ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

2020ರ ಏಪ್ರಿಲ್‌ನಿಂದ ಬಿಎಸ್-6 ನಿಯಮವು ಕಡ್ಡಾಯವಾಗುತ್ತಿರುವ ಹಿನ್ನಲೆಯಲ್ಲಿ ಕಡಿಮೆ ಸಾಮರ್ಥ್ಯದ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಕಡಿತಗೊಳಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಶೀಘ್ರದಲ್ಲೇ ಹೊಸ ನಿಯಮ ಅನುಸಾರವಾಗಿ ಅಭಿವೃದ್ದಿಗೊಂಡಿರುವ ಸುಧಾರಿತ ತಂತ್ರಜ್ಞಾನ ಪ್ರೇರಿತ ಡೀಸೆಲ್ ಎಂಜಿನ್ ಬಿಡುಗಡೆಗೊಳಿಸುತ್ತಿದೆ.

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಬಿಎಸ್-6 ನಿಯಮ ಪಾಲನೆ ಸಾಧ್ಯವಿಲ್ಲದ ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಕಾರುಗಳ ಆಯ್ಕೆಯನ್ನು ಕೈಬಿಡುತ್ತಿರುವ ಮಾರುತಿ ಸುಜುಕಿಯು ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರು ಆವೃತ್ತಿಗಳ ಮೇಲೆ ಹೆಚ್ಚಿನ ಗಮನಹರಿಸಿದ್ದು, ಆಯ್ದ ಕಾರು ಮಾದರಿಗಳಲ್ಲಿ ಮಾತ್ರವೇ ಹೊಸ ಮಾದರಿಯ ಡೀಸೆಲ್ ಎಂಜಿನ್ ಅಭಿವೃದ್ದಿಗೊಳಿಸಿದೆ. ಒಂದು ವೇಳೆ ಬಿಎಸ್-6 ನಿಯಮ ಅನುಸಾರವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಉನ್ನತೀಕರಣ ಮಾಡಿದರೂ ಸಹ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಇದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಹೀಗಾಗಿ ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರವೇ ಸಿಗಲಿದೆ.

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಎಂಟ್ರಿ ಲೆವಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರ 1.5-ಲೀಟರ್, 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದೆ.

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಮಾಹಿತಿಗಳ ಪ್ರಕಾರ, ಬ್ರೆಝಾ, ಎರ್ಟಿಗಾ, ಸಿಯಾಜ್, ಎಸ್-ಕ್ರಾಸ್ ಕಾರುಗಳಲ್ಲಿ ಹೊಸ 1.5-ಲೀಟರ್ ಡೀಸೆಲ್ ಎಂಜಿನ್ ಜೊತೆಗೆ 1.5-ಲೀಟರ್ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಳಲ್ಲಿ 1.6-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಲಭ್ಯವಾಗಲಿದೆ. ಮಾರುತಿ ಸುಜುಕಿಯು ಇತ್ತೀಚಿಗಷ್ಟೆ ಹೊಸ ತಂತ್ರಜ್ಞಾನ ಪ್ರೇರಿತ 1.5 ಲೀಟರ್ ಕೆ15 ಪೆಟ್ರೊಲ್ ಎಂಜಿನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಹೊಸ ಪೆಟ್ರೋಲ್ ಎಂಜಿನ್ ಅನ್ನು ಮೊದಲ ಬಾರಿಗೆ ಸಿಯಾಜ್ ಸೆಡಾನ್‍ನಲ್ಲಿ ನಂತರ ಎಕ್ಸ್ಎಲ್6 ಕಾರಿನಲ್ಲಿ ಅಳವಡಿಸಲಾಗಿತ್ತು.

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಇದೀಗ ಇದೇ ಎಂಜಿನ್ ಮಾದರಿಯನ್ನೇ ವಿಟಾರಾ ಬ್ರಿಝಾ, ಎಸ್ ಕ್ರಾಸ್ ಸೇರಿದಂತೆ ಇತರೆ ಕೆಲವು ಕಾರು ಮಾದರಿಗಳಲ್ಲೂ ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿದ್ದು, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮೂಲಕ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಮಾದರಿಯಷ್ಟೇ ಮೈಲೇಜ್ ಮತ್ತು ಪರ್ಫಾಮೆನ್ಸ್ ಒದಗಿಸಲಿದೆ.

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಹೊಚ್ಚ ಹೊಸ 1.5 ಲೀಟರ್ ಕೆ15 ಪೆಟ್ರೋಲ್ ಎಂಜಿನ್ ಮಾದರಿಯು ಬಿಎಸ್-6 ಪ್ರೇರಣೆಯೊಂದಿಗೆ ಅಭಿವೃದ್ಧಿ ಹೊಂದಿದ್ದು, ಉತ್ತಮ ಮೈಲೇಜ್‌ನೊಂದಿಗೆ 105-ಬಿಹೆಚ್‍ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

MOST READ: ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿಯು ವಿಟಾರಾ ಬ್ರೆಝಾ ಮತ್ತು ಎಸ್-ಕ್ರಾಸ್ ಮಾದರಿಗಳಲ್ಲಿ ಕೇವಲ 1.3-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರ ನೀಡಲಾಗುತ್ತಿದ್ದು, 82‍-ಬಿಎಚ್‍‍ಪಿ ಮತ್ತು 200-ಎನ್ಎಂ ಟಾರ್ಕ್ ಅನ್ನು ಉತ್ಪಾದನಾ ಗುಣಹೊಂದಿದೆ.

MOST READ: ಐಷಾರಾಮಿ ಕಾರ್ ಡೀಲರ್ ಆದ ಟೀ ಮಾರುತ್ತಿದ್ದ ಕನ್ನಡಿಗನ ರೋಚಕ ಕಥೆ

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಆದರೆ ಬಿಎಸ್-6 ನಿಯಮದ ಪ್ರಕಾರ ಈ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯು ಸಾಕಷ್ಟು ಸುಧಾರಣೆಯಾಗಬೇಕಿದ್ದು, ಒಂದು ವೇಳೆ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಉನ್ನತೀಕರಿಸಿದರೂ ಸಹ ದುಬಾರಿ ಬೆಲೆ ಪಡೆದುಕೊಳ್ಳಲಿದೆ.

MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?

ಆಯ್ದ ಕಾರು ಮಾದರಿಗಳಲ್ಲಿ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲಿದೆ ಮಾರುತಿ ಸುಜುಕಿ

ಇದರಿಂದ ಹೊಸ ಪೆಟ್ರೋಲ್ ಎಂಜಿನ್ ಆಯ್ಕೆಯತ್ತ ಮುಖ ಮಾಡಿರುವ ಮಾರುತಿ ಸುಜುಕಿ ಸಂಸ್ಥೆಯು ಕೆಲವೇ ಆಯ್ದ ಟಾಪ್ ಎಂಡ್ ಕಾರುಗಳಲ್ಲಿ ಮಾತ್ರವೇ ಬಿಎಸ್-6 ಪ್ರೇರಣೆಯ 1.5-ಲೀಟರ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡುತ್ತಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆ ಹೆಚ್ಚಲಿದೆ.

Most Read Articles

Kannada
English summary
Maruti planning 1.5l BS6 diesel engine for Ciaz, Ertiga and S-Cross, Before Vittaraa Brezza. Read in Kannada.
Story first published: Friday, December 13, 2019, 16:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X