ಆಟೋಮ್ಯಾಟಿಕ್ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ
ದೇಶದ ನಂ.1 ಕಾರು ಮಾರಾಟ ಸಂಸ್ಥೆಯಾಗಿ ಹೊರಹೊಮ್ಮಿರುವ ಮಾರುತಿ ಸುಜುಕಿಯು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, 2014ರಿಂದ ಇದುವರೆಗೆ ಬರೋಬ್ಬರಿ 6 ಲಕ್ಷ ಯುನಿಟ್ ಮಾರಾಟ ಮಾಡಿದೆ.

2014ರಲ್ಲಿ ಮೊದಲ ಬಾರಿಗೆ ಸೆಲೆರಿಯೊ ಹ್ಯಾಚ್‌ಬ್ಯಾಕ್ ಆವೃತ್ತಿಯಲ್ಲಿ ಆಟೋ ಗೇರ್ ಶಿಫ್ಟ್(ಎಜಿಎಸ್) ತಂತ್ರಜ್ಞಾನ ಪರಿಚಯಿಸುವ ಮೂಲಕ ಆಟೋ ಉದ್ಯಮ ಹೊಸ ಸಂಚಲನಕ್ಕೆ ಕಾರಣವಾಗಿದ್ದ ಮಾರುತಿ ಸುಜುಕಿಯು ಇದೀಗ 6 ಲಕ್ಷ ಯುನಿಟ್ ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ. ಗ್ರಾಹಕರ ಬೇಡಿಕೆಯೆಂತೆ ಮೂರು ವಿವಿಧ ಮಾದರಿಯ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ತಂತ್ರಜ್ಞಾನ ಹೊಂದಿರುವ ಮಾರುತಿ ಸುಜುಕಿಯು ಆಟೋ ಗೇರ್ ಶಿಫ್ಟ್(ಎಜಿಎಸ್), ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಮತ್ತು ಕಂಟಿನ್ಯೂಸ್ ವೆರಿಬಲ್ ಟ್ರಾನ್ಸ್‍ಮಿಷನ್(ಸಿವಿಟಿ) ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ಒದಗಿಸುತ್ತಿದೆ.

ಇವುಗಳಲ್ಲಿ ಆಟೋ ಗೇರ್ ಶಿಫ್ಟ್(ಎಜಿಎಸ್) ಪ್ರೇರಿತ ವಾಹನ ಮಾರಾಟವು ಅಧಿಕ ಬೇಡಿಕೆ ಹೊಂದಿದ್ದು, ಎಜಿಎಸ್ ಪ್ರೇರಿತ ಕಾರುಗಳ ಮಾರಾಟವೇ ಬರೋಬ್ಬರಿ 5 ಲಕ್ಷ ಯುನಿಟ್ ಮಾರಾಟ ಗುರಿತಲುಪಿದೆ.

ಇನ್ನುಳಿದ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಮತ್ತು ಕಂಟಿನ್ಯೂಸ್ ವೆರಿಬಲ್ ಟ್ರಾನ್ಸ್‍ಮಿಷನ್(ಸಿವಿಟಿ) ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಕಾರುಗಳ ಮಾರಾಟ ಎರಡನೇ ಮತ್ತು ಮೂರನೇ ಸ್ಥಾನ ಹೊಂದಿದ್ದು, ನಗರಪ್ರದೇಶಗಳಲ್ಲಿ ವಾಹನ ಚಾಲನೆಯನ್ನು ಸುಲಭವಾಗಿಸಿರುವುದೇ ಇಷ್ಟೊಂದು ಜನಪ್ರಿಯತೆ ಕಾರಣವಾಗಿದೆ.

ಇನ್ನು 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಮಾರುತಿ ಸುಜುಕಿಯು ತನ್ನ ಜನಪ್ರಿಯ ಕಾರುಗಳನ್ನು ಉನ್ನತೀಕರಿಸಿ ಮಾರಾಟ ಮಾಡುತ್ತಿದ್ದು, ಹೊಸ ನಿಯಮ ಜಾರಿಗೂ ಮುನ್ನವೇ ಬಿಎಸ್-6 ಎಂಜಿನ್ ಪ್ರೇರಿತ 3 ಲಕ್ಷಕ್ಕೂ ಹೆಚ್ಚು ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಮತ್ತೊಂದು ಹೊಸ ದಾಖಲೆಗೆ ಕಾರಣವಾಗಿದೆ.

ಮಾರುತಿ ಸುಜುಕಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ಕಾರು ಮಾದರಿಗಳ ಪೆಟ್ರೋಲ್ ಎಂಜಿನ್ ಆವೃತ್ತಿಗಳನ್ನು ಹೊಸ ನಿಯಮ ಅನುಸಾರ ಉನ್ನತೀಕರಿಸಿದ್ದು, ಡೀಸೆಲ್ ಎಂಜಿನ್‌ಗಳನ್ನು ಮಾತ್ರವೇ ಬಿಎಸ್-4 ನಿಯಮದಂತೆಯೇ ಮಾರಾಟ ಮಾಡುತ್ತಿದೆ.

ಬಿಎಸ್-4 ಡೀಸೆಲ್ ಕಾರುಗಳನ್ನು ಸಹ 2020ರ ಏಪ್ರಿಲ್ ಒಳಗಾಗಿ ಹೊಸ ಎಂಜಿನ್‌ನೊಂದಿಗೆ ಉನ್ನತೀಕರಿಸಲು ಸಿದ್ದತೆ ನಡೆಸಿದ್ದು, ಕಾರು ಮಾರಾಟದಲ್ಲಿ ಮಹತ್ವದ ಬದಲಾವಣೆಯನ್ನು ಪರಿಚಯಿಸುತ್ತಿದೆ.
MOST READ: ಐಷಾರಾಮಿ ಕಾರ್ ಡೀಲರ್ ಆದ ಟೀ ಮಾರುತ್ತಿದ್ದ ಕನ್ನಡಿಗನ ರೋಚಕ ಕಥೆ

ಡೀಸೆಲ್ ಕಾರುಗಳ ಉನ್ನತೀಕರಣವು ಮಾರುತಿ ಸುಜುಕಿಗೆ ಒಂದು ಸವಾಲಾಗಿದ್ದು, ಬಿಎಸ್-6 ಡೀಸೆಲ್ ಎಂಜಿನ್‌ಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್‌ಗಿಂತಲೂ ಸಾಕಷ್ಟು ಸುಧಾರಣೆಯೊಂದಿಗೆ ಮಾಲಿನ್ಯ ಹೊರಸೂಸುವಿಕೆಯಲ್ಲಿ ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿವೆ.
MOST READ: ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಬಿಎಸ್-6 ಪೆಟ್ರೋಲ್ ಕಾರುಗಳು ಬಿಎಸ್-4 ಕಾರುಗಳಿಂತಲೂ ರೂ.15 ಸಾವಿರದಿಂದ ರೂ.20 ಸಾವಿರದಷ್ಟು ದುಬಾರಿಯಾಗಿದ್ದರೆ ಡೀಸೆಲ್ ಎಂಜಿನ್ ಮಾತ್ರ ಪ್ರಸ್ತುತ ಮಾರುಕಟ್ಟೆಯಲ್ಲಿನ ಬಿಎಸ್-4 ಕಾರುಗಳಿಂತಲೂ ರೂ.90 ಸಾವಿರದಿಂದ ರೂ.2 ಲಕ್ಷದಷ್ಟು ದುಬಾರಿಯಾಗಲಿವೆ.
MOST READ: 500 ಉದ್ಯೋಗಿಗಳನ್ನು ಮನೆಗೆ ಕಳುಹಿಸಲಿದೆ ಒಲಾ..!

ಇದೇ ಕಾರಣಕ್ಕೆ ಮಾರುತಿ ಸುಜುಕಿ ಸಂಸ್ಥೆಯು ಅಗ್ಗದ ಬೆಲೆಯ ಕಾರುಗಳಲ್ಲಿ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸುವ ಯೋಜನೆಯನ್ನು ಕೈಬಿಡಲು ನಿರ್ಧರಿಸಿದ್ದು, ಕೇವಲ ಪೆಟ್ರೋಲ್, ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಒತ್ತುನೀಡಲು ನಿರ್ಧರಿಸಿದೆ.

ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರ 1.5-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿದೆ.

ಒಂದು ವೇಳೆ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಿಯಮ ಅನುಸಾರವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಉನ್ನತೀಕರಣ ಮಾಡಿದರೂ ಸಹ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಇದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.


Click it and Unblock the Notifications