ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಮಾರುತಿ ಸುಜುಕಿ ಸಂಸ್ಥೆಯು ಸದ್ಯ ಭಾರತದಲ್ಲಿ ನಂ.1 ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆಯಾಗಿ ಯಶಸ್ವಿ ಸಾಧಿಸಿದ್ದು, ಟಾಪ್ 10 ಕಾರುಗಳ ಮಾರಾಟದಲ್ಲಿ ಮೊದಲ ಆರು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಇತರೆ ಕಾರು ಮಾರಾಟ ಸಂಸ್ಥೆಗಳಿಗೆ ಭಾರೀ ಪೈಪೋಟಿ ನೀಡುತ್ತಿದೆ. ಹೀಗಿರುವಾಗ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಿ ಸಿದ್ದವಾಗಿರುವ ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ಕೂಡಾ ಭಾರೀ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

2030ಕ್ಕೆ ವಿಶ್ವಾದ್ಯಂತ ಶೇ.100 ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಸಂಬಂಧ ಜಾಗತಿಕ ಮಟ್ಟದಲ್ಲಿ ಹಲವು ಬೃಹತ್ ಯೋಜನೆಗಳನ್ನು ರೂಪಿಸಲಾಗುತ್ತಿದ್ದು, ಈಗಾಗಲೇ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಅತಿ ಹೆಚ್ಚು ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಕಾರುಗಳು ಮತ್ತು ಬೈಕ್‌ಗಳನ್ನು ಬಿಡುಗಡೆ ಮಾಡಿವೆ. ಇದೇ ನಿಟ್ಟಿನಲ್ಲಿ ಮಾರುತಿ ಸುಜುಕಿ ಸಹ ತನ್ನ ಜನಪ್ರಿಯ ವ್ಯಾಗನ್ ಆರ್ ಎಲೆಕ್ಟ್ರಿಕ್ ವರ್ಷನ್ ಹೊರತರುತ್ತಿದ್ದು, ಉತ್ತಮ ಮೈಲೇಜ್‌ನೊಂದಿಗೆ ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಕೆಲವು ಸುದ್ದಿ ಮೂಲಗಳ ಪ್ರಕಾರ, ಮಾರುತಿ ಸುಜುಕಿ ಸಂಸ್ಥೆಯು ಇ-ವರ್ಷನ್ ವ್ಯಾಗನ್ ಆರ್ ಕಾರನ್ನು ಟೊಯೊಟಾ ಜೊತೆ ಕೈ ಜೋಡಿಸಿ ಉತ್ಪಾದನೆ ಮಾಡುತ್ತಿದೆ ಎನ್ನಲಾಗಿದ್ದು, ಈ ಕಾರಿನ ಬೆಲೆಯು ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಸ್ಪರ್ಧಾತ್ಮಕವಾಗಿ ಇರಲಿವೆ ಎನ್ನಲಾಗಿದೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಇವಿ ಕಾರುಗಳ ಪ್ರಮುಖ ತಾಂತ್ರಿಕ ಅಂಶವಾದ ಲೀಥಿಯಂ ಅಯಾನ್ ಬ್ಯಾಟರಿಗಳ ಬೆಲೆ ಅಧಿಕವಿರುವ ಕಾರಣ ರೆಗ್ಯೂಲರ್ ಮಾಡೆಲ್ ವ್ಯಾಗನ್ ಆರ್ ಮಾದರಿಗಿಂತಲೂ ಬೆಲೆ ಎರಡರಷ್ಟು ಜಾಸ್ತಿ ಇರಲಿದ್ದು, ಪ್ರತಿ ಚಾರ್ಜಿಂಗ್‌ಗೆ ಕನಿಷ್ಠ 150 ರಿಂದ 180ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲ 72 ವೊಲ್ಟ್, 25kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿಯೆಂತೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಹಾಗೆಯೇ ಹೊಸ ವ್ಯಾಗನ್ ಆರ್ ಕಾರಿನಲ್ಲಿ ಅತಿ ವೇಗವಾಗಿ ಚಾರ್ಚಿಂಗ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸಿಸ್ಟಂ ಬಳಕೆ ಮಾಡಲಾಗಿದ್ದು, ಇದು ಕೇವಲ 1 ಗಂಟೆಯ ಒಳಗಾಗಿ ಶೇ.80 ರಷ್ಟು ಚಾರ್ಜ್ ಆಗಲಿದೆ ಎಂದು ಹೇಳಲಾಗಿದೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ವ್ಯಾಗನ್ ಆರ್ ಇವಿ ಕಾರುಗಳನ್ನು 2020ರ ಏಪ್ರಿಲ್‌ನಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿರುವ ಮಾರುತಿ ಸುಜುಕಿ ಸಂಸ್ಥೆಯು, ಹೊಸ ಎಲೆಕ್ಟ್ರಿಕ್ ಕಾರನ್ನು ದೆಹಲಿ ಬಳಿ ಇರುವ ಗುರುಗ್ರಾಮ್ ಕಾರು ಉತ್ಪಾದನಾ ಘಟಕದಲ್ಲೇ ತಯಾರಿಸುತ್ತಿದೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಜೊತೆಗೆ ಎಲೆಕ್ಟ್ರಿಕ್ ಮಾದರಿಯ ವ್ಯಾಗನ್‍ ಆರ್ ಕಾರು ಮಾರುತಿ ಸುಜುಕಿ ಮತ್ತು ಟೊಯೊಟಾ ಪಾಲುದಾರಿಕೆಯಲ್ಲಿ ತಯಾರಾಗಲಿರುವ ಮೊದಲ ಎಲೆಕ್ಟ್ರಿಕ್ ಕಾರು ಇದಾಗಿದ್ದು, ಟೊಯೊಟಾ ಈಗಾಗಲೇ ಮಾರುತಿ ಸುಜುಕಿ ಎಲೆಕ್ಟ್ರಿಕ್ ಕಾರಿಗಾಗಿ ಅಲ್ಟ್ರಾ ಹೈ ಎಫಿಶಿಯೆನ್ಸಿ ಪವರ್‌ಟ್ರೈನ್ ಬ್ಯಾಟರಿಯನ್ನು ತಯಾರಿಸುವುದಾಗಿ ಹೇಳಿಕೊಂಡಿದೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಸದ್ಯ ಮಾರುತಿ ಸುಜುಕಿ ಸಂಸ್ಥೆಯು ದೇಶಿಯವಾಗಿ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನೆ ಮಾಡುವ ಸಂಬಂಧ ಬರೋಬ್ಬರಿ ರೂ.700 ಕೋಟಿ ವೆಚ್ಚದಲ್ಲಿ ಗುಜರಾತ್‌ನಲ್ಲಿ ಬ್ಯಾಟರಿ ಉತ್ಪಾದನಾ ಘಟಕ ತೆರೆಯಲು ಈಗಾಗಲೇ ಕೇಂದ್ರದಿಂದ ಅನುಮತಿ ಪಡೆದಿದ್ದು, ಎಲೆಕ್ಟ್ರಿಕ್ ಕಾರುಗಳ ಬೆಲೆ ತಗ್ಗಿಸಲು ಇದು ಮಹತ್ವದ ಯೋಜನೆ ಎನ್ನಬಹುದು.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಕಾರಣ, ಬೆಲೆಯಲ್ಲಿ ದುಬಾರಿ ಎನ್ನಿಸುವ ಲೀಥಿಯಂ ಅಲಾಯ್ ಬ್ಯಾಟರಿಗಳನ್ನು ಸದ್ಯಕ್ಕೆ ವಿದೇಶಿ ಮಾರುಕಟ್ಟೆಗಳಾದ ಚೀನಾ, ತೈವಾನ್ ಮತ್ತು ಥೈಲ್ಯಾಂಡ್‌ನಿಂದಲೇ ಶೇ.100ರಷ್ಟು ಆಮದು ಮಾಡಿಕೊಳ್ಳಲಾಗುತ್ತಿದ್ದು, ದೇಶದಲ್ಲಿ ಯಾವುದೇ ಕಾರು ಉತ್ಪಾದನಾ ಸಂಸ್ಥೆಯು ಸ್ವಂತ ಬ್ಯಾಟರಿ ಉತ್ಪಾದನಾ ಸೌಲಭ್ಯವನ್ನು ಹೊಂದಿಲ್ಲ.

MOST READ: ಫಾರ್ಚೂನರ್ ಕಾರಿಗಿಂತ ದುಬಾರಿಯೆಂತೆ ಈ ಪೋರ್ಷೆ ಕಾರಿನ ನಂಬರ್ ಪ್ಲೇಟ್..!

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಇದರಿಂದಾಗಿ ಎಲೆಕ್ಟ್ರಿಕ್ ಕಾರುಗಳು ಸಾಮಾನ್ಯ ಕಾರುಗಳಿಂತಲೂ ಎರಡು ಮೂರು ಪಟ್ಟು ಹೆಚ್ಚು ದುಬಾರಿ ದರಗಳಲ್ಲಿ ಮಾರಾಟವಾಗುತ್ತಿದ್ದು, ಇದೇ ಕಾರಣದಿಂದಲೇ ಬಹುತೇಕ ಕಾರು ಖರೀದಿದಾರರು ಎಲೆಕ್ಟ್ರಿಕ್ ಕಾರುಗಳ ಖರೀದಿಸುವ ಆಸಕ್ತಿ ಇದ್ದರೂ ದುಬಾರಿ ಬೆಲೆಯಿಂದಾಗಿ ಹಿಂದೆ ಸರಿಯುತ್ತಿದ್ದಾರೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಇದನ್ನು ಗಂಭೀರವಾಗಿ ಪರಿಣಿಸಿರುವ ಸುಜುಕಿ ಸಂಸ್ಥೆಯು ಭಾರತದಲ್ಲೇ ಲೀಥಿಯಂ ಬ್ಯಾಟರಿ ಉತ್ಪಾದನೆ ಮಾಡಿ ತನ್ನದೇ ಕಾರುಗಳಿಗೆ ಅಷ್ಟೇ ಅಲ್ಲದೇ ಇತರೆ ಸಂಸ್ಥೆಗಳಿಗೂ ಬ್ಯಾಟರಿ ಪೂರೈಕೆ ಮಾಡುವ ಯೋಜನೆ ರೂಪಿಸಿದ್ದು, 2020ರ ವೇಳೆಗೆ ದೇಶದಲ್ಲಿ ಮಾರಾಟವಾಗುವ ಕಾರುಗಳ ಪ್ರಮಾಣದಲ್ಲಿ ಹೊಸ ಬದಲಾಣೆ ತರುವುದೇ ಇದರ ಮೂಲ ಉದ್ದೇಶವಾಗಿದೆ.

MOST READ: ಏರ್ ಶೋ ವೇಳೆ ಅಗ್ನಿ ದುರಂತ- ಕಾರು ಮಾಲೀಕರಿಗೆ ಧೈರ್ಯ ತುಂಬಿದ ಟೊಯೊಟಾ..!

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಒಂದು ವೇಳೆ ಭಾರತದಲ್ಲೇ ತಯಾರಾದ ಲೀಥಿಯಂ ಬ್ಯಾಟರಿ ಸೌಲಭ್ಯ ಹೊಂದಿದ್ದೇ ಆದಲ್ಲಿ ವ್ಯಾಗನ್ ಆರ್ ಇ ವರ್ಷನ್ ಬೆಲೆಯು ರೂ. 7 ಲಕ್ಷಕ್ಕೆ ಮಾರಾಟಗೊಳ್ಳಲಿದ್ದು, ಇದರಲ್ಲಿ ಕೇಂದ್ರ ಸರ್ಕಾರದ FAME ಯೋಜನೆಯಡಿ ರೂ. 1.24 ಲಕ್ಷ ದಿಂದ ರೂ.1.38 ಲಕ್ಷ ಸಬ್ಸಡಿ ಸಹ ದೊರೆಯಲಿದೆ.

ಇದೊಂದು ಕಾರಣ ಸಾಕು ವ್ಯಾಗನ್ ಆರ್ ಎಲೆಕ್ಟ್ರಿಕ್ ಕಾರು ನಂ.1 ಆಗಲು..!

ಒಟ್ಟಿನಲ್ಲಿ ಬೃಹತ್ ಯೋಜನೆಯೊಂದಿಗೆ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕೆ ಕೈ ಹಾಕಿರುವ ಮಾರುತಿ ಸುಜುಕಿ ಸಂಸ್ಥೆಯು ಸಾಮಾನ್ಯ ಕಾರುಗಳ ಮಾರಾಟದಲ್ಲಿ ಯಶಸ್ಸು ಸಾಧಿಸಿರುವಂತೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಅಧಿಪತ್ಯ ಹೊಂದುವ ತವಕದಲ್ಲಿದ್ದು, ಕೈಗೆಟುಕುವ ಬೆಲೆಗಳಲ್ಲಿ ಉತ್ತಮ ಮೈಲೇಜ್ ಪ್ರೇರಿತ ಎಲೆಕ್ಟ್ರಿಕ್ ಬ್ಯಾಟರಿ ಬಳಕೆ ಮಾಡಿದ್ದಲ್ಲಿ ಹೊಸ ಯೋಜನೆ ಯಶಸ್ವಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

More from DriveSpark

Article Published On: Tuesday, February 26, 2019, 15:26 [IST]
English summary
Maruti Wagon R Electric Will Receive Fast-Charging System — 80 Percent Charge In Under An Hour. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+