ಮಾರುತಿ ಸುಜುಕಿ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಮಾರುತಿ ಸುಜುಕಿ ಸಂಸ್ಥೆಯು ಇದೇ ಮೊದಲ ಬಾರಿಗೆ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಲ್ಲಿ ಪೆಟ್ರೋಲ್ ಆಯ್ಕೆಯನ್ನು ಪರಿಚಯಿಸುತ್ತಿದ್ದು, ಹೊಸ ಕಾರಿನ ಬಿಡುಗಡೆ ದಿನಾಂಕವನ್ನು 2020ರ ಫೆಬ್ರುವರಿಗೆ ಮುಂದೂಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಕಳೆದ ಕೆಲದಿನಗಳಿಂದ ಮಾರುತಿ ಸುಜುಕಿ ಸಂಸ್ಥೆಯು ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್ ಆರಂಭದಲ್ಲಿ ಬ್ರೆಝಾ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಇದೀಗ ಬಂದ ಮಾಹಿತಿಗಳ ಪ್ರಕಾರ ಪೆಟ್ರೋಲ್ ವಿಟಾರಾ ಬ್ರೆಝಾ ಆವೃತ್ತಿಯು 2020ರ ಫೆಬ್ರುವರಿಯಲ್ಲಿ ಬಿಡುಗಡೆಯಾಗುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಹೊಸ ಕಾರು ರಸ್ತೆಗಿಳಿಯಲಿದೆಯೆಂತೆ.

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಇನ್ನು ಮಾರುತಿ ಸುಜಕಿ ಸಂಸ್ಥೆಯು ಸದ್ಯ ಡೀಸೆಲ್ ಎಂಜಿನ್ ಕಾರುಗಳ ಮಾರಾಟದಲ್ಲಿ ಸಾಕಷ್ಟು ಬದಲಾವಣೆ ತರುತ್ತಿದ್ದು, 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಕಡಿಮೆ ಸಾಮಾರ್ಥ್ಯದ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೈಬಿಡುತ್ತಿದೆ. ಹೀಗಾಗಿ ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚಿನ ಗಮನಹರಿಸಿದ್ದು, ತನ್ನ ಜನಪ್ರಿಯ ಬ್ರೆಝಾ ಆವೃತ್ತಿಯಲ್ಲೂ ಕೂಡಾ ಇದೀಗ ಮಹತ್ವದ ಬದಲಾವಣೆ ಮಾಡುತ್ತಿದೆ.

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಬಿಎಸ್-6 ನಿಯಮವನ್ನು ಪಾಲನೆ ಮಾಡಲು ಸಾಧ್ಯವಿರದ ಡೀಸೆಲ್ ಎಂಜಿನ್‌ಗಳಿಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದು, ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ. ಇದರಿಂದ ಡೀಸೆಲ್ ಎಂಜಿನ್ ಕಾರುಗಳ ಆಯ್ಕೆಯನ್ನು ಈಗಿನಿಂದಲೇ ಕಡಿತಗೊಳಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಮೊದಲ ಹಂತವಾಗಿ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಭಾರೀ ಬದಲಾವಣೆ ತರುತ್ತಿದೆ.

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಪೆಟ್ರೋಲ್ ಮಾದರಿಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಪರಿಚಯಿಸುತ್ತಿರುವ ಮಾರುತಿ ಸುಜುಕಿಯು 2020ರ ಏಪ್ರಿಲ್ 1ರಿಂದಲೇ ಪೂರ್ಣ ಪ್ರಮಾಣದಲ್ಲಿ ಡೀಸೆಲ್ ಕಾರುಗಳ ಮಾರಾಟವನ್ನು ಬಂದ್ ಮಾಡಲಿದ್ದು, ಬಿಎಸ್-6 ನಿಯಮವನ್ನು ಪಾಲಿಸಲು ಸಾಧ್ಯವಾಗದ ಬ್ರೆಝಾ ಡೀಸೆಲ್ ಎಂಜಿನ್ ಮಾದರಿಯು ಮಾರುಕಟ್ಟೆಯಿಂದ ನಿರ್ಗಮಿಸುವ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ನಿಯಮ ಅನುಸಾರವಾಗಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್ ಮಾದರಿಗಳನ್ನು ಉನ್ನತಿಕರಣ ಮಾಡಿದರೂ ಸಹ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದ್ದು, ಇದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಹೀಗಾಗಿ ಡೀಸೆಲ್ ಎಂಜಿನ್ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಡೀಸೆಲ್ ಎಂಜಿನ್‌ನಷ್ಟೇ ಇತರೆ ಕಾರುಗಳಲ್ಲೂ ಮೈಲೇಜ್ ಮತ್ತು ಪರ್ಫಾಮೆನ್ಸ್ ನೀಡುವುದರ ಬಗ್ಗೆ ಹೆಚ್ಚಿನ ಗಮನಹರಿಸಿದೆ.

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಮಾರುತಿ ಸುಜುಕಿಯು ಇತ್ತೀಚಿಗಷ್ಟೆ ಹೊಸ ತಂತ್ರಜ್ಞಾನ ಪ್ರೇರಿತ 1.5 ಲೀಟರ್ ಪೆಟ್ರೊಲ್ ಎಂಜಿನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಹೊಸ ಪೆಟ್ರೋಲ್ ಎಂಜಿನ್ ಅನ್ನು ಮೊದಲ ಬಾರಿಗೆ ಸಿಯಾಜ್ ಸೆಡಾನ್‍ನಲ್ಲಿ ಅಳವಡಿಸಲಾಗಿತ್ತು.ಇದೀಗ ಇದೇ ಎಂಜಿನ್ ಅನ್ನು ವಿಟಾರಾ ಬ್ರಿಝಾ ಸೇರಿದಂತೆ ಇತರೆ ಕೆಲವು ಕಾರು ಮಾದರಿಗಳಲ್ಲೂ ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿದೆ.

MOST READ: ಪ್ಲಾಸ್ಟಿಕ್‌ನಿಂದ ಉತ್ಪಾದನೆ ಮಾಡಲಾದ ಈ ಪೆಟ್ರೋಲ್ ದರ ಎಷ್ಟು ಗೊತ್ತಾ?

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಹೊಚ್ಚ ಹೊಸ 1.5 ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು ಬಿಎಸ್-6 ಪ್ರೇರಣೆಯೊಂದಿಗೆ ಅಭಿವೃದ್ಧಿ ಹೊಂದಿದ್ದು, ಉತ್ತಮ ಮೈಲೇಜ್‌ನೊಂದಿಗೆ 105-ಬಿಹೆಚ್‍ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

MOST READ: ಆಂಧ್ರ ನೂತನ ಸಿಎಂ ಜಗನ್ ಭದ್ರತೆಗಾಗಿ 4 ಕೋಟಿ ವೆಚ್ಚದ ಬುಲೆಟ್ ಪ್ರೂಫ್ ಕಾರ್

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಹಾಗೆಯೇ ಪೆಟ್ರೋಲ್ ಎಂಜಿನ್ ಜೊತೆಯಲ್ಲಿ ವಿಟಾರಾ ಬ್ರೆಝಾದಲ್ಲಿ ಸ್ಮಾರ್ಟ್ ಹೈಬ್ರಿಡ್ ಸಿಸ್ಟಮ್ ಹೊಂದಿರಲಿದ್ದು, ಸ್ಟಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಬರಲಿದೆ. ಭವಿಷ್ಯದ ಯೋಜನೆಗಳಿಗಾಗಿ ಆಟೋಮ್ಯಾಟಿಕ್ ಟ್ರಾನ್ಸ್ ಮಿಷನ್ ಫೋರ್ ಸ್ಪೀಡ್ ಟಾರ್ಕ್ ಕನ್ವರ್ಟರ್‍‍ಗಳನ್ನು ನೀಡಲಾಗಿದ್ದು, ಇದೇ ಮಾದರಿಯ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಈಗಾಗಲೇ ಸಿಯಾಜ್ ಸೆಡಾನ್ ನಲ್ಲಿ ಅಳವಡಿಸಲಾಗಿದೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಮಾರುತಿ ಸುಜುಕಿ ಬ್ರೆಯಾ ಪೆಟ್ರೋಲ್ ವರ್ಷನ್ ಬಿಡುಗಡೆಯ ದಿನಾಂಕ ಬಹಿರಂಗ?

ಬರಲಿರುವ ಪೆಟ್ರೋಲ್ ಎಂಜಿನ್ ಬ್ರೆಝಾ ಹೊರತಾಗಿ ಹೊಸ ಕಾರಿನಲ್ಲಿ ಇನ್ನು ಹಲವಾರು ಬದಲಾವಣೆಗಳನ್ನು ಕಾಣಬಹುದಾಗಿದ್ದು, ಕ್ರಾಸ್ ಬ್ಯಾಡ್ಜ್ ಯೋಜನೆಯಲ್ಲಿ ಟೊಯೊಟಾ ಸಂಸ್ಥೆಯು ಸಹ ಇದೇ ಕಾರನ್ನು ಕೆಲವು ಬದಲಾವಣೆಗಳೊಂದಿಗೆ ಪೆಟ್ರೋಲ್ ಮತ್ತು ಸ್ಮಾರ್ಟ್ ಹೈಬ್ರಿಡ್ ವೈಶಿಷ್ಟ್ಯತೆಗಳೊಂದಿಗೆ ಮರುಬಿಡುಗಡೆ ಮಾಡಲಿದೆ.

Source: autocarindia

Most Read Articles

Kannada
English summary
Vitara Brezza petrol model is expected to come with a 1.5-litre engine and will likely be showcased at Auto Expo 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X