Just In
- 6 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 7 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 8 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 8 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಸ್-6 ಜಾರಿಗೂ ಮುನ್ನವೇ ಕಾರು ಮಾರಾಟದಲ್ಲಿ ಹೊಸ ದಾಖಲೆ ಮಾಡಿದ ಮಾರುತಿ ಸುಜುಕಿ
2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಮಾರುತಿ ಸುಜುಕಿಯು ತನ್ನ ಜನಪ್ರಿಯ ಕಾರುಗಳನ್ನು ಉನ್ನತೀಕರಿಸಿ ಮಾರಾಟ ಮಾಡುತ್ತಿದ್ದು, ಹೊಸ ನಿಯಮ ಜಾರಿಗೂ ಮುನ್ನವೇ ಬಿಎಸ್-6 ಎಂಜಿನ್ ಪ್ರೇರಿತ 3 ಲಕ್ಷಕ್ಕೂ ಹೆಚ್ಚು ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದೆ.
ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಿಯಮ ಜಾರಿಗೂ ಮುನ್ನವೇ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ಕಾರು ಮಾದರಿಗಳ ಪೆಟ್ರೋಲ್ ಎಂಜಿನ್ ಆವೃತ್ತಿಗಳನ್ನು ಹೊಸ ನಿಯಮ ಅನುಸಾರ ಉನ್ನತೀಕರಿಸಿದೆ. ಆದರೆ ಡೀಸೆಲ್ ಎಂಜಿನ್ಗಳನ್ನು ಮಾತ್ರವೇ ಬಿಎಸ್-4 ನಿಯಮದಂತೆಯೇ ಮಾರಾಟ ಮಾಡುತ್ತಿದ್ದು, ಡೀಸೆಲ್ ಕಾರುಗಳನ್ನು ಸಹ 2020ರ ಏಪ್ರಿಲ್ ಒಳಗಾಗಿ ಹೊಸ ಎಂಜಿನ್ನೊಂದಿಗೆ ಉನ್ನತೀಕರಿಸಲು ಸಿದ್ದತೆ ನಡೆಸಿದೆ.
ಸದ್ಯ ಮಾರುಕಟ್ಟೆಯಲ್ಲಿ ಬಲೆನೊ, ಆಲ್ಟೋ 800, ವ್ಯಾಗನ್ಆರ್, ಸ್ವಿಫ್ಟ್, ಡಿಜೈರ್, ಎರ್ಟಿಗಾ, ಎಕ್ಸ್ಎಲ್ 6 ಮತ್ತು ಎಸ್-ಪ್ರೆಸ್ಸೊ ಕಾರುಗಳ ಪೆಟ್ರೋಲ್ ಕಾರುಗಳನ್ನು ಬಿಎಸ್-6 ನಿಯಮದಂತೆ ಉನ್ನತೀಕರಿಸಲಾಗಿದ್ದು, ಬಿಎಸ್-4 ಕಾರುಗಳಿಂತೂ ತುಸು ಭಿನ್ನವಾಗಿರುವ ಹೊಸ ಕಾರುಗಳು ಮಾಲಿನ್ಯ ಹೊರಸೂಸುವಿಕೆ ಮತ್ತು ಮೈಲೇಜ್ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.
ಇದೀಗ ಡೀಸೆಲ್ ಕಾರುಗಳ ಉನ್ನತೀಕರಣವು ತುಸು ಸವಾಲಾಗಿದ್ದು, ಬಿಎಸ್-6 ಡೀಸೆಲ್ ಎಂಜಿನ್ಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್ಗಿಂತಲೂ ಸಾಕಷ್ಟು ಸುಧಾರಣೆಯೊಂದಿಗೆ ಮಾಲಿನ್ಯ ಹೊರಸೂಸುವಿಕೆಯಲ್ಲಿ ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿವೆ.
ಪೆಟ್ರೋಲ್ ಎಂಜಿನ್ಗಿಂತಲೂ ಡೀಸೆಲ್ ಎಂಜಿನ್ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಿಸುವುದು ತುಸು ದುಬಾರಿಯಾಗಿದ್ದು, ಇದೇ ಕಾರಣಕ್ಕೆ ಮಾರುತಿ ಸುಜುಕಿ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಕಾರುಗಳನ್ನು ಮಾತ್ರವೇ ಬಿಎಸ್-6 ನಿಯಮಕ್ಕೆ ಉನ್ನತೀಕರಿಸಿ ಮಾರಾಟ ಮಾಡುತ್ತಿವೆ. ಮುಂಬರುವ 2020ರ ಏಪ್ರಿಲ್ ನಂತರವಷ್ಟೇ ಡೀಸೆಲ್ ಕಾರುಗಳನ್ನು ಹೊಸ ನಿಯಮದಂತೆ ಬಿಡುಗಡೆ ಮಾಡಲಿದ್ದು, ದುಬಾರಿ ಬೆಲೆ ಪಡೆದುಕೊಳ್ಳಲಿವೆ.
ಬಿಎಸ್-6 ಪೆಟ್ರೋಲ್ ಕಾರುಗಳು ಬಿಎಸ್-4 ಕಾರುಗಳಿಂತಲೂ ರೂ.15 ಸಾವಿರದಿಂದ ರೂ.20 ಸಾವಿರದಷ್ಟು ದುಬಾರಿಯಾಗಿದ್ದರೆ ಡೀಸೆಲ್ ಎಂಜಿನ್ ಮಾತ್ರ ಪ್ರಸ್ತುತ ಮಾರುಕಟ್ಟೆಯಲ್ಲಿನ ಬಿಎಸ್-4 ಕಾರುಗಳಿಂತಲೂ ರೂ.90 ಸಾವಿರದಿಂದ ರೂ.2 ಲಕ್ಷದಷ್ಟು ದುಬಾರಿಯಾಗಲಿವೆ.
MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ
ಇದೇ ಕಾರಣಕ್ಕೆ ಮಾರುತಿ ಸುಜುಕಿ ಸಂಸ್ಥೆಯು ಅಗ್ಗದ ಬೆಲೆಯ ಕಾರುಗಳಲ್ಲಿ ಡೀಸೆಲ್ ಎಂಜಿನ್ಗಳನ್ನು ಉನ್ನತೀಕರಿಸುವ ಯೋಜನೆಯನ್ನು ಕೈಬಿಡಲು ನಿರ್ಧರಿಸಿದ್ದು, ಕೇವಲ ಪೆಟ್ರೋಲ್, ಹೈಬ್ರಿಡ್, ಸಿಎನ್ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಒತ್ತುನೀಡಲು ನಿರ್ಧರಿಸಿದೆ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ಹೀಗಾಗಿ ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರ 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದೆ.
MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!
ಒಂದು ವೇಳೆ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಿಯಮ ಅನುಸಾರವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಉನ್ನತೀಕರಣ ಮಾಡಿದರೂ ಸಹ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಇದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.