ಜೂನ್ ತಿಂಗಳಿನಲ್ಲಿ ವ್ಯಾಗನ್ ಆರ್ ಮತ್ತು ಸ್ಯಾಂಟ್ರೋ ಕಾರುಗಳ ಮಾರಾಟದ ಮಾಹಿತಿ
ದೇಶಿಯ ಮಾರುಕಟ್ಟೆಯ ಹ್ಯಾಚ್‍ಬ್ಯಾಕ್ ಸೆಗ್ಮೆಂಟ್ ಕಾರುಗಳಲ್ಲಿ ಮಾರುತಿ ಸುಜುಕಿ ವ್ಯಾಗನ್ ಆರ್ ಮತ್ತು ಹ್ಯುಂಡೈ ಸ್ಯಾಂಟ್ರೋ ಕಾರುಗಳು ತಿಳಿಯದವರು ಯಾರೂ ಇರಲಾರರು, ಏಕೆಂದರೆ ಇವುಗಳು ಅಗ್ಗದ ಬೆಲೆಯಲ್ಲಿ ಹೆಚ್ಚಿನ ಸೌಕರ್ಯಗಳನ್ನು ಗ್ರಾಹಕರಿಗೆ ಒದಗಿಸುವಲ್ಲಿ ಯಶಸ್ವಿಯಾಗಿದ್ದು, ದಶಕಗಳ ಕಾಲ ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿತ್ತು.

ಆದರೆ ಕೇಂದ್ರ ಸರ್ಕಾರವು ಹೊಸ ನಿಯಮಾವಳಿಗಳನ್ನು ಜಾರಿ ಮಾಡಲು ಮುಂದಾದಾಗ ಮಾರುತಿ ಸುಜುಕಿ ಸಂಸ್ಥೆಯು ತಮ್ಮ ವ್ಯಾಗನ್ ಆರ್ ಕಾರನ್ನು ಮತ್ತು ಹ್ಯುಂಡೈ ತಮ್ಮ ಸ್ಯಾಂಟ್ರೋ ಕಾರುಗಳನ್ನು ವಿನ್ಯಾಸದಲ್ಲಿ ಮತ್ತು ವೈಶಿಷ್ಟ್ಯತೆಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿ ಮಾರುಕಟ್ಟೆಯಲ್ಲಿ ಪುನಃ ಬಿಡುಗಡೆ ಮಾಡಲು ಮುಂದಾಗಿದ್ದರು. ಈ ಎರಡೂ ಸಂಸ್ಥೆಗಳು ವಿಶೇಷವಾದ ವಿನ್ಯಾಸದವನ್ನು ಹೊತ್ತು ಗ್ರಾಹಕರ ಭಿರುಚಿಗೆ ತಕ್ಕ ಹಾಗೆ ಬದಲಾವಣೆ ಮಾಡಿಕೊಂಡು ಮತ್ತೆ ಮಾರುಕಟ್ಟೆಯಲ್ಲಿ ರೀ ಎಂಟ್ರಿ ಕೊಟ್ಟವು.

ಈ ನಿಟ್ಟಿನಲ್ಲಿ ಮರು ಬಿಡುಗಡೆಗೊಂಡ ಹೊಸ ಮಾರುತಿ ಸುಜುಕಿ ವ್ಯಾಗನ್ ಆರ್ ಮತ್ತು ಹ್ಯುಂಡೈ ಸ್ಯಾಂಟ್ರೋ ಕಾಂಪ್ಯಾಕ್ಟ್ ಹ್ಯಾಚ್‍ಬ್ಯಾಕ್ ಕಾರುಗಳ ಮಾರಾಟದಲ್ಲಿ ಪ್ರತೀ ತಿಂಗಳೂ, ಊಹಿಸಲಾಗದಷ್ಟು ಮಾರಾಟವನ್ನು ಕಾಣುತ್ತಿದ್ದು, ಜೂನ್ 2019ರ ಅವಧಿಯಲ್ಲಿ ಈ ಎರಡೂ ಕಾರುಗಳು ಎಷ್ಟು ಸಂಖ್ಯೆಯಲ್ಲಿ ಮಾರಾಟವಾಗಿದೆ ಎಂದು ಈ ಲೇಖನದಲ್ಲಿ ತಿಳಿಯಿರಿ.

ಜೂನ್ 2019ರ ಕಂಪ್ಯಾಕ್ಟ್ ಹ್ಯಾಚ್‍ಬ್ಯಾಕ್ ಸೆಗ್ಮೆಂಟ್‍ನಲ್ಲಿ ಮಾರುತಿ ಸುಜುಕಿ ಸಂಸ್ಥೆಯ ವ್ಯಾಗನ್ ಆರ್ ಕಾರುಗಳು 10,228 ಯೂನಿಟ್ ಮಾರಾಟವಾದರೆ ಇನುನ್ಳಿದ ಹ್ಯುಂಡೈ ಸ್ಯಾಂಟ್ರೋ 4141 ಯೂನಿಟ್ ಮಾರಾಟವಾಗಿದೆ. ಹಾಗು ಈ ಮಾರುತಿ ಸುಜುಕಿ ಸ್ವಿಫ್ಟ್ ಕಾರು 16,330 ಯೂನಿಟ್ ಮಾರಾಟವಾಗುವುದದಿಂದ ಕಂಪ್ಯಾಕ್ಟ್ ಹ್ಯಾಚ್‍ಬ್ಯಾಕ್ ಕಾರುಗಳ ಮಾರಾಟದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

ಬೆಲೆ ಮತ್ತು ಬುಕ್ಕಿಂಗ್
ಹೊಸ ಮಾರುತಿ ಸುಜುಕಿ ವ್ಯಾಗನ್ ಆರ್ ಕಾರು ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ. 4.19 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದು, ಖರೀದಿಸಲು ಬಯಸುವ ಗ್ರಾಹಕರು ನಿಮ್ಮ ಸಮೀಪದಲ್ಲಿರುವ ಮಾರುತಿ ಸುಜುಕಿ ಡೀಲರ್‍ಗಳ ಬಳಿ ರೂ. 11,000 ನೀಡಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಹೊಸ ವ್ಯಾಗನ್ ಆರ್ ವಿನ್ಯಾಸ
ಬಿಡುಗಡೆಯಾದ ಹೊಸ ಮಾರುತಿ ಸುಜುಕಿ ವ್ಯಾಗನ್ ಆರ್ ಕಾರಿನ ಮುಂಭಾಗದಲ್ಲಿ ಈ ಬಾರಿ ಹೊಸ ಗ್ರಿಲ್ ಡಿಸೈನ್, ನವೀಕರಿಸಲಾದ ಬಂಪರ್ ಮತ್ತು ಫಾಗ್ ಲ್ಯಾಂಪ್ ಅನ್ನು ಪಡೆದುಕೊಂಡಿದೆ. ಇದಲ್ಲದೇ ಅಪ್ಡೇಟೆಡ್ ವರ್ಟಿಕಲ್ ಟೈಲ್‍ಲೈಟ್ಸ್, ಕ್ರೋಮ್ ಸ್ಟ್ರಿಪ್ ಅನ್ನು ನೀಡಲಾಗಿದೆ.

ಇನ್ನು ಕಾರಿನ ಸೈಡ್ ಪ್ರೊಫೈಲ್ ಬಗ್ಗೆ ಹೇಳುವುದಾದರೆ ಈ ಕಾರು 14 ಇಂಚಿನ ಅಲಾಯ್ ವ್ಹೀಲ್ಸ್, ಪ್ಲೋಟಿಂಗ್ ರೂಫ್ ಡಿಸೈನ್, ಮತ್ತು ಒಆರ್‍ವಿಎಂನ ಮೇಲೆ ಇಂಟಿಗ್ರೇಟೆಡ್ ಇಂಡಿಕೇಟರ್‍ಗಳನ್ನು ನೀಡಲಾಗಿದೆ. ಕಾರಿನ ಹಿಂಭಾಗದಲ್ಲಿರುವ ನಂಬರ್ ಪ್ಲೇಟ್‍ನ ಮೇಲೆ ಕ್ರೋಮ್ ಸ್ಟ್ರಿಪ್ ಹಾಗು 'Wagon R' ಬ್ಯಾಡ್ಜಿಂಗ್ ಅನ್ನು ನೀಡಲಾಗಿದೆ.

ಹೊಸ ವ್ಯಾಗನ್ ಆರ್ ಕಾರಿನ ಸುತ್ತಳತೆ
ಹೊಸ ಮಾರುತಿ ಸುಜುಕಿ ವ್ಯಾಗನ್ ಆರ್ ಕಾರು ಹಿಂದಿನ ಮಾದರಿಯ ಕಾರಿಗಿಂತಲೂ ಗಾತ್ರದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಹಿಂದಿನ ಮಾದರಿಗಿಂತಲೂ 60ಎಂಎಂ ಉದ್ದ, 145ಎಂಎಂ ಅಗಲ ಮತ್ತು 35ಎಂಎಂನ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಅಧಿಕವಾಗಿ ಪಡೆದುಕೊಂಡಿದೆ.

ವೈಶಿಷ್ಟ್ಯತೆಗಳು
ಹೊಸ ವ್ಯಾಗನ್ ಆರ್ ಕಾರಿನ ಒಳಭಾಗದಲ್ಲಿ ಡ್ಯುಯಲ್ ಟೋನ್ ಡ್ಯಾಶ್‍ಬೋರ್ಡ್, ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಸಪೋರ್ಟ್ ಮಾಡುವ 7 ಇಂಚಿನ ಟಚ್‍ಸ್ಕ್ರೀನ್ ಒನ್ಫೋಟೈನ್ಮೆಂಟ್ ಸಿಸ್ಟಂ, ಮ್ಯಾನುವಲ್ ಎಸಿ ಕಂಟ್ರೋಲ್ಸ್, ವಿದ್ಯುತ್‍ನಿಂದ ಅಡ್ಜಸ್ಟ್ ಮಾಡಬಹುದಾದ ಒಆರ್‍ವಿಎಂ, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ಸ್, ಪವರ್ ಮೀಟರ್ ಮತ್ತು ಅನಾಲಾಗ್ ಸ್ಪೀಡೊಮೀಟರ್ ಅನ್ನು ಅಳವಡಿಸಲಾಗಿದೆ.

ಎಂಜಿನ್ ಸಾಮರ್ಥ್ಯ
2019ರ ಹೊಸ ವ್ಯಾಗನ್ ಆರ್ ಕಾರಿನ ಎಲ್ಲಾ ವೇರಿಯಂಟ್‍ಗಳು 1.0 ಲೀಟರ್ 3 ಸಿಲೆಂಡರ್ ಪೆಟ್ರೋಲ್ ಎಂಜಿನ್ ಸಹಾಯದಿಂಡ 67ಬಿಹೆಚ್‍ಪಿ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿರುತ್ತದೆ. ಮತ್ತು ಕಾರಿನ ವಿಎಕ್ಸ್ಐ ಹಾಗು ಜೆಡ್ಎಕ್ಸ್ಐ ವೇರಿಯಂಟ್ ಕಾರುಗಳು 1.2 ಲೀಟರ್ 4 ಸಿಲೆಂಡರ್ ಪೆಟ್ರೋಲ್ ಎಂಜಿನ್ ಸಹಾಯದಿಂದ 90 ಬಿಹೆಚ್‍ಪಿ ಮತ್ತು 113ಎನ್ಎಮ್ ಟಾಕ್ರ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದೆ.
ಎರಡೂ ಎಂಜಿನ್ ಅನ್ನು 5 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಹಾಗು 1.2 ಲೀಟರ್ ಎಂಜಿನ್ ಅನ್ನು ಮಾರುತಿ ಸುಜುಕಿ ಸಂಸ್ಥೆಯ ಮಾರುತಿ ಎಜಿಎಸ್ (ಆಟೋ ಗೇರ್ ಶಿಫ್ಟ್) ಎಂಬ ಟ್ರಾನ್ಸ್ ಮಿಷನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿರಲಿದೆ.

ಸುರಕ್ಷಾ ಸಾಧನಗಳು
ಮಾರುತಿ ಸುಜುಕಿ ವ್ಯಾಗನ್ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚು ಒತ್ತನ್ನು ನೀಡಲಾಗಿದ್ದು, ಎಬಿಎಸ್‍ನೊಂದಿಗೆ ಇಬಿಡಿ, ಡ್ಯುಯಲ್ ಏರ್‍ಬ್ಯಾಗ್ಸ್, ಸೀಟ್ ಬೆಲ್ಟ್ ರಿಮೈಂಡರ್, ಹೈ ಸ್ಪೀಡ್ ಅಲರ್ಟ್ ಸಿಸ್ಟಂ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸಾರ್‍ಗಳನ್ನು ಅಳವಡಿಸಲಾಗಿದೆ.


Click it and Unblock the Notifications








