ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿ ಸಂಸ್ಥೆಯು ಸದ್ಯ ಕಾರು ಮಾರಾಟದಲ್ಲಿ ನಂ.1 ಸ್ಥಾನದಲ್ಲಿದ್ದು, ಭವಿಷ್ಯ ವಾಹನ ಮಾದರಿಗಳಾದ ಎಲೆಕ್ಟ್ರಿಕ್ ಆವೃತ್ತಿಗಳ ಮೇಲೂ ಹೆಚ್ಚಿನ ಗಮನಹರಿಸುತ್ತಿದೆ. ಹೀಗಾಗಿ ಗ್ರಾಹಕರ ಆದ್ಯತೆ ಮೇರೆಗೆ ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಸಿದ್ದಗೊಳಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಇವಿ ವಾಹನಗಳನ್ನು ವಿಶೇಷವಾಗಿ ನೆಕ್ಸಾ ಕಾರು ಮಾರಾಟ ಮಳಿಗೆಗಳಲ್ಲೇ ಮಾರಾಟ ಮಾಡಲು ನಿರ್ಧರಿಸಿದೆಯೆಂತೆ.

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸಲು ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಬೃಹತ್ ಬಂಡವಾಳದೊಂದಿಗೆ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು, ಮಾರುತಿ ಸುಜುಕಿ ಸೇರಿದಂತೆ ಹಲವಾರು ಸಂಸ್ಥೆಗಳು ತಮ್ಮ ಭವಿಷ್ಯ ವಾಹನಗಳನ್ನು ಅಭಿವೃದ್ಧಿಗೊಳಿಸಿ ಬಿಡುಗಡೆಯ ತವಕದಲ್ಲಿವೆ. ಇದರಲ್ಲಿ ವ್ಯಾಗನ್‌ಆರ್ ಎಲೆಕ್ಟ್ರಿಕ್ ಮಾದರಿಯು ಮಾರುತಿ ಸುಜುಕಿ ಸಂಸ್ಥೆಯ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಲವು ಪ್ರೀಮಿಯಂ ಫೀಚರ್ಸ್‌ನೊಂದಿಗೆ ನೆಕ್ಸಾದಲ್ಲಿ ಖರೀದಿಗೆ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ.

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಸದ್ಯ ಮಾರುತಿ ಸುಜುಕಿ ಸಂಸ್ಥೆಯು ಎರಡು ಹಂತದ ಕಾರು ಮಾರಾಟ ಪ್ರಕ್ರಿಯೆಯನ್ನು ಹೊಂದಿದ್ದು, ಅರೆನಾ ಶೋರೂಂಗಳ ಮೂಲಕ ಸಾಮಾನ್ಯ ಕಾರುಗಳನ್ನು ಮತ್ತು ಪ್ರೀಮಿಯಂ ಕಾರುಗಳನ್ನು ನೆಕ್ಸಾ ಶೋರೂಂ ಮೂಲಕ ಕಾರು ಮಾರಾಟವನ್ನು ಮಾಡುತ್ತಿದೆ. ಇದರಲ್ಲಿ ನೆಕ್ಸಾ ಶೋರೂಂಗಳನ್ನು ಹೆಚ್ಚಿಸಲು ನಿರ್ಧರಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಪ್ರೀಮಿಯಂ ಕಾರುಗಳ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ.

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಇದೀಗ ಬಿಡುಗಡೆಗಾಗಿ ಸಿದ್ದವಾಗುತ್ತಿರುವ ಬಹುನೀರಿಕ್ಷಿತ ವ್ಯಾಗನ್ಆರ್ ಎಲೆಕ್ಟ್ರಿಕ್ ಆವೃತ್ತಿಯನ್ನು ಸಹ ನೆಕ್ಸಾ ಕಾರು ಮಾರಾಟ ಮಳಿಗೆಗಳಲ್ಲೇ ಮಾರಾಟ ಮಾಡಲು ನಿರ್ಧರಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಹೊಸ ಕಾರಿನ ಪ್ರಸ್ತುತ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆ ಹಲವು ಹೊಸ ಸೌಲಭ್ಯಗಳನ್ನು ನೀಡುವುದಾಗಿ ಖಚಿತಪಡಿಸಿದೆ.

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಈ ಕುರಿತು ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾರುತಿ ಸುಜುಕಿ ಮುಖ್ಯಸ್ಥ ಕೆನೆಚಿ ಆಯುಕಾವಾ ಅವರು, ಮುಂದಿನ 5 ವರ್ಷಗಳ ಅವಧಿಗೆ ಹಲವು ಹೊಸ ವಿನ್ಯಾಸದ ಪ್ರೀಮಿಯಂ ಕಾರು ಆವೃತ್ತಿಗಳು ರಸ್ತೆಗಿಳಿಯಲಿದ್ದು, ದೇಶಾದ್ಯಂತ 2ನೇ ಮತ್ತು 3ನೇ ದರ್ಜೆಯ ನಗರಗಳಲ್ಲೂ ಕೂಡಾ ನೆಕ್ಸಾ ಶೋರೂಂಗಳನ್ನು ತೆರೆಯುವ ಯೋಜನೆಯಿದೆ ಎಂದಿದ್ದಾರೆ. ಇದೇ ವೇಳೆ ಮುಂಬರುವ ಎಲೆಕ್ಟ್ರಿಕ್ ಕಾರು ಕೂಡಾ ನೆಕ್ಸಾ ಮಳಿಗೆಗಳಲ್ಲೇ ಖರೀದಿಗೆ ಸಿಗಲಿದೆ ಎಂಬ ಮಾಹಿತಿ ನೀಡಿದ್ದಾರೆ.

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಇನ್ನು ಮಾರುತಿ ಸುಜುಕಿ ನಿರ್ಮಾಣ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರು ಮಾದರಿಯು ಹಲವು ವಿಶೇಶತೆಗಳಿಗೆ ಕಾರಣವಾಗಿದ್ದು, 2021ರ ಆರಂಭದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಕೈಗೆಟುಕುವ ಬೆಲೆಗಳಲ್ಲಿ ಉತ್ತಮ ಮೈಲೇಜ್‌ನೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಠಿಸಲು ಸಿದ್ದಗೊಂಡಿದೆ.

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಹೊಸ ಕಾರಿನ ಬಿಡುಗಡೆ ಮತ್ತು ಬೆಲೆಗಳ ಕುರಿತಾಗಿ ಕಳೆದ ಕೆಲ ದಿನಗಳ ಹಿಂದಷ್ಟೇ 'ದಿ ಎಕಾನಮಿಕ್ ಟೈಮ್ಸ್' ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ್ದ ಮಾರುತಿ ಸುಜುಕಿಯ ಹಿರಿಯ ಅಧಿಕಾರಿಯೊಬ್ಬರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ವ್ಯಾಗನ್‌ಆರ್ ಎಲೆಕ್ಟ್ರಿಕ್ ಅತ್ಯುತ್ತಮ ಬೆಲೆಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದೆ ಎಂದಿದ್ದರು.

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಈ ವೇಳೆ ಹೊಸ ಕಾರಿನ ಬೆಲೆಗಳ ಬಗೆಗೆ ನಿಖರ ಮಾಹಿತಿ ನೀಡದಿದ್ದರೂ ಹೊಸ ತಂತ್ರಜ್ಞಾನ ಪ್ರೇರಣೆ ಹೊಂದಿರುವ ವ್ಯಾಗನ್‌ಆರ್ ಎಲೆಕ್ಟ್ರಿಕ್ ಕಾರು ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.12 ಲಕ್ಷದೊಳಗೆ ಖರೀದಿಗೆ ಲಭ್ಯವಿರಲಿದೆ ಎಂದಿದ್ದರು. ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಸಾಮಾನ್ಯ ಮಾದರಿಗಿಂತ ಎಲೆಕ್ಟ್ರಿಕ್ ವರ್ಷನ್ ದುಪ್ಪಟ್ಟು ಬೆಲೆ ಪಡೆದುಕೊಳ್ಳುವ ಬಹುತೇಕ ಖಚಿತವಾಗಿದೆ.

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಜೊತೆಗೆ ಎಲೆಕ್ಟ್ರಿಕ್ ಮಾದರಿಯ ವ್ಯಾಗನ್‍ ಆರ್ ಕಾರು ಮಾರುತಿ ಸುಜುಕಿ ಮತ್ತು ಟೊಯೊಟಾ ಪಾಲುದಾರಿಕೆಯಲ್ಲಿ ತಯಾರಾಗಲಿರುವ ಮೊದಲ ಎಲೆಕ್ಟ್ರಿಕ್ ಕಾರು ಇದಾಗಿದ್ದು, ಟೊಯೊಟಾ ಈಗಾಗಲೇ ವ್ಯಾಗನ್ಆರ್ ಎಲೆಕ್ಟ್ರಿಕ್ ಕಾರಿಗಾಗಿ ಅಲ್ಟ್ರಾ ಹೈ ಎಫಿಶಿಯೆನ್ಸಿ ಪವರ್‌ಟ್ರೈನ್ ಬ್ಯಾಟರಿಯನ್ನು ತಯಾರಿಸಿರುವುದಾಗಿ ಹೇಳಿಕೊಂಡಿದೆ. ಲೀಥಿಯಂ ಅಯಾನ್ ಪ್ರೇರಿತ 72 ವೊಲ್ಟ್, 25kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜಿಂಗ್ ಮಾಡಿದ್ದಲ್ಲಿ ಗರಿಷ್ಠವಾಗಿ 150 ರಿಂದ 160 ಕಿ.ಮಿ ಮೈಲೇಜ್ ಪಡೆಯಬಹುದು.

MOST READ: ಅಪಘಾತದ ವೇಳೆ ಏರ್‌ಬ್ಯಾಗ್ ಇದ್ರು ಫ್ಲಾಪ್- ಟೊಯೊಟಾ ವಿರುದ್ಧ ಕಾರು ಮಾಲೀಕನ ಆಕ್ರೋಶ..!

ನೆಕ್ಸಾ ಮೂಲಕವೇ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಲಿದೆ ಮಾರುತಿ ಸುಜುಕಿ

ಆದ್ರೆ ವಾಸ್ತಾಂಶಕ್ಕೆ ಬಂದಲ್ಲಿ ವ್ಯಾಗನ್ ಆರ್ ಕಾರನ್ನು ನಗರಪ್ರದೇಶದಲ್ಲಿ ಬಳಕೆಗಾಗಿ ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಟ್ರಾಫಿಕ್ ದಟ್ಟಣೆ ಸಮಸ್ಯೆಯ ನಡುವೆ ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಷ್ಟು ಮೈಲೇಜ್ ಸಿಗುವುದು ಕಷ್ಟಸಾಧ್ಯವಾದರ ಹೊಸ ಕಾರು ಪ್ರತಿ ಚಾರ್ಜ್‌ಗೆ 130 ರಿಂದ 140ಕಿ.ಮಿ ಮೈಲೇಜ್ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Soure: NDTV Auto

Most Read Articles

Kannada
English summary
Maruti Suzuki To Retail Electric Vehicles Via Nexa Dealerships. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X