ಮತ್ತೊಂದು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಗೊಳಿಸಲಿವೆ ಮಾರುತಿ ಸುಜುಕಿ ಮತ್ತು ಟೊಯೊಟಾ
ಸಹಭಾಗಿತ್ವದ ಯೋಜನೆ ಅಡಿಯಲ್ಲಿ ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಈಗಾಗಲೇ ರೀಬ್ಯಾಡ್ಜ್ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ಅಧಿಕೃತವಾಗಿ ಆರಂಭಿಸಿದ್ದು, ಗ್ಲಾಂಝಾ ಕಾರು ಮಾರಾಟದ ಯಶಸ್ವಿ ನಂತರ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ಇರಾದೆಯಲ್ಲಿವೆ.

ಮಾಹಿತಿಗಳ ಪ್ರಕಾರ, ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಕಾರು ಮಾದರಿಗಳನ್ನು ರೀಬ್ಯಾಡ್ಜ್ ಮಾದರಿಯಲ್ಲಿ ಬಿಡುಗಡೆಯ ಜೊತೆಗೆ ಗ್ರಾಹಕರ ಬೇಡಿಕೆ ಕೆಲವು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗೆ ಸಿದ್ದತೆ ನಡೆಸುತ್ತಿವೆ. ವಿಟಾರಾ ಬ್ರೆಝಾ ಮತ್ತು ಎಸ್-ಕ್ರಾಸ್ ನಡುವಿನ ಅಂತರ ತುಂಬವ ಸಂಬಂಧ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಅಭಿವೃದ್ದಿಗೊಳಿಸಲಾಗುತ್ತಿದ್ದು, ಟೊಯೊಟಾ ಸಂಸ್ಥೆಯೇ ಹೊಸ ಕಾರಿನ ಅಭಿವೃದ್ದಿ ಹೊಣೆ ಹೊತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದ ಅಬ್ಬರ ಹೆಚ್ಚುತ್ತಿದ್ದು, ವಿಟಾರಾ ಬ್ರೆಝಾ ಕಾರಿನ ರೀಬ್ಯಾಡ್ಜ್ ಬದಲು ಸಹಭಾಗಿತ್ವದ ಯೋಜನೆ ಅಡಿ ಮತ್ತೊಂದು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲು ಮಾರುಕಟ್ಟೆ ಅಧ್ಯಯನ ನಡೆಸಲಾಗುತ್ತಿದೆ.

ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಕಾರು ಮಾರಾಟ ಆರಂಭಿಸಿದ ಕೆಲವೇ ದಿನಗಳಲ್ಲಿ ಭರ್ಜರಿ ಪೈಪೋಟಿ ನೀಡುತ್ತಿರುವ ಕಿಯಾ ಮೋಟಾರ್ಸ್ ಮತ್ತು ಎಂಜಿ ಮೋಟಾರ್ ಸಹ ಕಂಪ್ಯಾಕ್ಟ್ ಎಸ್‌ಯುವಿ ಮೇಲೆ ಹೆಚ್ಚಿನ ಗಮನಹರಿಸುತ್ತಿದ್ದು, ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಗಳು ಇದೇ ನಿಟ್ಟಿನಲ್ಲಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಉತ್ಪಾದನೆಯ ಯೋಜನೆ ರೂಪಿಸಿವೆ.

ಮಾರುತಿ ಸುಜುಕಿ ಮತ್ತು ಟೊಯೊಟಾ ಸಹಭಾಗಿತ್ವದಲ್ಲಿ ಅಭಿವೃದ್ದಿಗೊಳ್ಳಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಸದ್ಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯಲ್ಲಿರುವ ಕಿಯಾ ಸೆಲ್ಟೊಸ್, ಹ್ಯುಂಡೈ ಕ್ರೆಟಾ ಮತ್ತು ಎಕ್ಸ್‌ಯುವಿ500 ಕಾರುಗಳಿಗೆ ಪೈಪೋಟಿಯಾಗಿ ಈ ಹೊಸ ಕಂಪ್ಯಾಕ್ಟ್ ಎಸ್‌ಯುವಿ ರಸ್ತೆಗಿಳಿಯಲಿದೆ. ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ.12 ಲಕ್ಷದಿಂದ ರೂ.18 ಲಕ್ಷ ಬೆಲೆ ಹೊಂದಿರಲಿದ್ದು, ಎಸ್-ಕ್ರಾಸ್ ಕಾರಿಗಿಂತಲೂ ಹೆಚ್ಚು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಬ್ರೆಝಾ ಕಾರು ಹ್ಯುಂಡೈ ವೆನ್ಯೂ ಮತ್ತು ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಪೈಪೋಟಿ ನೀಡುತ್ತಿದ್ದರೆ ಬಿಡುಗಡೆಯಾಗಲಿರುವ ಹೊಸ ಕಾರು ಮಧ್ಯಮ ಕ್ರಮಾಂಕದ ಬಿ ಸೆಗ್ಮೆಂಟ್‌ನಲ್ಲಿರುವ ಕಾರುಗಳಿಗೆ ಪೈಪೋಟಿಯಾಗಿ ಪ್ರೀಮಿಯಂ ಫೀಚರ್ಸ್ ಜೊತೆಗೆ ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಲಿದೆ.

ಹೊಸ ಕಾರಿನ ಅಭಿವೃದ್ದಿ ಕುರಿತಂತೆ ಈಗಾಗಲೇ ವಿವಿಧ ಹಂತದ ಮಾತುಕತೆಗಳು ನಡೆಯುತ್ತಿದ್ದು, ಎಂಜಿನ್ ಆಯ್ಕೆ ಬಗೆಗೆ ಇದುವರೆಗೆ ಯಾವುದೇ ಸ್ಪಷ್ಟ ಮಾಹಿತಿಯಿಲ್ಲ. ಆದರೂ ಕೂಡಾ ಹೊಸ ಕಾರು ಮಾರುತಿ ಸಜುಕಿಯ ಹೊಚ್ಚ ಹೊಸ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿದ್ದು, ಪೆಟ್ರೋಲ್ ಮಾದರಿಯನ್ನು ಟೊಯೊಟಾ ಸಂಸ್ಥೆಯು ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಳಿಸಲಿದೆ ಎನ್ನಲಾಗುತ್ತಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಹ್ಯುಂಡೈ ಕೊನಾ ಎಲೆಕ್ಟ್ರಿಕ್ ಕಾರು ಪಡೆದ ರೇಟಿಂಗ್ ಎಷ್ಟು ಗೊತ್ತಾ?

ಇನ್ನು 2020ರ ಏಪ್ರಿಲ್ 1 ರಿಂದ ಬಿಎಸ್-6 ನಿಯಮ ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸಜುಕಿಯ ಸಣ್ಣ ಗಾತ್ರದ ಡೀಸೆಲ್ ಎಂಜಿನ್ ಆಯ್ಕೆಯು ಸ್ಥಗಿತಗೊಳ್ಳಲಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಾತ್ರವೇ 1.5-ಲೀಟರ್ ಸಾಮಾರ್ಥ್ಯದ ಹೊಸ ಎಂಜಿನ್ ಅಭಿವೃದ್ದಿಗೊಳಿಸುತ್ತಿದೆ.
MOST READ: ರೋಡ್ ಟ್ಯಾಕ್ಸ್‌ನಲ್ಲಿ ಭರ್ಜರಿ ಇಳಿಕೆ- ಹೆಚ್ಚಳಗೊಂಡ ಹೊಸ ವಾಹನಗಳ ಮಾರಾಟ..!

ಹೀಗಾಗಿ 1.4-ಲೀಟರ್ ಸಾಮರ್ಥ್ಯದ ಡೀಸೆಲ್ ಕೈಬಿಡಲಿರುವ ಮಾರುತಿ ಸಜುಕಿಯು 1.5-ಲೀಟರ್ ಹೊಸ ಡೀಸೆಲ್ ಎಂಜಿನ್ ಹೊರತರುತ್ತಿದ್ದು, ಹೈಎಂಡ್ ಮಾದರಿಗಳಲ್ಲಿ ಮಾತ್ರವೇ ಈ ಎಂಜಿನ್ ಖರೀದಿಗೆ ಲಭ್ಯವಾಗಲಿದೆ. ಇನ್ನುಳಿದಂತೆ 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆ ಸ್ಮಾರ್ಟ್ ಹೈಬ್ರಿಡ್ ಆವೃತ್ತಿಗಳು ಖರೀದಿಗೆ ಲಭ್ಯವಿರಲಿದ್ದು, ಇದೇ ಕಾರಣಕ್ಕೆ ಮಾರುತಿ ಸುಜುಕಿ ಮತ್ತು ಟೊಯೊಟಾ ಸಂಸ್ಥೆಯು ರೀಬ್ಯಾಡ್ಜ್ ಬದಲಿದೆ ಹೊಸ ಕಾರು ಬಿಡುಗಡೆಗೆ ಮುಂದಾಗಿವೆ.
MOST READ: ಬರೋಬ್ಬರಿ 12 ಕೋಟಿ ಮೌಲ್ಯದ ಬೆಂಟ್ಲಿ ಮೊಜಾನ್ ಕಾರು ಖರೀದಿಸಿದ ಬೆಂಗಳೂರು ಉದ್ಯಮಿ

ಕಂಪ್ಯಾಕ್ಟ್ ಎಸ್‌ಯುವಿ ಮಾತ್ರವಲ್ಲದೇ, ಸಿ ಸೆಗ್ಮೆಂಟ್ ಎಂಪಿವಿ ಸಹ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಹೊಸ ಕಾರುಗಳು ರೀಬ್ಯಾಡ್ಜ್ ಕಾರುಗಳನ್ನು ಹೊರತುಪಡಿಸಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳ್ಳವ ಮೂಲಕ 2021ರ ಆರಂಭದಲ್ಲಿ ಬಿಡುಗಡೆಯಾಗಲಿವೆ.
Source: ET Auto


Click it and Unblock the Notifications