ಪ್ರತಿ ಕಾರು ಮಾದರಿಯಲ್ಲೂ ಸಿಎನ್‌ಜಿ ಆಯ್ಕೆ ನೀಡಲು ಮಾರುತಿ ಸುಜುಕಿ ಹೊಸ ಪ್ಲ್ಯಾನ್
2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದನ್ವಯ ಮಾರುತಿ ಸುಜುಕಿ ಸಂಸ್ಥೆಯು ಸಣ್ಣ ಗಾತ್ರದ ಡೀಸೆಲ್ ಎಂಜಿನ್ ಆಯ್ಕೆಯನ್ನು ತೆಗೆದುಹಾಕುವ ಮಹತ್ವದ ನಿರ್ಧಾರವನ್ನು ಈಗಾಗಲೇ ಅಧಿಕೃತವಾಗಿಯೇ ಬಹಿರಂಗಪಡಿಸಿದ್ದು, ಡೀಸೆಲ್ ಎಂಜಿನ್‌ಗೆ ಬದಲಾಗಿ ಸಿಎನ್‌ಜಿ ಕಾರುಗಳ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ.

ಜಾರಿಗೆ ಬರಲಿರುವ ಬಿಎಸ್-6 ನಿಯಮದಿಂದಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್ ಮಾರಾಟಕ್ಕೆ ಬ್ರೇಕ್ ಬೀಳಲಿದ್ದು, ಒಂದು ವೇಳೆ ಹೊಸ ನಿಯಮಕ್ಕೆ ಉನ್ನತೀಕರಣ ಮಾಡಬೇಕು ಇಲ್ಲವೇ ಮಾರಾಟವನ್ನು ಸ್ಥಗಿತಗೊಳಿಸಬೇಕಾದ ಅನಿವಾರ್ಯತೆಯಿದೆ. ಇದೀಗ ಮಾರುತಿ ಸುಜುಕಿ ಸಹ ಉನ್ನತೀಕರಿಸಲು ಸಾಧ್ಯವಿಲ್ಲದ ಸಣ್ಣಗಾತ್ರದ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳ ಬದಲಾಗಿ ಸ್ಮಾರ್ಟ್ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ಮಾರುತಿ ಸುಜುಕಿ ಈಗಾಗಲೇ ಪೆಟ್ರೋಲ್ ಆವೃತ್ತಿಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಿಸುವ ಮೂಲಕ ಕಾರು ಮಾರಾಟದಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಮುಂಬರುವ ಏಪ್ರಿಲ್‌ನಿಂದಲೇ ಸಣ್ಣ ಗಾತ್ರದ 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಮಾರಾಟದಿಂದ ಕೈಬಿಡಲಿದೆ.

ಡೀಸೆಲ್ ಎಂಜಿನ್‌ಗೆ ಸರಿಸಮನಾದ ಸಿಎನ್‌ಜಿ ಕಾರುಗಳ ಮೂಲಕ ಮೈಲೇಜ್ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿರುವ ಮಾರುತಿ ಸುಜುಕಿ ಸಂಸ್ಥೆಯು ಮುಂಬರುವ ಪೆಟ್ರೋಲ್ ಕಾರುಗಳನ್ನು ಸಹ ಮುಂಬರುವ ಕೆಲವೇ ವರ್ಷಗಳಲ್ಲಿ ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ಇರಾದೆಯಲ್ಲಿದೆ.

ಅದಕ್ಕಾಗಿ ಈಗಿನಿಂದಲೇ ಹೊಸ ಹೊಸ ಪರ್ಯಾಯ ಯೋಜನೆಗಳನ್ನು ರೂಪಿಸುತ್ತಿರುವ ಮಾರುತಿ ಸುಜುಕಿಯು ಸ್ಮಾರ್ಟ್ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವರ್ಷನ್ ಅಭಿವೃದ್ದಿ ಮತ್ತು ಮಾರಾಟದ ಮೇಲೆ ಹೆಚ್ಚು ಗಮನಹರಿಸುತ್ತಿದ್ದು, ಮಾಲಿನ್ಯ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸುವ ಗುರಿಹೊಂದಿದೆ. ಸದ್ಯ ಮಾರುಕಟ್ಟೆಯಲ್ಲಿರುವ ಬಿಎಸ್-4 ವೈಶಿಷ್ಟ್ಯತೆ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಉನ್ನತೀಕರಿಸುವ ಯೋಜನೆಯಲ್ಲಿ ತೊಡಗಿರುವ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಹೊಸ ನಿಯಮಕ್ಕೆ ಅನುಗುಣವಾಗಿ ಉನ್ನತೀಕರಣ ಸಾಧ್ಯವಿಲ್ಲದ ಡೀಸೆಲ್ ಎಂಜಿನ್‌ಗಳ ಮಾರಾಟವನ್ನು ಕೈಬಿಡಲು ನಿರ್ಧರಿಸಿವೆ.

ಮಾರುತಿ ಸುಜುಕಿ ಸಹ ತನ್ನ ಜನಪ್ರಿಯ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿದ್ದು, ಹೊಸ ನಿಯಮ ಜಾರಿಗೆ ಮುನ್ನವೇ ಬಿಎಸ್-6 ನಿಯಮದನ್ವಯ ಪೆಟ್ರೋಲ್ ಕಾರು ಮಾದರಿಗಳನ್ನು ಉನ್ನತೀಕರಿಸಿ ಮಾರಾಟ ಮಾಡುತ್ತಿದೆ.

ಆದರೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಣ ಮಾಡದಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಮಾರುತಿ ಸುಜುಕಿಯು ಮುಂಬರುವ ಕೆಲವೇ ದಿನಗಳಲ್ಲಿ 1.3-ಲೀಟರ್ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಮಾರಾಟ ಬಂದ್ ಮಾಡುವುದಾಗಿ ಹೇಳಿಕೊಂಡಿದೆ.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಇದರ ಬದಲಾಗಿ ಪ್ರತಿ ಕಾರು ಮಾದರಿಯಲ್ಲೂ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಆವೃತ್ತಿಗಳ ಮಾರಾಟ ಮೇಲೆ ಹೆಚ್ಚಿನ ಗಮನಹರಿಸಿರುವುದಾಗಿ ಹೇಳಲಾಗಿದ್ದು, 1.3-ಲೀಟರ್ ಡೀಸೆಲ್ ಎಂಜಿನ್ ಬದಲಾಗಿ 1.5-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಮಾದರಿಯನ್ನು ಮಾತ್ರವೇ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಹೀಗಾಗಿ ಮಾರುತಿ ಸುಜುಕಿ ಕಾರುಗಳಲ್ಲಿ ಇನ್ಮುಂದೆ ಹೈ ಎಂಡ್ ಮಾದರಿಗಳಲ್ಲಿ ಮಾತ್ರವೇ ಪೆಟ್ರೋಲ್ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಲಭ್ಯವಿರಲಿದ್ದು, ಇನ್ನುಳಿದಂತೆ ಹ್ಯಾಚ್‌ಬ್ಯಾಕ್ ಕಾರುಗಳಲ್ಲಿ ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಮಾತ್ರವೇ ಖರೀದಿಗೆ ಲಭ್ಯವಾಗಲಿವೆ.
MOST READ: ಕುಸಿದಿರುವ ಹೊಸ ವಾಹನಗಳ ಮಾರಾಟ ಹೆಚ್ಚಳಕ್ಕೆ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ಘೋಷಣೆ..!

ಒಂದು ವೇಳೆ ಮಾರುತಿ ಸುಜುಕಿ ಸಂಸ್ಥೆಯು 1.3-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಣ ಮಾಡದರೂ ಸಹ ಕಾರಿನ ಬೆಲೆಗಳು ರೂ.80 ಸಾವಿರದಿಂದ ರೂ.1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ. ಇದರಿಂದ ಕಾರಿನ ಬೆಲೆಗಳು ಹೆಚ್ಚಾಗಿ ಮಾರಾಟದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಇದೇ ಕಾರಣಕ್ಕೆ ಕಡಿಮೆ ಸಾಮರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆಯನ್ನೇ ತೆಗೆದುಹಾಕುತ್ತಿದೆ.

ಹೈ ಎಂಡ್ ಮಾದರಿಗಳಾದ ಎಸ್-ಕ್ರಾಸ್ ಎಸ್‌ಯುವಿ, ಎರ್ಟಿಗಾ ಎಂಪಿವಿ ಮತ್ತು ಸಿಯಾಜ್ ಸೆಡಾನ್ ಕಾರಿನಲ್ಲಿ ಮಾತ್ರವೇ 1.5-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆ ಇರಲಿದ್ದು, ಇನ್ನುಳಿದ ಕಾರುಗಳಲ್ಲಿ ಪೆಟ್ರೋಲ್ , ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಗಳು ಹೆಚ್ಚಲಿವೆ.

ಒಟ್ಟಿನಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಜಾರಿಗೆ ತರುತ್ತಿರುವ ಕಠಿಣನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಮುಂದಾಗಿರುವ ಮಾರುತಿ ಸುಜುಕಿಯು ಈ ಹಿಂದಿನ ಜನಪ್ರಿಯತೆಯನ್ನೇ ಮುಂದುವರಿಸಿಕೊಂಡು ಹೊಸ ಕಾರು ಉತ್ಪನ್ನಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಡುತ್ತಿದೆ.


Click it and Unblock the Notifications