ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಇದೇ ತಿಂಗಳು 30ರಂದು ಬಿಡುಗಡೆಯಾಗಲಿರುವ ಮಾರುತಿ ಸುಜುಕಿ ಬಹುನೀರಿಕ್ಷಿತ ಎಸ್-ಪ್ರೆಸ್ಸೊ ಆವೃತ್ತಿಯು ಎಂಟ್ರಿ ಲೆವಲ್ ಕಾರುಗಳಲ್ಲಿ ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದ್ದು, ಬಿಡುಗಡೆ ಮುನ್ನ ಹೊಸ ಕಾರಿನ ಕುರಿತಾದ ಕೆಲವು ಮಹತ್ವದ ತಾಂತ್ರಿಕ ಮಾಹಿತಿಗಳು ಸೋರಿಕೆಯಾಗಿವೆ.

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಹೊಸ ಎಸ್-ಪ್ರೆಸ್ಸೊ ಕಾರು ವಿವಿಧ ಮಾದರಿಯ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಪ್ರತಿಸ್ಪರ್ಧಿ ಕಾರುಗಳಿಗೆ ಟಕ್ಕರ್ ನೀಡಲು ಎಸ್-ಪ್ರೆಸ್ಸೊ ಎನ್ನುವ ಸಣ್ಣ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿದೆ. ಮೈಕ್ರೊ ಎಸ್‌ಯುವಿ ವೈಶಿಷ್ಟ್ಯತೆ ಹೊಂದಿರುವ ಎಸ್-ಪ್ರೆಸ್ಸೊ ಕಾರು ವ್ಯಯಕ್ತಿಕ ಕಾರು ಬಳಕೆದಾರರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಮಾರುತಿ ಸುಜುಕಿ ಕಾರು ಮಾರಾಟ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಿದೆ.

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಅಗ್ಗದ ಬೆಲೆಯ ಪ್ಯಾಸೆಂಜರ್ ಕಾರುಗಳಿಂದಲೇ ಭಾರೀ ಜನಪ್ರಿಯತೆಯನ್ನು ಗಳಿಸಿರುವ ಮಾರುತಿ ಸುಜುಕಿಯು ಪ್ರಸ್ತಕ ವರ್ಷದಲ್ಲಿ ಕೆಲವು ಹೊಸ ನಮೂನೆಯ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, 2018ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ ಮೈಕ್ರೊ ಎಸ್‌ಯುವಿ ಫ್ಯೂಚರ್ ಎಸ್ ಕಾನ್ಸೆಪ್ಟ್ ಮಾದರಿಯನ್ನೇ ಇದೀಗ ಎಸ್-ಪ್ರೆಸ್ಸೊ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿದೆ.

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಕಾರುನ್ನು ಬಿಡುಗಾಗಿ ಈಗಾಗಲೇ ಹಲವು ಸುತ್ತಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ರೆನಾಲ್ಟ್ ಕ್ವಿಡ್ ಮಾದರಿಯಲ್ಲೇ ಉದ್ದಳತೆಯನ್ನು ಹೊಂದಿದೆ. ಆಟೋ ಕಾರ್ ಇಂಡಿಯಾ ಸುದ್ದಿ ಸಂಸ್ಥೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಹೊಸ ಕಾರು 3,565-ಎಂಎಂ ಉದ್ದ, 1,520-ಎಂಎಂ ಅಗಲ, 1,564-ಎಂಎಂ ಎತ್ತರ, 2,380-ಎಂಎಂ ವೀಲ್ಹ್‌ಬೆಸ್, 180-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು 165/70 ಆರ್14 ಟೈರ್ ಸೌಲಭ್ಯವನ್ನು ಹೊಂದಿಯೆಂತೆ.

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಹಾಗೆಯೇ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಮಾದರಿಯು ಮೈಕ್ರೋ ಎಸ್‍ಯುವಿ ವೈಶಿಷ್ಟ್ಯತೆಗಳೊಂದಿಗೆ ಕೇಂದ್ರ ಸರ್ಕಾರವು 2020ರ ಎಪ್ರಿಲ್ 1ರಿಂದ ಜಾರಿಗೆ ತರುತ್ತಿರುವ ಬಿಎಸ್-6 ಹೊಸ ನಿಯಮಾವಳಿ ಪ್ರಕಾರ ಹೊಸ ಎಂಜಿನ್ ಅನ್ನು ಹೊತ್ತು ಬರಲಿದ್ದು, 1.2-ಲೀಟರ್(1,200 ಸಿಸಿ) ಪೆಟ್ರೋಲ್ ಎಂಜಿನ್ ಅನ್ನು ಪಡೆದುಕೊಳ್ಳಲಿದೆ. ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅಥವಾ 5- ಸ್ಪೀಡ್ ಆಟೋಮ್ಯಾಟಿಕ್ ಎಎಂಟಿ ಗೇರ್‍‍ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿರಲಿದೆ.

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಕಾರು ಮಾರುತಿ ಸುಜುಕಿಯ ಜನಪ್ರಿಯ ಬ್ರೆಝಾ ಕಾರಿಗಿಂತಲೂ ಕೆಳಹಂತದ ಆವೃತ್ತಿಯಾಗಿ ಮಾರಾಟವಾಗಲಿದ್ದು, ಹಲವು ಪ್ರೀಮಿಯಂ ಸೌಲಭ್ಯಗಳೊಂದಿಗೆ ಹ್ಯುಂಡೈ ವೆನ್ಯೂ ಕಾರಿಗೂ ಇದು ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಇನ್ನು ಮಧ್ಯಮ ವರ್ಗದ ಗ್ರಾಹಕರನ್ನು ಗುರಿಯಾಗಿಸಿ ಕೈಗೆಟುಕುವ ಬೆಲೆಯ ಕಾರು ಮಾದರಿಗಳನ್ನು ಪರಿಚಯಿಸುವುದರಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ಸಂಸ್ಥೆಯು ದೇಶದಲ್ಲಿ ಮಾರಾಟವಾಗುತ್ತಿರುವ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಮೊದಲ ಆರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದ್ದು, ಇದೀಗ ಬಿಡುಗಡೆಯಾಗುತ್ತಿರುವ ಮತ್ತೊಂದು ಗೇಮ್‌ಚೆಂಜರ್ ಕಾರು ಎಸ್-ಪ್ರೆಸ್ಸೊ ಮಾದರಿಯು ಮತ್ತಷ್ಟು ಸದ್ದು ಮಾಡಲಿದೆ.

MOST READ: 26 ವರ್ಷಗಳ ಬಳಿಕ ಸ್ವಂತ ಕಾರು ಖರೀದಿಸಿದ ಮಹೀಂದ್ರಾ ಎಂಡಿ

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಕಾರಿನ ವಿನ್ಯಾಸಗಳನ್ನು ಗಮನಿಸಿದ್ದಲ್ಲಿ ಹ್ಯಾಚ್‌ಬ್ಯಾಕ್ ಕಾರುಗಳಿಂತಲೂ ವಿಭಿನ್ನ ಎನ್ನಿಸಲಿದ್ದು, ಮೈಕ್ರೊ ಎಸ್‌ಯುವಿ ಕಾರಿನ ಗುಣಲಕ್ಷಣಗಳಾದ 4 ಮೀಟರ್‌ಗಿಂತಲೂ ಕಡಿಮೆ ಉದ್ದಳತೆ ಹೊಂದಿದೆ. ಎ-ಪಿಲ್ಲರ್ ವಿಭಾಗದಲ್ಲಿನ ಹೊಸ ವಿನ್ಯಾಸದೊಂದಿಗೆ ಚಾಲಕನಿಗೆ ಅನುಕೂಲಕರ ಚಾಲನಾ ಸೌಲಭ್ಯಗಳನ್ನು ಒದಗಿಸಲಿದ್ದು, ಹಿಂಬದಿಯ ಸವಾರರಿಗೂ ಅನುಕೂಲಕರ ಆಸನ ವ್ಯವಸ್ಥೆ ಹೊಂದಿದೆ.

MOST READ: ವಾಹನ ಮಾರಾಟದಲ್ಲಿ ಸತತ ಕುಸಿತ- ಕಾರು ಉತ್ಪಾದನೆಗೆ ಮತ್ತೆ ಬ್ರೇಕ್ ಹಾಕಿದ ಮಾರುತಿ ಸುಜುಕಿ

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಈ ಮೂಲಕ ವಿಟಾರಾ ಬ್ರೆಝಾ ಕಾರುಗಳಂತೆ ವಿಶೇಷ ಸೌಲಭ್ಯ ಹೊಂದಲಿರುವ ಎಸ್-ಪ್ರೆಸ್ಸೊ ಎಸ್‌ಯುವಿ ಕಾರುಗಳು ಗಾತ್ರದಲ್ಲಿ ಚಿಕ್ಕದಾದರೂ ಅತ್ಯುತ್ತಮ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಹೊಂದಿರಲಿದ್ದು, ನಗರ ಪ್ರದೇಶಗಳಲ್ಲಿ ವ್ಯಯಕ್ತಿಕ ಕಾರು ಬಳಕೆಗಾಗಿ ಇದು ಅತಿಹೆಚ್ಚು ಬೇಡಿಕೆ ಸೃಷ್ಠಿಸುವ ನೀರಿಕ್ಷೆಯಿದೆ.

MOST READ: ಹೊಸ ಮೋಟಾರ್ ವೆಹಿಕಲ್ ಕಾಯ್ದೆ ಜಾರಿ- ಮೊದಲ ದಿನವೇ ಬೆಚ್ಚಿಬಿದ್ದ ವಾಹನ ಸವಾರರು..!

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ನಗರ ಪ್ರದೇಶಗಳಲ್ಲಿನ ಟ್ರಾಫಿಕ್ ದಟ್ಟಣೆಯಲ್ಲೂ ಸಲೀಸಾಗಿ ಸಾಗಬಲ್ಲ ಗುಣಹೊಂದಿರುವ ಎಸ್-ಪ್ರೆಸ್ಸೊ ಎಸ್‌ಯುವಿ ಮಾದರಿಯು ಸ್ಪೋರ್ಟಿ ಕಾರು ಪ್ರಿಯರನ್ನು ಸೆಳೆಯಬಹುದಾದ ಅಲಾಯ್ ಚಕ್ರಗಳು, ಹೈ ಮೌಟೆಂಡ್ ಲೈಟ್ಸ್ ಒದಗಿಸಿರುವುದು ಕಾರಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

ಎಂಟ್ರಿ ಲೆವೆಲ್ ಕಾರುಗಳಲ್ಲೇ ಅತ್ಯುತ್ತಮ ತಾಂತ್ರಿಕ ಸೌಲಭ್ಯ ಹೊಂದಿರಲಿದೆ ಮಾರುತಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಕಾರಿನ ಬೆಲೆಗಳು(ಅಂದಾಜು)

ಸಣ್ಣ ಗಾತ್ರದ ಕಾರುಗಳಲ್ಲೇ ವಿಭಿನ್ನ ಎನ್ನಿಸಲಿರುವ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಮೈಕ್ರೊ ಎಸ್‌ಯುವಿ ಕಾರುಗಳು ದೇಶದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಹೊಸ ಕಾರು ಒಟ್ಟು ನಾಲ್ಕು ವೆರಿಯೆಂಟ್‍‌ಗಳ ಮೂಲಕ ದೆಹಲಿ ಎಕ್ಸ್‌ಶೋರಂ ಪ್ರಕಾರ ಆರಂಭಿಕವಾಗಿ ರೂ. 4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 5.50 ಲಕ್ಷಕ್ಕೆ ಖರೀದಿಗೆ ಲಭ್ಯವಾಗಬಹುದು ಎನ್ನಲಾಗಿದೆ.

Source: autocarindia

Article Published On: Thursday, September 5, 2019, 13:59 [IST]
English summary
Ahead of the launch of the Maruti Suzuki S-Presso on September 30, dimensions of the this new SUV styled budget car details have surfaced online.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+