ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ವರ್ಷದ ಆರಂಭದಿಂದಲೂ ಕಾರು ಮಾರಾಟದಲ್ಲಿ ಸತತ ಕುಸಿತ ಅನುಭವಿಸಿದ್ದ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ದೀಪಾವಳಿ ನಂತರ ಚೇತರಿಕೆ ಕಾಣುತ್ತಿದ್ದು, ಬರೋಬ್ಬರಿ 10 ತಿಂಗಳ ಬಳಿಕ ಮಾರುತಿ ಸುಜುಕಿ ಸಂಸ್ಥೆಯು ಕಾರು ಉತ್ಪಾದನಾ ಪ್ರಮಾಣವನ್ನು ಹೆಚ್ಚಳ ಮಾಡಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಸ್ಟಾಕ್ ಪ್ರಮಾಣವನ್ನು ಕಡಿತಗೊಳಿಸುವ ಸಂಬಂಧ ಕಾರು ಉತ್ಪಾದನಾ ಪ್ರಮಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕ್ರಮಕೈಗೊಂಡಿದ್ದ ಮಾರುತಿ ಸುಜುಕಿ ಸಂಸ್ಥೆಯು ಸಾವಿರಾರು ಅರೆಕಾಲಿಕ ಉದ್ಯೋಗಿಗಳನ್ನು ತೆಗೆದುಹಾಕಿತ್ತು. ಇದೀಗ ಮಾರುಕಟ್ಟೆ ಚೇತರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಪುನಃ ಶೇ. 4.3 ರಷ್ಟು ಕಾರು ಉತ್ಪಾದನಾ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದ್ದು, ಬಿಎಸ್-6 ಕಾರುಗಳ ಉತ್ಪಾದನೆ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಇನ್ನು ಮಾರುತಿ ಸುಜುಕಿ ಸಂಸ್ಥೆಯು ಹೊಸ ಕಾರುಗಳ ಬೆಲೆ ಹೆಚ್ಚಳಕ್ಕೆ ಮುಂದಾಗಿದ್ದು, ಕಾರು ಉತ್ಪಾದನಾ ಪ್ರಮಾಣವನ್ನು ಮಾಡಿದ ಬೆನ್ನಲ್ಲೇ ಬೆಲೆ ಏರಿಕೆಯ ನಿರ್ಧಾರವನ್ನು ಪ್ರಕಟಿಸಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ರೂಪಾಯಿ ಮೌಲ್ಯದಲ್ಲಿ ಸತತ ಕುಸಿತ ಮತ್ತು ಕಾರುಗಳ ಬಿಡಿಭಾಗಗಳ ಆಮದು ಮೇಲಿನ ಸುಂಕಗಳು ಹೆಚ್ಚಳಗೊಂಡಿರುವ ಹಿನ್ನೆಲೆ ಕಾರುಗಳ ಮೂಲ ದರವನ್ನು ಏರಿಕೆ ಮಾಡುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿಕೊಂಡಿರುವ ಮಾರುತಿ ಸುಜುಕಿಯು 2020ರ ಜನವರಿ 1ರಂದೇ ಪರಿಷ್ಕೃತ ದರದ ಪ್ರಕಾರವೇ ಹೊಸ ಬೆಲೆಗಳು ಅನ್ವಯವಾಗಲಿವೆ ಎಂದಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಹೀಗಾಗಿ ಡಿಸೆಂಬರ್ 31ರ ತನಕ ಮಾತ್ರವೇ ಹಳೆಯ ದರ ಅನ್ವಯವಾಗಲಿದ್ದು, ತದನಂತರ ಹೆಚ್ಚುವರಿ ದರ ಪಾವತಿಸಬೇಕಾಗುತ್ತದೆ. ಮಾಹಿತಿಗಳ ಪ್ರಕಾರ, ಮಾರುತಿ ಸುಜುಕಿ ಸಂಸ್ಥೆಯು ಕಾರುಗಳ ಬೆಲೆಯಲ್ಲಿ ಶೇ. 1.5 ರಿಂದ ಶೇ.3 ರಷ್ಟು ಹೆಚ್ಚಳ ಮಾಡುವ ಸುಳಿವು ನೀಡಿದ್ದು, ಎಂಟ್ರಿ ಲೆವಲ್ ಕಾರು ಮಾದರಿಯಾದ ಆಲ್ಟೋ 800 ಬೆಲೆಯಲ್ಲಿ ರೂ. 5 ಸಾವಿರದಿಂದ 08 ಸಾವಿರ ಮತ್ತು ಟಾಪ್ ಎಂಡ್ ಮಾದರಿಯಾದ ಎಸ್-ಕ್ರಾಸ್ ಎಸ್‌ಯುವಿ ಬೆಲೆಯಲ್ಲಿ ರೂ.10 ಸಾವಿರದಿಂದ ರೂ. 15 ಸಾವಿರ ಬೆಲೆ ಏರಿಕೆಯಾಗಲಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಹಾಗೆಯೇ ಕಳೆದ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿರುವ ಎಸ್-ಪ್ರೆಸ್ಸೊ ಕಾರಿನ ಬೆಲೆಯಲ್ಲೂ ದರಕ್ಕೆ ಅನುಗುಣವಾಗಿ ಶೇ. 2 ರಷ್ಟು ಬೆಲೆ ಹೆಚ್ಚಳವಾಗಲಿದ್ದು, ಹೊಸ ವರ್ಷದ ಆರಂಭದಲ್ಲಿ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಮತ್ತಷ್ಟು ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಮಾರುತಿ ಸುಜುಕಿಯು ತನ್ನ ಜನಪ್ರಿಯ ಕಾರುಗಳನ್ನು ಉನ್ನತೀಕರಿಸಿ ಮಾರಾಟ ಮಾಡುತ್ತಿದ್ದು, ಹೊಸ ನಿಯಮ ಜಾರಿಗೂ ಮುನ್ನವೇ ಬಿಎಸ್-6 ಎಂಜಿನ್ ಪ್ರೇರಿತ 3 ಲಕ್ಷಕ್ಕೂ ಹೆಚ್ಚು ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಆದರೆ ಡೀಸೆಲ್ ಎಂಜಿನ್‌ಗಳನ್ನು ಮಾತ್ರವೇ ಬಿಎಸ್-4 ನಿಯಮದಂತೆಯೇ ಮಾರಾಟ ಮಾಡುತ್ತಿದ್ದು, ಡೀಸೆಲ್ ಕಾರುಗಳನ್ನು ಸಹ 2020ರ ಏಪ್ರಿಲ್ ಒಳಗಾಗಿ ಹೊಸ ಎಂಜಿನ್‌ನೊಂದಿಗೆ ಉನ್ನತೀಕರಿಸಲು ಸಿದ್ದತೆ ನಡೆಸಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಸದ್ಯ ಮಾರುಕಟ್ಟೆಯಲ್ಲಿ ಬಲೆನೊ, ಆಲ್ಟೋ 800, ವ್ಯಾಗನ್‌ಆರ್, ಸ್ವಿಫ್ಟ್, ಡಿಜೈರ್, ಎರ್ಟಿಗಾ, ಎಕ್ಸ್ಎಲ್ 6 ಮತ್ತು ಎಸ್-ಪ್ರೆಸ್ಸೊ ಕಾರುಗಳ ಪೆಟ್ರೋಲ್ ಕಾರುಗಳನ್ನು ಬಿಎಸ್-6 ನಿಯಮದಂತೆ ಉನ್ನತೀಕರಿಸಲಾಗಿದ್ದು, ಬಿಎಸ್-4 ಕಾರುಗಳಿಂತೂ ತುಸು ಭಿನ್ನವಾಗಿರುವ ಹೊಸ ಕಾರುಗಳು ಮಾಲಿನ್ಯ ಹೊರಸೂಸುವಿಕೆ ಮತ್ತು ಮೈಲೇಜ್ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಬಿಎಸ್-6 ಪೆಟ್ರೋಲ್ ಕಾರುಗಳು ಬಿಎಸ್-4 ಕಾರುಗಳಿಂತಲೂ ರೂ.15 ಸಾವಿರದಿಂದ ರೂ.20 ಸಾವಿರದಷ್ಟು ದುಬಾರಿಯಾಗಿದ್ದರೆ ಡೀಸೆಲ್ ಎಂಜಿನ್ ಮಾತ್ರ ಪ್ರಸ್ತುತ ಮಾರುಕಟ್ಟೆಯಲ್ಲಿನ ಬಿಎಸ್-4 ಕಾರುಗಳಿಂತಲೂ ರೂ.90 ಸಾವಿರದಿಂದ ರೂ.2 ಲಕ್ಷದಷ್ಟು ದುಬಾರಿಯಾಗಲಿವೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಇದೇ ಕಾರಣಕ್ಕೆ ಮಾರುತಿ ಸುಜುಕಿ ಸಂಸ್ಥೆಯು ಅಗ್ಗದ ಬೆಲೆಯ ಕಾರುಗಳಲ್ಲಿ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸುವ ಯೋಜನೆಯನ್ನು ಕೈಬಿಡಲು ನಿರ್ಧರಿಸಿದ್ದು, ಕೇವಲ ಪೆಟ್ರೋಲ್, ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಒತ್ತುನೀಡಲು ನಿರ್ಧರಿಸಿದೆ.

ಬರೋಬ್ಬರಿ 10 ತಿಂಗಳ ನಂತರ ಮಾರುತಿ ಸುಜುಕಿ ಕಾರು ಉತ್ಪಾದನೆಯಲ್ಲಿ ಹೆಚ್ಚಳ

ಹೀಗಾಗಿ ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರ 1.5-ಲೀಟರ್, 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದೆ.

Most Read Articles

Kannada
English summary
Maruti Suzuki production increases in November after 10 months. Read in Kannada.
Story first published: Monday, December 9, 2019, 13:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X