ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ಮಾರುತಿ ಸುಜುಕಿ ಸಂಸ್ಥೆಯು ಸದ್ಯ ಭಾರತದಲ್ಲಿ ನಂ.1 ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆಯಾಗಿ ಯಶಸ್ವಿ ಸಾಧಿಸಿದ್ದು, ಟಾಪ್ 10 ಕಾರುಗಳ ಮಾರಾಟದಲ್ಲಿ ಮೊದಲ ಆರು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಇತರೆ ಕಾರು ಮಾರಾಟ ಸಂಸ್ಥೆಗಳಿಗೆ ಭಾರೀ ಪೈಪೋಟಿ ನೀಡುತ್ತಿದೆ. ಹೀಗಿರುವಾಗ 2020ರ ಆರಂಭದಲ್ಲಿ ಬಿಡುಗಡೆಯಾಗಿ ಸಿದ್ದವಾಗಿರುವ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಕೂಡಾ ಭಾರೀ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

2030ಕ್ಕೆ ವಿಶ್ವಾದ್ಯಂತ ಶೇ.100 ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಸಂಬಂಧ ಜಾಗತಿಕ ಮಟ್ಟದಲ್ಲಿ ಹಲವು ಬೃಹತ್ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಈಗಾಗಲೇ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಅತಿ ಹೆಚ್ಚು ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಕಾರುಗಳು ಮತ್ತು ಬೈಕ್‌ಗಳನ್ನು ಬಿಡುಗಡೆ ಮಾಡಿವೆ. ಇದೇ ನಿಟ್ಟಿನಲ್ಲಿ ಮಾರುತಿ ಸುಜುಕಿ ಸಹ ತನ್ನ ಜನಪ್ರಿಯ ವ್ಯಾಗನ್ ಆರ್ ಎಲೆಕ್ಟ್ರಿಕ್ ವರ್ಷನ್ ಹೊರತರುತ್ತಿದೆ.

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರಿನ ಬೆಲೆ

ಟೈಮ್ಸ್ ಆಫ್ ಇಂಡಿಯಾ ಬುಸಿನೆಸ್ ನೊಂದಿಗೆ ಮಾತನಾಡಿದ ಮಾರಿತಿ ಸುಜುಕಿ ಸಂಸ್ಥೆಯ ಚೈರ್‍‍ಮ್ಯಾನ್ ಆದ ಬಿ.ಸಿ. ಭಾರ್ಗವನ್‍‍ರವರು ಸಧ್ಯಕ್ಕೆ ಮಾರುತಿ ಸುಜುಕಿ ವ್ಯಾಗನ್ ಆರ್ ಕರಿನ ಪೆಟ್ರೋಲ್ ಮಾದರಿಗಳು ರೂ. 5 ಲಕ್ಷಕ್ಕೆ ಮಾರಾಟವಾಗುತ್ತಿದ್ದು, ಎಲೆಕ್ಟ್ರಿಕ್ ಮಾದರಿಯ ವ್ಯಾಗನ್ ಆರ್ ಕಾರುಗಳು ಸುಮಾರು 12 ಲಕ್ಷದ ಮಾರಾಟದ ಬೆಲೆಯನ್ನು ಪಡೆದುಕೊಳ್ಳಲಿದೆ ಎಂದು ಹೇಳಿಕೊಂಡಿದ್ದಾರೆ.

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ಇಷ್ಟೆ ಅಲ್ಲದೆಯೆ ಮಾರುತಿ ಸುಜುಕಿ ಸಂಸ್ಥೆಯೇ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಕುರಿತಾದ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರಿನಲ್ಲಿ ಕೇವಲ 1 ಗಂಟೆಯ ಒಳಗಾಗಿ ಶೇ.80 ರಷ್ಟು ಚಾರ್ಜ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸಿಸ್ಟಂ ಬಳಕೆ ಮಾಡಿರುವುದಾಗಿ ಮಾಹಿತಿ ನೀಡಿತ್ತು.

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ವ್ಯಾಗನ್ ಆರ್ ಇವಿ ಕಾರುಗಳನ್ನು 2020ರ ಏಪ್ರಿಲ್‌ನಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿರುವ ಮಾರುತಿ ಸುಜುಕಿ ಸಂಸ್ಥೆಯು, ಹೊಸ ಎಲೆಕ್ಟ್ರಿಕ್ ಕಾರನ್ನು ದೆಹಲಿ ಬಳಿ ಇರುವ ಗುರುಗ್ರಾಮ್ ಕಾರು ಉತ್ಪಾದನಾ ಘಟಕದಲ್ಲೇ ತಯಾರಿಸುತ್ತಿದೆ.

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ಜೊತೆಗೆ ಎಲೆಕ್ಟ್ರಿಕ್ ಮಾದರಿಯ ವ್ಯಾಗನ್‍ ಆರ್ ಕಾರು ಮಾರುತಿ ಸುಜುಕಿ ಮತ್ತು ಟೊಯೊಟಾ ಪಾಲುದಾರಿಕೆಯಲ್ಲಿ ತಯಾರಾಗಲಿರುವ ಮೊದಲ ಎಲೆಕ್ಟ್ರಿಕ್ ಕಾರು ಇದಾಗಿದ್ದು, ಟೊಯೊಟಾ ಈಗಾಗಲೇ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿಗಾಗಿ ಅಲ್ಟ್ರಾ ಹೈ ಎಫಿಶಿಯೆನ್ಸಿ ಪವರ್‌ಟ್ರೈನ್ ಬ್ಯಾಟರಿಯನ್ನು ತಯಾರಿಸಿರುವುದಾಗಿ ಹೇಳಿಕೊಂಡಿದೆ.

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ಹೀಗಾಗಿ ಹೊಸ ಕಾರಿನಲ್ಲಿ ಲೀಥಿಯಂ ಅಯಾನ್ ಪ್ರೇರಿತ 72 ವೊಲ್ಟ್, 25kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಮಾರುತಿ ಸುಜುಕಿ ಅಧಿಕೃತ ಮಾಹಿತಿ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಚಾರ್ಜಿಂಗ್ ಮಾಡಿದ್ದಲ್ಲಿ ಗರಿಷ್ಠವಾಗಿ 150 ರಿಂದ 160 ಕಿ.ಮಿ ಮೈಲೇಜ್ ಪಡೆಯಬಹುದು ಎಂದಿದೆ.

MOST READ: ಮಗುವಿನ ಪ್ರಾಣವನ್ನು ಉಳಿಸಲು 600 ಕಿ.ಮೀ ದೂರವನ್ನು ಕೇವಲ 720 ನಿಮಿಷಗಳಲ್ಲಿ ತಲುಪಿದ ಆಂಬ್ಯುಲೆನ್ಸ್ ಡ್ರೈವರ್

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ಆದ್ರೆ ವಾಸ್ತಾಂಶಕ್ಕೆ ಬಂದಲ್ಲಿ ವ್ಯಾಗನ್ ಆರ್ ಕಾರನ್ನು ನಗರಪ್ರದೇಶದಲ್ಲಿ ಬಳಕೆಗಾಗಿ ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಟ್ರಾಫಿಕ್ ದಟ್ಟಣೆ ಸಮಸ್ಯೆಯ ನಡುವೆ ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಷ್ಟು ಮೈಲೇಜ್ ಸಿಗುವುದು ಕಷ್ಟ. ಆದರೂ ಹೊಸ ಕಾರಿನ ಮೈಲೇಜ್ ಪ್ರತಿ ಚಾರ್ಜ್‌ಗೆ 130ರಿಂದ 140ಕಿ.ಮಿ ಮೈಲೇಜ್ ಸಿಗಬಹುದು.

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ಬೆಲೆಯಲ್ಲಿ ದುಬಾರಿ ಎನ್ನಿಸುವ ಲೀಥಿಯಂ ಅಲಾಯ್ ಬ್ಯಾಟರಿಗಳನ್ನು ಸದ್ಯಕ್ಕೆ ವಿದೇಶಿ ಮಾರುಕಟ್ಟೆಗಳಾದ ಚೀನಾ, ತೈವಾನ್ ಮತ್ತು ಥೈಲ್ಯಾಂಡ್‌ನಿಂದಲೇ ಶೇ.100ರಷ್ಟು ಆಮದು ಮಾಡಿಕೊಳ್ಳಲಾಗುತ್ತಿದ್ದು, ದೇಶದಲ್ಲಿ ಯಾವುದೇ ಕಾರು ಉತ್ಪಾದನಾ ಸಂಸ್ಥೆಯು ಸ್ವಂತ ಬ್ಯಾಟರಿ ಉತ್ಪಾದನಾ ಸೌಲಭ್ಯವನ್ನು ಹೊಂದಿಲ್ಲ.

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ಇದರಿಂದಾಗಿ ಎಲೆಕ್ಟ್ರಿಕ್ ಕಾರುಗಳು ಸಾಮಾನ್ಯ ಕಾರುಗಳಿಂತಲೂ ಎರಡು ಮೂರು ಪಟ್ಟು ಹೆಚ್ಚು ದುಬಾರಿ ದರಗಳಲ್ಲಿ ಮಾರಾಟವಾಗುತ್ತಿದ್ದು, ಇದೇ ಕಾರಣದಿಂದಲೇ ಬಹುತೇಕ ಕಾರು ಖರೀದಿದಾರರು ಎಲೆಕ್ಟ್ರಿಕ್ ಕಾರುಗಳ ಖರೀದಿಸುವ ಆಸಕ್ತಿ ಇದ್ದರೂ ದುಬಾರಿ ಬೆಲೆಯಿಂದಾಗಿ ಹಿಂದೆ ಸರಿಯುತ್ತಿದ್ದಾರೆ.

MOST READ: ಶಿವಮೊಗ್ಗದಲ್ಲಿ ನಡೆದ ಅಪಘಾತದ ವೇಳೆ ತನ್ನ ಸಾಮರ್ಥ್ಯವನ್ನ ನಿರೂಪಿಸಿದ ಟಾಟಾ ಹೆಕ್ಸಾ

ಮಾರುತಿ ಸುಜುಕಿ ವ್ಯಾಗನಾರ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ.??

ಇದನ್ನು ಗಂಭೀರವಾಗಿ ಪರಿಣಿಸಿರುವ ಸುಜುಕಿ ಸಂಸ್ಥೆಯು ಭಾರತದಲ್ಲೇ ಲೀಥಿಯಂ ಬ್ಯಾಟರಿ ಉತ್ಪಾದನೆ ಮಾಡಿ ತನ್ನದೇ ಕಾರುಗಳಿಗೆ ಅಷ್ಟೇ ಅಲ್ಲದೇ ಇತರೆ ಸಂಸ್ಥೆಗಳಿಗೂ ಬ್ಯಾಟರಿ ಪೂರೈಕೆ ಮಾಡುವ ಯೋಜನೆ ರೂಪಿಸಿದ್ದು, 2020ರ ವೇಳೆಗೆ ದೇಶದಲ್ಲಿ ಮಾರಾಟವಾಗುವ ಕಾರುಗಳ ಪ್ರಮಾಣದಲ್ಲಿ ಹೊಸ ಬದಲಾಣೆ ತರುವುದೇ ಇದರ ಮೂಲ ಉದ್ದೇಶವಾಗಿದೆ.

Most Read Articles

Kannada
English summary
Maruti Suzuki Says WagonR Electric Car May Cost Rs.12 Lakhs. Read In Kannada
Story first published: Saturday, April 27, 2019, 9:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X