ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಮಾರುತಿ ಸುಜುಕಿ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಮೊದಲ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡುವುದರ ಬಗ್ಗೆ ನಮಗೆಲ್ಲರಿಗೂ ತಿಳಿದೇ ಇದೇ. ಹಾಗೆಯೇ ಈ ಸಂಸ್ಥೆಯು ತಮ್ಮ ವ್ಯಾಗನ್ ಆರ್‍ ಕಾರಿನ ಎಲೆಕ್ಟ್ರಿಕ್ ಮಾದರಿಯನ್ನೆ ತಮ್ಮ ಮೊದಲ ಎಲೆಕ್ಟ್ರಿಕ್ ಕಾರಾಗಿ ಬಿಡುಗಡೆ ಮಾಡುವುದರ ಬಗ್ಗೆ ಕೂಡಾ ನಮಗೆಲ್ಲರಿಗು ತಿಳಿದಿದೆ. ಆದರೆ ಈ ಕಾರಿನ ಬಿಡುಗಡೆ ಅವಧಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲವಾದರೂ ಇದೀಗ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು ಸ್ಪಷ್ಠನೆ ನೀಡಿದ್ದಾರೆ.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಮಾರುತಿ ಸುಜುಕಿ ಸಂಸ್ಥೆಯಲ್ಲಿನ ಜನಪ್ರೀಯ ವ್ಯಾಗನ್ ಆರ್ ಕಾರು ದೇಶಿಯ ಮಾರುಕಟ್ಟೆಯಲ್ಲಿ ಸಧ್ಯ ಪೆಟ್ರೋಲ್ ಮತ್ತು ಸಿಎನ್‍ಜಿ ಮಾದರಿಯಲ್ಲಿ ಲಭ್ಯವಿರಲಿದ್ದು, ಇನ್ನು ಕೆಲವೇ ದಿನಗಳಲ್ಲಿ ಎಲ್‍ಪಿಜಿ ಮಾದರಿಯು ಸಹ ಲಭ್ಯವಾಗಲಿದೆ. ಮಾರುತಿ ಸುಜುಕಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು ಮಾಧ್ಯಮದೊಂದಿಗೆ ಮಾತನಾಡುತ್ತಾ ನಾವು 2020ರಲ್ಲಿ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡುತ್ತೇವೆ.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಹೀಗಾಗಿ ಮೊದಲಿಗೆ ಈ ಕಾರಿನ 50 ಯೂನಿಟ್‍‍ಗಳನ್ನು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದ್ದೆವೆ. ಎಲೆಕ್ಟ್ರಿಕ್ ವಾಹನಗಳು ಅತಿ ಹೆಚ್ಚು ಬ್ಯಾಟರಿ ವೆಚ್ಚವನ್ನು ಅವಲಂಬಿಸಿರುತ್ತದೆ. ಕಾರಿನ ವೆಚ್ಚದ ಸುಮಾರು 50-60 ಪ್ರತಿಶತದಷ್ಟು ಬ್ಯಾಟರಿಯ ಖರ್ಚೆ ಆಗಿರುತ್ತದೆ. ಆದ್ದರಿಂದ, ಇವಿ ಬೆಲೆ ಗಮನಾರ್ಹವಾಗಿ ಹೆಚ್ಚಾಗುತ್ತದೆ ಮತ್ತು ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯ ಮೇಲೆ ನಾವು ಬೆಲೆಯನ್ನು ನಿಗದಿ ಮಾಡುತ್ತೇವೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಮಾರುತಿ ಸುಜುಕಿ ಸಂಸ್ಥೆಯೇ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ ಕುರಿತಾದ ಮಾಹಿತಿ ಹಂಚಿಕೊಂಡಿದ್ದು, ಹೊಸ ಕಾರಿನಲ್ಲಿ ಕೇವಲ 1 ಗಂಟೆಯ ಒಳಗಾಗಿ ಶೇ.80 ರಷ್ಟು ಚಾರ್ಜ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸಿಸ್ಟಂ ಬಳಕೆ ಮಾಡಿರುವುದಾಗಿ ಮಾಹಿತಿ ನೀಡಿದೆ.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಕೆಲವು ಸುದ್ದಿ ಮೂಲಗಳ ಪ್ರಕಾರ, ಮಾರುತಿ ಸುಜುಕಿ ಸಂಸ್ಥೆಯು ಇ-ವರ್ಷನ್ ವ್ಯಾಗನ್ ಆರ್ ಕಾರು ಮಾದರಿಯನ್ನು ಟೊಯೊಟಾ ಜೊತೆ ಕೈ ಜೋಡಿಸಿ ಉತ್ಪಾದನೆ ಮಾಡುತ್ತಿದೆ ಎನ್ನಲಾಗಿದ್ದು, ಈ ಕಾರಿನ ಬೆಲೆಯು ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಸ್ಪರ್ಧಾತ್ಮಕವಾಗಿ ಇರಲಿವೆ ಎನ್ನಲಾಗಿದೆ.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಜೊತೆಗೆ ಎಲೆಕ್ಟ್ರಿಕ್ ಮಾದರಿಯ ವ್ಯಾಗನ್‍ ಆರ್ ಕಾರು ಮಾರುತಿ ಸುಜುಕಿ ಮತ್ತು ಟೊಯೊಟಾ ಪಾಲುದಾರಿಕೆಯಲ್ಲಿ ತಯಾರಾಗಲಿರುವ ಮೊದಲ ಎಲೆಕ್ಟ್ರಿಕ್ ಕಾರು ಇದಾಗಿದ್ದು, ಟೊಯೊಟಾ ಈಗಾಗಲೇ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿಗಾಗಿ ಅಲ್ಟ್ರಾ ಹೈ ಎಫಿಶಿಯೆನ್ಸಿ ಪವರ್‌ಟ್ರೈನ್ ಬ್ಯಾಟರಿಯನ್ನು ತಯಾರಿಸಿರುವುದಾಗಿ ಹೇಳಿಕೊಂಡಿದೆ.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಹೀಗಾಗಿ ಹೊಸ ಕಾರಿನಲ್ಲಿ ಲೀಥಿಯಂ ಅಯಾನ್ ಪ್ರೇರಿತ 72 ವೊಲ್ಟ್, 25kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಮಾರುತಿ ಸುಜುಕಿ ಅಧಿಕೃತ ಮಾಹಿತಿ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಚಾರ್ಜಿಂಗ್ ಮಾಡಿದ್ದಲ್ಲಿ ಗರಿಷ್ಠವಾಗಿ 150 ರಿಂದ 160 ಕಿ.ಮಿ ಮೈಲೇಜ್ ಪಡೆಯಬಹುದು ಎಂದಿದೆ.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಆದ್ರೆ ವಾಸ್ತಾಂಶಕ್ಕೆ ಬಂದಲ್ಲಿ ವ್ಯಾಗನ್ ಆರ್ ಕಾರನ್ನು ನಗರಪ್ರದೇಶದಲ್ಲಿ ಬಳಕೆಗಾಗಿ ವಿಶೇಷವಾಗಿ ವಿನ್ಯಾಸ ಮಾಡಲಾಗಿದ್ದು, ಟ್ರಾಫಿಕ್ ದಟ್ಟಣೆ ಸಮಸ್ಯೆಯ ನಡುವೆ ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಷ್ಟು ಮೈಲೇಜ್ ಸಿಗುವುದು ಕಷ್ಟ. ಆದರೂ ಹೊಸ ಕಾರಿನ ಮೈಲೇಜ್ ಪ್ರತಿ ಚಾರ್ಜ್‌ಗೆ 130ರಿಂದ 140ಕಿ.ಮಿ ಮೈಲೇಜ್ ಸಿಗಬಹುದು.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಇದಲ್ಲದೇ ಮಾರುತಿ ಸುಜುಕಿ ಸಂಸ್ಥೆಯು ದೇಶಿಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನೆ ಮಾಡುವ ಸಂಬಂಧ ಬರೋಬ್ಬರಿ ರೂ.700 ಕೋಟಿ ವೆಚ್ಚದಲ್ಲಿ ಗುಜರಾತ್‌ನಲ್ಲಿ ಬ್ಯಾಟರಿ ಉತ್ಪಾದನಾ ಘಟಕ ತೆರೆಯಲು ಈಗಾಗಲೇ ಕೇಂದ್ರದಿಂದ ಅನುಮತಿ ಪಡೆದಿದ್ದು, ಎಲೆಕ್ಟ್ರಿಕ್ ಕಾರುಗಳ ಬೆಲೆ ತಗ್ಗಿಸಲು ಇದು ಮಹತ್ವದ ಯೋಜನೆ ಎನ್ನಬಹುದು.

ಬಹಿರಂಗಗೊಂಡ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ಮಾಹಿತಿ

ಕೇವಲ ಎಲೆಕ್ಟ್ರಿಕ್ ಹ್ಯಾಚ್‍‍‍ಬ್ಯಾಕ್ ಮಾತ್ರವಲ್ಲದೆಯೆ ಮಾರುತಿ ಸುಜುಕಿ ಸಂಸ್ಥೆಯು ತಮ್ಮ ಜನಪ್ರಿಯ ಎರ್ಟಿಗಾ ಎಂಪಿವಿ ಕಾರಿನ ಎಲೆಕ್ಟ್ರಿಕ್ ಮಾದರಿಯನ್ನು ಸಹ ತಯಾರು ಮಾಡುತ್ತಿರುವ ಮಾಹಿತಿಗಳು ಲಭ್ಯವಾಗಿದೆ. ಹೀಗಾಗಿ ಸಂಸ್ಥೆಯು ಬಿಡುಗಡೆ ಮಾಡಲಿರುಬ ಎಲೆಕ್ಟ್ರಿಕ್ ವಾಹನಗ ಜನಾಪ್ರೀಯತೆಯು ಎಷ್ಟರ ಮಟ್ಟಿಗೆ ಇರಲಿದೆ ಎಂದು ಬಿಡುಗಡೆಗೊಂಡ ನಂತರ ನೋಡಬೇಕಿದೆ.

Most Read Articles

Kannada
English summary
Maruti Suzuki WagonR Electric Hatchback Launch Details Revealed. Read In Kannada
Story first published: Wednesday, July 17, 2019, 15:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X