ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಪ್ಯಾಸೆಂಜರ್ ಕಾರುಗಳಿಂದ ಜನಪ್ರಿಯತೆಯನ್ನು ಪಡೆಯುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಈ ವರ್ಷ ತಮ್ಮ ಉತ್ಪಾದನೆಯಲ್ಲಿ ಸಣ್ಣ ಕಾರನ್ನು ಬಿಡುಗಡೆ ಮಾಡುವ ಯೋಜನೆಯಲಿದ್ದು, ಮಾರುತಿ ಸುಜುಕಿ ಸಂಸ್ಥೆಯು ಬಿಡುಗಡೆ ಮಾಡಲಿರುವ ಆ ಸಣ್ಣ ಕಾರು ಯಾವುದು, ಬಿಡುಗಡೆಯ ಅವಧಿ ಮತ್ತು ಅದರ ವೈಶಿಷ್ಟ್ಯತೆಯನ್ನು ಈ ಲೇಖನದಲ್ಲಿ ಪಡೆಯಿರಿ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಮಾರುತಿ ಸುಜುಕಿ ಸಂಸ್ಥೆಯು ಕಳೆದ ವರ್ಷ ದೆಹಲಿಯಲ್ಲಿ ನಡೆದ 2018 ಆಟೋ ಎಕ್ಸ್ ಪೋ ಮೇಳದಲ್ಲಿ ತಮ್ಮ ಫ್ಯುಚುರ್-ಎಸ್ ಅನ್ನು ಅನಾವರಣಗೊಳಿಸಲಾಗಿದ್ದು, ಇದೀಗ ಕಾರಿನ ಹೆಸರನ್ನು ಎಸ್-ಪ್ರೆಸ್ಸೊ ಎಂದು ನಾಮಕರಣ ಮಾಡಲಾಗಿದೆ. ಈ ಕಾರು ಮಾರುಕಟ್ಟೆಗೆ ಲಗ್ಗೆಯಿಟ್ಟಲ್ಲಿ ಮಾರಾಟವಾಗುತ್ತಿರುವ ರೆನಾಲ್ಟ್ ಕ್ವಿಡ್, ಟಾಟಾ ಟಿಯಾಗೊ ಮತ್ತು ಮಹೀಂದ್ರಾ ಸಂಸ್ಥೆಯ ಕೆಯುವಿ100 ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಬಿಡುಗಡೆಯ ಅವಧಿ

ಕಾರ್‍‍ಟಾಕ್ ವರದಿ ಪ್ರಕಾರ 2018ರ ಆಟೋ ಎಕ್ಸ್ ಪೋ ಮೇಳದಲ್ಲಿ ಮೊದಲ ಬಾರಿಗೆ ಆನಾವರಣಗೊಂಡ ಎಸ್-ಪ್ರೆಸ್ಸೊ ಎಂಬ ಸಣ್ಣ ಕಾರನ್ನು ಮಾರುತಿ ಸುಜುಕಿ ಸಂಸ್ಥೆಯು ಇದೇ ವರ್ಷದ ಹಬ್ಬದ ಋತುವಿನಲ್ಲಿ ಬಿಡುಗಡೆಗೊಳಿಸುವುದು ಬಹುತೇಕ ಖಚಿತವಾಗಿದೆ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಮಧ್ಯಮ ವರ್ಗದ ಗ್ರಾಹಕರನ್ನು ಗುರಿಯಾಗಿಸಿ ಕೈಗೆಟುಕುವ ಬೆಲೆಯ ಕಾರು ಮಾದರಿಗಳನ್ನು ಪರಿಚಯಿಸುವುದರಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ಸಂಸ್ಥೆಯು ದೇಶದಲ್ಲಿ ಮಾರಾಟವಾಗುತ್ತಿರುವ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಮೊದಲ ಆರು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಶೇ.40 ರಷ್ಟು ಕಾರು ಮಾರಾಟ ಪ್ರಮಾಣವನ್ನು ತನ್ನದಾಗಿಸಿಕೊಂಡಿದ್ದು, ಇದೀಗ ಮತ್ತೊಂದು ಗೇಮ್‌ಚೆಂಜರ್ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಕಾರಿನ ವಿನ್ಯಾಸಗಳನ್ನು ಗಮನಿಸಿದ್ದಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳಿಂತಲೂ ವಿಭಿನ್ನ ಎನ್ನಿಸುವ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳು 4 ಮೀಟರ್‌ಗಿಂತಲೂ ಕಡಿಮೆ ಉದ್ದಳತೆ ಹೊಂದಿರಲಿದ್ದು, ಎ-ಪಿಲ್ಲರ್ ವಿಭಾಗದಲ್ಲಿನ ಹೊಸ ವಿನ್ಯಾಸದೊಂದಿಗೆ ಚಾಲಕನಿಗೆ ಅನುಕೂಲಕರ ಚಾಲನಾ ಸೌಲಭ್ಯಗಳನ್ನು ಒದಗಿಸಲಿದೆ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಹೀಗಾಗಿ ವಿಟಾರಾ ಬ್ರೆಝಾ ಕಾರುಗಳಂತೆ ವಿಶೇಷ ಸೌಲಭ್ಯ ಹೊಂದಲಿರುವ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳು ಗಾತ್ರದಲ್ಲಿ ಚಿಕ್ಕದಾದರೂ ಅತ್ಯುತ್ತಮ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಹೊಂದಿರಲಿದ್ದು, ವ್ಯಯಕ್ತಿಕ ಬಳಕೆಗಾಗಿ ಈ ಕಾರು ಅತಿಹೆಚ್ಚು ಸೃಷ್ಠಿಸುವ ನೀರಿಕ್ಷೆಯಿದೆ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಎಂಜಿನ್ ವೈಶಿಷ್ಟ್ಯತೆ

ಮಾರುತಿ ಸುಜುಕಿ ಸಂಸ್ಥೆಯು ಹೊಸ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರು 1.2-ಲೀಟರ್(1,200ಸಿಸಿ) ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, ಬಿಡುಗಡೆಯ ನಂತರ ಕಾರಿನ ಬೇಡಿಕೆಯ ಆಧಾರ ಮೇಲೆ ಎಲೆಕ್ಟ್ರಿಕ್ ವರ್ಷನ್‌ಗಳು ಕೂಡಾ ಖರೀದಿಗೆ ಲಭ್ಯವಾಗಲಿವೆ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಈ ಮೂಲಕ ನಗರ ಪ್ರದೇಶಗಳಲ್ಲಿನ ಟ್ರಾಫಿಕ್ ದಟ್ಟಣೆಯಲ್ಲೂ ಸಲೀಸಾಗಿ ಸಾಗಬಲ್ಲ ಗುಣಹೊಂದಿರುವ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳು ಸ್ಪೋರ್ಟಿ ಕಾರು ಪ್ರಿಯರನ್ನು ಸೆಳೆಯಬಹುದಾದ ಅಲಾಯ್ ಚಕ್ರಗಳು, ಹೈ ಮೌಟೆಂಡ್ ಲೈಟ್ಸ್ ಒದಗಿಸಿರುವುದು ಕಾರಿನ ಅಂದವನ್ನು ಹೆಚ್ಚಿಸಿದೆ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಕಾರಿನ ಬೆಲೆಗಳು(ಅಂದಾಜು)

ಗಾತ್ರದಲ್ಲಿ 4 ಮೀಟರ್‌ಗಿಂತಲೂ ಚಿಕ್ಕದಿರುವ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳ ಮೇಲೆ ಕೆಲವು ತೆರಿಗೆ ವಿನಾಯ್ತಿಗಳನ್ನು ದೊರೆಯಬಹುದಾಗಿದ್ದು, ಹೊಸ ಕಾರಿನ ಬೆಲೆಯು ಎಕ್ಸ್‌ಶೋರಂ ಪ್ರಕಾರ ರೂ. 4.50 ಲಕ್ಷದಿಂದ ರೂ. 5 ಲಕ್ಷದ ತನಕ ಬೆಲೆ ಹೊಂದಬಹುದು ಎನ್ನಲಾಗಿದೆ.

ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿಯ ಸಣ್ಣ ಕಾರು

ಒಟ್ಟಿನಲ್ಲಿ ಸಣ್ಣ ಗಾತ್ರದ ಕಾರುಗಳಲ್ಲೇ ವಿಭಿನ್ನ ಎನ್ನಿಸಲಿರುವ ಮಾರುತಿ ಸುಜುಕಿ ಫ್ಯೂಚರ್ ಎಸ್ ಕಾನ್ಸೆಪ್ಟ್ ಸ್ಮಾಲ್ ಎಸ್‌ಯುವಿ ಕಾರುಗಳು ದೇಶದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಈ ಕಾರು ಬಹುದೊಡ್ಡ ಬದಲಾವಣೆಗೆ ಕಾರಣವಾಗಲಿದೆ ಎನ್ನಬಹುದು.

More from DriveSpark

Article Published On: Wednesday, June 19, 2019, 11:01 [IST]
English summary
Maruti Suzuki S-Presso Launch In Festive Season. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+