3 ವರ್ಷದಲ್ಲಿ ನಾಲ್ಕು ಲಕ್ಷಕ್ಕು ಅಧಿಕವಾಗಿ ಮಾರಾಟಗೊಂಡ ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಎದುರಾಳಿ

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಸಂಸ್ಥೆಯು ತನ್ನ ಉತ್ಪನ್ನಗಳ ಮಾರಾಟದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುತ್ತಿದ್ದು, ವಿಟಾರಾ ಬ್ರೆಝಾ ಮಾರಾಟದಲ್ಲಿನ ಏರಿಕೆಯು ಹೊಸ ದಾಖಲೆಗಳಿಗೆ ಕಾರಣವಾಗಿದೆ.

2016ರ ಮಾರ್ಚ್‌ನಲ್ಲಿ ಮೊದಲ ಬಾರಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿದ್ದ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳು 3 ವರ್ಷದ ಅವಧಿಯಲ್ಲಿ ಬರೋಬ್ಬರಿ 4 ಲಕ್ಷಕ್ಕಿಂತಾ ಹೆಚ್ಚಿನ ಕಾರುಗಳು ಮಾರಾಟಗೊಂಡಿದ್ದು, ಸಬ್-4-ಮೀಟರ್ ಎಸ್‌ಯುವಿ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ಮೂಲಕ ಸದ್ಯ ಭಾರತೀಯ ಆಟೋ ಉದ್ಯಮದಲ್ಲಿ ಅಗ್ರಸ್ಥಾನದತ್ತ ಹೆಜ್ಜೆಹಾಕುತ್ತಿದೆ.

3 ವರ್ಷದಲ್ಲಿ ನಾಲ್ಕು ಲಕ್ಷಕ್ಕು ಅಧಿಕವಾಗಿ ಮಾರಾಟಗೊಂಡ ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಎದುರಾಳಿ

ಈ ಮೂಲಕ 2018ರ ಮೊದಲಾರ್ಧದಲ್ಲಿ ಅತಿ ಹೆಚ್ಚು ಮಾರಾಟಗೊಂಡ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವ ವಿಟಾರಾ ಬ್ರೆಝಾ ಕಾರುಗಳು ಬಿಡುಗಡೆಗೊಂಡ ಮೊದಲ ದಿನದಿಂದಲೂ ಈ ತನಕ ಒಂದೇ ಪ್ರಮಾಣದ ಬೇಡಿಕೆಯನ್ನು ಕಾಯ್ದುಕೊಂಡು ಬಂದಿರುವುದು ಅದರ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ.

ಇದಕ್ಕೆಲ್ಲಾ ಪ್ರಮುಖ ಕಾರಣ ಏನೆಂದರೆ ಕೈಗೆಟುಕುವ ಬೆಲೆಗಳಲ್ಲಿ ಲಭ್ಯವಿರುವ ಜನಪ್ರಿಯ ಎಸ್‌ಯುವಿಗಳಲ್ಲಿ ವಿಟಾರಾ ಬ್ರೆಝಾ ಮುಂಚೂಣಿಯಲ್ಲಿದ್ದು, ಮಧ್ಯಮ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡಲಾಗಿರುವ ಕಾರು ಮಾದರಿ ಇದಾಗಿದೆ.

3 ವರ್ಷದಲ್ಲಿ ನಾಲ್ಕು ಲಕ್ಷಕ್ಕು ಅಧಿಕವಾಗಿ ಮಾರಾಟಗೊಂಡ ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಎದುರಾಳಿ

ಜೊತೆಗೆ ಮೊದಲ ಬಾರಿಗೆ ಬಿಡುಗಡೆಯಾದಾಗ ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯ ಹೊಂದಿದ್ದ ವಿಟಾರಾ ಬ್ರೇಝಾ ಕಾರುಗಳು ಇದೀಗ ಎಎಂಟಿ (ಆಟೋಮ್ಯಾಟಿಕ್ ಗೇರ್‌ಬಾಕ್ಸ್) ಸೌಲಭ್ಯದೊಂದಿಗೆ ಬಿಡುಗಡೆಯಾಗಿದ್ದು, ದೆಹಲಿ ಎಕ್ಸ್‌ಶೋರುಂ ಪ್ರಕಾರ ವಿಟಾರಾ ಬ್ರೇಝಾ ಕಾರುಗಳು ಆರಂಭಿಕವಾಗಿ ರೂ.7.67 ಲಕ್ಷಕ್ಕೆ ಬಿಡುಗಡೆಗೊಳಿಸಲಾಗಿದೆ.

ಎಂಜಿನ್ ಸಾಮರ್ಥ್ಯ
ಡಿಸೇಲ್ ಎಂಜಿನ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿರುವ ವಿಟಾರಾ ಬ್ರೇಝಾ ಕಾರುಗಳು 1.3-ಲೀಟರ್ ಫೌರ್ ಸಿಲಿಂಡರ್ ಡೀಸೆಲ್ ಎಂಜಿನ್ ಹೊಂದಿದ್ದು, 88-ಬಿಎಚ್‌ಪಿ ಮತ್ತು 200ಎನ್ಎಂ ಟಾರ್ಕ್ ಉತ್ಪಾದಿಸಬಲ್ಲದು. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ವರ್ಷನಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿ ಲೀಟರ್ ಡಿಸೇಲ್‌ಗೆ 24.3 ಮೈಲೇಜ್ ನೀಡಬಲ್ಲವು.

3 ವರ್ಷದಲ್ಲಿ ನಾಲ್ಕು ಲಕ್ಷಕ್ಕು ಅಧಿಕವಾಗಿ ಮಾರಾಟಗೊಂಡ ಮಹೀಂದ್ರಾ ಎಕ್ಸ್‌ಯುವಿ300 ಕಾರಿನ ಎದುರಾಳಿ

ಹೀಗಾಗಿ ತಾಂತ್ರಿಕವಾಗಿಯೂ ಇತರೆ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಂತಲೂ ಉತ್ತಮ ಗುಣಮಟ್ಟ ಹೊಂದಿರುವ ವಿಟಾರಾ ಬ್ರೇಝಾ ಕಾರುಗಳು ಬೆಲೆ ವಿಚಾರದಲ್ಲೂ ಗ್ರಾಹಕರನ್ನು ಸೆಳೆಯದೇ ಇರಲಾರವು.

ಉತ್ತಮ ಕಾರ್ಯನಿರ್ವಹಣೆ ಹಾಗೂ ಬ್ರ್ಯಾಂಡ್ ಮೌಲ್ಯದೊಂದಿಗೆ ಮಾರುಕಟ್ಟೆಯಲ್ಲಿ ಅತಿಹೆಚ್ಚು ಜನಪ್ರಿಯತೆ ಪಡೆಯುತ್ತಿರುವ ವಿಟಾರಾ ಬ್ರೆಝಾ ಹಲವು ವಿಶೇಷತೆ ಹೊಂದಿದೆ. ಹೀಗಾಗಿ ಟಾಟಾ ಮೋಟಾರ್ಸ್ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಹ್ಯುಂಡೈ ಕ್ರೇಟಾ ಎಸ್‌ಯುವಿ ಆವೃತ್ತಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿದೆ.

Most Read Articles

Kannada
English summary
Maruti Suzuki Vitara Sales Cross Four Lakh In Three Years. Read In Kannada
Story first published: Tuesday, February 19, 2019, 16:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
X