ಕಾರು ಮಾರಾಟದಲ್ಲಿ ಮಾರುತಿ ಬ್ರೆಝಾ ಹೊಸ ದಾಖಲೆ

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಮಾರಾಟವಾದ ಕಾರುಗಳ ಪೈಕಿ ಮಾರುತಿ ಸುಜುಕಿ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿ ಕೂಡಾ ಒಂದಾಗಿದ್ದು, ಬಿಡುಗಡೆಯಾದ ಕೇವಲ ಮೂರುವರೆ ವರ್ಷಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಾಟಗೊಳ್ಳುವ ಮೂಲಕ ಅಗ್ಗಸ್ಥಾನಕ್ಕೇರಿದೆ.

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

2016ರ ಮಾರ್ಚ್ 8ರಂದು ಭಾರೀತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದ ವಿಟಾರಾ ಬ್ರೆಝಾ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಪ್ರತಿತಿಂಗಳು ಸರಾಸರಿ 13 ಸಾವಿರದಿಂದ 15 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಇದೀಗ 4.50 ಲಕ್ಷ ಯುನಿಟ್ ಮಾರಾಟ ಗುರಿತಲುಪಿದೆ. ಬಿಡುಗಡೆಯಾದ ನಂತರ ಗ್ರಾಹಕರ ಬೇಡಿಕೆಯೆಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿರುವ ಬ್ರೆಝಾ ಕಾರು ಮುಂದಿನ ಕೆಲವೇ ದಿನಗಳಲ್ಲಿ 5 ಲಕ್ಷ ಯುನಿಟ್ ಮಾರಾಟ ಗುರಿತಲುಪುವ ತವಕದಲ್ಲಿದೆ.

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

ಸದ್ಯ ಮಾರುಕಟ್ಟೆಯಲ್ಲಿ ಬ್ರೆಝಾ ಆವೃತ್ತಿಯು ಕೇವಲ ಡೀಸೆಲ್ ಎಂಜಿನ್‌ನಲ್ಲಿ ಮಾತ್ರವೇ ಮಾರಾಟಗೊಳ್ಳುತ್ತಿದ್ದು, ಬ್ರೆಝಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.86 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.77 ಲಕ್ಷ ಬೆಲೆ ಪಡೆದುಕೊಂಡಿದೆ.

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

ಗ್ರಾಹಕರ ಬೇಡಿಕೆಯೆಂತೆ ಒಟ್ಟು ಒಂಬತ್ತು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಬ್ರೆಝಾ ಕಾರು 1.3-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯವನ್ನು ಪಡೆದುಕೊಂಡಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದೆ.

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

ಮುಂಬರುವ ದಿನಗಳಲ್ಲಿ ಬಿಡುಗಡೆ ಸಿದ್ದವಾಗಿರುವ ಪೆಟ್ರೋಲ್ ಆವೃತ್ತಿಯು ಬ್ರೆಝಾ ಮಾರಾಟದಲ್ಲಿ ಮತ್ತಷ್ಟು ಹೆಚ್ಚಳವಾಗುವ ನೀರಿಕ್ಷೆಯಲ್ಲಿದ್ದು, 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ಹೊಸ ನಿಯಮದಂತೆ ಬ್ರೆಝಾ ಡೀಸೆಲ್ ಎಂಜಿನ್ ಮಾರಾಟವನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ. ಬ್ರೆಝಾ ಮಾತ್ರವಲ್ಲದೇ ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಡೀಸೆಲ್ ಎಂಜಿನ್ ಕಾರುಗಳನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಪೆಟ್ರೋಲ್, ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಗಮನಹರಿಸಲಾಗುತ್ತಿದೆ.

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿದ ನಂತರವಷ್ಟೇ ಬ್ರೆಝಾ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡುವುದಾಗಿ ಮಾರುತಿ ಸುಜುಕಿ ಸಂಸ್ಥೆಯು ಸುಳಿವು ನೀಡಿದ್ದು, ಹೊಸ ಕಾರು ಬಿಎಸ್-6 ಪ್ರೇರಣೆಯ 1.5 ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 105-ಬಿಹೆಚ್‍ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

ಇನ್ನು ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಈ ಬದಲಾವಣೆಗೆ ಪ್ರಮುಖ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿವೆ.

MOST READ: ವ್ಯಾಟ್ ಪ್ರಮಾಣದಲ್ಲಿ ಹೆಚ್ಚಳ- ಒಂದೇ ಬಾರಿಗೆ ಗಗನಕ್ಕೇರಿದ ಪೆಟ್ರೋಲ್ ಬೆಲೆ

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ನಿರ್ಮಾಣದ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಣವು ಅಸಾಧ್ಯ ಎನ್ನಲಾಗುತ್ತಿದ್ದು, ಆರ್ಥಿಕವಾಗಿ ಹೊರೆಯಾಗಲಿರುವ ಉನ್ನತೀಕರಣ ಪ್ರಕ್ರಿಯೆಯಿಂದ ಹಿಂದೆ ಸರಿದಿರುವ ಮಾರುತಿ ಸುಜುಕಿಯು ಡೀಸೆಲ್ ಎಂಜಿನ್ ಪರ್ಯಾಯವಾಗಿ ಹೈಬ್ರಿಡ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೆಚ್ಚಿಸುತ್ತಿದೆ.

MOST READ: ಜನಪ್ರಿಯ ಡೀಸೆಲ್ ಕಾರುಗಳ ಮೇಲೆ ಭರ್ಜರಿ ಆಫರ್ ಘೋಷಿಸಿದ ಮಾರುತಿ ಸುಜುಕಿ

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

ಈಗಾಗಲೇ ಮಾರುಕಟ್ಟೆಯಲ್ಲಿ ವ್ಯಾಗನ್‌ಆರ್, ಸೆಲೆರಿಯೊ, ಆಲ್ಟೋ 800 ಮತ್ತು ಎರ್ಟಿಗಾ ಮಾದರಿಗಳಲ್ಲಿ ಸಿಎನ್‌ಜಿ ಆಯ್ಕೆಯನ್ನು ಪರಿಚಯಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಹೊಸ ಹೊಸ ಪ್ರಯತ್ನಗಳನ್ನು ಕೈಗೊಳ್ಳುತ್ತಿದೆ.

MOST READ: ಹ್ಯುಂಡೈ ಬಹುನೀರಿಕ್ಷಿತ ಗ್ರಾಂಡ್ ಐ10 ನಿಯೋಸ್ ಬಿಡುಗಡೆ

ಕಾರು ಮಾರಾಟದಲ್ಲಿ ಹೊಸ ಮಾರುತಿ ಬ್ರೆಝಾ ಹೊಸ ದಾಖಲೆ

ಈ ಮೂಲಕ ಡೀಸೆಲ್ ಎಂಜಿನ್‌ನಲ್ಲಿ ದೊರೆಯುತ್ತಿದ್ದ ಮೈಲೇಜ್ ಪ್ರಮಾಣವನ್ನೇ ಪೆಟ್ರೋಲ್ ಹೈಬ್ರಿಡ್ ಮತ್ತು ಪೆಟ್ರೋಲ್ ಸಿಎನ್‌ಜಿ ವರ್ಷನ್‌ಗಳ ಮೂಲಕ ಒದಗಿಸಲು ಪ್ರಯತ್ನಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ಜಾರಿಯಾಗುವುದಕ್ಕೂ ಮುನ್ನವೇ ಗ್ರಾಹಕರನ್ನು ಹೊಸ ಕಾರುಗಳತ್ತ ಸೆಳೆಯುವ ವಿಶ್ವಾಸದಲ್ಲಿದೆ.

Most Read Articles

Kannada
English summary
Maruti Suzuki Vitara Brezza has driven past the 4.5 lakh-unit sales milestone in the Indian passenger vehicle market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X