti Suzuki May Cut Prices Following Corporate Tax Reduction.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+